Site icon Vistara News

Ind vs Aus : ಆಸ್ಟ್ರೇಲಿಯಾ ವಿರುದ್ಧದ ತವರಿನ ಸರಣಿಗೆ ತಂಡ ಪ್ರಕಟ; ಯಾರಿಗೆಲ್ಲ ಸಿಕ್ಕಿತು ಚಾನ್ಸ್​?

Team India Australia

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ತವರಿನ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ. ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2022 ರ ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಬಾರಿಗೆ 50 ಓವರ್​ಗಳ ಸ್ವರೂಪವನ್ನು ಆಡಿದ ನಂತರ ಏಕದಿನ ತಂಡಕ್ಕೆ ಮತ್ತೆ ಮರಳಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವು ಹಿರಿಯ ಆಟಗಾರರಿಗೆ ಮೊದಲ ಎರಡು ಏಕದಿನ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ

ಮೂರು ಪಂದ್ಯಗಳ ಸರಣಿ ಸೆಪ್ಟೆಂಬರ್ 22 ರಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಸರಣಿಯ ಎರಡನೇ ಪಂದ್ಯ ಸೆಪ್ಟೆಂಬರ್ 24 ರಂದು ಇಂದೋರ್​ನ ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮೂರನೇ ಏಕದಿನ ಪಂದ್ಯ ಸೆಪ್ಟೆಂಬರ್ 27 ರಂದು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸರಣಿಗೆ ಎರಡು ತಂಡಗಳನ್ನು ಪ್ರಕಟಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಈ ಪಂದ್ಯದಲ್ಲಿ ಕೆ. ಎಲ್​ ರಾಹುಲ್ ನೇತೃತ್ವ ವಹಿಸಲಿದ್ದಾರೆ. ಮೂರನೇ ಪಂದ್ಯಕ್ಕೆ ಮತ್ತೊಂದು ತಂಡ ಪ್ರಕಟಿಸಿದ್ದಾರೆ. ಕಾಯಂ ನಾಯಕ ರೋಹಿತ್​ ಶರ್ಮಾ ಈ ಪಂದ್ಯಕ್ಕೆ ಮರಳಲಿದ್ದಾರೆ. ಇದೇ ವೇಳೆ ಮೂರನೇ ಪಂದ್ಯಕ್ಕೆ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ, ಅವರ ಫಿಟ್ನೆಸ್ ಆಧರಿಸಿ ಲಭ್ಯತೆ ಪ್ರಕಟವಾಗಲಿದೆ.

ಮೊದಲ ಎರಡು ಏಕದಿನ ಪಂದ್ಯಗಳಿಗೆ ಭಾರತ ತಂಡ

ರಾಹುಲ್ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ಆರ್ ಅಶ್ವಿನ್, ವಾಷಿಂಗ್ಟನ್ ಸುಂದರ್.

3ನೇ ಏಕದಿನ ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್.

ಸರಣಿಯ ವೇಳಾಪಟ್ಟಿ

ಅಶ್ವಿನ್ ಬಗ್ಗೆ ರೋಹಿತ್ ಏನಂದರು?

17 ತಿಂಗಳ ನಂತರ ರವಿಚಂದ್ರನ್ ಅಶ್ವಿನ್ ಏಕದಿನ ತಂಡಕ್ಕೆ ಮರಳಿರುವ ಬಗ್ಗೆ ಮಾತನಾಡಿದ ರೋಹಿತ್ ಶರ್ಮಾ, ಅಶ್ವಿನ್ ಅವರಂತಹ ಅನುಭವಿ ಆಟಗಾರರು ಯಾವಾಗಲೂ ಮನಸ್ಸಿನಲ್ಲಿರುತ್ತಾರೆ. ಈ ಸ್ವರೂಪದಲ್ಲಿ ಅವರು ಎಲ್ಲಿ ನಿಲ್ಲುತ್ತಾರೆ ಎಂಬುದಕ್ಕೆ ಸರಣಿ ಉತ್ತರಿಸುತ್ತದೆ ಎಂದು ಹೇಳಿದರು.

ಅಶ್ವಿನ್ ಟೆಸ್ಟ್ನಲ್ಲಿ ಸ್ಥಿರವಾಗಿ ಆಡುತ್ತಿದ್ದಾರೆ. ಅವರಿಗೆ ಸಾಕಷ್ಟು ಅನುಭವವಿದೆ. ಅವರಂತಹ ಆಟಗಾರರು ಮನಸ್ಸಿನಲ್ಲಿರುತ್ತಾರೆ ಮತ್ತು ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳು ಅವರು ಎಲ್ಲಿ ನಿಲ್ಲುತ್ತಾರೆ ಎಂಬುದಕ್ಕೆ ಉತ್ತರವನ್ನು ನೀಡುತ್ತದೆ ಎಂದು ಅಶ್ವಿನ್ ಪುನರಾಗಮನದ ಬಗ್ಗೆ ರೋಹಿತ್ ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Exit mobile version