Site icon Vistara News

Team India : ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಗೆ ಭಾರತ ತಂಡ ಪ್ರಕಟ; ಹೊಸಬರಿಗೆ ಸಿಕ್ಕಿತು ಚಾನ್ಸ್​

Team India Cricket

ಬೆಂಗಳೂರು: ಇಂಗ್ಲೆಂಡ್ ವಿರುದ್ಧದ ಮೊದಲ 2 ಟೆಸ್ಟ್ ಪಂದ್ಯಗಳಿಗೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವನ್ನು (Team India) ಬಿಸಿಸಿಐ ಪ್ರಕಟಿಸಿದೆ. ಧ್ರುವ್ ಜುರೆಲ್ ಅವರಂತಹ ಕೆಲವು ಹೊಸ ಸೇರ್ಪಡೆಗಳನ್ನು ಒಳಗೊಂಡಂತೆ ಭಾರತವು ಇಂಗ್ಲೆಂಡ್ ವಿರುದ್ಧ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು ಡ್ರಾ ಮಾಡಿಕೊಂಡ ನಂತರ ಭಾರತವು ಪ್ರವಾಸಿ ಆಂಗ್ಲರ ಪಡೆಯ ವಿರುದ್ಧ ಪ್ರಾಬಲ್ಯದ ಗೆಲುವಿಗಾಗಿ ಎದುರು ನೋಡುತ್ತಿದೆ.

ದೇಶೀಯ ಕ್ರಿಕೆಟ್​ನಲ್ಲಿ ಅಂದರೆ ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಗಮನಾರ್ಹ ಪ್ರದರ್ಶನಗಳನ್ನು ನೀಡಿದ ಹೊರತಾಗಿಯೂ ಚೇತೇಶ್ವರ ಪೂಜಾರ ಅವಕಾಶ ಪಡೆದಿಲ್ಲ. ವಿಶ್ವ ಕಪ್​ನಲ್ಲಿ ಮಿಂಚಿನ ಬಳಿಕ ಗಾಯದ ಸಮಸ್ಯೆಗೆ ಒಳಗಾಗಿದ್ದ ಮೊಹಮ್ಮದ್ ಶಮಿ ಹಾಗೂ ದ. ಆಫ್ರಿಕಾ ಸರಣಿ ವೇಳೆ ಗಾಯಗೊಂಡಿದ್ದ ಋತುರಾಜ್ ಗಾಯಕ್ವಾಡ್ ತಂಡದಿಂದ ಹೊರಗುಳಿದಿದ್ದಾರೆ.

ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ಬಲಿಷ್ಠ ತಂಡವನ್ನು ಕಣಕ್ಕಿಳಿಸಿದೆ. ಪ್ರಬಲ ಬ್ಯಾಟಿಂಗ್ ಲೈನ್ಅಪ್ ಹೊಂದಿದೆ. ಧ್ರುವ್ ಜುರೆಲ್ ಅವರನ್ನು ಬ್ಯಾಕಪ್ ಕೀಪರ್ ಆಗಿ ತಂಡಕ್ಕೆ ಸೇರಿಸಲಾಗಿದೆ. ವೇಗದ ದಾಳಿಯ ವಿಷಯದಲ್ಲಿ ಮೊಹಮ್ಮದ್ ಶಮಿ ಪಾದದ ಗಾಯದಿಂದ ಚೇತರಿಸಿಕೊಳ್ಳುತ್ತಿರುವುದರಿಂದ ಅವೇಶ್ ಖಾನ್ ಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ : Sourav Ganguly : ಗಂಗೂಲಿ ಬಯೋಪಿಕ್​ನ ನಾಯಕನ ಹೆಸರು ಬಹಿರಂಗ

ಭಾರತ ತಂಡ ಈ ರೀತಿ ಇದೆ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್

2023-24ರಲ್ಲಿ ಇಂಗ್ಲೆಂಡ್ ಪ್ರವಾಸದ ವೇಳಾಪಟ್ಟಿ

Exit mobile version