Site icon Vistara News

BCCI Annual Contract: ಚಹಲ್​ ಸೇರಿ ಹಲವು ಅನುಭವಿಗಳಿಗೆ ಕೊಕ್​; ರಾಹುಲ್​, ಗಿಲ್​ಗೆ ಬೋನಸ್

team india

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2023-24ರ ಋತುವಿಗಾಗಿ ಕೇಂದ್ರ ಗುತ್ತಿಗೆ(BCCI Annual Contract) ಪಡೆದ ಆಟಗಾರರ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದ 11 ಆಟಗಾರರು ಅತ್ಯಂತ ದೊಡ್ಡ ಫಲಾನುಭವಿಯಾಗಿದ್ದಾರೆ.

ಟೆಸ್ಟ್​ ಕ್ರಿಕೆಟ್​ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಎಡಗೈ ಬ್ಯಾಟರ್​ ಯಶಸ್ವಿ ಜೈಸ್ವಾಲ್ ತಮ್ಮ ಚೊಚ್ಚಲ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಅನುಭವಿ ಆಟಗಾರರನ್ನು ಹಿಂದಿಕ್ಕಿ ‘ಬಿ’ ಪಡೆದಿದ್ದಾರೆ. ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ರಜತ್ ಪಾಟಿದಾರ್ ಈ ಬಾರಿಯ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಚೊಚ್ಚಲ ಸ್ಥಾನ ಪಡೆದ ಆಟಗಾರರಾಗಿದ್ದಾರೆ.

ಹಿರಿಯ ಆಟಗಾರರಿಗೆ ಕೊಕ್​


2022-23 ಋತುವಿನಲ್ಲಿ ಬಿಸಿಸಿಐ ಕೇಂದ್ರ ಗುತ್ತಿಗೆಯಲ್ಲಿ ಸ್ಥಾನ ಪಡೆದಿದ್ದ ಅನುಭವಿ ಆಟಗಾರರಾದ ಚೇತೇಶ್ವರ್ ಪೂಜಾರ, ಉಮೇಶ್ ಯಾದವ್, ಶಿಖರ್ ಧವನ್, ದೀಪಕ್ ಹೂಡಾ, ಯಜುವೇಂದ್ರ ಚಹಲ್ ಮತ್ತು ಅಜಿಂಕ್ಯ ರಹಾನೆ ಈ ಬಾರಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇವರನ್ನು ಪ್ರಸಕ್ತ ಸಾಲಿನ ಆಟಗಾರರ ಒಪ್ಪಂದ ಪಟ್ಟಿಯಿಂದ ಬಿಸಿಸಿಐ ಕೈಬಿಟ್ಟಿದೆ. ಆಯ್ಕೆ ಸಮಿತಿಯು ವೇಗದ ಬೌಲಿಂಗ್ ಒಪ್ಪಂದಗಳಿಗಾಗಿ ಚೊಚ್ಚಲ ಟೆಸ್ಟ್​ ಆಡಿದ ಆಕಾಶ್ ದೀಪ್, ವಿಜಯ್ ಕುಮಾರ್ ವೈಶಾಕ್, ಉಮ್ರಾನ್ ಮಲಿಕ್, ಯಶ್ ದಯಾಳ್ ಮತ್ತು ವಿದ್ವತ್ ಕಾವೇರಪ್ಪ ಅವರ ಹೆಸರನ್ನು ಶಿಫಾರಸು ಮಾಡಿದೆ.

ಗಿಲ್​, ರಾಹುಲ್​ಗೆ ಭಡ್ತಿ


ಕಳೆದ ಬಾರಿಯಂತೆ ಈ ಬಾರಿಯೂ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ರವಿಂದ್ರ ಜಡೇಜಾ ಅವರನ್ನು ಎ+ ಗುತ್ತಿಗೆಯ ಪಟ್ಟಿಯಲ್ಲಿ ಪರಿಗಣಿಸಲಾಗಿದೆ. ಈ ಪಟ್ಟಿಗೆ ಯಾವುದೇ ಹೊಸ ಆಟಗಾರನ ಸೇರ್ಪಡೆಯಾಗಿಲ್ಲ. ಎ ಗ್ರೇಡ್​ನಲ್ಲಿ ಕೆಲ ಬದಲಾವಣೆಗಳು ಸಂಭವಿಸಿದೆ. ಕನ್ನಡಿಗ ಕೆ.ಎಲ್ ರಾಹುಲ್ ಮತ್ತು ಶುಭಮನ್ ಗಿಲ್ ಅವರಿಗೆ ‘ಎ’ ಗ್ರೇಡ್‌ ಪಟ್ಟಿಗೆ ಭಡ್ತಿ ನೀಡಲಾಗಿದೆ. ಕಳೆದ ವರ್ಷ ಉಭಯ ಆಟಗಾರರು ‘ಬಿ’ ಗ್ರೇಡ್​ನಲ್ಲಿದ್ದರು.

ಇದನ್ನೂ ಓದಿ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ಕಿಕ್​ ಔಟ್​

ಇಶಾನ್​-ಅಯ್ಯರ್​ಗೆ ತಕ್ಕ ಪಾಠ ಕಲಿಸಿದ ಬಿಸಿಸಿಐ


ಹಲವು ಬಾರಿ ದೇಶಿಯ ಕ್ರಿಕೆಟ್​ನಲ್ಲಿ ಭಾಗಿಯಾಗುವಂತೆ ಬಿಸಿಸಿಐ ನೀಡಿದ ಸೂಚನೆಯ ಮೇರೆಗೂ ಇದನ್ನು ಗಂಭೀರವಾಗಿ ಪರಿಗಣಿಸಿದ ಇಶಾನ್‌ ಹಾಗೂ ಶ್ರೇಯಸ್‌ ಅವರನ್ನು ಗುತ್ತಿಗೆ ಪಟ್ಟಿಯಿಂದ ಕೈಬಿಟ್ಟಿದೆ. ಈ ಮೂಲಕ ಆಟಗಾರರ ತಪ್ಪಿಗೆ ತಕ್ಕ ಪಾಠ ಕಲಿಸಿದೆ.

ಬಿಸಿಸಿಐ ಕೇಂದ್ರ ಒಪ್ಪಂದಗಳ ಪಟ್ಟಿ

ಗ್ರೇಡ್ A+ (4 ಕ್ರಿಕೆಟಿಗರು): ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಮತ್ತು ರವೀಂದ್ರ ಜಡೇಜಾ.

ಗ್ರೇಡ್ ಎ (6 ಕ್ರಿಕೆಟಿಗರು): ಆರ್ ಅಶ್ವಿನ್, ಮೊಹಮ್ಮದ್​ ಶಮಿ, ಮೊಹಮ್ಮದ್ ಸಿರಾಜ್, ಕೆ.ಎಲ್ ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ.

ಗ್ರೇಡ್ ಬಿ (5 ಕ್ರಿಕೆಟಿಗರು) ಸೂರ್ಯಕುಮಾರ್ ಯಾದವ್, ರಿಷಭ್​ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್.

ಗ್ರೇಡ್ ಸಿ (15 ಕ್ರಿಕೆಟಿಗರು) ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆ.ಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್.

Exit mobile version