ಮುಂಬಯಿ : ಜಸ್‌ಪ್ರಿತ್ ಬುಮ್ರಾ ಅವರ ಅಲಭ್ಯತೆ ಕಾರಣಕ್ಕೆ ವಿಶ್ವ ಕಪ್ ಆಡಲಿರುವ ಟೀಮ್ ಇಂಡಿಯಾದಲ್ಲಿ ಖಾಲಿ ಉಳಿದಿರುವ ವೇಗದ ಬೌಲರ್ ಸ್ಥಾನಕ್ಕೆ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಬಿಸಿಸಿಐ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು ಭಾರತದ ಕ್ರಿಕೆಟ್ ಅಭಿಮಾನಿಗಳ ಕೌತುಕಕ್ಕೆ ತೆರೆ ಎಳೆಯಲಾಗಿದೆ.
“ಭಾರತ ಹಿರಿಯರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯು ಮೊಹಮ್ಮದ್ ಶಮಿ ಅವರನ್ನು ಟಿ೨೦ ವಿಶ್ವ ಕಪ್ ತಂಡಕ್ಕೆ ಆಯ್ಕೆ ಮಾಡಿದೆ. ಅವರು ಜಸ್‌ಪ್ರಿತ್ ಬುಮ್ರಾ ಅವರಿಗೆ ಪರ್ಯಾಯವಾಗಿ ಆಡಲಿದ್ದಾರೆ. ಮೊಹಮ್ಮದ್ ಶಮಿ ಆಸ್ಟ್ರೇಲಿಯಾಗೆ ತಲುಪಿದ್ದು ಬ್ರಿಸ್ಬೇನ್‌ನಲ್ಲಿ ನಡೆಯಲಿರುವ ಅಭ್ಯಾಸ ಪಂದ್ಯದ ವೇಳೆ ತಂಡ ಸೇರಿಕೊಳ್ಳಲಿದ್ದಾರೆ,” ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.
ಶಾರ್ದೂಲ್ ಠಾಕೂರ್ ಹಾಗೂ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾದ ಮೀಸಲು ಬೌಲರ್‌ಗಳಾಗಿದ್ದು, ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾಗೆ ಪ್ರವಾಸ ಆರಂಭಿಸಲಿದ್ದಾರೆ.
ಮೊಹಮ್ಮದ್ ಶಮಿ ಕೊನೇ ಬಾರಿ ಟಿ೨೦ ಮಾದರಿಯಲ್ಲಿ ಆಡಿದ್ದು ಕಳೆದ ಬಾರಿಯ ವಿಶ್ವ ಕಪ್ ವೇಳೆ. ಬಳಿಕ ಅವರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಲಭಿಸಿರಲಿಲ್ಲ. ಆದಾಗ್ಯೂ ಪ್ರವಾಸಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಅವರು ಆಯ್ಕೆಯಾಗಿದ್ದರು. ಅದರೆ, ಕೊರೊನಾ ಸೋಂಕು ತಗುಲಿದ್ದ ಕಾರಣ ಆಡಲು ಸಾಧ್ಯವಾಗಿರಲಿಲ್ಲ.
ಇದನ್ನೂ ಓದಿ | Jasprit Bumrah | ಮೂಳೆ ಮುರಿತ, ಟಿ-20 ವಿಶ್ವಕಪ್‌ನಿಂದಲೇ ಜಸ್‌ಪ್ರಿತ್ ಬುಮ್ರಾ ಔಟ್