Site icon Vistara News

Jay Shah: ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್​ ದಿ ಇಯರ್ ಪ್ರಶಸ್ತಿ ಗೆದ್ದ ಜಯ್ ಶಾ

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ(Jay Shah) ಅವರಿಗೆ 2023ರ ವರ್ಷದ ಕ್ರೀಡಾ ಉದ್ಯಮ ನಾಯಕ ಪ್ರಶಸ್ತಿ (Sports Business Leader of the Year) ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಗೆದ್ದ ಶಾ ಅವರನ್ನು ಬಿಸಿಸಿಐ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಅಭಿನಂದನೆ ಸಲ್ಲಿಸಿದೆ.

Jay Shah


‘2023 ರ ಸ್ಪೋರ್ಟ್ಸ್ ಬಿಸಿನೆಸ್ ಲೀಡರ್ ಆಫ್​ ದಿ ಇಯರ್ ಪ್ರಶಸ್ತಿಗೆ ಭಾಜನರಾದ ಬಿಸಿಸಿಐ ಗೌರವ ಕಾರ್ಯದರ್ಶಿ ಜಯ್ ಶಾ ಅವರಿಗೆ ಅಭಿನಂದನೆಗಳು. ಕ್ರೀಡಾ ಆಡಳಿತದಲ್ಲಿ ಮೊದಲ ಬಾರಿಗೆ ಈ ವಿಶೇಷ ಗೌರವವ ಪಡೆದ ನೀವು, ಇನ್ನೂ ಕೂಡ ನೂತನ ಪ್ರಯೋಗದೊಂದಿಗೆ ಈ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡುವಂತಾಗಲಿ” ಎಂದು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದೆ.

Jay Shah

ಬಿಸಿಸಿಐ ಕಾರ್ಯದರ್ಶಿ ಹುದ್ದೆಯ ಹೊರತಾಗಿ, ಜಯ್ ಶಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಈ ಹುದ್ದೆ ಅಲಂಕರಿಸುವ ಮುನ್ನ ಗುಜರಾತ್ ಕ್ರಿಕೆಟ್ ಸಂಸ್ಥೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮಹಿಳಾ ಕ್ರಿಕೆಟ್​ ಆಟಗಾರ್ತಿಯರಿಗೂ ಸಮಾನ ವೇತನ ಜಾರಿಗ ತರುವಲ್ಲಿ ಜಯ್ ಶಾ ಅವರು ಪ್ರಮುಖ ಪಾತ್ರವಹಿಸಿದ್ದರು.

ಇದನ್ನೂ ಓದಿ Inside Story : ಕಿಚ್ಚ ಸುದೀಪ್ ಅವರನ್ನ ರಾಜಕೀಯಕ್ಕೆ ಎಳೆ ತಂದರೇ ಅಮಿತ್ ಶಾ ಮಗ ಜಯ್ ಶಾ?

2019 ರಲ್ಲಿ ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಆಯ್ಕೆಯಾದರು. ಇತ್ತೀಚೆಗೆ ಮುಕ್ತಾಯಗೊಂಡ 2023ರ ಏಕದಿನ ವಿಶ್ವಕಪ್ ಮತ್ತು ಶ್ರೀಲಂಕಾ ಹಾಗೂ ಪಾಕಿಸ್ತಾನದ ಜಂಟಿ ಆತಿಥ್ಯದಲ್ಲಿ ನಡೆದ ಏಷ್ಯಾಕಪ್ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ ಕೀರ್ತಿ ಶಾ ಅವರಿಗೆ ಸಲ್ಲುತ್ತದೆ. ಇದೇ ಕಾರಣಕ್ಕೆ ಅವರಿಗೆ 2023ರ ವರ್ಷದ ಕ್ರೀಡಾ ಉದ್ಯಮ ನಾಯಕ ಪ್ರಶಸ್ತಿ ಒಲಿದಿದೆ.

Jay Shah


ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿಯೂ ಜಯ್ ಶಾ ಪ್ರಮುಖ ಪಾತ್ರವಹಿಸಿದ್ದರು. ಅವರ ಈ ಎಲ್ಲ ಸೇವೆಯನ್ನು ಗುರುತಿಸಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಅವರನ್ನು ಅತ್ಯುತ್ತಮ ಕ್ರೀಡಾ ಉದ್ಯಮ ನಾಯಕ ಎಂದು ಗುರುತಿಸಿದೆ.

ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯ ಭಾರತದ ಪಂದ್ಯವನ್ನು ತಟಸ್ಥ ತಾಣದಲ್ಲೇ ನಡೆಸಬೇಕೆಂದು ಪಟ್ಟು ಹಿಡಿದಿದ್ದ ಜಯ್​ ಶಾ ಇದರಲ್ಲಿ ಯಶಸ್ಸು ಕೂಡ ಕಂಡಿದ್ದರು. ಅದರಂತೆ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿತ್ತು. ಯಾವುದೇ ಒಂದು ನಿರ್ಧಾರವನ್ನು ಕೈಗೊಂಡರೂ ಅದನ್ನು ಸಾಧಿಸುವವರೆಗೆ ಛಲ ಬಿಡದ ಅವರು ಕ್ರಿಕೆಟ್​ ಕ್ಷೇತ್ರದಲ್ಲಿ ಅನೇಕ ಹೊಸ ಪ್ರಯೋಗಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

Exit mobile version