Site icon Vistara News

IND vs PAK: ಮೋದಿ ಸ್ಟೇಡಿಯಂಗೆ ಹರಿದು ಬಂದ ಜನಸಾಗರ

narendra modi stadium

ಅಹಮದಾಬಾದ್: ಬುದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಪಂದ್ಯ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ನೋಡಲು ಮೈದಾನಕ್ಕೆ ಜನಸಾಗರವೇ ಹರಿದು ಬರುತ್ತಿವೆ. ಎಲ್ಲ ಟಿಕೆಟ್​ಗಳು ಕೂಡ ಸೋಲ್ಡ್​ ಔಟ್​ ಆಗಿದೆ. ಟಿಕೆಟ್​ ಸಿಗದ ಕೆಲವರು ಸ್ಟೇಡಿಯಂನ ಹೊರ ಭಾಗದಲ್ಲಿ ಭಾರತ ತಂಡದ ಜೆರ್ಸಿಯನ್ನು ಹಾಕಿ ಸಂಭ್ರಮಾಚರಣೆ ಮಾಡುವ ಮೂಲಕ ತಂಡಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

ಇನ್ನೇನು ಕೆಲವೇ ಗಂಟೆಗಳಲ್ಲಿ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ರಿಂದ ವಿಶೇಷ ಸಾಂಸತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಲಿವುಡ್​ ಗಾಯಕರಾದ ಶಂಕರ್​ ಮಹಾದೇವನ್​, ಸುಖ್ವಿಂದರ್​ ಸಿಂಗ್​, ಅರ್ಜಿತ್​ ಸಿಂಗ್​ ಸಂಗೀತ ಸುಧೆ ಹರಿಸಲಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿ ಹಲವು ಮಾಜಿ ಆಟಗಾರರು ಈ ಪಂದ್ಯ ವೀಕ್ಷಣೆಗೆ ಅಹಮದಾಬಾದ್‌ಗೆ ಆಗಮಿಸಿದ್ದಾರೆ.

ಹಲವು ಕಡೆ ಪೂಜೆ, ಪ್ರಾರ್ಥನೆ

ಪ್ರತಿ ಬಾರಿಯಂತೆ ಭಾರತದ ಗೆಲುವಿಗಾಗಿ ದೇಶದ ಹಲವು ಕಡೆಗಳಲ್ಲಿ ಅಭಿಮಾನಿಗಳು ಪೂಜೆ ಮತ್ತು ಪ್ರಾರ್ಥನೆ ನಡೆಸಿದ್ದಾರೆ. ಪಂದ್ಯಕ್ಕೆ ಭಾರಿ ಕಟ್ಟೆಚ್ಚರ ವಹಿಸಿದ್ದು, ಗುಜರಾತ್​ ಪೊಲೀಸ್​, ಎನ್​ಎಸ್​ಜಿ, ಆರ್​ಎಎ್​, ಗೃಹರಕ್ಷಣಾ ಪಡೆ ಸಹಿತ ಕ್ರೀಡಾಂಗಣದ ಸುತ್ತ ವಿವಿಧ ಭದ್ರತಾ ಏಜೆನ್ಸಿಗಳಿಂದ ಒಟ್ಟು 11 ಸಾವಿರ ರಕ್ಷಣಾ ಸಿಬ್ಬಂದಿಯನ್ನು ಬಿಗಿಭದ್ರತೆಗಾಗಿ ನಿಯೋಜಿಸಲಾಗಿದೆ.

ಹವಾಮಾನ ವರದಿ

ಇದು ಏಳು ವರ್ಷಗಳ ಬಳಿಕ ಪಾಕಿಸ್ತಾನ ತಂಡ ಭಾರತದ ನೆಲದಲ್ಲಿ ಆಡುತ್ತಿರುವ ಪಂದ್ಯವಾಗಿದೆ. ಈ ಪಂದ್ಯವನ್ನು ನೋಡಲು ಅಭಿಮಾನಿಗಳು ದುಪ್ಪಟ್ಟು ಹಣ ನೀಡಿ ಟಿಕೆಟ್​ ಖರೀದಿಸಿದ್ದಾರೆ. ಸ್ಟೇಡಿಯಂ ಹೌಸ್​ಫುಲ್​ ಆಗುವುದರಲ್ಲಿ ಅನುಮಾನವೇ ಬೇಡ. IMDಯ ಮುನ್ಸೂಚನೆ ಪ್ರಕಾರ ಅಹಮದಾಬಾದ್‌ ನಗರದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಆದರೆ ಪಂದ್ಯಕ್ಕೆ ವರುಣನ ಅವಕೃಪೆ ಇರದು. ಶನಿವಾರ ಅಹಮದಾಬಾದ್​ನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇದೆ ಎಂದು ತಿಳಿಸಿದೆ. ಒಂದೊಮ್ಮೆ ಮಳೆ ಬಂದರೂ ವಿಶ್ವಕಪ್​ನಲ್ಲಿ ಯಾವುದೇ ಲೀಗ್​ ಪಂದ್ಯಕ್ಕೂ ಮೀಸಲು ದಿನ ಇಲ್ಲ. ಐಸಿಸಿ ನಿಯಮದ ಪ್ರಕಾರ ಸೆಮಿಫೈನಲ್​ನ ಎರಡು ಪಂದ್ಯಗಳಿಗೆ ಮತ್ತು ಫೈನಲ್​ಗೆ ಮಾತ್ರ ಮೀಸಲು ದಿನ ಇರಲಿದೆ. ಹೀಗಾಗಿ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದು ಅಂಕ ಸಿಗಲಿದೆ.

ಇದನ್ನೂ ಓದಿ IND vs PAK: ಪಂದ್ಯಕ್ಕೂ ಮುನ್ನವೇ ಧಿಮಾಕು ತೋರಿದ ಪಾಕ್​ ವೇಗಿ ಶಾಹೀನ್​ ಅಫ್ರಿದಿ

ಸಂಭಾವ್ಯ ತಂಡ

ಭಾರತ: ಇಶಾನ್​ ಕಿಶನ್​/ಶುಭಮನ್​ ಗಿಲ್​, ರೋಹಿತ್​ ಶರ್ಮ(ನಾಯಕ), ವಿರಾಟ್​ ಕೊಹ್ಲಿ, ಶ್ರೇಯಸ್​ ಅಯ್ಯರ್​, ಹಾರ್ದಿಕ್​ ಪಾಂಡ್ಯ, ಕೆ.ಎಲ್​ ರಾಹುಲ್​, ರವೀಂದ್ರ ಜಡೇಜ, ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್​, ಶಾರ್ದೂಲ್​ ಠಾಕೂರ್​.

ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್ ಉಲ್-ಹಕ್, ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹಾರಿಸ್ ರೌಫ್.

Exit mobile version