ಲಂಡನ್: ಟಿ20 ವಿಶ್ವಕಪ್(T20 World Cup) ಟೂರ್ನಿಗೆ ಇನ್ನು ಕೆಲವೇ ತಿಂಗಳುಗಳು ಮಾತ್ರ ಬಾಕಿ ಉಳಿದಿದೆ. ಜೂನ್ 1ರಿಂದ ಟೂರ್ನಿ ಆರಂಭಗೊಳ್ಳಲಿದೆ. ಹೀಗಿರುವಾಗಲೇ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಭಾರೀ ಆಘಾತವೊಂದು ಎದುರಾಗಿದೆ. 2022ರಲ್ಲಿ ಇಂಗ್ಲೆಂಡ್ ತಂಡ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್(Ben Stokes) ಈ ಬಾರಿಯ ಟೂರ್ನಿಯಿಂದ(Stokes pulls out of T20 World Cup) ಹಿಂದೆ ಸರಿದಿದ್ದಾರೆ.
ಬೆನ್ ಸ್ಟೋಕ್ಸ್ ಅವರು ತಮ್ಮ ಫಿಟ್‌ನೆಸ್ ಮೇಲೆ ಗಮನ ಹರಿಸುವ ಸಲುವಾಗಿ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿದಿದ್ದಾರೆ. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಹಿಂದಿನ ಫಾರ್ಮ್ ಕಂಡುಕೊಳ್ಳುವ ಉದ್ದೇಶದಿಂದ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಟೂರ್ನಿಯಿಂದ ಹಿಂದೆ ಸರಿದಿರುವ ವಿಚಾರವನ್ನು ಸ್ಟೋಕ್ಸ್ ಮಂಗಳವಾರ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದಾರೆ.
2022ರಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಹಿಂದಿನ ಆವೃತ್ತಿಯ ಟಿ20 ವಿಶ್ವಕಪ್ ಫೈನಲ್ನಲ್ಲಿ ಸ್ಟೋಕ್ಸ್ ಅಜೇಯ ಅರ್ಧಶತಕ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಅವರ ಗೈರು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸಲಿದೆ. ಸ್ಟೋಕ್ಸ್ ಅವರು ಮೊಣಕಾಲಿನ ಶಸ್ತ್ರಚಿಕಿಎಗೆ ಒಳಗಾದ ಬಳಿಕ ಕಳೆದ 2 ವರ್ಷಗಳಿಂದ ಸರಿಯಾದ ಫಿಟ್‌ನೆಸ್ ಹೊಂದಿರಲಿಲ್ಲ. ಇದೇ ಕಾರಣದಿಂದ ಅವರು ಪದೇಪದೆ ಗಾಯಕ್ಕೆ ತುತ್ತಾಗುತ್ತಿದ್ದರು.
BEN STOKES OPTED OUT OF THE 2024 T20 WORLD CUP TO PRIORITISE TEST CRICKET…!!!! pic.twitter.com/CEAgiyFCW9
— Mufaddal Vohra (@mufaddal_vohra) April 2, 2024
ಅತಿಯಾದ ಕ್ರಿಕೆಟ್ನಿಂದ ಮಾನಸಿಕವಾಗಿ ಬಳಲಿದ್ದೇನೆ ಎಂದು ಹೇಳಿ ಏಕದಿನ ಮತ್ತು ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಆದರೆ ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್ ಸಲುವಾಗಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಅವರ ನಿವೃತ್ತಿಯನ್ನು ಹಿಂಪಡೆದು ಮತ್ತೆ ತಂಡದ ಪರ ಆಡುವಂತೆ ಮಾಡಿತ್ತು. ಆದರೆ ಅವರು 2019ರ ವಿಶ್ವಕಪ್ನಲ್ಲಿ ತೋರಿದ ಪ್ರದರ್ಶನವನ್ನು ತೋರುವಲ್ಲಿ ವಿಫಲರಾಗಿದ್ದರು. ಅಲ್ಲದೆ ತಂಡದ ಸಹ ಆಟಗಾರರು ಕೂಡ ಹಿಂದೆಂದು ಕಾಣದ ಘೋರ ವೈಫಲ್ಯ ಕಂಡಿದ್ದರು. ಕೇವಲ 3 ಪಂದ್ಯ ಗೆದ್ದು ಟೂರ್ನಿಯಿಂದ ಮೊದಲ ತಂಡವಾಗಿ ಹೊರಬಿದ್ದಿತ್ತು.
ಇದನ್ನೂ ಓದಿ IPL 2024: ಕೋಲ್ಕೊತಾ ನೈಟ್ ರೈಡರ್ಸ್ ಸವಾಲು ಮೀರುವುದೇ ಡೆಲ್ಲಿ ಕ್ಯಾಪಿಟಲ್ಸ್?
BREAKING: Ben Stokes has confirmed he does not wish to be considered for England selection for this summer's ICC Men's T20 World Cup 🏏 pic.twitter.com/bD947X74aR
— Sky Sports Cricket (@SkyCricket) April 2, 2024
ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. 2023ರ ಏಕದಿನ ವಿಶ್ವಕಪ್ ಟೂರ್ನಿಯಂತೆಯೇ ಈ ಬಾರಿಯ ಟಿ20 ವಿಶ್ವಕಪ್ನ ಎಲ್ಲ ಪಂದ್ಯಗಳನ್ನು ಮೊಬೈಲ್ನಲ್ಲಿ ಉಚಿತವಾಗಿ ಪ್ರಸಾರ ಮಾಡುವುದಾಗಿ ಡಿಸ್ನಿ ಹಾಟ್ಸ್ಟಾರ್(disney+ hotstar) ಘೋಷಿಸಿದೆ. ಆದರೆ ಈ ಸೌಲಭ್ಯ ಕೇವಲ ಮೊಬೈಲ್ ಬಳಕೆದಾರರಿಗೆ ಮಾತ್ರ ಸಿಗಲಿದೆ.
ತಲಾ 2 ಅಭ್ಯಾಸ ಪಂದ್ಯ
ವಿಶ್ವಕಪ್ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್ ಮತ್ತು ಸೂಪರ್ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್ ಫೈನಲ್ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.