oದುಬೈ : ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಟಿ೨೦ ವಿಶ್ವ ಕಪ್ ಪಂದ್ಯದ ಟಿಕೆಟ್ ಸೋಲ್ಡ್ ಔಟ್ ಆಗಿದೆ. ೫೦ ಸಾವಿರ ಕ್ರಿಕೆಟ್ ಅಭಿಮಾನಿಗಳು ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳ ನಡುವಿನ ಹೋರಾಟದ ಟಿಕೆಟ್ ಅನ್ನು ಖರೀದಿಸಿದ್ದಾರೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ. ಅಕ್ಟೋಬರ್ ೧೬ರಂದು ಟಿ೨೦ ವಿಶ್ವ ಕಪ್ ಆರಂಭವಾಗಲಿದ್ದು, ಭಾರತ ಹಾಗೂ ಪಾಕ್ ನಡುವಿನ ಹಣಾಹಣಿ ಅಕ್ಟೋಬರ್ ೨೩ರಂದು ನಡೆಯಲಿದೆ.
ಭಾರತ ಹಾಗೂ ಪಾಕಿಸ್ತಾನ ಪಂದ್ಯಗಳ ನಡುವಿನ ಟಿಕೆಟ್ ಅನ್ನು ಕಳೆದ ಫೆಬ್ರವರಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಬಿಡುಗಡೆ ಮಾಡಿದ ಕೆಲವೇ ಕ್ಷಣಗಳಲ್ಲಿ ಟಿಕೆಟ್ ಮಾರಾಟವಾಗಿತ್ತು. ಅಂತೆಯೇ ೪೦೦೦ ಸ್ಟಾಂಡಿಂಗ್ ರೂಮ್ ಟಿಕೆಟ್ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಟಿಕೆಟ್ಗಳೂ ಕ್ಷಣಮಾತ್ರದಲ್ಲಿ ಮಾರಾಟವಾಗಿವೆ ಎಂದು ಅಯೋಜಕರು ತಿಳಿಸಿದ್ದಾರೆ.
“ಭಾರತ ಹಾಗೂ ಪಾಕ್ ಪಂದ್ಯದ ಟಿಕೆಟ್ಗಳು ಮಾರಾಟವಾಗಿವೆ. ಸುಮಾರು ೮೨ ದೇಶಗಳ ಕ್ರಿಕೆಟ್ ಅಭಿಮಾನಿಗಳು ೧೬ ದೇಶಗಳ ನಡುವೆ ನಡೆಯಲಿರುವ ವಿಶ್ವ ಕಪ್ ಟೂರ್ನಿಯ ಟಿಕೆಟ್ ಖರೀದಿ ಮಾಡಿದ್ದಾರೆ,” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.
“ಕೊರೊನಾ ಬಳಿಕ ಮೊಟ್ಟ ಮೊದಲ ಬಾರಿಗೆ ಐಸಿಸಿ ಟೂರ್ನಿಗೆ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಮೈದಾನ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಅಂತೆಯೇ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಟಿಕೆಟ್ ಮಾರಾಟವಾಗಿವೆ. ಪಂದ್ಯಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತೆಯೇ ಟಿಕೆಟ್ ಮರು ಮಾರಾಟದ ಕೌಂಟರ್ ತೆರೆಯಲಾಗುವುದು. ಅಭಿಮಾನಿಗಳು ಟಿಕೆಟ್ಗಳನ್ನು ಪರಸ್ಪರ ವಿನಿಯಮ ಮಾಡಿಕೊಳ್ಳುವುದಕ್ಕೆ ಇಲ್ಲಿ ಅವಕಾಶ ಕಲ್ಪಿಸಲಾಗುವುದು,” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ| IND vs PAK | ದ್ರಾವಿಡ್ ತಂತ್ರವನ್ನೇ ಬಳಸಿ ಭಾರತ ತಂಡವನ್ನು ಸೋಲಿಸಿದ ಪಾಕಿಸ್ತಾನದ ನಾಯಕ ಬಾಬರ್