Site icon Vistara News

Ind vs Aus : ಭಾರತ ವಿರುದ್ಧ ಸರಣಿಗೆ ಮೊದಲು ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್​

mitchel Starc

ನವದೆಹಲಿ: ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಮತ್ತು ಆಲ್​​ರೌಂಡರ್​​ ಗ್ಲೆನ್ ಮ್ಯಾಕ್ಸ್ವೆಲ್ ಸೆಪ್ಟೆಂಬರ್ 22 ರಂದು ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಲಭ್ಯರಿಲ್ಲ ಎಂದು ವರದಿಗಳು ತಿಳಿಸಿವೆ. ಇಬ್ಬರೂ ಆಟಗಾರರು ಮೊದಲ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ, ಆದರೆ ಸರಣಿಯ ನಂತರ ಭಾಗವಹಿಸಲಿದ್ದಾರೆ ಎಂದು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಹೇಳಿದ್ದಾರೆ.

ಸ್ಟಾರ್ ಬೌಲರ್​ ಮಿಚೆಲ್​ ಸ್ಟಾರ್ಕ್​​ ​ಭಾರತಕ್ಕೆ ಬಂದಿದ್ದಾರೆ. ಆದರೆ ಅವರು ನಾಳೆ ಆಡುವುದಿಲ್ಲ. ಆದರೆ ಅವರು ಸರಣಿಯ ನಂತರ ಲಭ್ಯವಿರುತ್ತಾರೆ ಎಂದು ಆಶಿಸುತ್ತೇವೆ. ಗ್ಲೆನ್ ಮ್ಯಾಕ್ಸ್​​ವೆಲ್​ ಅವರಿಗೂ ಹಾಗೆಯೇ ಎಂದು ಕಮಿನ್ಸ್​ ಪಂದ್ಯಕ್ಕೆ ಮುಂಚಿತವಾಗಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಎಡ ಮಣಿಕಟ್ಟಿನ ಸ್ನಾಯು ಸೆಳೆತದಿಂದಾಗಿ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದ ಬ್ಯಾಟರ್​ ಸ್ಟೀವ್ ಸ್ಮಿತ್ ಮೊದಲ ಏಕದಿನ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್​ಗೆ ಮರಳಲಿದ್ದಾರೆ.

ಸ್ಮಿತ್ ನೆಟ್ಸ್​​ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ವೀಡಿಯೊವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಬುಧವಾರ ಹಂಚಿಕೊಂಡಿದೆ. ಅನುಭವಿ ಬ್ಯಾಟ್ಸ್ಮನ್ ಅವರು ನೆಟ್ಸ್​​ನಲ್ಲಿ 2 ಗಂಟೆಗಳ ಕಾಲ ಕಳೆದಿದ್ದಾರೆ. ಏಕದಿನ ಸರಣಿಗೆ ಸಿದ್ಧರಾಗಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಡಬ್ಲ್ಯುಟಿಸಿ ಫೈನಲ್ ಮತ್ತು ಆಶಸ್ ಸರಣಿಗಾಗಿ ಯುಕೆಗೆ ಪ್ರಯಾಣಿಸಿದ ನಂತರ ಸ್ಟಾರ್ಕ್ ಸೊಂಟ ನೋವು ಅನುಭವಿಸುತ್ತಿದ್ದರು ಎಂಬುದಾಗಿ ವರದಿಯಾಗಿದೆ.

ಏತನ್ಮಧ್ಯೆ, ಪ್ಯಾಟ್ ಕಮಿನ್ಸ್ ತಮ್ಮ ಮಣಿಕಟ್ಟಿನ ಗಾಯದ ಬಗ್ಗೆ ಅಪ್​ಡೇಟ್​​ ನೀಡಿದ್ದಾರೆ. ನನ್ನ ಗಾಯದ ಸಮಸ್ಯೆ ಸುಧಾರಣೆಯಾಗಿದೆ. ಎಲ್ಲಾ ಮೂರು ಪಂದ್ಯಗಳಲ್ಲಿ ಕಾಣಿಸಿಕೊಳ್ಳುವ ಭರವಸೆಯಿದೆ ಎಂದು ಹೇಳಿಕೊಂಡಿದ್ದಾರೆ.

“ನಾನು ಈಗ ತುಂಬಾ ಚೆನ್ನಾಗಿದ್ದೇನೆ. ನನ್ನ ಮಣಿಕಟ್ಟು ಸಮಸ್ಯೆ ಗುಣಮುಖವಾಗಿದೆ. ನಾನು ಸುಮಾರು 100% ಫಿಟ್​​ ಆಗಿದ್ದೇನೆ. ಎಲ್ಲಾ ಮೂರು ಪಂದ್ಯಗಳನ್ನು ಆಡುತ್ತೇನೆ ಎಂದು ಆಶಿಸುತ್ತೇನೆ ಎಂದು ಕಮಿನ್ಸ್ ಹೇಳಿದ್ದಾರೆ.

ಇದನ್ನೂ ಓದಿ : Asian Games 2023 : ಏಷ್ಯನ್ ಗೇಮ್ಸ್​ನ ಮೊದಲ ಪಂದ್ಯದಲ್ಲಿಯೇ ದಾಖಲೆ ಬರೆದ ಭಾರತ ಮಹಿಳಾ ಕ್ರಿಕೆಟ್​​ ತಂಡ

ಕಮಿನ್ಸ್ 10 ತಿಂಗಳ ನಂತರ ಏಕದಿನ ಕ್ರಿಕೆಟ್​​ಗೆ ಮರಳಲಿದ್ದಾರೆ. ಕಳೆದ ವರ್ಷ ನವೆಂಬರ್​ನಲ್ಲಿ ಅವರು ಕೊನೆಯ ಬಾರಿಗೆ 50 ಓವರ್​ಗಳ ಸ್ವರೂಪದಲ್ಲಿ ಕಾಣಿಸಿಕೊಂಡಿದ್ದರು. ನಾಯಕ ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣಿಸಿದ್ದರು. ಆದರೆ ಮಣಿಕಟ್ಟಿನ ಗಾಯದಿಂದಾಗಿ ಒಂದೇ ಒಂದು ಪಂದ್ಯದಲ್ಲಿ ಆಡಿಲ್ಲ .

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯೇರಿ (ವಿಕೆಟ್ ಕೀಪರ್), ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹೇಜಲ್ವುಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಂಘಾ, ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಜಂಪಾ.

Exit mobile version