Site icon Vistara News

Rishabh Pant: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಪಂತ್​; ಈ ಸರಣಿಯಲ್ಲಿ ಕಣಕ್ಕೆ!

Rishabh Pant

ಬೆಂಗಳೂರು: ಕಳೆದ ವರ್ಷ ಡಿಸೆಂಬರ್ ಸಂಭವಿಸಿದ​ ಭೀಕರ ಕಾರು ಅಪಘಾತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾದ ಟೀಮ್‌ ಇಂಡಿಯಾದ ಸ್ಟಾರ್‌ ಆಟಗಾರ ರಿಷಭ್‌ ಪಂತ್‌(Rishabh Pant) ಅವರು 2024ರ ಆರಂಭದಲ್ಲೇ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಕಠಿಣ ಫಿಟ್ನೆಸ್​ ನಡೆಸುವ ವಿಡಿಯೊ ಹಂಚಿಕೊಂಡು ಪಂತ್​ ಈ ಸುಳಿವನ್ನು ನೀಡಿದ್ದಾರೆ.

ಕಳೆದ ತಿಂಗಳಷ್ಟೇ ರಿಷಭ್​ ಪಂತ್​ ಅವರು ಜನವರಿ(2024) 5ರಿಂದ ಆರಂಭಗೊಳ್ಳುವ ರಣಜಿ ಟ್ರೋಫಿಯಲ್ಲಿ ತವರು(Pant likely to play domestic cricket) ರಾಜ್ಯ ದೆಹಲಿ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಈ ಸುದ್ದಿ ನಿಜವಾಗವು ಸಾಧ್ಯತೆಯೊಂದು ಕಂಡುಬಂದಿದೆ. ಪಂತ್​ ಅವರು ಜಿಮ್​ನಲ್ಲಿ ಬಾರ ಎತ್ತುವ ಮತ್ತು ಇನ್ನು ಕೆಲ ಕಸರತ್ತು ಮಾಡುವ ವಿಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಎಲ್ಲ ನೋವನ್ನು ಮರೆತು ಮತ್ತೆ ಪುಟಿದೇಳುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಪಂತ್ ಜಿಮ್‌ನಲ್ಲಿ ಫಿಟ್​ನೆಸ್​ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅವರ ಅವರ ಅಭಿಮಾನಿಗಳು ನಿಮ್ಮ ಆಗಮನಕ್ಕೆ ಕಾಯುತ್ತಿದ್ದೇವೆ ಎಂದು ಕಮೆಂಟ್​ ಮಾಡಿದ್ದಾರೆ.

ಐಪಿಎಲ್​ ಆಡುವುದು ಖಚಿತ!

ಇತ್ತೀಚೆಗಷ್ಟೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕ ಸೌರವ್ ಗಂಗೂಲಿ ಅವರು ರಿಷಭ್​ ಪಂತ್​ ಸಾರಥ್ಯದಲ್ಲೇ 17ನೇ ಆವೃತ್ತಿಯ ಐಪಿಎಲ್​ನಲ್ಲಿ ತಂಡ ಕಣಕಿಳಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಅಲ್ಲದೆ ಪಂತ್ ಈಗ ಆರೋಗ್ಯವಾಗಿದ್ದಾರೆ ಮತ್ತು ಅವರು ಐಪಿಎಲ್‌ ಆಡುವುದು ಖಚಿತ ಎಂದು ಪಿಟಿಐಗೆ ತಿಳಿಸಿದ್ದರು.

ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿಯಲ್ಲಿ (ಎನ್​ಸಿಎ) ಪುನಶ್ಚೇತನ ಶಿಬಿರದಲ್ಲಿರುವ ಪಂತ್​ ಈಗಾಗಲೆ ಬ್ಯಾಟಿಂಗ್​ ಮತ್ತು ಕೀಪಿಂಗ್​ ಅಭ್ಯಾಸ ನಡೆಸಿದ ವಿಡಿಯೊಗಳು 2 ತಿಂಗಳ ಹಿಂದೆ ವೈರಲ್​ ಆಗಿತ್ತು. ಅಲ್ಲದೆ ಕರ್ನಾಟಕದ JSW ವಿಜಯನಗರದಲ್ಲಿ ನಡೆದ ಕ್ರಿಕೆಟ್​ ಅಭ್ಯಾಸ ಪಂದ್ಯವೊಂದರಲ್ಲಿ ಪಂತ್​ ಬ್ಯಾಟಿಂಗ್​ ನಡೆಸಿದ್ದರು. ತಮ್ಮ ಎಂದಿನ ಶೈಲಿಯಲ್ಲೇ ಸಿಕ್ಸರ್​ ಮತ್ತು ಬೌಂಡರಿ ಕೂಡ ಬಾರಿಸಿ ಮಿಂಚಿದ್ದರು.

ಇದನ್ನೂ ಓದಿ Rishabh Pant : ಸಿಎಸ್​ಕೆ ತಂಡ ಸೇರ್ತಾರಾ ರಿಷಭ್​ ಪಂತ್​?

ಬಹುತೇಕ ಚೇತರಿಕೆ ಕಂಡಿರುವ ಅವರ ಫಿಟ್ನೆಸ್​ ಮೇಲೆ ಬಿಸಿಸಿಐ ವೈದ್ಯಕಿಯ ತಂಡ ನಿಗಾ ಇರಿಸಿದೆ. ಪಂತ್​ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮರಳ ಬೇಕಾದರ ದೇಶೀಯ ಕ್ರಿಕೆಟ್​ನಲ್ಲಿ ಆಡಿ ತಮ್ಮ ಫಿಟ್​ಸೆನ್​ ಸಾಬೀತುಪಡಿಸಬೇಕಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇನ್​ಸೈಡ್​ ಸ್ಪೋರ್ಟ್ಸ್​ಗೆ ವರದಿ ಮಾಡಿದೆ.

ಡಿವೈಡರ್​ಗೆ ಡಿಕ್ಕಿಯಾಗಿದ್ದ ಕಾರು

ಕಳೆದ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಘಟನೆಯಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಸುಟ್ಟ ಗಾಯಗಳು ಹಾಗೂ ಮಂಡಿಯ ಗಾಯಗೊಂಡಿಗೆ ರಿಷಭ್​ ಪಂತ್​ ಪಾರಾಗಿದ್ದರು. ಡೆಹ್ರಾಡೂನ್​ನಲ್ಲಿ ಆರಂಭದಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

Exit mobile version