ಮುಂಬಯಿ: ಮಹಿಳೆಯರ ಪ್ರೀಮಿಯರ್ ಲೀಗ್ನ (WPL 2023) 13ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಸತತವಾಗಿ ಐದು ಪಂದ್ಯಗಳಲ್ಲಿ ಸೋತು ನಿರಾಸೆ ಎದುರಿಸಿರುವ ಆರ್ಸಿಬಿ ತಂಡ ಈ ಪಂದ್ಯದಲ್ಲಾದರೂ ಗೆಲ್ಲುವ ನಿರೀಕ್ಷೆ ಹೊಂದಿದೆ.
ಇದೊಂದು ಫ್ರೆಶ್ ಪಿಚ್ ಎನಿಸಿಕೊಂಡಿದೆ. ಮೊದಲು ಬೌಲಿಂಗ್ ಮಾಡುವ ಮೂಲಕ ರನ್ ಚೇಸ್ ಮಾಡುವುದೇ ಅವರ ಗುರಿಯಾಗಿದೆ. ನಮಗೆ ಸತತವಾಗಿ ಬೆಂಬಲ ನೀಡುತ್ತಿರುವ ಕ್ರೀಡಾಪ್ರೇಮಿಗಳಿಗೆ ಧನ್ಯವಾದಗಳು ಎಂದು ಸ್ಮೃತಿ ಮಂಧಾನಾ ಹೇಳಿದ್ದಾರೆ.
ಇದನ್ನೂ ಓದಿ : WPL 2023 : ಮುಂಬಯಿ ತಂಡಕ್ಕೆ ಐದನೇ ಗೆಲುವು, ಗುಜರಾತ್ ಜಯಂಟ್ಸ್ಗೆ 55 ರನ್ ಹೀನಾಯ ಸೋಲು
ಯುಪಿ ವಾರಿಯರ್ಸ್ ತಂಡದ ನಾಯಕಿ ಅಲಿಸಾ ಹೀಲಿ ಮಾತನಾಡಿ, ನಾವು ಕೂಡ ಬೌಲಿಂಗ್ ಮಾಡಬೇಕು ಎಂದು ಅಂದುಕೊಂಡಿದ್ದೆವು. ಆದರೂ ನಮ್ಮ ಬ್ಯಾಟರ್ಗಳಿಗೆ ಅತ್ಯುತ್ತಮ ಅವಕಾಶ ಲಭಿಸಿದೆ. ನಮ್ಮಿಂದ ಸಾಧ್ಯವಾಗುವಷ್ಟು ಉತ್ತಮ ಪ್ರದರ್ಶನ ನೀಡುತ್ತೇವೆ ಎಂದು ಹೇಳಿದ್ದಾರೆ
ತಂಡಗಳು
ಆರ್ಸಿಬಿ : ಸ್ಮೃತಿ ಮಂಧಾನಾ (ಕ್ಯಾಪ್ಟನ್), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೇದರ್ ನೈಟ್, ರಿಚಾ ಘೋಷ್ (ವಿಕೆಟ್ಕೀಪರ್), ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಮೇಗನ್ ಶೂಟ್, ಆಶಾ ಸೋಭಾನಾ, ರೇಣುಕಾ ಸಿಂಗ್, ದಿಶಾ ಕಸತ್.
ಯುಪಿ ವಾರಿಯರ್ಸ್ : ಅಲಿಸ್ಸಾ ಹೀಲಿ (ನಾಯಕಿ), ದೇವಿಕಾ ವೈದ್ಯ, ಕಿರಣ್ ನವಗಿರೆ, ತಹ್ಲಿಯಾ ಮೆಗ್ರಾತ್, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್, ಶ್ವೇತಾ ಸೆಹ್ರಾವತ್, ಸಿಮ್ರಾನ್ ಶೇಖ್, ಸೋಫಿ ಎಕ್ಲೆಸ್ಟೋನ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್.