Site icon Vistara News

Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

Brij Bhushan

ಉತ್ತರ ಪ್ರದೇಶ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಕೈಸರ್‌ಗಂಜ್‌ನ(Kaiserganj ) ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್(Brij Bhushan) ಅವರನ್ನು ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಿಂದ(Lok Sabha polls) ಕೈಬಿಟ್ಟು, ಅವರ ಪುತ್ರ ಕರಣ್(Karan) ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಗನ ನಾಮನಿರ್ದೇಶನ ಮಾಡುವ ಮೊದಲು ಕೈಸರ್‌ಗಂಜ್‌ನಲ್ಲಿ ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ.

500 ಅಧಿಕ 700 ಎಸ್‌ಯುವಿ ಕಾರುಗಳ ಮೂಲಕ ರ‍್ಯಾಲಿ ಮತ್ತು ನಾಮನಿರ್ದೇಶನ ಸಭೆಯಲ್ಲಿ 10,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದರಲ್ಲಿ ಶಾಸಕರು, ಎಂಎಲ್‌ಸಿಗಳು, ಜಿಲ್ಲಾ ಪಂಚಾಯತ್ ಮುಖ್ಯಸ್ಥರು, ಹತ್ತಿರದ ಜಿಲ್ಲೆಗಳ ಬಿಜೆಪಿಯ ಸ್ಥಳೀಯ ನಾಯಕರು, ಅಯೋಧ್ಯೆಯ ಪ್ರಮುಖ ಧಾರ್ಮಿಕ ಮುಖಂಡರು ಸೇರಿದ್ದರು.

ಕರಣ್ ಭೂಷಣ್ ಸಿಂಗ್ ಅವರು ಉತ್ತರ ಪ್ರದೇಶದಿಂದ ಸತತ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಕಿರಿಯ ಪುತ್ರ . 2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ. ಐದನೇ ಹಂತದಲ್ಲಿ ಮೇ 20 ರಂದು ಕೈಸರ್‌ಗಂಜ್‌ನಲ್ಲಿ ಮತದಾನ ನಡೆಯಲಿದೆ.

ಹಳದಿ ಕುರ್ತಾ, ಕಿತ್ತಳೆ ಬಣ್ಣದ ಸ್ಕಾರ್ಫ್ ಮತ್ತು ಧೋತಿ ಧರಿಸಿದ್ದ ಬ್ರಿಜ್ ಭೂಷಣ್, ಉತ್ಸಾಹಭರಿತ ಕಾರ್ಯಕರ್ತರ ನಡುವೆ ಕೈಯಲ್ಲಿ ಮೈಕ್ರೊಫೋನ್ನೊಂದಿಗೆ ಎಲ್ಲ ವ್ಯವಸ್ಥೆಗಳನ್ನು ನಿರ್ವಹಿಸುತ್ತಿದ್ದರು. ತಾನು ಚುನಾವಣ ಕಣದಲ್ಲಿ ಇಲ್ಲದಿದ್ದರೂ ಕೂಡ ಈ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಇನ್ನೂ ಕೂಡ ಇದೆ ಎನ್ನುವುದನ್ನು ಈ ಶಕ್ತ ಪ್ರದರ್ಶನದ ಮೂಲಕ ತೋರಿಸಿಕೊಟ್ಟಿದ್ದಾರೆ. ಆದ್ಯಾಗೂ, ಬ್ರಿಜ್​ ಭೂಷಣ್​ ಕಾರ್ಯಕ್ರಮದ ಉದ್ದಕ್ಕೂ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅಥವಾ ಅವರ ಮಗನ ಬಳಿ ಹೋಗಲಿಲ್ಲ. ಗಣ್ಯರು ಮತ್ತು ಧಾರ್ಮಿಕ ಮುಖಂಡರನ್ನು ಭೇಟಿ ಮಾಡುವುದರಲ್ಲಿ ನಿರತರಾಗಿದ್ದರು. ಮಗನ ನಾಮಪತ್ರ ಸಲ್ಲಿಕೆಗೂ ಹೋಗಿರಲಿಲ್ಲ.

ನಾಮಪತ್ರ ಸಲ್ಲಿಕೆಗೆ ಮಗನ ಜತೆ ಏಕೆ ಹೋಗಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಬ್ರಿಜ್​ ಭೂಷಣ್​​, “ಐದು ಜನರಿಗೆ ಮಾತ್ರ ಹೋಗಲು ಅನುಮತಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಸಂದರ್ಭದಲ್ಲಿ ನಾನು ಇಲ್ಲಿನ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದೆ” ಎಂದು ಹೇಳಿದರು.

Exit mobile version