Site icon Vistara News

Brij Bhushan Singh: ಬ್ರಿಜ್‌ಭೂಷಣ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಪೊಲೀಸರು; ಪೋಕ್ಸೊ ಕೈಬಿಡಲು ಶಿಫಾರಸು

Brij Bhushan Sharan Singh

ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್‌ನ ನಿರ್ಗಮಿತ ಅಧ್ಯಕ್ಷ ಬ್ರಿಜ್‌ಭೂಷಣ್‌ ಶರಣ್​ ಸಿಂಗ್‌(Brij Bhushan Sharan Singh) ವಿರುದ್ಧ ದೆಹಲಿ ಪೊಲೀಸರು(Delhi Police) ಪಟಿಯಾಲ ನ್ಯಾಯಾಲಯಕ್ಕೆ 500 ಪುಟಗಳ ಚಾರ್ಜ್‌ಶೀಟ್‌(Chargesheet) ಸಲ್ಲಿಸಿದ್ದಾರೆ. ಜತೆಗೆ ಬ್ರಿಜ್‌ಭೂಷಣ್‌ ವಿರುದ್ಧ ದಾಖಲಾದ ಪೋಕ್ಸೊ(POCSO) ಕೇಸನ್ನು ರದ್ದುಗೊಳಿಸುವಂತೆ ಪೊಲೀಸರು ಕೋಟ್​ಗೆ ಶಿಫಾರಸು ಮಾಡಿದ್ದಾರೆ.

ಗುರುವಾರ ಪಟಿಯಾಲ ಕೋಟ್​​ಗೆ ವರದಿ ಸಲ್ಲಿಸಿರುವ ದೆಹಲಿ ಪೊಲೀಸರು ಬ್ರಿಜ್‌ಭೂಷಣ್‌ ವಿರುದ್ಧ ಅಪ್ರಾಪ್ತ ವಯಸ್ಸಿನ ಬಾಲಕಿ ಸಲ್ಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡಿದ್ದಾರೆ. ಮತ್ತು ತನಿಖೆಯಲ್ಲಿ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್(anurag thakur) ಅವರು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರನ್ನು ಕಳೆದ ವಾರ ಭೇಟಿಯಾಗಿ ಜೂನ್ 15 ರೊಳಗೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. ಈ ಭರವಸೆಯ ನಂತರ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದರು. ಇದೀಗ ಬ್ರಿಜ್‌ಭೂಷಣ್‌ ಶರಣ್​ ಸಿಂಗ್‌ ಆರೋಪದಲ್ಲಿ ಯಾವುದೇ ಸಾಕ್ಷಿಗಳು ಇಲ್ಲ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ 500 ಪುಟಗಳ ಚಾರ್ಜ್‌ಶೀಟ್‌(Chargesheet) ಸಲ್ಲಿಸಿದ್ದಾರೆ. ಸದ್ಯ ಕುಸ್ತಿಪಟುಗಳು ಮತ್ತೆ ಪ್ರತಿಭಟನೆಯನ್ನು ಕೈಗೆತ್ತಿಕೊಳ್ಳಲಿದ್ದಾರಾ ಅಥವಾ ಈ ಹೋರಾಟದಿಂದ ಹಿಂದೆ ಸರಿಯಲಿದ್ದರಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ Wrestlers Protest : ಕುಸ್ತಿಪಟುಗಳು ಹೋರಾಟದ ನಡುವೆ ಡಬ್ಲ್ಯುಎಫ್​ಐಗೆ ಜುಲೈ 6ರಂದು ಚುನಾವಣೆ

ಕಳೆದ ವಾರವಷ್ಟೇ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪ ಪ್ರಕರಣಕ್ಕೆ ಮಹತ್ವದ ತಿರುವೊಂದು ಲಭಿಸಿತ್ತು. ದೂರು ನೀಡಿದ ಅಪ್ರಾಪ್ತ ಕುಸ್ತಿಪಟುವಿನ ತಂದೆ ಯೂ-ಟರ್ನ್​ ಹೊಡೆದಿದ್ದರು. ಬ್ರಿಜ್​ ಭೂಷಣ್​ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳದ ದೂರು ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಈ ಎಲ್ಲ ಕಾರಣದಿಂದ ಬ್ರಿಜ್​ ಭೂಷಣ್​ ಅವರು ಈ ಆರೋಪದಿಂದ ಮುಕ್ತವಾಗುವ ಸಾಧ್ಯತೆ ದಟ್ಟವಾಗಿದೆ.

Exit mobile version