ಹೈದರಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ಐಸಿಸಿ ನಿಯಮ ಉಲ್ಲಂಘನೆ ಮಾಡಿದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಛೀಮಾರಿ ಹಾಕಿದೆ. ಇದು 24 ತಿಂಗಳಲ್ಲಿ ಬುಮ್ರಾ ಮಾಡಿದ ಮೊದಲ ಅಪರಾಧವಾಗಿದೆ. ಹೀಗಾಗಿ ಅವರ ದಾಖಲೆಗೆ ಡಿಮೆರಿಟ್ ಪಾಯಿಂಟ್ ಕೂಡ ಸೇರಿಸಲಾಗಿದೆ.
ಆಟಗಾರ, ಆಟಗಾರರ ಬೆಂಬಲ ಸಿಬ್ಬಂದಿ, ಅಂಪೈರ್, ಮ್ಯಾಚ್ ರೆಫರಿ ಅಥವಾ ಇತರ ಯಾವುದೇ ವ್ಯಕ್ತಿಯೊಂದಿಗೆ (ಅಂತರರಾಷ್ಟ್ರೀಯ ಪಂದ್ಯದ ಸಮಯದಲ್ಲಿ ಪ್ರೇಕ್ಷಕ ಸೇರಿದಂತೆ) ಅನುಚಿತ ದೈಹಿಕ ಸಂಪರ್ಕಕ್ಕೆ ಸಂಬಂಧಿಸಿದ ಆಟಗಾರರು ಮತ್ತು ಆಟಗಾರರ ಬೆಂಬಲ ಸಿಬ್ಬಂದಿಗಾಗಿ ಮಾಡಿರುವ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.12 ಅನ್ನು ವೇಗಿ ಉಲ್ಲಂಘಿಸಿದ್ದಾರೆ ಎಂದು ಐಸಿಸಿ ಹೇಳಿದೆ.
ಇದನ್ನೂ ಓದಿ : Ind vs Eng : ಇಂಗ್ಲೆಂಡ್ ವಿರುದ್ಧ ಸೋಲು; 91 ವರ್ಷಗಳ ಬಳಿಕ ಭಾರತದ ಕಳಪೆ ದಾಖಲೆ
ಇಂಗ್ಲೆಂಡ್ ಇನ್ನಿಂಗ್ಸ್ ನ 81ನೇ ಓವರ್ ನಲ್ಲಿ ಈ ಘಟನೆ ನಡೆದಿದೆ. ಆನ್ ಫೀಲ್ಡ್ ಅಂಪೈರ್ ಗಳಾದ ಪಾಲ್ ರೀಫೆಲ್ ಮತ್ತು ಕ್ರಿಸ್ ಗಫಾನಿ, ಮೂರನೇ ಅಂಪೈರ್ ಮರೈಸ್ ಎರಾಸ್ಮಸ್ ಮತ್ತು ನಾಲ್ಕನೇ ಅಂಪೈರ್ ರೋಹನ್ ಪಂಡಿತ್ ಈ ಆರೋಪಗಳನ್ನು ದಾಖಲು ಮಾಡಿದ್ದರು. ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಪ್ರಸ್ತಾಪಿಸಿದ ನಿರ್ಬಂಧವನ್ನು ಬುಮ್ರಾ ಒಪ್ಪಿಕೊಂಡಿದ್ದಾರೆ. ಆದ್ದರಿಂದ ಯಾವುದೇ ಔಪಚಾರಿಕ ವಿಚಾರಣೆ ಮಾಡುವುದಿಲ್ಲ ಎಂದು ಐಸಿಸಿ ಹೇಳಿದೆ.
ಆತಿಥೇಯರು ಮೊದಲ ಇನ್ನಿಂಗ್ಸ್ ನಲ್ಲಿ 190 ರನ್ ಗಳ ಮುನ್ನಡೆ ಸಾಧಿಸಿದರೂ ಇಂಗ್ಲೆಂಡ್ ಭಾರತವನ್ನು 28 ರನ್ ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಬುಮ್ರಾ ಎರಡನೇ ಇನ್ನಿಂಗ್ಸ್ನಲ್ಲಿ ನಾಲ್ಕು ವಿಕೆಟ್ ಸಾಧನೆ ಸೇರಿದಂತೆ ಆರು ವಿಕೆಟ್ಗಳನ್ನು ಪಡೆದಿದ್ದರು.
ಎರಡನೇ ಪಂದ್ಯಕ್ಕೆ ಜಡೇಜಾ, ರಾಹುಲ್ ಔಟ್; ಇನ್ನಿಬ್ಬರಿಗೆ ಅವಕಾಶ
ಬೆಂಗಳೂರು: ಹೈದರಾಬಾದ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ (Ind vs Eng) ಟೆಸ್ಟ್ ಸರಣಿಯ ಆರಂಭಿಕ ಪಂದ್ಯದಲ್ಲಿ ಸೋಲನುಭವಿಸಿದ ಭಾರತಕ್ಕೆ ಡಬಲ್ ಹೊಡೆತ ಬಿದ್ದಿದೆ. ಆಲ್ರೌಂಡರ್ ರವೀಂದ್ರ ಜಡೇಜಾ ಮತ್ತು ವಿಕೆಟ್ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಫೆಬ್ರವರಿ 2ರಿಂದ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಗುವ ಎರಡನೇ ಟೆಸ್ಟ್ನಿಂದ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದಾರೆ.
ಹೈದರಾಬಾದ್ ವಿರುದ್ಧದ ಪಂದ್ಯದ ನಾಲ್ಕನೇ ದಿನದಂದು ಜಡೇಜಾ ಬ್ಯಾಟಿಂಗ್ ಮಾಡುವಾಗ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ತಂಡದ ಮ್ಯಾನೇಜ್ಮೆಂಟ್ ಸ್ಕ್ಯಾನ್ಗಾಗಿ ಕಾಯುತ್ತಿದೆ ಎಂದು ಹಿಂದೆ ವರದಿಯಾಗಿತ್ತು. ಇದೀಗ ವರದಿ ಬಂದಿತ್ತು. ಈಗ ಅವರನ್ನು ಆಟದಿಂದ ಹೊರಗಿಟ್ಟಿದೆ. ಏತನ್ಮಧ್ಯೆ, ರಾಹುಲ್ ಬಲ ಕ್ವಾಡ್ರಿಸೆಪ್ಸ್ ನೋವಿನಿಂದ ಬಳಲುತ್ತಿದ್ದಾರೆ ಮತ್ತು ಆಟದಿಂದ ಹೊರಗುಳಿಯಲಿದ್ದಾರೆ.
ಇವರಿಬ್ಬರು ಹೊರಗುಳಿದ ನಂತರ, ಆಯ್ಕೆ ಸಮಿತಿಯು ಸರ್ಫರಾಜ್ ಖಾನ್, ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಎರಡನೇ ಟೆಸ್ಟ್ ತಂಡಕ್ಕೆ ಸೇರಿಸಿದೆ.
ಎರಡನೇ ಪಂದ್ಯಕ್ಕೆ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.