Site icon Vistara News

Cauvery water dispute: ಟ್ವೀಟ್​ ಮೂಲಕ ಕಾವೇರಿ ಕರುನಾಡ ಆಸ್ತಿ ಎಂದರೇ ಕ್ರಿಕೆಟಿಗ ರಾಹುಲ್​?

KL Rahul the captain looked in control even as KL Rahul the keeper struggled a bit

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರುದ್ಧ (Cauvery Water Dispute) ಬೆಂಗಳೂರಿನಲ್ಲಿ ರೈತ ಸಂಘಟನೆ ಸೇರಿ ಹಲವರು ಪ್ರತಿಭಟನೆ ನಡೆಸಿದ್ದಾರೆ. ಕಾವೇರಿ ನೀರು ಉಳಿವಿಗಾಗಿ ಹೋರಾಟ ನಡೆಸಿದ್ದಾರೆ. ಟೀಮ್​ ಇಂಡಿಯಾದ ಕ್ರಿಕೆಟಿಗ, ಕನ್ನಡಿಗ ಕೆ.ಎಲ್​ ರಾಹುಲ್​ ಕೂಡ ಕಾವೇರಿ ವಿಚಾರದಲ್ಲಿ ಕರುನಾಡಿಗೆ ಬೆಂಬಲ ಸೂಚಿಸಿದ ಟ್ವೀಟ್​ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ. ಅಸಲಿಗೆ ರಾಹುಲ್​ ಅವರು ಈ ಟ್ವೀಟ್​ ಮಾಡಿಲ್ಲ. ಬದಲಾಗಿ ಅವರ ಹೆಸರಿನ ನಕಲಿ ಖಾತೆಯಿಂದ ಈ ಟ್ವೀಟ್​ ಮಾಡಲಾಗಿದೆ.

ಟ್ವೀಟ್​ನಲ್ಲಿ ಏನಿದೆ?

ರಾಹುಲ್​ ಅವರ ಹೆಸರಿನ ನಕಲಿ ಖಾತೆ ಟ್ವಿಟರ್​ನಲ್ಲಿ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ, ರಾಹುಲ್​ ಅವರ ಶತಕದ ಫೋಟೊವೊಂದನ್ನು ಹಂಚಿಕೊಂಡು “ಕಾವೇರಿ ಎಂದೂ ನಮ್ಮದು. ಕಾವೇರಿ ಹುಟ್ಟುವುದು, ಅತಿ ಹೆಚ್ಚು ನೀರು ಸಂಗ್ರಹವಾಗುವುದು ಕರ್ನಾಟಕದಲ್ಲಿ. ಆದರೆ, ಆ ನೀರನ್ನು ಬಳಸಿಕೊಳ್ಳಲು ಪ್ರತಿ ವರ್ಷ ಕಾನೂನು ಹೋರಾಟದ ಜತೆಗೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯ ಕನ್ನಡಿಗರದು. ಇದು ನಮ್ಮ ದುರಂತ. ಕಾವೇರಿ ಇಡೀ ಕರ್ನಾಟಕದ ಆಸ್ತಿ” ಎಂದು ಬರೆದಿದ್ದಾರೆ. ಈ ಮೂಲಕ ಅವರ ಹೆಸರನ್ನು ದುರುಯೋಗಪಡಿಸಿಕೊಂಡಿದ್ದಾರೆ.

ಮೇ 1ರಂದು ನಡೆದ ಆರ್​ಸಿಬಿ ವಿರುದ್ಧದ ಐಪಿಎಲ್​ ಪಂದ್ಯದ ವೇಳೆ ರಾಹುಲ್ ಅವರು ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿ ಬಳಿಕ ಅವರಿಗೆ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹೀಗಾಗಿ ಅವರು ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಿಂದ ಹೊರಗುಳಿದಿದ್ದರು. ಗಾಯದಿಂದ ಚೇತರಿಕೆ ಕಂಡು ಏಷ್ಯಾಕಪ್​ನಲ್ಲಿ ಆಡಿದ ಪಾಕ್​ ವಿರುದ್ಧದ ಮೊದಲ ಪಂದ್ಯದಲ್ಲೇ ಶತಕ ಬಾರಿಸಿ ಮಿಂಚಿದ್ದರು. ಅಲ್ಲದೆ ಆಸೀಸ್​​ ವಿರುದ್ಧದ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆ ಸರಣಿಯನ್ನು ಜಯಿಸಿಕೊಟ್ಟಿದ್ದಾರೆ. ವಿಶ್ವಕಪ್​ನಲ್ಲಿ ಪ್ರಧಾನ ಕೀಪರ್​ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅವರ ಪ್ರಚಂಡ ಫಾರ್ಮ್​ ಭಾರತ ತಂಡಕ್ಕೆ ಹೆಚ್ಚಿನ ಬಲ ನೀಡಿದಂತಾಗಿದೆ.

ಇದನ್ನೂ ಓದಿ ರಾಜ್​ಕೋಟ್​ನಲ್ಲಿ ಈಡೇರಲಿ ಭಾರತದ ಕ್ಲೀನ್‌ ಸ್ವೀಪ್‌ ಯೋಜನೆ; ನಾಳೆ ಅಂತಿಮ ಏಕದಿನ

CWRCಯಿಂದ ರಾಜ್ಯಕ್ಕೆ ಸ್ವಲ್ಪ ರಿಲೀಫ್‌; 5000ದಿಂದ 3000 ಕ್ಯೂಸೆಕ್‌ಗೆ ಇಳಿಸಿದ ಸಮಿತಿ

ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್‌ ಬದಲಿಗೆ ಮೂರು ಸಾವಿರ ಕ್ಯೂಸೆಕ್‌ಗೆ ಇಳಿಸಿ ಎಂದು ಸೂಚನೆ ನೀಡಿದೆ.

ಸೆ. 13ರಂದು ಹದಿನೈದು ದಿನಗಳವರೆಗೆ ಐದು ಸಾವಿರ ಕ್ಯೂಸೆಕ್‌ ನೀರು ಬಿಡಬೇಕು ಎಂದು ನೀಡಿದ ಆದೇಶ ಊರ್ಜಿತದಲ್ಲಿರುವುದರಿಂದ ಸೆ. 28ರಿಂದ ಹೊಸ ಆದೇಶ ಜಾರಿಗೆ ಬರಲಿದೆ. ಆಗ 3000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕಾಗುತ್ತದೆ. ಈ ಆದೇಶವು ಅಕ್ಟೋಬರ್‌ 15ರವರೆಗೆ ಜಾರಿಯಲ್ಲಿ ಇರಲಿದ್ದು, ಅಲ್ಲಿವರೆಗೆ ಪ್ರತಿ ದಿನವೂ 3000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕಾಗುತ್ತದೆ.

CWRC ಯ ಮುಂದೆ ವಾಸ್ತವ ಸ್ಥಿತಿ ಸಲ್ಲಿಕೆ ಮಾಡಿದ ಕರ್ನಾಟಕ ಇದಕ್ಕಿಂತ ಮೊದಲು ಕರ್ನಾಟಕವು ತನ್ನ ನೀರಿನ ಪರಿಸ್ಥಿತಿಯ ವಿವರಣೆಯನ್ನು ನೀಡಿತು. 25.09.2023 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಟ್ಟೂ ಒಳಹರಿವಿನ ಕೊರತೆ 53.04% ಆಗಿದೆ. ಕರ್ನಾಟಕ ಸರ್ಕಾರವು ದಿನಾಂಕ 13.09.2023 ರ ಆದೇಶದಲ್ಲಿ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಹಿನ್ನೆಲೆಯಲ್ಲಿ ಈ ಅಂಶಗಳನ್ನು ಈ ಅಂಶವು ಸಮಿತಿ ಗಂಭೀರವಾಗಿ ಪರಿಗಣಿಸಬೇಕೆಂದು ಕರ್ನಾಟಕ ಮನವಿ ಮಾಡಿತು.

ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ. ರಾಜ್ಯದ ಜಲಾಶಯಗಳಿಂದ ಯಾವುದೇ ಹರಿವನ್ನು ಅಂತಾರಾಜ್ಯ ಗಡಿಯಾದ ಬಿಳಿಗುಂಡ್ಲುನಲ್ಲಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿತು.

ಇದಕ್ಕೆ ಪ್ರತಿಯಾಗಿ ತಮಿಳುನಾಡು ನಿಯಮ ಪ್ರಕಾರ 12500 ಕ್ಯೂಸೆಕ್‌ ನೀರು ಪ್ರತಿದಿನವೂ ಬಿಡುಗಡೆ ಮಾಡಬೇಕು ಎಂಬ ವಾದವನ್ನೇ ಮುಂದೆ ಮಾಡಿತು. ಅಂತಿಮವಾಗಿ ನಿಯಂತ್ರಣ ಸಮಿತಿಯು ನೀರಿನ ಪ್ರಮಾಣವನ್ನು ಇಳಿಸಿ ಆದೇಶ ಹೊರಡಿಸಿತು. ಇದೀಗ ಕರ್ನಾಟಕವು ಈ ಅದೇಶವನ್ನು ಮತ್ತೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ಪ್ರಶ್ನಿಸಲು ಅವಕಾಶವಿದೆ

Exit mobile version