ಹೊಸದಿಲ್ಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (Wrestling Federation of Indiaಗೆ ಆಯ್ಕೆಯಾದ ಸಮಿತಿಯನ್ನು ಅಮಾನತು ಮಾಡಿರುವ ಬಳಿಕ ಇದೀಗ ಕ್ರೀಡಾಸಚಿವಾಲಯವು ಒಕ್ಕೂಟವನ್ನು ನಡೆಸಲು ತಾತ್ಕಾಲಿಕ ಸಮಿತಿಯನ್ನು ರಚಿಸುವಂತೆ ಭಾರತೀಯ ಒಲಿಂಪಿಕ್ ಸಂಸ್ಥೆಗೆ (IOA) ಸೂಚಿಸಿದೆ. ಅಥ್ಲೀಟ್ಗಳ ಆಯ್ಕೆ ಸೇರಿದಂತೆ ಡಬ್ಲ್ಯುಎಫ್ಐನ ವ್ಯವಹಾರಗಳನ್ನು ತಾತ್ಕಾಲಿಕ ಸಮಿತಿಯು ನಿರ್ವಹಿಸಬಹುದು ಮತ್ತು ನಿಯಂತ್ರಿಸಬಹುದು ಎಂದು ಕ್ರೀಡಾ ಸಚಿವಾಲಯವು ಐಒಎ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.
ಡಬ್ಲ್ಯುಎಫ್ಐನ ಮಾಜಿ ಪದಾಧಿಕಾರಿಗಳ ಪ್ರಭಾವ ಮತ್ತು ನಿಯಂತ್ರಣದಿಂದ ಉದ್ಭವಿಸುವ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ. ಅದೇ ರೀತಿ ಡಬ್ಲ್ಯುಎಫ್ಐನ ಆಡಳಿತ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಕಳವಳಗಳು ಉದ್ಭವಿಸಿವೆ ” ಎಂದು ಕೇಂದ್ರದ ಅಧೀನ ಕಾರ್ಯದರ್ಶಿ ತರುಣ್ ಪರೀಕ್ ಸಹಿ ಮಾಡಿದ ಪತ್ರದಲ್ಲಿ ತಿಳಿಸಲಾಗಿದೆ.
“ಕ್ರೀಡಾ ಸಂಸ್ಥೆಗಳಲ್ಲಿ ಉತ್ತಮ ಆಡಳಿತದ ತತ್ವಗಳನ್ನು ಎತ್ತಿಹಿಡಿಯಲು ತಕ್ಷಣದ ಕ್ರಮದ ಅಗತ್ಯವಿದೆ. ಸಮಸ್ಯೆಗಳನ್ನು ಸರಿಪಡಿಸುವ ಕ್ರಮಗಳ ಅಗತ್ಯವಿದೆ, ಆದ್ದರಿಂದ ಶಿಸ್ತಿನ ಕುಸ್ತಿಪಟುಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸದಂತೆ ನೋಡಿಕೊಳ್ಳಬೇಕಾಗಿದೆ. ಡಬ್ಲ್ಯುಎಫ್ಐನ ವ್ಯವಹಾರಗಳನ್ನು ನಿರ್ವಹಿಸಲು ಮಧ್ಯಂತರ ಅವಧಿಗೆ ಸೂಕ್ತ ವ್ಯವಸ್ಥೆಗಳನ್ನು ಮಾಡುವುದು ಈಗ ಐಒಎ ಕರ್ತವ್ಯವಾಗಿದೆ. ” ಎಂದು ಕ್ರೀಡಾ ಸಚಿವಾಲಯ ತನ್ನ ಪತ್ರದಲ್ಲಿ ತಿಳಿಸಿದೆ.
ಡಬ್ಲ್ಯುಎಫ್ಐನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್, ಹೊಸದಾಗಿ ಆಯ್ಕೆಯಾದ ಸಮಿತಿಯ ಚುಕ್ಕಾಣಿ ಹಿಡಿದ ಬಳಿಕ ಕುಸ್ತಿಪಟುಗಳು ಪ್ರತಿಭಟನೆಗಳು ಜೋರಾಗಿದ್ದವು. ಹೀಗಾಗಿ ಡಬ್ಲ್ಯುಎಫ್ಐಗೆ ಮತ್ತೊಂದು ಸುತ್ತಿನ ಚುನಾವಣೆ ಎದುರಾಗುವ ಸಾಧ್ಯತೆಗಳಿವೆ.
ತಾತ್ಕಾಲಿಕ ಸಮಿತಿ ಸುಪರ್ದಿಗೆ ಆಡಳಿತ
ಐಒಎ ರಚಿಸಿದ ತಾತ್ಕಾಲಿಕ ಸಮಿತಿಯು ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಕ್ರೀಡಾಪಟುಗಳ ಭಾಗವಹಿಸುವಿಕೆಗೆ ನೊಂದಾಯಿಸುವುದು. ಕ್ರೀಡಾಕೂಟಗಳನ್ನು ನಡೆಸುವುದು ಸೇರಿದಂತೆ ಡಬ್ಲ್ಯುಎಫ್ಐನ ದೈನಂದಿನ ವ್ಯವಹಾರಗಳನ್ನು ನೋಡಿಕೊಳ್ಳಲಿದೆ. ಮುಂಬರುವ ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ಬಗ್ಗೆ ಖ್ಯಾತ ಕುಸ್ತಿಪಟು ಸಾಕ್ಷೀ ಮಲಿಕ್ ನಿನ್ನೆ ಕಳವಳ ವ್ಯಕ್ತಪಡಿಸಿದ್ದರು. ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಕೇಂದ್ರವು ಹೊಸದಾಗಿ ಆಯ್ಕೆಯಾದ ಸಮಿತಿಗೆ ಆದೇಶಿಸಿದೆ. ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ “ಅವಸರದ” ಘೋಷಣೆಯನ್ನು ಕೇಂದ್ರವು ಗಮನಿಸಿ ತಡೆ ನೀಡಿದೆ.
ಇದನ್ನೂ ಓದಿ : WFI Polls Row: ಹೊಸ ಕುಸ್ತಿ ಒಕ್ಕೂಟವೇ ರದ್ದು; ಕುಸ್ತಿಪಟುಗಳ ಬಿಗಿಪಟ್ಟಿಗೆ ಚಿತ್ ಆದ ಕೇಂದ್ರ
ಹೊಸದಾಗಿ ಆಯ್ಕೆಯಾದ ಸಂಸ್ಥೆಯು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಕ್ರೀಡಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಡಬ್ಲ್ಯುಎಫ್ಐನ ವ್ಯವಹಾರವನ್ನು ಮಾಜಿ ಪದಾಧಿಕಾರಿಗಳ ನಿಯಂತ್ರಣದಲ್ಲಿ ನಡೆಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ. “ಇದು ಆಟಗಾರರಿಗೆ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾದ ವಿಚಾರಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಸೂಕ್ತವಲ್ಲ ಎಂದು ಕೋರ್ಟ್ ಹೇಳಿದೆ.
ಬ್ರಿಜ್ಭೂಷಣ್ ವಿರುದ್ಧ ಹೋರಾಟ
ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು.