ಮುಂಬಯಿ: ಟೀಮ್ ಇಂಡಿಯಾದ ಕ್ರಿಕೆಟಿಗ ಯಜುವೇಂದ್ರ ಚಹಲ್(Yuzvendra Chahal) ಮತ್ತು ಅವರ ಪತ್ನಿ ಧನಶ್ರೀ ವರ್ಮಾ(Dhanashree Verma) ಮಧ್ಯೆ ಎಲ್ಲವೂ ಸರಿಯಿಲ್ಲ. ಈ ಜೋಡಿ ದೂರವಾಗಲಿದ್ದಾರೆ ಎಂಬ ಮಾತುಗಳು ಆಗಾಗ ಕೇಳಿ ಬರುತ್ತಲೇ ಇದೆ. ಆದರೆ ಈ ಜೋಡಿ(Chahal-Dhanashree) ಶೀಘ್ರದಲ್ಲೇ ಸಿಹಿ ಸುದ್ದಿಯೊಂದನ್ನು ನೀಡುವ ನಿರೀಕ್ಷೆಯಲ್ಲಿದ್ದಾರೆ. ಹೌದು, ಚಹಲ್ ಮತ್ತು ಧನಶ್ರೀ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಇಂತಹದೊಂದು ಕುತೂಹಲಕ್ಕೆ ಕಾರಣವಾಗಿದ್ದು ಧನಶ್ರೀ ವರ್ಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಒಂದು ಫೋಟೊ.
ಧನಶ್ರೀ ಗರ್ಭಿಣಿಯರು ಧರಿಸುವ ಉಡುಗೆ ತೊಟ್ಟು(Dhanashree Verma Maternity Dress) ತನ್ನ ಗಂಡ ಚಹಲ್ ಜತೆಗಿರುವ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೀಗಾಗಿ ಚಹಲ್ ತಂದೆಯಾಗುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಆದರೆ ಈ ಜೋಡಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಇದು ಕೇವಲ ನೆಟ್ಟಿಗರ ಕಲ್ಪನೆಯಾಗಿದೆ. ಧನಶ್ರೀ ಡ್ಯಾನ್ಸರ್ ಮತ್ತು ಮಾಡೆಲ್ ಆಗಿರುವ ಕಾರಣ ಟ್ರೆಂಡ್ಗಾಗಿ ಈ ಉಡುಗೆಯನ್ನು ತೊಟ್ಟಿರುವ ಸಾಧ್ಯತೆಯೂ ಅಧಿಕವಾಗಿದೆ. 2020ರಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು.
ಏಷ್ಯಾ ಕಪ್ ಮತ್ತು ಏಕದಿನ ವಿಶ್ವಕಪ್ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ನೀಡಲಾಗಿದೆ. ಚಹಲ್ ಸದ್ಯ ಅಮೆರಿಕಕ್ಕೆ ತೆರಳಿದ್ದಾರೆ. ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್, 80 ಟಿ20 ಆಡಿ 96 ವಿಕೆಟ್ ಕಡೆವಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿಯೂ ಅವರಿಗೆ ಆಡುವ ಅವಕಾಶ ಸಿಗಬಹುದು.
ಇದನ್ನೂ Yuzvendra Chahal: ಸಿಕ್ಸರ್ ಹೊಡೆಸಿಕೊಂಡು ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್
ಇತ್ತೀಚೆಗೆ 150ನೇ ಐಪಿಎಲ್ ಪಂದ್ಯವನ್ನಾಡಿದ ಚಹಲ್ಗೆ ಪತ್ನಿ ಭಾವುಕ ವಿಡಿಯೊ ಸಂದೇಶದ ಮೂಲಕ ಹಾರೈಸಿದ್ದರು. “ಹೇ ಯುಜಿ, ನಿಮ್ಮ 150ನೇ ಐಪಿಎಲ್ ಪಂದ್ಯಕ್ಕೆ ಅಭಿನಂದನೆಗಳು. ನಿವು ಈ ಹಿಂದೆ ಆಡಿದ ತಂಡಕ್ಕೆ ಮತ್ತು ಈಗ ಆಡುತ್ತಿರುವ ರಾಜಸ್ಥಾನ್ ರಾಯಲ್ಸ್‌ಗೆ ನೀವು ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಬಗ್ಗೆ ನನಗೆ ಯಾವತ್ತೂ ಹೆಮ್ಮೆ ಇದೆ. ನೀವು ನಿಮ್ಮ ಆಟವನ್ನು ಹೇಗೆ ಆಡುತ್ತೀರಿ ಮತ್ತು ಪ್ರತಿ ಬಾರಿ ನೀವು ಕಮ್ಬ್ಯಾಕ್ ಮಾಡುವ ರೀತಿ ನಿಜಕ್ಕೂ ಮೆಚ್ಚಲೇ ಬೇಕು. ಯಾವುದೇ ಪಂದ್ಯ ಒತ್ತಡದಲ್ಲಿದ್ದಾಗಲೆಲ್ಲಾ ವಿಕೆಟ್ ತೆಗೆಯಬಲ್ಲ ಬೌಲರ್ ನೀವಾಗಿದ್ದೀರಿ. ನಾನು ನಿಮ್ಮ ದೊಡ್ಡ ಚೀರ್‌ಲೀಡರ್ ಮತ್ತು ನಾನು ಯಾವಾಗಲೂ 100 ಪ್ರತಿಶತದಷ್ಟು ನಿಮ್ಮನ್ನು ಬೆಂಬಲಿಸುತ್ತೇನೆ” ಎಂದು ಶುಭ ಹಾರೈಸಿದ್ದರು. ವಿಡಿಯೊವನ್ನು ರಾಜಸ್ಥಾನ್ ರಾಯಲ್ಸ್(Rajasthan Royals) ತನ್ನ ಅಧಿಕೃತ ಟ್ವಿಟರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿತ್ತು.