Champions Trophy 2025: ಚಾಂಪಿಯನ್ಸ್‌ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ ಯಾವ ತಂಡಕ್ಕೆ ಸಿಗಲಿದೆ ಅವಕಾಶ? - Vistara News

ಕ್ರೀಡೆ

Champions Trophy 2025: ಚಾಂಪಿಯನ್ಸ್‌ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ ಯಾವ ತಂಡಕ್ಕೆ ಸಿಗಲಿದೆ ಅವಕಾಶ?

Champions Trophy 2025: ಭಾರತ ತಂಡ ಟೂರ್ನಿಯಿಂದ ಹಿಂದೆ ಸರಿದರೆ, 9ನೇ ಸ್ಥಾನಿಯಾಗಿರುವ ಶ್ರೀಲಂಕಾಗೆ ಅವಕಾಶ ಸಿಗಲಿದೆ. ಯಾವುದೇ ತಂಡವು ಐಸಿಸಿ ಟೂರ್ನಿಯಿಂದ ಹಿಂದೆ ಸರಿದರೆ ಅಂಕಪಟ್ಟಿಯಲ್ಲಿ ನಂತರದ ಸ್ಥಾನ ಪಡೆದಿರುವ ತಂಡ ತಂಡಕ್ಕೆ ಅರ್ಹತೆ ನೀಡಲಾಗುತ್ತದೆ

VISTARANEWS.COM


on

Champions Trophy 2025
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮುಂದಿನ ವರ್ಷ(2025ರ) ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಬೇಕಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯನ್ನು(Champions Trophy 2025) ಪಾಕಿಸ್ತಾನದಿಂದ ಸ್ಥಳಾಂತರಿಸಲು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ(ICC) ಮೇಲೆ ಬಿಸಿಸಿಐ(BCCI) ಒತ್ತಡ ಹೇರುತ್ತಿದೆ ಎಂಬ ಮಾತುಗಳು ಈಗಾಗಲೇ ಕೇಳಿಬಂದಿವೆ. ಭಾರತ ತಂಡ(Team India) ಪಾಕಿಸ್ತಾನಕ್ಕೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಹೇಳಲಾಗುತ್ತಿದ್ದು, ಇದೇ ಕಾರಣಕ್ಕೆ ಟೂರ್ನಿ ಸ್ಥಳಾಂತರಕ್ಕೆ ಒತ್ತಡ ಹೇರಲಾಗುತ್ತಿದೆ ಎಂದು ಗೊತ್ತಾಗಿದೆ. ಆದರೆ ಐಸಿಸಿ ಇದಕ್ಕೆ ಸಮ್ಮತಿ ನೀಡಲಿದೆಯಾ ಎಂದು ಕಾದು ನೋಡಬೇಕಿದೆ.

ಒಂದೊಮ್ಮೆ ಟೂರ್ನಿ ಪಾಕ್​ನಲ್ಲಿಯೇ ನಡೆದು, ಭಾರತ ತಂಡ ಪಾಲ್ಗೊಳ್ಳಲಿದ್ದರೆ ಆಗ ಯಾವ ತಂಡಕ್ಕೆ ಅವಕಾಶ ಸಿಗಲಿದೆ ಎಂಬ ಪ್ರಶ್ನೆ ಕ್ರಿಕೆಟ್​ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಉತ್ತರ ಇಲ್ಲಿದೆ. ಐಸಿಸಿ ನಿಯಮಗಳ ಪ್ರಕಾರ 2023ರ ಸಾಲಿನ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಅಂಕಪಟ್ಟಿಯ ಅಗ್ರ 7ರಲ್ಲಿ ಸ್ಥಾನ ಪಡೆಯುವ ತಂಡಗಳು ನೇರವಾಗಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಅರ್ಹತೆ ಪಡೆದುಕೊಂಡಿದೆ. ಟೂರ್ನಿಯ ಆತಿಥೇಯ ದೇಶಕ್ಕೆ ನೇರವಾಗಿ ಅರ್ಹತೆ ಸಿಗುತ್ತದೆ. ಒಟ್ಟು 8 ತಂಡಗಳು ಅರ್ಹತೆ ಪಡೆದಿದೆ.

ಲಂಕಾಗೆ ಸಿಗಲಿದೆ ಅವಕಾಶ

ಭಾರತ ತಂಡ ಟೂರ್ನಿಯಿಂದ ಹಿಂದೆ ಸರಿದರೆ, 9ನೇ ಸ್ಥಾನಿಯಾಗಿರುವ ಶ್ರೀಲಂಕಾಗೆ ಅವಕಾಶ ಸಿಗಲಿದೆ. ಯಾವುದೇ ತಂಡವು ಐಸಿಸಿ ಟೂರ್ನಿಯಿಂದ ಹಿಂದೆ ಸರಿದರೆ ಅಂಕಪಟ್ಟಿಯಲ್ಲಿ ನಂತರದ ಸ್ಥಾನ ಪಡೆದಿರುವ ತಂಡ ತಂಡಕ್ಕೆ ಅರ್ಹತೆ ನೀಡಲಾಗುತ್ತದೆ. ಪ್ರಸ್ತುತ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಅರ್ಹತೆ ಪಡೆದ ತಂಡಗಳಾಗಿವೆ.

ಇದನ್ನೂ ಓದಿ Champions Trophy 2025: ಪಾಕ್​ನಲ್ಲೇ ನಡೆಯಲಿದೆ ಚಾಂಪಿಯನ್ಸ್​ ಟ್ರೋಫಿ; ಸಾಗರೋತ್ತರ ತಟಸ್ಥ ತಾಣದಲ್ಲಿ ಭಾರತದ ಪಂದ್ಯ?

ಹಿಂದಿನ ನಿಯಮ ಹೇಗಿತ್ತು?

ಆರಂಭದಲ್ಲಿ ಅಂದರೆ 2013 ಮತ್ತು 2017ರ ಸಾಲಿನ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ವೇಳೆ ಅರ್ಹತೆಯ ನಿಯಮಗಳು ಬೇರೆ ರೀತಿಯಲ್ಲಿತ್ತು. ಟೂರ್ನಿ ಆರಂಭದ ನಿಗಧಿತ ಅವಧಿಯ ಅಂತ್ಯಕ್ಕೆ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ 8ರಲ್ಲಿ ಸ್ಥಾನ ಪಡೆಯುವ ತಂಡಗಳು ನೇರವಾಗಿ ಅರ್ಹತೆ ಪಡೆಯುತ್ತಿದ್ದವು. ಆದರೆ ಈ ಬಾರಿ ಮಾತ್ರ ವಿಶ್ವಕಪ್‌ ಟೂರ್ನಿಯ ಅಂಕಪಟ್ಟಿಯನ್ನು ಆಧರಿಸಿ ಅರ್ಹತೆಯನ್ನು ನೀಡಲಾಗಿದೆ.

ಹೊರಬೀಳುವ ಆತಂಕದಲ್ಲಿತ್ತು ಇಂಗ್ಲೆಂಡ್​!

ಕ್ರಿಕೆಟ್​ ಜನಕರ ನಾಡು ಎಂದು ಕರೆಸಿಕೊಳ್ಳುವ ಇಂಗ್ಲೆಂಡ್​ ತಂಡ ಕಳೆದ ಬಾರಿಯ ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಚಾಂಪಿಯನ್ಸ್​ ಟ್ರೋಫಿಗೆ ಅರ್ಹತೆ ಕಳೆದುಕೊಳ್ಳುವ ಆತಂಕದಲ್ಲಿತ್ತು. ಆದರೆ ಅಂತಿಮ ಪಂದ್ಯದಲ್ಲಿ ನೆದರ್ಲೆಂಡ್ಸ್​ ವಿರುದ್ಧ ಗೆದ್ದು 7ನೇ ಸ್ಥಾನ ಸಂಪಾದಿಸಿ ಕೊನೆಯ ಹಂತದಲ್ಲಿ ಅವಕಾಶ ಗಿಟ್ಟಿಸಿಕೊಂಡಿತ್ತು.

ಕಳೆದ ವರ್ಷ ಪಾಕ್​ ಆತಿಥ್ಯದಲ್ಲಿಯೇ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ತಂಡವು ಪಾಕ್​ಗೆ ಪ್ರಯಾಣಿಸಲು ನಿರಾಕರಿಸಿದ ಕಾರಣ, ಟೂರ್ನಿಯನ್ನು ಹೈಬ್ರಿಡ್(champions trophy hybrid model) ಮಾದರಿಯಲ್ಲಿ ಆಯೋಜಿಸಲಾಯಿತ್ತು. ಕೇವಲ ನಾಲ್ಕು ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಿ ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದ್ದವು. ಭಾರತ ಎಲ್ಲ ಪಂದ್ಯಗಳನ್ನು ಲಂಕಾದಲ್ಲಿ ಆಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

Rohit Sharma: ಮುಂಬೈಕರ್​​ ಅಂತಲೇ ಫೇಮಸ್​ ಆಗಿರುವ ರೋಹಿತ್​ ಶರ್ಮ ಅವರಿಗೆ ಹೈದರಾಬಾದ್​ ನಂಟು ಕೂಡ ಇದೆ. ಅಚ್ಚರಿ ಎಂದರೆ ಅವರ ಮಾತೃ ಭಾಷೆ ಕೂಡ ತೆಲುಗು. ಹೌದು, ರೋಹಿತ್​ ಮೂಲತಃ ಆಂಧ್ರ ಪ್ರದೇಶದವರು.

VISTARANEWS.COM


on

Rohit Sharma
Koo

ಹೈದರಾಬಾದ್​: ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರು ವೇದಿಕೆಯೊಂದರಲ್ಲಿ ತೆಲುಗು ಮಾತನಾಡಿದ ವಿಡಿಯೊ ವೈರಲ್​ ಆಗಿದೆ. ಅಭಿಮಾನಿಗಳಿಗೆ ರೋಹಿತ್​, ಎಲಾ ಉನ್ನಾರು?(ಹೇಗಿದ್ದೀರಾ) ಎಂದು ಕೇಳಿದ್ದಾರೆ. ರೋಹಿತ್​ ತೆಲುಗು ಮಾತನಾಡುತ್ತಿದ್ದಂತೆ ನೆರದಿದ್ದ ಅಭಿಮಾನಿಗಳು ಖಷಿಯಿಂದ ಜೋರಾಗಿ ಕಿರುಚಾಡಿದರು.

ಮುಂಬೈಕರ್​​ ಅಂತಲೇ ಫೇಮಸ್​ ಆಗಿರುವ ರೋಹಿತ್​ ಶರ್ಮ ಅವರಿಗೆ ಹೈದರಾಬಾದ್​ ನಂಟು ಕೂಡ ಇದೆ. ಅಚ್ಚರಿ ಎಂದರೆ ಅವರ ಮಾತೃ ಭಾಷೆ ಕೂಡ ತೆಲುಗು. ಹೌದು, ರೋಹಿತ್​ ಮೂಲತಃ ಆಂಧ್ರ ಪ್ರದೇಶದವರು. ಈ ವಿಚಾರವನ್ನು ಅವರು ಹಿಂದೊಮ್ಮೆ ಸಂದರ್ಶನದಲ್ಲಿಯೂ ಹೇಳಿದ್ದರು. ತಾಯಿಯ ಜತೆ ಮನೆಯಲ್ಲಿ ತೆಲುಗು ಭಾಷೆಯನ್ನೇ ಮಾತನಾಡುತ್ತೇನೆ ಎಂದಿದ್ದರು. ರೋಹಿತ್​ ತಾಯಿ ವೈಜಾಗ್​ನವರು.

ಹೈದರಾಬಾದ್​ನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ರೋಹಿತ್​ ನೆರದಿದ್ದ ಅಭಿಮಾನಿಗಳ ಬಳಿ ಎಲಾ ಉನ್ನಾರು?(ಹೇಗಿದ್ದೀರಾ), ಬನ್ನಿ ಉಪ್ಪಳ(ಹೈದರಾಬಾದ್​) ಸ್ಟ್ರೇಡಿಯಂಗೆ ಹೋಗೋಣ ಎಂದು ತೆಲುಗಿನಲ್ಲೇ ಹೇಳಿದ್ದಾರೆ. ಸದ್ಯ ಈ ವಿಡಿಯೊವನ್ನು ಹೈದರಾಬಾದ್​ನ ರೋಹಿತ್​ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಶೇರ್ ಮಾಡುತ್ತಿದ್ದಾರೆ.

​ಇದೇ ಕಾರ್ಯಕ್ರಮದಲ್ಲಿ ರೋಹಿತ್(rohit sharma retirement)​ ತಮ್ಮ ನಿವೃತ್ತಿಯ ವಿಚಾರದಲ್ಲಿ ಹರಿದಾಡುತ್ತಿದ್ದ ಎಲ್ಲ ಉಹಾಪೋಹಕ್ಕೆ ಸ್ಪಷ್ಟನೆ ನೀಡಿದ್ದರು.  “ನಾನು ನಿವೃತ್ತಿಯ ಬಗ್ಗೆ ಈಗಲೇ ಏನೂ ಯೋಚನೆ ಮಾಡಿಲ್ಲ. ಜೀವನವು ನಮ್ಮನ್ನು ಎಲ್ಲಿಗೆ ಕರೆದೊಯ್ಯುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಪ್ರಸ್ತುತ ನಾನು ಚೆನ್ನಾಗಿ ಆಡುತ್ತಿದ್ದು, ಮುಂದಿನ ಕೆಲ ವರ್ಷಗಳ ಕಾಲ ಭಾರತ ಪರ ಟೆಸ್ಟ್​ ಮತ್ತು ಏಕದಿನ ಆಡುವ ಯೋಜನೆಯಲ್ಲಿದ್ದೇನೆ ಎಂದು ಹೇಳುವ ತಮ್ಮ ನಿವೃತ್ತಿ ಕುರಿತ ಊಹಾಪೋಹಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ Rohit Sharma: ಕ್ರಿಕೆಟ್​ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ರೋಹಿತ್​ ಶರ್ಮ

ಸದ್ಯ ರೋಹಿತ್​ ವಿಶ್ರಾಂತಿಯಲ್ಲಿದ್ದು ಶ್ರೀಲಂಕಾ ವಿರುದ್ಧದ ಸರಣಿಗೂ ಗೈರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ರೋಹಿತ್ ನಾಯಕತ್ವದಲ್ಲಿ, ಜೂನ್​ 29ರಂದು ಬಾರ್ಬಡೋಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ಜಯದೊಂದಿಗೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತ್ತು. 2007 ರ ಉದ್ಘಾಟನಾ ಆವೃತ್ತಿಯ ನಂತರ ಇದು ಭಾರತಕ್ಕೆ ಒಲಿದ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿತ್ತು. ಮೆನ್ ಇನ್ ಬ್ಲೂ ಈ ಹಿಂದೆ ರೋಹಿತ್ ಅವರ ನಾಯಕತ್ವದಲ್ಲಿ ಎರಡು ಫೈನಲ್‌ಗಳನ್ನು ಆಡಿತ್ತು. ಏಕದಿನ ವಿಶ್ವಕಪ್ ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್. ಇಲ್ಲಿ ರನ್ನರ್-ಅಪ್ ಸ್ಥಾನ ಗಳಿಸಿತ್ತು.

ಏಕದಿನ ಮತ್ತು ಟೆಸ್ಟ್ ಮಾದರಿಗಳಲ್ಲಿ ರೋಹಿತ್ ಶರ್ಮ(Rohit Sharma) ಭಾರತ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(BCCI secretary Jay Shah) ಈಗಾಗಲೇ ಹೇಳಿಕೆ ನೀಡಿದ್ದಾರೆ. ಜತೆಗೆ ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿ(Champions Trophy) ಟೂರ್ನಿಯಲ್ಲಿಯೂ ರೋಹಿತ್​ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಕ್ರಿಕೆಟ್

IND vs SL: ಶ್ರೀಲಂಕಾ ಪ್ರವಾಸಕ್ಕೆ ಇಂದು ಭಾರತ ತಂಡ ಪ್ರಕಟ ಸಾಧ್ಯತೆ: ಯಾರಿಗೆಲ್ಲ ಸಿಗಲಿದೆ ಅವಕಾಶ?

IND vs SL: 2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ. ಗಂಭೀರ್‌ಗೆ ಶ್ರೀಲಂಕಾ ವಿರುದ್ಧದ ಸರಣಿ ಮೊದಲ ಅಗ್ನಿ ಪರೀಕ್ಷೆಯಾಗಿದೆ. ಲಂಕಾ, ಸನತ್ ಜಯಸೂರ್ಯ ಅವರ ಮಾರ್ಗದರ್ಶನದಲ್ಲಿ ಆಡಲಿದೆ.

VISTARANEWS.COM


on

IND vs SL
Koo

ಮುಂಬಯಿ: ಮುಂಬರುವ ಶ್ರೀಲಂಕಾ(IND vs SL) ಪ್ರವಾಸಕ್ಕೆ ಭಾರತ(India tour of Sri Lanka) ತಂಡದ ಆಯ್ಕೆ ಇಂದು ಅಥವಾ ನಾಳೆ ಪ್ರಕಟಗೊಳ್ಳುವ ಸಾಧ್ಯತೆ ಇದೆ. ರೋಹಿತ್​ ಮತ್ತು ಕೊಹ್ಲಿ ಸೇರಿ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ಖಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಕನ್ನಡಿಗ ಕೆ.ಎಲ್​ ರಾಹುಲ್ ಏಕದಿನ, ಹಾರ್ದಿಕ್​ ಪಾಂಡ್ಯ ಟಿ20ಯಲ್ಲಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

ರೋಹಿತ್ ಶರ್ಮಾ ವಿರಾಮ ತೆಗೆದುಕೊಳ್ಳದೆ ಸುಮಾರು ಆರು ತಿಂಗಳು ಕಳೆದಿದೆ. ಸುದೀರ್ಘವಾಗಿ ಆಡುತ್ತಿರುವ ಕಾರಣದಿಂದ ಅವರಿಗೆ ಬಿಸಿಸಿಐ ವಿಶ್ರಾಂತಿ ನೀಡಲು ಬಯಸಿದೆ ಎನ್ನಲಾಗಿದೆ. ಜತೆಗೆ ಕೊಹ್ಲಿಯೂ ವಿಶ್ರಾಂತಿ ನೀಡಲಾಗುವುದು ಎಂದು ವರದಿಯಾಗಿದೆ. ತವರಿನ ದೀರ್ಘ ಟೆಸ್ಟ್ ಋತುವಿನ ಹಿನ್ನಲೆಯಲ್ಲಿ ಉಭಯ ಆಟಗಾರರಿಗೆ ವಿಶ್ರಾಂತಿ ನೀಡಲು ಯೋಚಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ಕ್ರಿಕ್​ಇನ್ಫೋ ತನ್ನ ವರದಿಯಲ್ಲಿ ತಿಳಿಸಿದೆ. ಜಸ್​ಪ್ರೀತ್​ ಬುಮ್ರಾ ಮತ್ತು ಮೊಹಮ್ಮದ್​ ಸಿರಾಗ್​ಗೂ ವಿಶ್ರಾಂತಿ ನೀಡುವ ಸಾಧ್ಯತೆ ಕಂಡುಬಂದಿದೆ.

ಕೆಎಲ್ ರಾಹುಲ್ ಟಿ 20 ವಿಶ್ವಕಪ್​​ ಗೆ ಹೋಗಿದ್ದ ಭಾರತದ ತಂಡದಿಂದ ಹೊರಗುಳಿದಿದ್ದರು. ಆದರೆ ಈಗ ಶ್ರೀಲಂಕಾ ಪ್ರವಾಸದ ಏಕದಿನ ಹಂತದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ನಾಯಕತ್ವದ ಪಾತ್ರವನ್ನು ಸಹ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ವರದಿ ಪ್ರಕಾರ ಸಂಜು ಸ್ಯಾಮ್ಸನ್ ಕೂಡ ಏಕದಿನ ಮತ್ತು ಟಿ20 ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ. ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ಪಡೆದಿದ್ದರೂ ಕೂಡ ಅಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಜಿಂಬಾಬ್ವೆ ಸರಣಿಯಲ್ಲಿ ಒಂದು ಅರ್ಧಶತಕ ಬಾರಿಸಿ ಮಿಂಚಿದ್ದರು. ಹೀಗಾಗಿ ಲಂಕಾ ಸರಣಿಗೂ ಆಯ್ಕೆಯಾಗಬಹುದು. ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದ ತಂಡದಲ್ಲಿ ಸ್ಥಾನ ಪಡೆದಿದ್ದ ರಿಯಾನ್ ಪರಾಗ್, ಸಾಯಿ ಸುದರ್ಶನ್ ಮತ್ತು ಜಿತೇಶ್ ಶರ್ಮಾಗೂ ಅವಕಾಶ ಸಿಗುವುದು ಕಷ್ಟ ಸಾಧ್ಯ.

ಇದನ್ನೂ ಓದಿ KL Rahul : ಕೆ. ಎಲ್ ರಾಹುಲ್​ ಎಲ್​ಎಸ್​ಜಿ ತಂಡದಿಂದ ಹೊರಕ್ಕೆ, ಆಂತರಿಕ ಗುಟ್ಟು ಬಿಟ್ಟುಕೊಟ್ಟ ಅಮಿತ್ ಮಿಶ್ರಾ

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ. ಗಂಭೀರ್‌ಗೆ ಶ್ರೀಲಂಕಾ ವಿರುದ್ಧದ ಸರಣಿ ಮೊದಲ ಅಗ್ನಿ ಪರೀಕ್ಷೆಯಾಗಿದೆ. ಲಂಕಾ, ಸನತ್ ಜಯಸೂರ್ಯ ಅವರ ಮಾರ್ಗದರ್ಶನದಲ್ಲಿ ಆಡಲಿದೆ.

Continue Reading

ಕ್ರೀಡೆ

Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

Rishabh Pant: ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

VISTARANEWS.COM


on

Rishabh Pant
Koo

ನವದೆಹಲಿ: ಮುಂದಿನ ವರ್ಷ ನಡೆಯುವ 18ನೇ ಆವೃತ್ತಿಯ ಐಪಿಎಲ್​ ಟೂರ್ನಿಗೆ(IPL 2025 Mega Auction) ಇದೇ ವರ್ಷಾಂತ್ಯದಲ್ಲಿ ಆಟಗಾರರ ಮೆಗಾ ಹರಾಜು ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ತಂಡದ ನಾಯಕನಾಗಿರುವ ರಿಷಭ್ ಪಂತ್(Rishabh Pant) ರಿಟೈನ್ ಆಸಕ್ತಿ ಹೊಂದಿಲ್ಲ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದೆ. ಪಂತ್​ ಚೆನ್ನೈ(Chennai Super Kings) ತಂಡ ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ಮೆಗಾ ಹರಾಜಿನಲ್ಲಿ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ, ಜತೆಗೆ ಹರಾಜಿನಲ್ಲಿ ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ. ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗಿದೆ. ಆದರೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಈ ಬಾರಿಯೇ ಧೋನಿ ನಿವೃತ್ತಿಯಾಗಬೇಕಿತ್ತು. ಆದರೆ ಅವರು ಇನ್ನೂ ನಿವೃತ್ತಿ ಪ್ರಕಟಿಸಿಲ್ಲ. ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ಧೋನಿ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

ಇದನ್ನೂ ಓದಿ Rishabh Pant: ರಿಷಭ್​ ಪಂತ್​ಗೆ ಹೊಸ ಹೆಸರಿಟ್ಟ ವಿವಿಯನ್​ ರಿಚರ್ಡ್ಸ್​

ಮಹೇಂದ್ರ ಸಿಂಗ್​ ಧೋನಿ ಮನೆಯ ಯಾವುದೇ ವಿಶೇಷ ಕಾರ್ಯಕ್ರಮದಲ್ಲೂ, ರಿಷಭ್​ ಪಂತ್​ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಅಣ್ಣನ ಸ್ಥಾನದಲ್ಲಿ ನಿಂತು ಧೋನಿ ಅವರು ಪಂತ್​ಗೆ ಸಲಹೆ ನೀಡುತ್ತಾರೆ. ಪಂತ್​ ಕೂಡ ಧೋನಿ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಧೋನಿಯೇ ಪಂತ್​ ಅವರನ್ನು ಸಿಎಸ್​ಕೆ ತಂಡಕ್ಕೆ ಆಹ್ವಾನಿಸಬಹುದು. ಪಂತ್​ ಚೆನ್ನೈ ಸೇರಿದರೆ ಕೀಪಿಂಗ್​ ನಡೆಸಬಹುದು. ಧೋನಿ ಇಂಪ್ಯಾಕ್ಟ್​ ಆಟಗಾರನಾಗಿ ಬ್ಯಾಟಿಂಗ್​ ಮಾತ್ರ ನಡೆಸುವ ಸಾಧ್ಯತೆ ಇದೆ.

ಇಂಪ್ಯಾಕ್ಟ್​ ನಿಯಮ ಕೈಬಿಡುವ ಸಾಧ್ಯತೆ!


ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ. ಧೋನಿ ಅವರು ಇಂಪ್ಯಾಕ್ಟ್​ ನಿಯಮ ಇಲ್ಲವಾದರೆ ಮುಂದಿನ ಆವೃತ್ತಿ ಆಡುವುದು ಅನುಮಾನ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಹೇಳಿದ್ದರು. ಒಂದೊಮ್ಮೆ ಈ ನಿಯಮ ಕೈಬಿಟ್ಟರೆ ಆಗ ಧೋನಿ ಆಡುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡುವುದು ಸಹಜ.

Continue Reading

ಕ್ರೀಡೆ

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

David Warner: ಡೇವಿಡ್ ವಾರ್ನರ್ ಬಯಸಿದರೂ, ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಅವರು ಎಲ್ಲಾ ಮೂರು ಸ್ವರೂಪಗಳಿಂದಲೂ ನಿವೃತ್ತರಾಗಿದ್ದಾರೆ. ಅವರ ಕೊಡುಗೆಯನ್ನು ನಾವು ಶ್ಲಾಘಿಸಲೇಬೇಕು. ಚಾಂಪಿಯನ್ಸ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡುವ ಯಾವುದೇ ಯೋಜನೆಯಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಮುಖ್ಯ ಆಯ್ಕೆಗಾರ ಜಾರ್ಜ್​ ಬೈಲಿ(George Bailey) ತಿಳಿಸಿದ್ದಾರೆ.

VISTARANEWS.COM


on

David Warner
Koo

ಸಿಡ್ನಿ: ಈಗಾಗಲೇ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ತಂಡದ ಎಡಗೈ ಬ್ಯಾಟರ್​ ಡೇವಿಡ್​ ವಾರ್ನರ್(David Warner)​ ಅವರು ಕೆಲ ದಿನಗಳ ಹಿಂದಷ್ಟೇ ತಂಡ ಬಯಸಿದರೆ ತಮ್ಮ ನಿವೃತ್ತಿಯನ್ನು ಹಿಂಪಡೆಯಲು ಯೋಚಿಸಿದ್ದಾರೆ. ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಮುಂದಿನ ವರ್ಷ ನಡೆಯುವ ಚಾಂಪಿಯನ್ಸ್ ಟ್ರೋಫಿ(Champions Trophy)ಯಲ್ಲಿ ಆಡಲು ಸಿದ್ಧ ಎಂದು ಹೇಳಿದ್ದರು. ಆದರೆ, ವಾರ್ನರ್​ ಅವರ ಈ ಇಂಗಿತವನ್ನು ಪುರಸ್ಕರಿಸುವುದಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಮುಖ್ಯ ಆಯ್ಕೆಗಾರ ಜಾರ್ಜ್​ ಬೈಲಿ(George Bailey) ತಿಳಿಸಿದ್ದಾರೆ.

ತಂಡಕ್ಕೆ ಸಹಾಯ ಬೇಕಾದಲ್ಲಿ ತಾನು ಆಯ್ಕೆಗೆ ಲಭ್ಯವಿರುವುದಾಗಿ ವಾರ್ನರ್​ ಹೇಳಿದ್ದರು. ಇದೇ ವಿಚಾರವಾಗಿ ಮಾತನಾಡಿದ ಆಯ್ಕೆ ಸಮಿತಿಯ ಮುಖ್ಯಸ್ಥ ಜಾರ್ಜ್​ ಬೈಲಿ, “ಡೇವಿಡ್ ವಾರ್ನರ್ ಬಯಸಿದರೂ, ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಅವರು ಎಲ್ಲಾ ಮೂರು ಸ್ವರೂಪಗಳಿಂದಲೂ ನಿವೃತ್ತರಾಗಿದ್ದಾರೆ. ಅವರ ಕೊಡುಗೆಯನ್ನು ನಾವು ಶ್ಲಾಘಿಸಲೇಬೇಕು. ಚಾಂಪಿಯನ್ಸ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡುವ ಯಾವುದೇ ಯೋಜನೆಯಿಲ್ಲ” ಎಂದು ಹೇಳಿದ್ದಾರೆ. ಬೈಲಿಯ ಈ ಹೇಳಿಕೆ ನೋಡುವಾಗ ವಾರ್ನರ್​ಗೆ ಚಾಂಪಿಯನ್ಸ್​ ಟ್ರೋಫಿ ಆಡುವ ಅವಕಾಶ ಸಿಗುವುದು ಕಷ್ಟ ಎನ್ನುವುದು ಸ್ಪಷ್ಟವಾಗಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8ರ ಹಂತದಲ್ಲಿ ಆಸ್ಟ್ರೇಲಿಯಾ ಸೋತು ಹೊರಬಿದ್ದ ತಕ್ಷಣ ವಾರ್ನರ್​ ಅವರು ತಮ್ಮ 15 ವರ್ಷಗಳ ಕ್ರಿಕೆಟ್​ ವೃತ್ತಿ ಜೀವನಕ್ಕೆ ತೆರೆ ಎಳೆದಿದ್ದರು.  110 ಟಿ20 ಪಂದ್ಯಗಳನ್ನು ಆಡಿರುವ ವಾರ್ನರ್‌ 3,277 ರನ್‌ ಗಳಿಸಿದ್ದಾರೆ. ಈ ವರ್ಷದ ಜನವರಿಯಲ್ಲಿ ಟೆಸ್ಟ್‌ ಹಾಗೂ ಏಕದಿನ ಕ್ರಿಕೆಟ್‌ಗೂ ವಾರ್ನರ್‌ ವಿದಾಯ ಹೇಳಿದ್ದರು.

ಇದನ್ನೂ ಓದಿ Champions Trophy 2025: ಚಾಂಪಿಯನ್ಸ್‌ ಟ್ರೋಫಿಯಿಂದ ಭಾರತ ಹಿಂದೆ ಸರಿದರೆ ಯಾವ ತಂಡಕ್ಕೆ ಸಿಗಲಿದೆ ಅವಕಾಶ?

112 ಟೆಸ್ಟ್‌ಗಳಿಂದ ಅವರು 2011 ಮತ್ತು 2024 ರ ನಡುವೆ 26 ಶತಕಗಳು ಮತ್ತು 37 ಅರ್ಧಶತಕಗಳೊಂದಿಗೆ 44.59 ಸರಾಸರಿಯಲ್ಲಿ 8,786 ರನ್ ಗಳಿಸಿದ್ದಾರೆ. 161 ಏಕದಿನ ಪಂದ್ಯಗಳಿಂದ 45.30 ಸರಾಸರಿಯಲ್ಲಿ 22 ಶತಕ ಮತ್ತು 33 ಅರ್ಧ ಶತಕಗಳ ಸಹಾಯದಿಂದ 6,932 ರನ್ ಗಳಿಸಿದ್ದಾರೆ. 37 ವರ್ಷದ ಡೇವಿಡ್​ ವಾರ್ನರ್​, 2009ರಲ್ಲಿ ಮೆಲ್ಬೋರ್ನ್​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು.

ರಿಕಿ ಪಾಂಟಿಂಗ್, ಆ್ಯಡಂ ಗಿಲ್ ಕ್ರಿಸ್ಟ್​, ಶೇನ್​ ವಾರ್ನ್​ ಅವರಂತಹ ದಿಗ್ಗಜ ಆಟಗಾರರೊಂದಿಗೆ ಆಡಿದ ಅನುಭವವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನನ್ನ ಕ್ರಿಕೆಟ್​ ವೃತ್ತಿಜೀವನದಲ್ಲಿ ಸಾಧಿಸುವುದು ಇನ್ನೂ ಯಾವುದೂ ಉಳಿದಿಲ್ಲ. ಮೂರು ಮಾದರಿಯ (ಏಕದಿನ, ಟೆಸ್ಟ್ ಮತ್ತು ಟಿ20) ವಿಶ್ವಕಪ್​ ತಂಡದ ಸದಸ್ಯ ಎನ್ನುವುದು ನಿಜಕ್ಕೂ ಹೆಮ್ಮೆಯ ಸಂಗತಿ. ನನ್ನ ಕ್ರಿಕೆಟ್​ ಜರ್ನಿಯಲ್ಲಿ ಸಹಕರಿಸಿದ ಎಲ್ಲ ಸಿಬ್ಬಂದಿ, ಸಹ ಆಟಗಾರರಿಗೆ ನಾನು ಚಿರಋಣಿ ಎಂದು ವಾರ್ನರ್​ ಹೇಳಿ ತಮ್ಮ ನಿವೃತ್ತಿ ಪ್ರಕಟಿಸಿದ್ದರು.

Continue Reading
Advertisement
Assembly Session 2024
ಕರ್ನಾಟಕ7 mins ago

Assembly Session 2024: ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭಕ್ಕೆ ಸರ್ಕಾರ ಚಿಂತನೆ: ಸಚಿವ ಎಂ.ಬಿ. ಪಾಟೀಲ್

Donald Trump
ವಿದೇಶ10 mins ago

Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

Karnataka Rain
ಮಳೆ27 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Actor Mithra
ಸ್ಯಾಂಡಲ್ ವುಡ್28 mins ago

Actor Mithra: ಖಡಕ್‌ ವಿಲನ್‌ ಆಗಿ ʼಕರಾವಳಿʼಯಲ್ಲಿ ಅಬ್ಬರಿಸಲಿದ್ದಾರೆ ಕಾಮಿಡಿ ಸ್ಟಾರ್ ಮಿತ್ರ; ಕಾಲಿವುಡ್‌ಗೂ ಎಂಟ್ರಿ

Rohit Sharma
ಕ್ರೀಡೆ43 mins ago

Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

karnataka rain
ಮಳೆ58 mins ago

Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

ಪ್ರಮುಖ ಸುದ್ದಿ1 hour ago

Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

Alcohol Delivery
ದೇಶ1 hour ago

Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

Doda Encounter
ದೇಶ1 hour ago

Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

7th Pay Commission
ಕರ್ನಾಟಕ2 hours ago

7th Pay Commission: ರಜೆ, ಪಿಂಚಣಿ, ಬಡ್ತಿ; 7ನೇ ವೇತನ ಆಯೋಗದ ಜಾರಿ ಬಳಿಕ ಸಂಬಳದ ಜತೆ ಏನೆಲ್ಲ ಸೌಲಭ್ಯ ಸಿಗಲಿವೆ? ಇಲ್ಲಿದೆ ಮಾಹಿತಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ27 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ20 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌