ಅಹಮದಾಬಾದ್: ಐಪಿಎಲ್ 16ನೇ ಆವೃತ್ತಿಯ ಫೈನಲ್ ಪಂದ್ಯದ ಆರಂಭಕ್ಕೆ ಕೆಲವೇ ಕ್ಷಣಗಳು ಬಾಕಿ ಇರುವಂತೆಯೇ ಅಹಮದಾಬಾದ್ನಲ್ಲಿ ಜೋರು ಮಳೆಯಾಗಿತ್ತು. ರಾತ್ರಿ 11 ಗಂಟೆಯ ತನಕವೂ ಗುಡುಗು ಸಹಿತ ಮಳೆ ಸುರಿದ ಕಾರಣ ಪಂದ್ಯವನ್ನು ಮುಂದೂಡಿಕೆ ಮಾಡಲು ರೆಫರಿಗಳು ನಿರ್ಧರಿಸಿದರು. ಅದಕ್ಕಿಂತ ಮೊದಲು 9 ಗಂಟೆಯ ವೇಳೆಗೆ ಮಳೆ ಸಂಪೂರ್ಣ ನಿಂತಿದೆ. ಹೀಗಾಗಿ ಪಂದ್ಯ ಆರಂಭಕ್ಕೆ ಮೈದಾನದ ಸಿಬ್ಬಂದಿ ಸಜ್ಜಾಗುತ್ತಿದೆ. ಪೂರ್ಣ 20 ಓವರ್ಗಳ ತನಕ ಪಂದ್ಯವನ್ನು ಆಡಿಸಲು ಸುಮಾರು 10 ಗಂಟೆಯ ತನಕ ಸಮಯವಿದೆ. ಹೀಗಾಗಿ ಮೈದಾನ ಒಣಗಿಸುವ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದಾರೆ.
ಈ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಕಾದಾಡಲಿವೆ. ಹಾಲಿ ಆವೃತ್ತಿಯಲ್ಲಿ ಎರಡೂ ತಂಡಗಳು ಬಲಿಷ್ಠವಾಗಿದ್ದು ಜಿದ್ದಾಜಿದ್ದಿನ ಕಾದಾಟದ ನಿರೀಕ್ಷೆಯಿದೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಮ್ ಎನಿಸಿಕೊಂಡಿರುವ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಪಂದ್ಯ ನಡೆಯಲಿದೆ.
ಫೈನಲ್ ಪಂದ್ಯಕ್ಕೆ ಮೊದಲು ವರ್ಣರಂಜಿತ ಸಮಾರೋಪ ಸಮಾರಂಭಗಳು ನಡೆಯಲಿವೆ. ದೇಶ ವಿದೇಶದ ಹಲವಾರು ಗಣ್ಯರು ಹಾಗೂ ಜಗದ್ವಿಖ್ಯಾತ ಕಲಾವಿದರು ಸಮಾರೋಪ ಸಮಾರಂಭದಲ್ಲಿ ಪ್ರದರ್ಶನ ನೀಡಲಿದ್ದಾರೆ. ಈ ಕ್ಷಣದ ವೀಕ್ಷಣೆಗಾಗಿ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಕಾತರರಾಗಿ ಕುಳಿತಿದ್ದಾರೆ.
ಹಾಲಿ ಆವೃತ್ತಿಯ ಐಪಿಎಲ್ನಲ್ಲಿ ನೆನಪಿಸಿಕೊಳ್ಳಬೇಕಾದ ಅನೇಕ ವಿಷಯಗಳಿವೆ. ಶುಬ್ಮನ್ ಗಿಲ್ ಅವರ ಅದ್ಭುತ ಪ್ರದರ್ಶನಗಳು ಆ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ. ಅವರು ತಮ್ಮ ಕೊನೆಯ ನಾಲ್ಕು ಪಂದ್ಯಗಳಲ್ಲಿ ಮೂರು ಶತಕಗಳನ್ನು ಗಳಿಸಿದ್ದಾರೆ, ಒಟ್ಟಾರೆಯಾಗಿ 851 ರನ್ ಪೇರಿಸಿದ್ದು, ಆರೆಂಜ್ ಕ್ಯಾಪ್ ಬಹುತೇಕ ಅವರ ಮುಡಿಗೇರಲಿದೆ. ಐಪಿಎಲ್ 2023 ರಲ್ಲಿ ಅವರು ಪ್ರತಿ 16 ಎಸೆತಗಳಿಗೆ ಒಂದು ಸಿಕ್ಸರ್ ಬಾರಿಸಿದ್ದಾರೆ. ಹಿಂದಿನ ಆವೃತ್ತಿಯಲ್ಲಿ ಅವರು ಪ್ರತಿ 33 ಎಸೆತಗಳಿಗೆ ಒಂದು ಸಿಕ್ಸರ್ ಬಾರಿಸಿದ್ದರು.
ಅಹಮದಾಬಾದ್ನಲ್ಲಿಯೇ ಮಾರ್ಚ್ 31ರಂದು ಟೂರ್ನಿ ಉದ್ಘಾಟನೆಗೊಂಡಿತ್ತು. ಅದಾಗಿ ಸುಮಾರು ಎರಡು ತಿಂಗಳುಗಳು ಕಳೆದಿವೆ. 70 ಲೀಗ್ ಪಂದ್ಯಗಳು, ಮೂರು ಪ್ಲೇಆಫ್ ಪಂದ್ಯಗಳು ನಡೆದಿವೆ. ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉದ್ಘಾಟನಾ ಪಂದ್ಯದಲ್ಲಿಯೇ ಆಡಿದ್ದ ತಂಡಗಲೇ ಫೈನಲ್ ಪಂದ್ಯದಲ್ಲಿ ಆಡುತ್ತಿವೆ.