ಮುಂಬಯಿ: ಟೀಮ್ ಇಂಡಿಯಾದ ಆಟಗಾರರ ಬಗ್ಗೆ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ಆಘಾತಕಾರಿ ಸುದ್ದಿಯೊಂದನ್ನು ಪ್ರಕಟಿಸಿದ್ದಾರೆ. ಆಟಗಾರರು ಸಂಪೂರ್ಣ ಫಿಟ್ನೆಸ್ಗಾಗಿ ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಈ ಸುದ್ದಿ ಇದೀಗ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಒಂದೊಮ್ಮೆ ಈ ಸುದ್ದಿ ಸುಳ್ಳಾಗಿದ್ದರೆ ಚೇತನ್ ಶರ್ಮಾ ಅವರ ತಲೆದಂಡವಾಗುವುದು ಪಕ್ಕಾ ಎಂಬಂತ್ತಿದೆ. ಕಳೆದ ಟಿ20 ವಿಶ್ವ ಕಪ್ ಸೋಲಿನ ಬಳಿಕ ಅವರನ್ನು ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಆದರೂ ಮತ್ತೆ ಅವರನ್ನು ಬಿಸಿಸಿಐ ಈ ಹುದ್ದೆಗೆ ನೇಮಕ ಮಾಡಿತ್ತು. ಇದೀಗ ಅವರ ಈ ಹೇಳಿಕೆಯಿಂದ ಬಿಸಿಸಿಐ ಯಾವ ಕ್ರಮ ಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಅರ್ಧ ಫಿಟ್ ಆಗಿದ್ದರೂ ಶೇಕಡ 100ರಷ್ಟು ಫಿಟ್ ಆಗಲು ನಿಷೇಧಿತ ಚುಚ್ಚುಮದ್ದು ಹಾಕಿಸಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಬಹಿರಂಗಪಡಿಸಿದ್ದಾರೆ.
ಇದನ್ನೂ ಓದಿ BCCI President | ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ನಿರಾಳ; ಸ್ವಹಿತಾಸಕ್ತಿ ದೂರಿನಿಂದ ಮುಕ್ತಿ
ಈ ಚುಚ್ಚುಮದ್ದುಗಳಲ್ಲಿ ಔಷಧವಿದ್ದು, ಡೋಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬೀಳುವುದಿಲ್ಲ. ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಶೇ 80ರಷ್ಟು ಫಿಟ್ ಆಗಿದ್ದರೂ ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ. ಈ ಮೂಲಕ 100 ಪ್ರತಿಶತ ಫಿಟ್ ಆಗುತ್ತಾರೆ. ಇವು ನೋವು ನಿವಾರಕಗಳಲ್ಲ. ಈ ಚುಚ್ಚುಮದ್ದುಗಳು ಡೋಪ್ ಟೆಸ್ಟ್ ನಲ್ಲಿ ಸಿಕ್ಕಿಹಾಕಿಕೊಳ್ಳದ ಡ್ರಗ್ ಒಳಗೊಂಡಿವೆ ಎಂದು ಅವರು ಹೇಳಿದ್ದಾರೆ.
ಇನ್ನೊಂದೆಡೆ ಟಿ20 ಕ್ರಿಕೆಟ್ನಲ್ಲಿ ರೋಹಿತ್ ಮತ್ತು ವಿರಾಟ್ ಕೊಹ್ಲಿ ಅವರ ಸೇವೆ ಮುಗಿದಿದ್ದು. ಹಾರ್ದಿಕ್ ಪಾಂಡ್ಯ ಅವರೇ ನಾಯಕನಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.