Cheteshwar Pujara: ದೇಶೀಯ ಕ್ರಿಕೆಟ್​ನಲ್ಲಿ 63ನೇ ಶತಕ ಬಾರಿಸಿದ ಚೇತೇಶ್ವರ್​ ಪೂಜಾರ - Vistara News

ಕ್ರೀಡೆ

Cheteshwar Pujara: ದೇಶೀಯ ಕ್ರಿಕೆಟ್​ನಲ್ಲಿ 63ನೇ ಶತಕ ಬಾರಿಸಿದ ಚೇತೇಶ್ವರ್​ ಪೂಜಾರ

ಮಣಿಪುರ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿದ ಪೂಜಾರ ಈ ಋತುವಿನ ರಣಜಿ ಕೂಟದಲ್ಲಿ(ranji trophy) ಮೂರನೇ ಶತಕ ಪೂರ್ತಿಗೊಳಿಸಿದರು.

VISTARANEWS.COM


on

Cheteshwar Pujara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದಿಂದ ದೂರ ಉಳಿದಿರುವ ಹಿರಿಯ ಆಟಗಾರ ಚೇತೇಶ್ವರ್ ಪೂಜಾರ(Cheteshwar Pujara) ಅವರು ಸದ್ಯ ದೇಶೀಯ ಕ್ರಿಕೆಟ್​ ಟೂರ್ನಿಯಲ್ಲಿ ರನ್​ ಮಳೆಯನ್ನೇ ಸುರಿಸುತ್ತಿದ್ದಾರೆ. ಮಣಿಪುರ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿದ ಪೂಜಾರ ಈ ಋತುವಿನ ರಣಜಿ ಕೂಟದಲ್ಲಿ(ranji trophy) ಮೂರನೇ ಶತಕ ಪೂರ್ತಿಗೊಳಿಸಿದರು. ಈ ಶತಕದೊಂದಿಗೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಒಟ್ಟು 63ನೇ ಶತಕ ಸಿಡಿಸಿದ ದಾಖಲೆ ತಮ್ಮದಾಗಿಸಿಕೊಂಡರು.

ರಾಷ್ಟ್ರೀಯ ತಂಡದ ಪರ ರನ್‌ ಕಲೆ ಹಾಕುವಲ್ಲಿ ವಿಫಲರಾದ ಕಾರಣ ಪೂಜಾರ ಅವರು ಟೀಮ್​ ಇಂಡಿಯಾದಿಂದ ದೂರ ಉಳಿದಿದ್ದಾರೆ. ಆದರೆ, ದೇಶೀಯ ಕ್ರಿಕೆಟ್​ನಲ್ಲಿ ಪೂಜಾರ ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದು ಮತ್ತೆ ಭಾರತ ತಂಡದ ಪರ ಆಡಲು ಶ್ರಮವಹಿಸುತ್ತಿದ್ದಾರೆ. ಮಣಿಪುರ ವಿರುದ್ಧದ ಪಂದ್ಯದಲ್ಲಿ ಪೂಜಾರ 105 ಎಸೆತಗಳನ್ನು ಎದುರಿಸಿದ 1 ಸಿಕ್ಸರ್ ಹಾಗೂ 12 ಬೌಂಡರಿಗಳ ನೆರವಿನಿಂದ 108 ರನ್ ಗಳಿಸಿದರು. ಪೂಜಾರ ಈ ಬಾರಿಯ ರಣಜಿಯಲ್ಲಿ ಜಾರ್ಖಂಡ್ 243, ರಾಜಸ್ಥಾನ ವಿರುದ್ಧ 110 ರನ್​ ಬಾರಿಸಿದ್ದರು.

ಸದ್ಯ ಪೂಜಾರ ಈ ಬಾರಿಯ ರಣಜಿ ಆವೃತ್ತಿಯಲ್ಲಿ 243*, 49, 43, 43, 66, 91, 3, 0, 110, 25 ಮತ್ತು 108 ರನ್ ಕಲೆಹಾಕಿದ್ದಾರೆ. ಈ ಪ್ರದರ್ಶನದ ಹೊರತಾಗಿಯೂ ಅವರಿಗೆ ಇಂಗ್ಲೆಂಡ್​ ವಿರುದ್ಧದ ತವರಿನ ಟೆಸ್ಟ್ ಸರಣಿಯಲ್ಲಿ ಅವಕಾಶ ನೀಡದ್ದು ನಿಜಕ್ಕೂ ಅಚ್ಚರಿ ತಂದಿದೆ.

ಇದನ್ನೂ ಓದಿ IND vs ENG: ರನ್​ ಗಳಿಕೆಯಲ್ಲಿ ವಿಲಿಯಮ್ಸನ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಜೈಸ್ವಾಲ್

​35 ವರ್ಷದ ಪೂಜಾರ ಕೊನೆಯ ಬಾರಿ ಭಾರತ ಪರ ಆಡಿದ್ದು ಜುಲೈ 2023 ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ. ಕಳಪೆ ಬ್ಯಾಟಿಂಗ್​ ಫಾರ್ಮ್​ನಿಂದಾಗಿ ಅವರು ತಂಡದಿಂದ ಹೊರಬಿದ್ದಿದ್ದರು. ಪೂಜಾರ ಎರಡೂ ಇನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಅದರಲ್ಲೂ ಮೊದಲ ಇನಿಂಗ್ಸ್​ನಲ್ಲಿ ವಿಕೆಟ್​ಗೆ ಬಂದ ಚೆಂಡನ್ನು ಬ್ಯಾಟ್​ ಎತ್ತಿ ಹಿಡಿದು ಕ್ಲೀನ್​ ಬೌಲ್ಡ್​ ಆಗಿದ್ದರು. ಪೂಜಾರ ಈ ರೀತಿ ವಿಕೆಟ್​ ಒಪ್ಪಿಸಿದ್ದನ್ನು ಕಂಡು ಅನೇಕ ಮಾಜಿ ಕ್ರಿಕೆಟಿಗರು ಟೀಕೆ ವ್ಯಕ್ತಪಡಿಸಿದ್ದರು. ಪೂಜಾರ ಇದುವರೆಗೆ ಭಾರತ ಪರ 103 ಟೆಸ್ಟ್​ ಪಂದ್ಯ ಆಡಿ 7195 ರನ್​ ಬಾರಿಸಿದ್ದಾರೆ. ಇದರಲ್ಲಿ 19 ಶತಕ ಮತ್ತು 35 ಅರ್ಧಶತಕ ಒಳಗೊಂಡಿದೆ.

ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತ್ಯಧಿಕ ದ್ವಿಶತಕ ಬಾರಿಸಿದ ಮೊದಲ ಭಾರತೀಯ ಎಂಬ ದಾಖಲೆ ಚೇತೇಶ್ವರ ಹೆಸರಿನಲ್ಲಿದೆ. ಅವರು ಒಟ್ಟು 17* ದ್ವಿಶತಕ ಬಾರಿಸಿದ್ದಾರೆ. 61 ಶತಕಗಳು ಹಾಗೂ 78 ಅರ್ಧಶತಕಗಳು ಕೂಡ ಬಾರಿಸಿದ್ದಾರೆ. ಇನ್ನು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 20 ಸಾವಿರ ರನ್ ಪೂರೈಸಿದ ಭಾರತದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಯೂ ಪೂಜಾರ ಅವರದ್ದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Hardik Pandya: ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Hardik Pandya
Koo

ಲಂಡನ್​: ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರ ವಿವಾಹ ಮುರಿದು ಬಿದ್ದಿದೆಯೇ?, ಈ ಜೋಡಿ ವಿಚ್ಛೇದನಕ್ಕೆ ಪಡೆಯಲಿದೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ನತಾಶಾ ರಹಸ್ಯ ಪೋಸ್ಟ್ ಒಂದನ್ನು ಮಾಡಿದ್ದಾರೆ. ಈ ಪೋಸ್ಟ್​ ನೋಡುವಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿದೆ.

ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿದೆ. ಈ ಫೋಟೊವನ್ನು ಅವರು ತಮ್ಮ ಮುಂದಿನ ಜೀವನದ ಅರ್ಥ ಕಲ್ಪಿಸುವ ನಿಟ್ಟಿನಲ್ಲಿಯೇ ಹಾಕಿದಂತಿದೆ.


ವಿಚ್ಛೇದನದ ಸುದ್ದಿಯ ನಡುವೆ, ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಸಾರ್ವಜನಿಕಗಾಗಿ ಹೋಗುತ್ತಿರುವ ವಿಡಿಯೊ ವೈರಲ್ ಆಗಿದ್ದು ಪಾಪರಾಜಿಗಳು (ಕ್ಯಾಮೆರಾಮನ್​ಗಳು) ಅವರಿಬ್ಬರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ನಟಿ ದಿಶಾ ಪಠಾಣಿ ಅವರ ವದಂತಿಯ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ಲಿಕ್​ ಮತ್ತು ನತಾಶಾ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾಪರಾಜಿಗಳಿಂದ ಸಾಕಷ್ಟು ವಿನಂತಿಗಳನ್ನು ಪಡೆದ ನಂತರ ನತಾಶಾ ಪೋಸ್ ನೀಡಿದ್ದಾರೆ. ಹೀಗಾಗಿ ಪಾಂಡ್ಯಾ ಜತೆಗಿನ ಡೈವೋರ್ಸ್​ ಪ್ರಕರಣವನ್ನು ಇನ್ನಷ್ಟು ಆಸಕ್ತಿದಾಯಕವಾಗಿದೆ. ಐಪಿಎಲ್ 2024 ರಲ್ಲಿ ಹಾರ್ದಿಕ್ ತಮ್ಮ ಉನ್ನತ ನಿರೀಕ್ಷೆಗಳಿಗೆ ತಕ್ಕ ಹಾಗೆ ಆಡಿಲ್ಲ. ಪತಿ ಸೋಲುತ್ತಿದ್ದರೂ ಒಂದೇ ಒಂದು ಬಾರಿಯೂ, ನತಾಶಾ ತಮ್ಮ ಪತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ಟ್ಯಾಂಡ್​ಗಳಿಗೆ ಬಂದಿರಲಿಲ್ಲ.

ಇದನ್ನೂ ಓದಿ Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

Continue Reading

ಕ್ರೀಡೆ

Malaysia Masters final: ಪ್ರಶಸ್ತಿ ಬರ ನೀಗಿಸುವ ನಿರೀಕ್ಷೆಯಲ್ಲಿ ಪಿ.ವಿ.ಸಿಂಧು; ಇಂದು ಫೈನಲ್​

Malaysia Masters final: ಚೀನಾದ ವಾಂಗ್‌ ಝಿ ಯಿ ವಿರುದ್ಧ ಸಿಂಧು 3 ಪಂದ್ಯಗಳನ್ನಾಡಿ 2 ಪಂದ್ಯಗಳನ್ನು ಗೆದ್ದಿದ್ದಾರೆ. ಹೀಗಾಗಿ ಇಂದಿನ ಫೈನಲ್​ ಪಂದ್ಯದಲ್ಲಿಯೂ ಸಿಂಧು ಪ್ರಶಸ್ತಿ ಫೇವರಿಟ್​ ಆಗಿದ್ದಾರೆ.

VISTARANEWS.COM


on

Malaysia Masters final
Koo

ಕೌಲಾಲಂಪುರ: ಕಳೆದ 2 ವರ್ಷಗಳಿಂದಲೂ ಪ್ರಶಸ್ತಿ ಬರ ಎದುರಿಸುತ್ತಿರುವ ಅವಳಿ ಒಲಿಂಪಿಕ್ಸ್‌ ಪದಕ ವಿಜೇತ, ಭಾರತದ ತಾರಾ ಶಟ್ಲರ್‌ ಪಿ.ವಿ.ಸಿಂಧು(PV Sindhu), ತಮ್ಮ ಪ್ರಶಸ್ತಿ ಬರಗಾಲವನ್ನು ನೀಗಿಸುವ ನಿರೀಕ್ಷೆಯಲ್ಲಿದ್ದಾರೆ. ಇಂದು ನಡೆಯುವ ಮಲೇಷ್ಯಾ ಮಾಸ್ಟರ್ ಸೂಪರ್‌ 500 ಬ್ಯಾಡ್ಮಿಂಟನ್‌ ಪಂದ್ಯಾವಳಿಯ(Malaysia Masters final) ಫೈನಲ್‌ ಪಂದ್ಯದಲ್ಲಿ ಸಿಂಧು ಚೀನಾದ ದ್ವಿತೀಯ ಶ್ರೇಯಾಂಕದ ವಾಂಗ್‌ ಝಿ ಯಿ(Z.Y. Wang) ಅವರ ಸವಾಲು ಎದುರಿಸಲಿದ್ದಾರೆ.

ಶನಿವಾರ ರಾತ್ರಿ ನಡೆದ ಮಹಿಳಾ ಸಿಂಗಲ್ಸ್​ ವಿಭಾಗದ ತೀವ್ರ ಪೈಪೋಟಿಯ ಸೆಮಿಫೈನಲ್‌ ಸೆಣಸಾಟದಲ್ಲಿ 5ನೇ ಶ್ರೇಯಾಂಕದ ಸಿಂಧು ಥಾಯ್ಲೆಂಡ್‌ನ‌ 20ನೇ ಶ್ರೇಯಾಂಕದ ಆಟಗಾರ್ತಿ ಬುಸಾನನ್‌(Busanan Ongbamrungphan) ವಿರುದ್ಧ 13-21, 21-16, 21-12 ಅಂತರದಿಂದ ಗೆಲುವು ಸಾಧಿಸಿದ್ದರು.

ಮೊದಲ ಗೇಮ್​ನಲ್ಲಿ ನೀರಸ ಪ್ರದರ್ಶನ ತೋರಿದ ಸಿಂಧು, ಆ ಬಳಿಕದ ಮಹತ್ವದ ಎರಡೂ ಗೇಮ್​ಗಳನ್ನು ಗೆದ್ದು ಮೇಲುಗೈ ಸಾಧಿಸಿದರು. ಬಲಿಷ್ಠ ಹೊಡೆತಗಳ ಮೂಲಕ ಎದುರಾಳಿಯನ್ನು ಹೊಡೆದುರುಳಿಸಿದರು. ಈ ಪಂದ್ಯ 88 ನಿಮಿಷಗಳ ತನಕ ಸಾಗಿತು. ಇದು ಬುಸಾನನ್‌ ವಿರುದ್ಧ ಸಿಂಧುಗೆ ಒಲಿದ 18ನೇ ಗೆಲುವು. ಒಟ್ಟು 19 ಪಂದ್ಯಗಳಲ್ಲಿ ಸಿಂಧು ಇವರ ವಿರುದ್ಧ ಆಡಿದ್ದಾರೆ. ಕ್ವಾರ್ಟರ್​ ಫೈನಲ್‌ ಪಂದ್ಯದಲ್ಲಿ ವಿಶ್ವ ನಂ.6, ಚೀನಾದ ಹ್ಯಾನ್‌ ಯು ವಿರುದ್ಧ ತೀವ್ರ ಹೋರಾಟ ನಡೆಸಿ ಸಿಂಧು 21-13, 14-21, 21-12ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

ಜುಲೈ 26ರಿಂದ ಆರಂಭಗೊಳ್ಳುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೂ ಮುನ್ನ ಸಿಂಧು ಮತ್ತೆ ಕಮ್​ ಬಾಕ್​ ಮಾಡಿದ್ದು ಸಂತಸದ ವಿಚಾರ. ಪ್ಯಾರಿಸ್‌ ಒಲಿಂಪಿಕ್ಸ್‌ ಸವಾಲಿಗೆ ಸಜ್ಜಾಗುವ ಕಾರಣದಿಂದ ಪ್ರತಿಷ್ಠಿತ ಉಬರ್‌ ಕಪ್‌(Uber Cup) ಮತ್ತು ಥಾಯ್ಲೆಂಡ್‌ ಓಪನ್‌(Thailand Open 2024) ಸೂಪರ್‌ 500 ಬ್ಯಾಡ್ಮಿಂಟನ್‌ ಪಂದ್ಯಾವಳಿಯಿಂದ ಹಿಂದೆ ಸರಿದ್ದಿದ್ದರು. ಇದೀಗ ಮಲೇಷ್ಯಾದಲ್ಲಿ ಪ್ರಶಸ್ತಿ ಬರಗಾಲ ನೀಗಿಸಿಕೊಳ್ಳುವ ಉತ್ತಮ ಅವಕಾಶ ಅವರ ಮುಂದಿದೆ. 2022ರ ಸಿಂಗಾಪುರ್‌ ಓಪನ್‌ ಪಂದ್ಯಾವಳಿ ಬಳಿಕ ಸಿಂಧು ಯಾವುದೇ ಪ್ರಶಸ್ತಿ ಜಯಿಸಿಲ್ಲ.  

ಚೀನಾದ ವಾಂಗ್‌ ಝಿ ಯಿ ವಿರುದ್ಧ ಸಿಂಧು 3 ಪಂದ್ಯಗಳನ್ನಾಡಿ 2 ಪಂದ್ಯಗಳನ್ನು ಗೆದ್ದಿದ್ದಾರೆ. ಹೀಗಾಗಿ ಇಂದಿನ ಫೈನಲ್​ ಪಂದ್ಯದಲ್ಲಿಯೂ ಸಿಂಧು ಪ್ರಶಸ್ತಿ ಫೇವರಿಟ್​ ಆಗಿದ್ದಾರೆ. ಕಳೆದ ವರ್ಷ ಮೊಣಕಾಲಿನ ಗಾಯಕ್ಕಾಗಿ ವಿಶ್ರಾಂತಿ ಪಡೆದು, ಚೇತರಿಸಿಕೊಂಡ ಬಳಿಕ ಅವರಿಗೆ ಫಾರ್ಮ್‌ ಕಂಡುಕೊಳ್ಳಲು ಸಾಧ್ಯವಾಗಿಲ್ಲ ಸದ್ಯ ಗಾಯದಿಂದ ಚೇತರಿಕೆ ಕಂಡು ಉತ್ತಮವಾಗಿ ಪ್ರದರ್ಶನ ತೋರುತ್ತಿದ್ದಾರೆ.

Continue Reading

ಕ್ರೀಡೆ

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

KKR vs SRH IPL Final: ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು.

VISTARANEWS.COM


on

KKR vs SRH IPL Final
Koo

ಚೆನ್ನೈ: ಸನ್​ರೈಸರ್ಸ್​ ಹೈದರಾಬಾದ್(KKR vs SRH Final 2024)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) ವಿದುದ್ಧದ ಐಪಿಎಲ್​-2024ರ(IPL 2024) ಫೈನಲ್​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಉಭಯ ತಂಡಗಳ ಪ್ರಶಸ್ತಿ ಕಾಳಗಕ್ಕೆ ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ.

ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್(Sunrisers Hyderabad)​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಪಿಚ್​ ರಿಪೋರ್ಟ್​


ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು. ಹೀಗಾಗಿ ಪಿಚ್​ ವರ್ತನೆಯನ್ನು ಸ್ಪಷ್ಟವಾಗಿ ಹೇಳುವುದು ಕೊಂಚ ಕಷ್ಟವಾಗಿದೆ. ಮಂಜಿನ ಕಾಟ ಇರುವ ಕಾರಣ ಟಾಸ್‌ ಗೆಲ್ಲುವ ತಂಡ ಬೌಲಿಂಗ್‌ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.

ಮುಖಾಮುಖಿ


ಕೆಕೆಆರ್​ ಮತ್ತು ಸನ್​ರೈಸರ್ಸ್ ಹೈದರಾಬಾದ್​ ತಂಡಗಳು ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ 27 ಪಂದ್ಯಗಳನ್ನು ಆಡಿದೆ. ಈ ಪೈಕಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ಇಂದಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್ ತಂಡವಾಗಿದೆ. ಫೈನಲ್​ನಲ್ಲಿ ಇತ್ತಂಡಗಳು ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು.

ಇದನ್ನೂ ಓದಿ KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಆಸ್ಟ್ರೇಲಿಯಾದ ನಾಯಕನಾಗಿರುವ ಪ್ಯಾಟ್​ ಕಮಿನ್ಸ್​ 2 ವಿಶ್ವಕಪ್​ ಗೆದ್ದ ನಾಯಕ. ಅದು ಕೂಡ ಚೊಚ್ಚಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವರು ಟ್ರೋಫಿ ಗೆದ್ದಿದ್ದಾರೆ. ಹೀಗಾಗಿ ಇವರು ಹೈದರಾಬಾದ್​ಗೂ ತಮ್ಮ ನಾಯಕತ್ವದಲ್ಲಿ ಕಪ್​ ಗೆಲ್ಲಬಹುದು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ನಂಬಿಕೆ. ಮೊತ್ತೊಂದೆಡೆ ಆಸ್ಟ್ರೇಲಿಯಾ ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಗೆಲುವಿನ ಹೀರೊ ಎನಿಸಿಕೊಂಡಿದ್ದ ಟ್ರಾವಿಸ್​ ಹೆಡ್​ ಕೂಡ ಹೈದರಾಬಾದ್​ ತಂಡದಲ್ಲಿದ್ದಾರೆ. ಹೀಗಾಗಿ ಫೈನಲ್​ನಲ್ಲಿಯೂ ಇವರ ಸ್ಫೋಟಕ ಬ್ಯಾಟಿಂಗ್​ ನಿರೀಕ್ಷೆ ಮಾಡಲಾಗಿದೆ.

ಕೆಕೆಆರ್​ ಪಾಲಿನ ದೊಡ್ಡ ಬಲವೆಂದರೆ ಆಟಗಾರರ ಸಂಘಟಿತ ಪ್ರದರ್ಶನ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿ ಸಮರ್ಥವಾಗಿದೆ. ಸೀಮಿತ ಆಗಾರರ ಪ್ರದರ್ಶನದ ಮೇಲೆ ತಂಡ ನೆಚ್ಚಿಕೊಂಡಿಲ್ಲ. ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದರೂ ಕೂಡ ಇವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

Continue Reading

ಕ್ರೀಡೆ

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

KKR vs SRH IPL Final: ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿ ರೀಮಲ್‌ ಚಂಡಮಾರುತ ಎದ್ದಿರುವ ಕಾರಣ. ಚೆನ್ನೈನಲ್ಲಿಯೂ ಮಳೆಯಾಗುವ ಸಾಧ್ಯೆ ಅಧಿಕವಾಗಿದೆ. ಐಎಂಡಿ ವರದಿ ಪ್ರಕಾರ ಭಾನುವಾರ ಪಶ್ಚಿಮ ಬಂಗಾಳಕ್ಕೆ ರೀಮಲ್‌ ಚಂಡಮಾರುತ ಅಪ್ಪಳಿಸುತ್ತದೆ. ಹೀಗಾಗಿ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ.

VISTARANEWS.COM


on

KKR vs SRH IPL Final
Koo

ಚೆನ್ನೈ: ಕಳೆದ ಮೂರು ತಿಂಗಳು ಕ್ರಿಕೆಟ್​ ಅಭಿಮಾನಿಗಳಿಗೆ ಸಂಪೂರ್ಣ ಮನರಂಜನೆ ನೀಡಿದ ಐಪಿಎಲ್‌ನ 17ನೇ(IPL 2024) ಆವೃತ್ತಿ ಕೊನೇ ಘಟ್ಟಕ್ಕೆ ತಲುಪಿದೆ. ಇಂದು (ಭಾನುವಾರ) ನಡೆಯಲಿರುವ ಫೈನಲ್‌(KKR vs SRH IPL Final) ಸಮರದಲ್ಲಿ ಕೋಲ್ಕತಾ ನೈಟ್‌ರೈಡರ್ಸ್‌(Kolkata Knight Riders) ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌(Sunrisers Hyderabad) ತಂಡಗಳು ಮುಖಾಮುಖಿ ಆಗುತ್ತಿವೆ. ಇತ್ತಂಡಗಳದ್ದು ಇದು ಮೊದಲ ಫೈನಲ್​ ಮುಖಾಮುಖಿ. ಇಲ್ಲೇ ನಡೆದಿದ್ದ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇರಲಿಲ್ಲ. ಆದರೆ ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿ ರೀಮಲ್‌ ಚಂಡಮಾರುತ ಎದ್ದಿರುವ ಕಾರಣ. ಚೆನ್ನೈನಲ್ಲಿಯೂ ಮಳೆಯಾಗುವ ಸಾಧ್ಯೆ ಅಧಿಕವಾಗಿದೆ. ಐಎಂಡಿ ವರದಿ ಪ್ರಕಾರ ಭಾನುವಾರ ಪಶ್ಚಿಮ ಬಂಗಾಳಕ್ಕೆ ರೀಮಲ್‌ ಚಂಡಮಾರುತ ಅಪ್ಪಳಿಸುತ್ತದೆ. ಹೀಗಾಗಿ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ.

ಲೀಗ್​ ಹಂತದ ಯಾವುದೇ ಪಂದ್ಯಕ್ಕೂ ಮೀಸಲು ದಿನ ಇರಲಿಲ್ಲ. ಆದರೆ ನಾಕೌಟ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು(Reserve day) ದಿನ ಇದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ನಿಯದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸುವ ನಿರ್ಣಾಯಕ್ಕೆ ಬರಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲ ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ.

ಮೀಸಲು ದಿನಕ್ಕೂ ಮಳೆ ಬಂದರೆ?

ಮೀಸಲು ದಿನವೂ ಮಳೆ ಬಂದರೆ ಫಲಿತಾಂಶ ಹೇಗೆ ನಿರ್ಧರಿಸಲಾಗುತ್ತದೆ ಎನ್ನುವ ಪ್ರಶ್ನೆ ಕ್ರಿಕೆಟ್​ ಅಭಿಮಾನಿಗಳಿಗೆ ಕಾಡುವುದು ಸಹಜ. ಇದಕ್ಕೂ ಬಿಸಿಸಿಐ ಉತ್ತರ ನೀಡಿದೆ. ಒಂದು ವೇಳೆ ಮೀಸಲು ದಿನದಂದೂ ಕೂಡ ಮಳೆ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವು ಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಹೀಗಾದರೆ ಅಗ್ರಸ್ಥಾನಿ ಕೆಕೆಆರ್​ ಈ ಬಾರಿಯ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಏಕೆಂದರೆ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.​ ಅಚ್ಚರಿ ಎಂದರೆ ಲೀಗ್​ ಹಂತದಲ್ಲಿ ಕೆಕೆಆರ್​ ಮತ್ತು ಹೈದರಾಬಾದ್​ ತಂಡಗಳ ಒಂದೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು.

ಇದನ್ನೂ ಓದಿ KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

ಉಭಯ ತಂಡಗಳ ಐಪಿಎಲ್​ ಇತಿಹಾಸ ನೋಡುವಾಗ ಕೆಕೆಆರ್​ ಬಲಿಷ್ಠವಾಗಿದೆ. ಇದುವರೆಗೆ 27 ಪಂದ್ಯಗಳನ್ನು ಆಡಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ಇಂದಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್ ತಂಡವಾಗಿದೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
 ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading
Advertisement
Hardik Pandya
ಕ್ರೀಡೆ3 mins ago

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Fire Accident
ದೇಶ33 mins ago

Fire Accident: ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ; SIT ತನಿಖೆಗೆ ಆದೇಶ

Psycho Killer Girish throws a stone on the head of the sleeping person and kills
ಕ್ರೈಂ39 mins ago

Psycho Killer: ಕುಡಿದು ಬರ್ತಾನೆ, ಮಲಗಿದ್ದವರ ತಲೆ ಮೇಲೆ ಕಲ್ಲು ಎಸೆದು ಸಾಯಿಸ್ತಾನೆ! ಕಿಲ್ಲರ್‌ ಅಂದರ್‌!

Malaysia Masters final
ಕ್ರೀಡೆ43 mins ago

Malaysia Masters final: ಪ್ರಶಸ್ತಿ ಬರ ನೀಗಿಸುವ ನಿರೀಕ್ಷೆಯಲ್ಲಿ ಪಿ.ವಿ.ಸಿಂಧು; ಇಂದು ಫೈನಲ್​

Accident
ದೇಶ59 mins ago

Accident: ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ 11 ಜನ ಸ್ಥಳದಲ್ಲೇ ದುರ್ಮರಣ

Actor  Ravichandran Talks About Kannada Movie Industry Problems yash darshan
ಸ್ಯಾಂಡಲ್ ವುಡ್1 hour ago

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

KKR vs SRH IPL Final
ಕ್ರೀಡೆ1 hour ago

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

Fire accident
ದೇಶ2 hours ago

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

KKR vs SRH IPL Final
ಕ್ರೀಡೆ2 hours ago

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Hassan Accident Terrible accident Five died on the spot
ಹಾಸನ2 hours ago

Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌