Site icon Vistara News

Chirag Shetty: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುಡುಗಿದ ಶಟ್ಲರ್ ಚಿರಾಗ್ ಶೆಟ್ಟಿ; ಕಾರಣವೇನು?

Chirag Shetty

Chirag Shetty: "Thomas Cup Equivalent To World Cup"; Chirag Shetty Blasts Maharashtra Government For Felicitating Cricketers

ಮುಂಬಯಿ: ಟಿ20 ವಿಶ್ವಕಪ್(T20 world cup) ವಿಜೇತ ತಂಡದ ಭಾಗವಾಗಿದ್ದ ನಾಲ್ವರು ಭಾರತೀಯ ಕ್ರಿಕೆಟಿಗರನ್ನು ಮಹಾರಾಷ್ಟ್ರ ಸರ್ಕಾರ(Maharashtra Government) ಕಳೆದ ವಾರ ಸನ್ಮಾನಿಸಿತ್ತು. ಭಾರತ ತಂಡದ ನಾಯಕ ರೋಹಿತ್ ಶರ್ಮಾ(Rohit Sharma), ಸೂರ್ಯಕುಮಾರ್ ಯಾದವ್(Suryakumar Yadav), ಶಿವಂ ದುಬೆ(Shivam Dube) ಮತ್ತು ಯಶಸ್ವಿ ಜೈಸ್ವಾಲ್(Yashasvi Jaiswal) ಅವರನ್ನು ಏಕನಾಥ್ ಶಿಂಧೆ(Eknath Shinde) ನೇತೃತ್ವದ ಮಹಾರಾಷ್ಟ್ರ ಸರ್ಕಾರ ನಗದು ಬಹುಮಾನ ನೀಡಿ ಗೌರವಿಸಿತ್ತು. ಈ ಬಗ್ಗೆ ಭಾರತದ ತಾರಾ ಶಟ್ಲರ್‌ ಚಿರಾಗ್‌ ಶೆಟ್ಟಿ(Chirag Shetty) ಬೇಸರ ವ್ಯಕ್ತಪಡಿಸಿದ್ದಾರೆ.

‘ನಾನು ಕ್ರಿಕೆಟ್‌ ವಿರೋಧಿಯಲ್ಲ. ಆದರೆ, ಕ್ರಿಕೆಟಿಗರಿಗೆ ಕೊಡುವ ಬೆಲೆಯನ್ನು ಸರ್ಕಾರ ಬ್ಯಾಡ್ಮಿಂಟನ್ ಸಾಧಕರಿಗೆ ಕೊಡುತ್ತಿಲ್ಲ. ಥಾಮಸ್‌ ಕಪ್‌ ಗೆಲುವು ಕೂಡ ಕ್ರಿಕೆಟ್‌ನ ವಿಶ್ವಕಪ್‌ಗೆ ಸಮ. ಥಾಮಸ್‌ ಕಪ್‌ ವಿಜೇತ ತಂಡದಲ್ಲಿ ನಾನೊಬ್ಬನೇ ಮಹಾರಾಷ್ಟ್ರದವನು. ಸರ್ಕಾರ ನಮ್ಮನ್ನು ಸನ್ಮಾನಿಸಿಲ್ಲ. ಆದರೆ, ವಿಶ್ವಕಪ್‌ ಗೆದ್ದ ಕ್ರಿಕೆಟಿಗರನ್ನು ಗೌರವಿಸಿದೆ. ಈ ರೀತಿ ತಾರತಮ್ಯ ತೋರುವುದು ಸರಿಯಲ್ಲ. ಸರ್ಕಾರ ಎಲ್ಲಾ ಕ್ರೀಡೆಗಳನ್ನು ಸಮಾನವಾಗಿ ನೋಡಬೇಕು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

ಚಿರಾಗ್‌ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ ಜತೆಗೂಡಿ ಏಷ್ಯನ್‌ ಗೇಮ್ಸ್‌, ಕಾಮನ್‌ವೆಲ್ತ್‌ ಗೇಮ್ಸ್‌ ಸೇರಿ ಹಲವು ಜಾಗತಿಕ ಕೂಟಗಳಲ್ಲಿ ಚಾಂಪಿಯನ್ ಆಗಿದ್ದಾರೆ. ಚಿರಾಗ್‌ 2022 ರಲ್ಲಿ ಥಾಮಸ್ ಕಪ್ ವಿಜೇತ ಭಾರತೀಯ ತಂಡದ ಭಾಗವಾಗಿದ್ದರು. ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಜೋಡಿ(Satwik-Chirag) ಏಷ್ಯನ್​ ಗೇಮ್ಸ್​ನಲ್ಲಿ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಿದ್ದರು. ಈ ಸಾಧನೆ ಮಾಡಿದ ಭಾರತದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 1982ರಲ್ಲಿ ಲೆರೋಯ್‌ ಫ್ರಾನ್ಸಿಸ್‌-ಪ್ರದೀಪ್‌ ಗಾಂಧಿ ಕಂಚು ಗೆದ್ದಿದ್ದು ಭಾರತಕ್ಕೆ ಪುರುಷರ ಡಬಲ್ಸ್‌ನಲ್ಲಿ ಸಿಕ್ಕ ಏಕೈಕ ಪದಕವಾಗಿತ್ತು. ಇದೇ ವರ್ಷ ಚಿರಾಗ್‌ ಶೆಟ್ಟಿಗೆ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಟ್ರೋಫಿ ಗೆದ್ದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 125 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು. ಜೂನ್ 4 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಬಹುಮಾನದ ಮೊತ್ತವನ್ನು ಹಸ್ತಾಂತರಿಸಲಾಗಿತ್ತು. ಅದರಲ್ಲಿ ಯಾರಿಗೆ ಎಷ್ಟು ಎಂಬ ಕುತೂಹಲ ಮೂಡಿತ್ತು. ಆ ಮಾಹಿತಿ ಇದೀಗ ಬಹಿರಂಗಗೊಂಡಿದೆ.

ವರದಿಗಳ ಪ್ರಕಾರ, ತಂಡದ ಎಲ್ಲಾ 15 ಸದಸ್ಯರು ತಲಾ 5 ಕೋಟಿ ರೂ ಪಡೆದಿದ್ದಾರೆ. ಮುಖ್ಯ ಕೋಚ್ ದ್ರಾವಿಡ್ ಕೂಡ ಇದೇ ಮೊತ್ತವನ್ನು ಪಡೆದಿದ್ದಾರೆ. ಉಳಿದ ಕೋಚಿಂಗ್ ಗ್ರೂಪ್ ತಲಾ 2.5 ರೂಪಾಯಿ ಪಡೆದುಕೊಂಡಿದ್ದಾರೆ. ವಿಡಿಯೋ ನಿರ್ಮಾಣ ತಂಡ ಸೇರಿದಂತೆ ಬ್ಯಾಕ್ರೂಮ್ ಸಿಬ್ಬಂದಿಗೆ ತಲಾ 2 ಕೋಟಿ ರೂ., ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಗೆ ತಲಾ 1 ಕೋಟಿ ರೂಪಾಯಿ, ಮೀಸಲು ಆಟಗಾರರಾದ ರಿಂಕು ಸಿಂಗ್, ಖಲೀಲ್ ಅಹ್ಮದ್, ಶುಭ್ಮನ್ ಗಿಲ್ ಮತ್ತು ಅವೇಶ್ ಖಾನ್ ಅವರಿಗೆ ತಲಾ 1 ಕೋಟಿ ರೂಪಾಯಿ ದೊರಕಿದೆ.

Exit mobile version