ಬೆಂಗಳೂರು: ಸ್ಯಾಂಡಲ್‌ವುಡ್ ನಟರು ಆಯೋಜಿಸಿರುವ ಮೂರನೇ ಆವೃತ್ತಿಯ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿಗೆ(KCC) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಶುಕ್ರವಾರ ಫೆ.24) ಆರಂಭಗೊಳ್ಳಲಿರುವ ಈ ಟೂರ್ನಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು. ಈ ವೇಳೆ ಆರೋಗ್ಯ ಸಚಿವ ಡಾ. ಸುಧಾಕರ್ ನಟರಾದ ಕಿಚ್ಚ ಸುದೀಪ್, ಧನಂಜಯ್, ಗಣೇಶ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡದ ಸೆಲೆಬ್ರಿಟಿಗಳ ಜತೆ ಮಾಜಿ ಅಂತಾರಾಷ್ಟ್ರೀಯ ಆಟಗಾರರು ಕೂಡ ಈ ಟೂರ್ನಿಯಲ್ಲಿ ಆಡಲಿದ್ದಾರೆ. ಫೆಬ್ರವರಿ 24 ಮತ್ತು 25ರಂದು ಎರಡು ದಿನಗಳ ಕಾಲ ‘ಕನ್ನಡ ಚಲನಚಿತ್ರ ಕಪ್’ (KCC) ಪಂದ್ಯಗಳು ನಡೆಯಲಿದೆ.
ಇದನ್ನೂ ಓದಿ IND VS AUS: ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದ ಪ್ಯಾಟ್ ಕಮಿನ್ಸ್; ಸ್ಟೀವನ್ ಸ್ಮಿತ್ಗೆ ನಾಯಕತ್ವ
ಎರಡು ಗ್ರೂಪ್ನ ಆರು ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ‘ಎ’ ಗ್ರೂಪ್ನಲ್ಲಿ ಕದಂಬ ಲಯನ್ಸ್, ರಾಷ್ಟ್ರಕೂಟ ಪ್ಯಾಂಥರ್ಸ್, ವಿಜಯನಗರ ಪ್ಯಾಟ್ರಿಯಾಟ್ಸ್ ತಂಡಗಳಿವೆ. ‘ಬಿ’ ಗ್ರೂಪ್ನಲ್ಲಿ ಗಂಗಾ ವಾರಿಯರ್ಸ್, ಹೊಯ್ಸಳ ಈಗಲ್ಸ್, ಒಡೆಯರ್ ಚಾರ್ಜಸ್ ತಂಡಗಳು ಕಾಣಿಸಿಕೊಂಡಿದೆ.