ಬೆಂಗಳೂರು: ಭಾರತದಲ್ಲಿ ನಡೆಯುವ ವಿಶ್ವಕಪ್(ICC World Cup) ಟೂರ್ನಿಗೂ ಕೋಕಾ ಕೋಲಾಕ್ಕೂ ಐತಿಹಾಸಿಕ ನಂಟಉ ಹೊಂದಿದೆ. ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಕೋಕಾ-ಕೋಲಾವನ್ನು(Coca-Cola) ಅಧಿಕೃತ ತಂಪು ಪಾನೀಯ ಪಾಲುದಾರರನ್ನಾಗಿ ಮಾಡಲಾಗಿದೆ. ಈ ವಿಚಾರವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಅಧಿಕೃತವಾಗಿ ಪ್ರಕಟಿಸಿದೆ.
1996ರಲ್ಲಿ ಭಾರತ,ಪಾಕಿಸ್ತಾನ ಮತ್ತು ಶ್ರೀಲಂಕಾ ಮೂರು ದೇಶಗಳು ಜಂಟಿಯಾಗಿ ನಡೆಸಿದ ವಿಶ್ವಕಪ್ ಟೂರ್ನಿಯಲ್ಲಿ ಕೋಕಾ-ಕೋಲಾ ಅಧಿಕೃತ ಪಾಲುದಾರವಾಗಿತ್ತು. ಇದೀಗ ಮತ್ತೆ ಭಾರತದಲ್ಲಿ ನಡೆಯುವ ಈ ಮಹತ್ವದ ಟೂರ್ನಿಯಲ್ಲಿ ಪಾಲುದಾರಿಕೆಯನ್ನು ಪಡೆದುಕೊಂಡಿದೆ. ಭಾರತದಲ್ಲಿ ಕೋಕಾ-ಕೋಲಾಕ್ಕೆ ಬಹು ಬೇಡಿಕೆಯ ಮಾರುಕಟ್ಟೆಯಿದೆ. ಹೀಗಾಗಿ ಟೂರ್ನಿಯ ತಂಪು ಪಾನೀಯ ಪಾಲುದಾರಿಕೆಯನ್ನು ಪಡೆದುಕೊಂಡಿದೆ.
ಅಕ್ಟೋಬರ್ 15ರಿಂದ ಆರಂಭಗೊಳ್ಳಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕೋಕಾ-ಕೋಲಾ ಕಾಣಿಸಿಕೊಳ್ಳಲಿದೆ ಎಂದು ಮತ್ತು ಐಸಿಸಿ ಮತ್ತು ಕೋಕಾ-ಕೋಲಾ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ. ಭಾರತದ ಕೋಕಾ-ಕೋಲಾ ಮಾರ್ಕೆಟಿಂಗ್ ಉಪಾಧ್ಯಕ್ಷ ಅರ್ನಾಬ್ ರಾಯ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ದೇಶದ ಅತಿದೊಡ್ಡ ಕ್ರಿಕೆಟ್ ಟೂರ್ನಿಯಲ್ಲಿ ಪಾಲುದಾರಿಕೆ ಪಡೆದಿರುವುದು ಅತ್ಯಂತ ಸಂತಸದ ಕ್ಷಣ, ಈ ಟೂರ್ನಿಯ ಮೂಲಕ ಗ್ರಾಹಕರಿಗೆ ನಾವು ನಮ್ಮ ಉತ್ತಮ ಗುಣಮಟ್ಟದ ಸೇವೆ ನೀಡಲು ಕಾರತವಾಗಿದ್ದೇವೆ ಎಂದು ಹೇಳಿದ್ದಾರೆ.
ವಿಶ್ವ ಕಪ್ ಟೂರ್ನಿ ಅಕ್ಟೋಬರ್ 5 ರಿಂದ ಆರಂಭಗೊಂಡು ನವೆಂಬರ್ 19 ತನಕ ನಡೆಯಲಿದೆ. ಒಟ್ಟು 48 ಪಂದ್ಯಗಳು ನಡೆಯಲಿದ್ದು 10 ತಂಡಗಳು ಸೆಣಸಾಟ ನಡೆಸಲಿವೆ. ದೇಶದ ಪ್ರಮುಖ 10 ತಾಣಗಳಲ್ಲಿ ಈ ಪಂದ್ಯ ನಡೆಯಲಿದೆ. ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿವೆ.
ಇದನ್ನೂ ಓದಿ ICC World Cup 2023: ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟಕ್ಕೆ ದಿನಾಂಕ ನಿಗದಿ
ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3ರವರೆಗೆ 10 ಅಭ್ಯಾಸ ಪಂದ್ಯಗಳು ನಡೆಯಲಿದೆ. ಅಭ್ಯಾಸ ಪಂದ್ಯದಲ್ಲಿ ಎಲ್ಲ ತಂಡಗಳು ಎರಡು ಪಂದ್ಯಗಳನ್ನು ಆಡಲಿವೆ. ಆತಿಥೇಯ ಭಾರತ(IND vs ENG) ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಭಾರತ ತನ್ನ ಮೊದಲ ಲೀಗ್ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಆಡಲಿದೆ.