ಕ್ರೀಡೆ
Pooja Sihag | ಕಾಮನ್ವೆಲ್ತ್ ಗೇಮ್ಸ್ ಕಂಚು ವಿಜೇತೆ ಪೂಜಾ ಸಿಹಾಗ್ ಪತಿ ಸಾವು, ಡ್ರಗ್ಸ್ ಓವರ್‌ಡೋಸ್ ಕಾರಣ?
ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಪೂಜಾ ಸಿಹಾಗ್ (Pooja Sihag) ಅವರ ಪತಿ ಅಜಯ್ ನಂದಾಲ್ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಡ್ರಗ್ಸ್ ಓವರ್‌ಡೋಸ್‌ನಿಂದಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ರೋಹ್ಟಕ್: ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಪೂಜಾ ಸಿಹಾಗ್ (Pooja Sihag) ಅವರ ಪತಿ ಅಜಯ್ ನಂದಾಲ್ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಹರಿಯಾಣದ ರೋಹ್ಟಕ್‌ನಲ್ಲಿರುವ ಮಹಾರಾಣಿ ಕಿಶೋರಿ ಜಾಟ್ ಕನ್ಯಾ ಮಹಾ ವಿದ್ಯಾಲಯದ ಬಳಿ ಶವ ಪತ್ತೆಯಾಗಿದ್ದು, ಮರಣೋತ್ತರ ವರದಿ ಲಭ್ಯವಾದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.
“ಅಜಯ್ ನಂದಾಲ್ ಅವರ ಕುಟುಂಬಸ್ಥರು ಅಜಯ್ ಗೆಳೆಯ ರವಿ ಎಂಬುವವರ ವಿರುದ್ಧ ಆರೋಪಿಸಿದ್ದಾರೆ. ಡ್ರಗ್ಸ್ ಓವರ್‌ಡೋಸ್‌ನಿಂದ ಅಜಯ್ ನಂದಾಲ್ ಮೃತಪಟ್ಟಿದ್ದು, ಆತನ ಗೆಳೆಯ ರವಿಯೇ ಡ್ರಗ್ಸ್ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.
“ಮಹಾರಾಣಿ ಕಿಶೋರಿ ಜಾಟ್ ಕನ್ಯಾ ಮಹಾ ವಿದ್ಯಾಲಯದ ಬಳಿ ಶವ ಪತ್ತೆಯಾಗಿದೆ. ಡ್ರಗ್ಸ್ ಓವರ್‌ನಿಂದಾಗಿ ಅಜಯ್ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಡಿಎಸ್‌ಪಿ ಮಹೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಹಾ ವಿದ್ಯಾಲಯದ ಬಳಿ ಅಜಯ್, ರವಿ, ಸೋನು ಸೇರಿ ಹಲವರು ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಡ್ರಗ್ಸ್ ಓವರ್‌ಡೋಸ್ ಆಗಿರಬಹುದು ಎನ್ನಲಾಗಿದೆ. ಆದಾಗ್ಯೂ, ರವಿ ಹಾಗೂ ಸೋನು ಅವರೂ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ | Sonali Phogat Death | ಡ್ರಗ್ಸ್ ಓವರ್‌ಡೋಸ್, ಅತ್ಯಾಚಾರ, ಹತ್ಯೆ, ಹಾರ್ಟ್ ಅಟ್ಯಾಕ್? ಸೋನಾಲಿ ಸಾವಿಗೆ ಕಾರಣವೇನು?
ಕ್ರಿಕೆಟ್
WPL 2023: ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್ಸಿಬಿ
ಮುಂಬೈ ಇಂಡಿಯನ್ಸ್ ವಿರುದ್ಧದ ಮಂಗಳವಾರದ ಅಂತಿಮ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ವಿಕೆಟ್ಗಳ ಸೋಲಿಗೆ ತುತ್ತಾಗಿದೆ.
ಮುಂಬಯಿ: ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ ಸ್ಮೃತಿ ಮಂಧಾನ ಸಾರಥ್ಯದ ಆರ್ಸಿಬಿ(Royal Challengers Bangalore) ತಂಡ ಇದೀಗ ಸೋಲಿನೊಂದಿಗೆಯೇ ತನ್ನ ಅಭಿಯಾನವನ್ನು ಮುಗಿಸಿದೆ. ಮಂಗಳವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಅಂತಿಮ ಲೀಗ್ ಪಂದ್ಯದಲ್ಲಿ 4 ವಿಕೆಟ್ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್ ಈ ಗೆಲುವಿನೊಂದಿಗೆ ಮತ್ತೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.
ಮುಂಬಯಿಯ ಡಿ.ವೈ. ಪಾಟೀಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಡಬಲ್ ಹೆಡ್ಡರ್ ಮುಖಾಮುಖಿಯ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆರ್ಸಿಬಿ ರಿಚಾ ಘೋಷ್ ಮತ್ತು ಎಲ್ಲಿಸ್ ಪೆರ್ರಿ ಅವರ ಸಣ್ಣ ಹೋರಾಟದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಬಾರಿಸಿತು. ಜಬಾಬಿತ್ತ ಮುಂಬೈ ಇಂಡಿಯನ್ಸ್ 16.3 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 129 ರನ್ ಬಾರಿಸಿ ಗೆಲುವು ದಾಖಲಿಸಿತು.
ಸಣ್ಣ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈಗೆ ಯಾಸ್ತಿಕಾ ಭಾಟಿಯಾ ಮತ್ತು ಹೇಲಿ ಮ್ಯಾಥ್ಯೂಸ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್ಗೆ 53 ರನ್ಗಳ ಜತೆಯಾಟ ನಡೆಸಿತು. ಯಾಸ್ತಿಕಾ 30 ರನ್ ಗಳಿಸಿದರೆ, ಮ್ಯಾಥ್ಯೂಸ್ 24 ರನ್ ಬಾರಿಸಿದರು. ಉಭಯ ಆಟಗಾರ್ತಿಯ ವಿಕೆಟ್ ಪತನದ ಬೆನ್ನಲ್ಲೇ ತಂಡ ನಾಯಕೀಯ ಕುಸಿತ ಕಂಡಿತು. ನಾಯಕಿ ಹರ್ಮನ್ಪ್ರೀತ್ ಕೌರ್(2), ನ್ಯಾಟ್ ಸ್ಕಿವರ್-ಬ್ರಂಟ್ (13) ಅಲ್ಪ ಮೊತ್ತಕ್ಕೆ ಔಟಾದರು. ತಂಡದ ಮೊತ್ತ 74 ಆಗುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡು ಮುಂಬೈ ಒಂದು ಹಂತದಲ್ಲಿ ಸಂಕಷ್ಟಕ್ಕೆ ಸಿಲುಕಿತು.
ನಾಟಕೀಯ ಕುಸಿತ ಕಂಡ ಮುಂಬೈ ತಂಡಕ್ಕೆ ಬೌಲಿಂಗ್ನಲ್ಲಿ ಮೂರು ವಿಕೆಟ್ ಕಿತ್ತು ಪ್ರಮುಖ ಪಾತ್ರ ನಿರ್ವಹಿಸಿದ್ದ ಅಮೇಲಿಯಾ ಕೆರ್ ಮತ್ತು ಪೂಜಾ ವಸ್ತ್ರಾಕರ್ ಕೆಳ ಕ್ರಮಾಂಕದಲ್ಲಿ ತಾಳ್ಮೆಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಂಡರು. ತಂಡದ ಗೆಲುವಿಗೆ 6 ರನ್ ಅಗತ್ಯವಿದ್ದಾಗ ಪೂಜಾ ವಿಕೆಟ್ ಕೈಚೆಲ್ಲಿದರು. ಅವರು 19 ರನ್ ಗಳಿಸಿದರು. ಅಮೇಲಿಯಾ ಕೆರ್ ಅಜೇಯ 31 ರನ್ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಈ ಅಜೇಯ ಇನಿಂಗ್ಸ್ ಆಟದ ವೇಳೆ 4 ಬೌಂಡರಿ ಸಿಡಿಯಿತು.
ಮಂದ ಗತಿಯ ಬ್ಯಾಟಿಂಗ್ ನಡೆಸಿದ ಮಂಧಾನ ಪಡೆ
ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ ಆರ್ಸಿಬಿ ಆರಂಭಿಕ ಆಘಾತ ಕಂಡಿತು. ಗುಜರಾತ್ ಜೈಂಟ್ಸ್ ವಿರುದ್ಧ ಸಿಡಿಲಬ್ಬರ ಬ್ಯಾಟಿಂಗ್ ನಡೆಸಿ ನಡುಕ ಹುಟ್ಟಿಸಿದ್ದ ನ್ಯೂಜಿಲ್ಯಾಂಡ್ನ ಸ್ಟಾರ್ ಆಲ್ ರೌಂಡರ್ ಸೋಫಿ ಡಿವೈನ್ ಅವರು ಈ ಪಂದ್ಯದಲ್ಲಿ ರನೌಟ್ ಸಂಕಟಕ್ಕೆ ಸಿಲುಕಿದರು. ಇಲ್ಲದ ರನ್ ಕದಿಯಲೆತ್ನಿಸಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭಸಿದರು.
ನಾಯಕಿ ಸ್ಮೃತಿ ಮಂಧಾನ ಅವರ ಆಟ ಈ ಪಂದ್ಯದಲ್ಲಿಯೂ ಮಂದ ಗತಿಯಿಂದ ಕೂಡಿತ್ತು. 25 ಎಸೆತ ಎದುರಿಸಿ 24 ರನ್ ಗಳಿಸಿದರು. ಇದರೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಮಂಧಾನ ಸಂಪೂರ್ಣ ವೈಫಲ್ಯ ಕಂಡಂತಾಯಿತು. ಈ ಮೂಲಕ ಮುಂದಿನ ಬಾರಿಯ ಆವೃತ್ತಿಯಲ್ಲಿ ಅವರು ಆರ್ಸಿಬಿ ತಂಡದಲ್ಲಿಯೇ ಉಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಆರಂಭಿಕ ಆಟಗಾರ್ತಿಯರ ವಿಕೆಟ್ ಪತನದ ಬಳಿಕ ಆಡಲಿಳಿದ ಆಸ್ಟ್ರೇಲಿಯಾದ ಆಲ್ರೌಂಡರ್ ಎಲ್ಲಿಸ್ ಪೆರ್ರಿ ತಂಡಕ್ಕೆ ಆಸರೆಯಾದರು. ಪ್ರತಿ ಓವರ್ನಲ್ಲಿ ಒಂದು ಬೌಂಡರಿ ಬಾರಿಸುವ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸಲಾರಂಭಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಯಾರು ಕೂಡ ಉತ್ತಮ ಸಾಥ್ ನೀಡಲಿಲ್ಲ. ಹೀತರ್ ನೈಟ್ ಮತ್ತು ಕನಿಕಾ ಅಹುಜಾ ತಲಾ 12 ರನ್ಗೆ ಆಟ ಮುಗಿಸಿದರು. ಇದರ ಬೆನ್ನಲ್ಲೇ ಎಲ್ಲಿಸ್ ಪೆರ್ರಿ ಕೂಡ ನ್ಯಾಟ್ ಸ್ಕಿವರ್ ಬ್ರಂಟ್ ಎಸೆತದಲ್ಲಿ ಎಲ್ಬಿಡಬ್ಲ್ಯು ಬಲೆಗೆ ಬಿದ್ದರು. 38 ಎಸೆತ ಎದುರಿಸಿದ ಅವರು ಮೂರು ಬೌಂಡರಿ ನೆರವಿನಿಂದ 29 ರನ್ ಬಾರಿಸಿದರು. ಸ್ಕಿವರ್ ಬ್ರಂಟ್ 24 ರನ್ಗೆ 2 ವಿಕೆಟ್ ಉರುಳಿಸಿದರು.
ಇದನ್ನೂ ಓದಿ WPL 2023 : ಸೇಡು ತೀರಿಸಿಕೊಂಡ ಡೆಲ್ಲಿ ಪಡೆ, ಮುಂಬಯಿ ವಿರುದ್ಧ 9 ವಿಕೆಟ್ ಸುಲಭ ಜಯ
ಅಂತಿಮ ಹಂತದಲ್ಲಿ ರಿಚಾ ಘೋಷ್ ಬಿರುಸಿನ ಬ್ಯಾಟಿಂಗ್ ನಡೆಸಿದ ಪರಿಣಾಮ ಆರ್ಸಿಬಿ 100ರ ಗಡಿ ದಾಟಿತು. ಕ್ರೀಸ್ ಗಿಳಿದ ಆರಂಭದಿಂದಲೇ ಸಿಕ್ಸರ್, ಬೌಂಡರಿಗಳ ಮೂಲಕ ಮುಂಬೈ ಬೌಲರ್ಗಳ ಸಣ್ಣ ಮೊತ್ತದ ಯೋಜನೆಯನ್ನು ತಲೆಕೆಳಗಾಗಿಸಿದರು. ಆದರೆ ಅಂತಿಮ ಓವರ್ ಮೊದಲ ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದರು. ಅವರ ವಿಕೆಟ್ ಉರುಳಿದ ಬಳಿಕ ತಂಡದ ಮೊತ್ತವೂ ಕುಸಿಯಿತು. ಒಟ್ಟು 13 ಎಸೆತ ಎದುರಿಸಿದ ಅವರು ಮೂರು ಬೌಂಡರಿ 2 ಸಿಕ್ಸರ್ ಬಾರಿಸಿ 29 ರನ್ ಕಲೆಹಾಕಿದರು. ಮುಂಬೈ ಪರ ಅಮೇಲಿಯಾ ಕೆರ್ 22 ರನ್ ವೆಚ್ಚದಲ್ಲಿ ಮೂರು ವಿಕೆಟ್ ಪಡೆದರು. ಸೈಕಾ ಇಶಾಖ್ ಒಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್: ಆರ್ಸಿಬಿ; 20 ಓವರ್ಗಳಲ್ಲಿ 9 ವಿಕೆಟ್ಗೆ 125( ಎಲ್ಲಿಸ್ ಪೆರ್ರಿ 29, ರಿಚಾ ಘೋಷ್ 29, ಅಮೇಲಿಯಾ ಕೆರ್ 22ಕ್ಕೆ 3). ಮುಂಬೈ ಇಂಡಿಯನ್ಸ್: 16.3 ಓವರ್ಗಳಲ್ಲಿ 6 ವಿಕೆಟ್ಗೆ 129( ಅಕೇಲಿಯಾ ಕೆರ್ ಅಜೇಯ 31, ಮ್ಯಾಥ್ಯೂಸ್ 24, ಯಾಸ್ತಿಕಾ ಭಾಟಿಯಾ 30)
ಕ್ರೀಡೆ
Rani Rampal: ರಾಯ್ ಬರೇಲಿ ಸ್ಟೇಡಿಯಂಗೆ ಹಾಕಿ ಆಟಗಾರ್ತಿ ರಾಣಿ ರಾಂಪಾಲ್ ಹೆಸರು
ಎಂಸಿಎಫ್ ರಾಯ್ಬರೇಲಿ ಹಾಕಿ ಕ್ರೀಡಾಂಗಣವನ್ನು “ರಾಣಿ ಗರ್ಲ್ಸ್ ಹಾಕಿ ಟರ್ಫ್” ಎಂದು ಮರುನಾಮಕರಣ ಮಾಡಲಾಗಿದೆ.
ನವದೆಹಲಿ: ಭಾರತ ಮಹಿಳಾ ಹಾಕಿ ತಂಡದ ಸ್ಟಾರ್ ಆಟಗಾರ್ತಿ ರಾಣಿ ರಾಂಪಾಲ್(Rani Rampal) ಅವರ ಹೆಸರನ್ನು ರಾಯ್ ಬರೇಲಿಯಲ್ಲಿರುವ ಕ್ರೀಡಾಂಗಣಕ್ಕೆ ಇಡಲಾಗಿದೆ. ಈ ಮೂಲಕ ಕ್ರೀಡೆಯಲ್ಲಿ ತಮ್ಮ ಹೆಸರಿನ ಕ್ರೀಡಾಂಗಣವನ್ನು ಹೊಂದಿರುವ ಮೊದಲ ಮಹಿಳೆ ಎಂಬ ಕೀರ್ತಿಗೆ ರಾಣಿ ಅವರು ಪಾತ್ರರಾಗಿದ್ದಾರೆ.
ಎಂಸಿಎಫ್ ರಾಯ್ ಬರೇಲಿ ಹಾಕಿ ಸ್ಟೇಡಿಯಮ್ ಇನ್ನು ಮುಂದೆ ‘ರಾಣಿ ಗರ್ಲ್ಸ್ ಹಾಕಿ ಟರ್ಫ್’ ಎಂದು ಮರುನಾಮಕರಣ ಮಾಡಲಾಗಿದೆ. ಈ ವಿಚಾರವನ್ನು ರಾಣಿ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
“ಹಾಕಿ ಕ್ರೀಡೆಗೆ ನಾನು ನೀಡಿದ ಕೊಡುಗೆಯನ್ನು ಪರಿಗಣಿಸಿ ಎಂಸಿಎಫ್ ರಾಯ್ಬರೇಲಿ ಹಾಕಿ ಕ್ರೀಡಾಂಗಣವನ್ನು ರಾಣಿ ಗರ್ಲ್ಸ್ ಹಾಕಿ ಟರ್ಫ್ ಎಂದು ಮರುನಾಮಕರಣ ಮಾಡಲಾಗಿದೆ. ಇದು ನನಗೆ ಸಂದ ಅತ್ಯಂತ ಶ್ರೇಷ್ಠ ಗೌರವವಾಗಿದೆ” ಎಂದು ರಾಣಿ ರಾಂಪಾಲ್ ತಮ್ಮ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ Hockey India: ಹಾರ್ದಿಕ್, ಸವಿತಾಗೆ ವರ್ಷದ ಹಾಕಿ ಆಟಗಾರ ಪ್ರಶಸ್ತಿ
“ನನ್ನ ಹೆಸರಲ್ಲಿ ಒಂದು ಕ್ರೀಡಾಂಗಣವನ್ನು ಹೊಂದಿರುವ ಮೊದಲ ಮಹಿಳಾ ಹಾಕಿ ಆಟಗಾರ್ತಿಯಾಗಿರುವುದು ನನಗೆ ಹೆಮ್ಮೆಯ ಕ್ಷಣವಾಗಿದೆ. ನಾನು ಇದನ್ನು ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅರ್ಪಿಸುತ್ತೇನೆ ಹಾಗೂ ಇದು ಮುಂದಿನ ತಲೆಮಾರಿನ ಹಾಕಿ ಆಟಗಾರ್ತಿಯರಿಗೆ ಸ್ಫೂರ್ತಿ ನೀಡಲಿ” ಎಂದು ರಾಣಿ ಹೇಳಿದರು. ಟೋಕಿಯೊ ಒಲಿಂಪಿಕ್ಸ್ ಆಡಿದ ಬಳಿಕ ರಾಣಿ ರಾಂಪಾಲ್ ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿದ್ದರು. ಕಾಮನ್ವೆಲ್ತ್ ಗೇಮ್ಸ್‌ಗೂ ಅವರು ಅಲಭ್ಯರಾಗಿದ್ದರು. ಭಾರತಕ್ಕಾಗಿ ಸುಮಾರು 250 ಪಂದ್ಯಗಳಲ್ಲಿ ಆಡಿದ್ದಾರೆ.
ಕ್ರಿಕೆಟ್
WPL 2023: ಮುಂಬೈ ಬೌಲಿಂಗ್ ದಾಳಿಗೆ ಬೆದರಿ 125ಕ್ಕೆ ಕುಸಿದ ಆರ್ಸಿಬಿ
ಮುಂಬೈ ಇಂಡಿಯನ್ಸ್ ವಿರುದ್ಧದ ಮಂಗಳವಾರದ ಮೊದಲ ಪಂದ್ಯದಲ್ಲಿ ಆರ್ಸಿಬಿ 125 ರನ್ ಗಳಿಸಿ ಸವಾಲೊಡ್ಡಿದೆ.
ಮುಂಬಯಿ: ಮುಂಬೈ ಇಂಡಿಯನ್ಸ್ ತಂಡದ ಸಂಘಟಿತ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಮಂಗಳವಾರದ ಮಹಿಳಾ ಪ್ರೀಮಿಯರ್ ಲೀಗ್ನ(WPL 2023) ಹಗಲು ಪಂದ್ಯದಲ್ಲಿ 125 ರನ್ ಗಳಿಸಿ ಸವಾಲೊಡ್ಡಿದೆ.
ಮುಂಬಯಿಯ ಡಿ.ವೈ. ಪಾಟೀಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ನ ದಿನದ ಮೊದಲ ಮುಖಾಮುಖಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್ ಬಾರಿಸಿದೆ. ಮುಂಬೈ ಗೆಲುವಿಗೆ 126 ರನ್ ಬಾರಿಸಬೇಕಿದೆ.
ಗುಜರಾತ್ ಜೈಂಟ್ಸ್ ವಿರುದ್ಧ ಸಿಡಿಲಬ್ಬರ ಬ್ಯಾಟಿಂಗ್ ನಡೆಸಿ ನಡುಕ ಹುಟ್ಟಿಸಿದ್ದ ನ್ಯೂಜಿಲ್ಯಾಂಡ್ನ ಸ್ಟಾರ್ ಆಲ್ ರೌಂಡರ್ ಸೋಫಿ ಡಿವೈನ್ ಅವರು ಈ ಪಂದ್ಯದಲ್ಲಿ ರನೌಟ್ ಸಂಕಟಕ್ಕೆ ಸಿಲುಕಿದರು. ಇಲ್ಲದ ರನ್ ಕದಿಯಲೆತ್ನಿಸಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭಸಿದರು.
ನಾಯಕಿ ಸ್ಮೃತಿ ಮಂಧಾನ ಅವರ ಆಟ ಈ ಪಂದ್ಯದಲ್ಲಿಯೂ ಮಂದ ಗತಿಯಿಂದ ಕೂಡಿತ್ತು. 25 ಎಸೆತ ಎದುರಿಸಿ 24 ರನ್ ಗಳಿಸಿದರು. ಇದರೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಮಂಧಾನ ಸಂಪೂರ್ಣ ವೈಫಲ್ಯ ಕಂಡಂತಾಯಿತು. ಈ ಮೂಲಕ ಮುಂದಿನ ಬಾರಿಯ ಆವೃತ್ತಿಯಲ್ಲಿ ಅವರು ಆರ್ಸಿಬಿ ತಂಡದಲ್ಲಿಯೇ ಉಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಆರಂಭಿಕ ಆಟಗಾರ್ತಿಯರ ವಿಕೆಟ್ ಪತನದ ಬಳಿಕ ಆಡಲಿಳಿದ ಆಸ್ಟ್ರೇಲಿಯಾದ ಆಲ್ರೌಂಡರ್ ಎಲ್ಲಿಸ್ ಪೆರ್ರಿ ತಂಡಕ್ಕೆ ಆಸರೆಯಾದರು. ಪ್ರತಿ ಓವರ್ನಲ್ಲಿ ಒಂದು ಬೌಂಡರಿ ಬಾರಿಸುವ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸಲಾರಂಭಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಯಾರು ಕೂಡ ಉತ್ತಮ ಸಾಥ್ ನೀಡಲಿಲ್ಲ. ಹೀತರ್ ನೈಟ್ ಮತ್ತು ಕನಿಕಾ ಅಹುಜಾ ತಲಾ 12 ರನ್ಗೆ ಆಟ ಮುಗಿಸಿದರು. ಇದರ ಬೆನ್ನಲ್ಲೇ ಎಲ್ಲಿಸ್ ಪೆರ್ರಿ ಕೂಡ ನ್ಯಾಟ್ ಸ್ಕಿವರ್ ಬ್ರಂಟ್ ಎಸೆತದಲ್ಲಿ ಎಲ್ಬಿಡಬ್ಲ್ಯು ಬಲೆಗೆ ಬಿದ್ದರು. 38 ಎಸೆತ ಎದುರಿಸಿದ ಅವರು ಮೂರು ಬೌಂಡರಿ ನೆರವಿನಿಂದ 29 ರನ್ ಬಾರಿಸಿದರು. ಸ್ಕಿವರ್ ಬ್ರಂಟ್ 24 ರನ್ಗೆ 2 ವಿಕೆಟ್ ಉರುಳಿಸಿದರು.
ಇದನ್ನೂ ಓದಿ WPL 2023 : ಸೇಡು ತೀರಿಸಿಕೊಂಡ ಡೆಲ್ಲಿ ಪಡೆ, ಮುಂಬಯಿ ವಿರುದ್ಧ 9 ವಿಕೆಟ್ ಸುಲಭ ಜಯ
ಅಂತಿಮ ಹಂತದಲ್ಲಿ ರಿಚಾ ಘೋಷ್ ಬಿರುಸಿನ ಬ್ಯಾಟಿಂಗ್ ನಡೆಸಿದ ಪರಿಣಾಮ ಆರ್ಸಿಬಿ 100ರ ಗಡಿ ದಾಟಿತು. ಕ್ರೀಸ್ ಗಿಳಿದ ಆರಂಭದಿಂದಲೇ ಸಿಕ್ಸರ್, ಬೌಂಡರಿಗಳ ಮೂಲಕ ಮುಂಬೈ ಬೌಲರ್ಗಳ ಸಣ್ಣ ಮೊತ್ತದ ಯೋಜನೆಯನ್ನು ತಲೆಕೆಳಗಾಗಿಸಿದರು. ಆದರೆ ಅಂತಿಮ ಓವರ್ ಮೊದಲ ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದರು. ಅವರ ವಿಕೆಟ್ ಉರುಳಿದ ಬಳಿಕ ತಂಡದ ಮೊತ್ತವೂ ಕುಸಿಯಿತು. ಒಟ್ಟು 13 ಎಸೆತ ಎದುರಿಸಿದ ಅವರು ಮೂರು ಬೌಂಡರಿ 2 ಸಿಕ್ಸರ್ ಬಾರಿಸಿ 29 ರನ್ ಕಲೆಹಾಕಿದರು. ಮುಂಬೈ ಪರ ಅಮೇಲಿಯಾ ಕೆರ್ 22 ರನ್ ವೆಚ್ಚದಲ್ಲಿ ಮೂರು ವಿಕೆಟ್ ಪಡೆದರು. ಸೈಕಾ ಇಶಾಖ್ ಒಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್: ಆರ್ಸಿಬಿ; 20 ಓವರ್ಗಳಲ್ಲಿ 9 ವಿಕೆಟ್ಗೆ 125( ಎಲ್ಲಿಸ್ ಪೆರ್ರಿ 29, ರಿಚಾ ಘೋಷ್ 29, ಅಮೇಲಿಯಾ ಕೆರ್ 22ಕ್ಕೆ 3)
ಕ್ರೀಡೆ
Swiss Open: ಸ್ವಿಸ್ ಓಪನ್ ಬ್ಯಾಡ್ಮಿಂಟನ್; ಪ್ರಶಸ್ತಿ ಉಳಿಸಿಕೊಳ್ಳಲಿದ್ದಾರಾ ಪಿ.ವಿ. ಸಿಂಧು?
ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯಲು ಭಾರತದ ಪ್ರಮುಖ ಬ್ಯಾಡ್ಮಿಂಟನ್ ಪಟುಗಳು ಸಜ್ಜಾಗಿದ್ದಾರೆ.
ಬಾಸೆಲ್ (ಸ್ವಿಟ್ಜರ್ಲೆಂಡ್): ಕಳೆದ ಕೆಲ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೊದಲ ಸುತ್ತಿನಲ್ಲೇ ಸೋಲಿನ ಆಘಾತ ಕಾಣುತ್ತಿರುವ ಭಾರತದ ಅವಳಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು (Sindhu)ಇದೀಗ ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ(Swiss Open) ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
ಈ ಟೂರ್ನಿಯಲ್ಲಿ ಕಳೆದ ಬಾರಿಯ ಚಾಂಪಿಯನ್ ಆಗಿರುವ ಸಿಂಧು ಪ್ರಶಸ್ತಿ ಉಳಿಸಿಕೊಳ್ಳಲಿದ್ದಾರಾ ಅಥವಾ ಮೊದಲ ಸುತ್ತಿನಲ್ಲೇ ಸೋತು ಟೂರ್ನಿಯಿಂದ ಹೊರಬೀಳಲಿದ್ದಾರಾ ಎಂದು ಕಾದು ನೋಡಬೇಕಿದೆ. ಸದ್ಯ ಸಿಂಧು ಅವರ ಆಟವನ್ನು ನೋಡುವಾಗ ಅವರು ಪ್ರಶಸ್ತಿ ಗೆಲ್ಲುವುದು ಬಲು ಕಷ್ಟ ಎನ್ನಲಡ್ಡಿಯಿಲ್ಲ. ಏಕೆಂದರೆ ಸಿಂಧು ಶ್ರೇಯಾಂಕ ರಹಿತ ಆಟಗಾರ್ತಿಯರ ಸವಾಲನ್ನು ಮೆಟ್ಟಿನಿಲ್ಲಲು ಸಾಧ್ಯವಾಗುತ್ತಿಲ್ಲ. ಮೊದಲ ಸುತ್ತಿನ ಪಂದ್ಯದಲ್ಲಿ ಸಿಂಧು ಆತಿಥೇಯ ನಾಡಿನ ಜೆಂಜಿರಾ ಸ್ಟೆಡಲ್‌ಮನ್ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಪ್ರಣಯ್ಗೆ(Prannoy) ಚೀನಾದ ಶಿ ಯುಕಿ ಅವರ ಸವಾಲು ಎದುರಾಗಿದೆ. ಲಕ್ಷ್ಯ ಸೇನ್ ಅವರು ಹಾಂಗ್‌ಕಾಂಗ್‌ನ ಲೀ ಚೆವುಕ್ ಯಿವ್ ಎದುರು, ಕಿದಂಬಿ ಶ್ರೀಕಾಂತ್ ಚೀನಾದ ವೆಂಗ್ ಹಾಂಗ್ ವಿರುದ್ಧ ಸೆಣಸಾಡಲಿದ್ದಾರೆ.
ಇದನ್ನೂ ಓದಿ All England Badminton: ಮೊದಲ ಸುತ್ತಿನಲ್ಲೇ ಸಿಂಧುಗೆ ಸೋಲಿನ ಆಘಾತ
ಕಳೆದ ವಾರ ಮುಕ್ತಾಯಕಂಡ ಆಲ್ ಇಂಗ್ಲೆಂಡ್ ಟೂರ್ನಿಯಲ್ಲಿ ಸೆಮಿಫೈನಲ್ ಪಂದ್ಯದಲ್ಲಿ ಎಡವಿದ್ದ ಮಹಿಳಾ ಡಬಲ್ಸ್ ಜೋಡಿಯಾದ ಗಾಯತ್ರಿ ಗೋಪಿಚಂದ್ ಮತ್ತು ತ್ರಿಶಾ ಜೋಲಿ ಅವರು ಮೊದಲ ಸುತ್ತಿನಲ್ಲಿ ಇಂಡೊನೇಷ್ಯಾದ ಅಪ್ರಿಯಾನಿ ರಹಾಯು- ಸಿತಿ ಫದಿಯಾ ಸಿಲ್ವಾ ವಿರುದ್ಧ ಆಡಲಿದ್ದಾರೆ. ಅಲ್ಲಿ ಕೈ ತಪ್ಪಿದ ಪ್ರಶಸ್ತಿಯನ್ನು ಈ ಟೂರ್ನಿಯಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ ಈ ಜೋಡಿ. ಇನ್ನು ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ-ಚಿರಾಗ್ ಶೆಟ್ಟಿ ಜೋಡಿಗೆ ಚೀನಾದ ಲಿಯಾಂಗ್ ವೇ ಕೆಂಗ್- ವಾಂಗ್ ಸವಾಲು ಎದುರಾಗಲಿದೆ.
-
ಸುವಚನ14 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ20 hours ago
ವಿಸ್ತಾರ ಸಂಪಾದಕೀಯ: ಪಬ್ಲಿಕ್ ಪರೀಕ್ಷೆ ಗೊಂದಲ; ವಿದ್ಯಾರ್ಥಿಗಳು, ಪೋಷಕರ ಮೇಲೆ ಮಾನಸಿಕ ಒತ್ತಡ
-
ಕರ್ನಾಟಕ23 hours ago
Life changing story : ನಿಂದನೆಯೇ ವರವಾಯಿತು, ಹಠ ತೊಟ್ಟು ವಕೀಲನಾಗಿ ಕರಿಕೋಟು ಧರಿಸಿ ವಾದಿಸಿ ಗೆದ್ದ ಯುವಕ!
-
ಆಟೋಮೊಬೈಲ್21 hours ago
Oscar 2023 : ನಾಟು ನಾಟು ಹಾಡಿಗೆ ಡಾನ್ಸ್ಮಾಡಿದ ಟೆಸ್ಲಾ ಕಾರುಗಳು! ಇಲ್ಲಿದೆ ನೋಡಿ ವಿಡಿಯೊ
-
ಕ್ರಿಕೆಟ್5 hours ago
IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ9 hours ago
Shivamogga politics : ಯುಗಾದಿ, ರಂಜಾನ್ಗೆ ಶುಭ ಕೋರಿ ಫ್ಲೆಕ್ಸ್ ಹಾಕಿಸಿದ ಆಯನೂರು, ಹರಕು ಬಾಯಿ ಮುಚ್ಚಲಿ ಅಂದಿದ್ದು ಯಾರಿಗೆ?
-
ಧಾರ್ಮಿಕ8 hours ago
Ugadi 2023 : ಜಗದ ಆದಿ ಈ ಯುಗಾದಿ!
-
ಅಂಕಣ9 hours ago
ನನ್ನ ದೇಶ ನನ್ನ ದನಿ ಅಂಕಣ: ಪಂಜಾಬ್ ನಾಶವಾಗುವುದು ಒಳ್ಳೆಯ ಲಕ್ಷಣವಲ್ಲ