ನವ ದೆಹಲಿ: ದಕ್ಷಿಣ ಆಫ್ರಿಕಾದ ವಿರುದ್ಧ ಟಿ20 ಸರಣಿಯನ್ನು ಆಡುತ್ತಿರುವ ಟೀಮ್ ಇಂಡಿಯಾ ಜೂನ್ ಕೊನೆಯ ವಾರದಲ್ಲಿ ಐರ್ಲೆಂಡ್ ಪ್ರವಾಸ (Ireland Tour) ಕೈಗೊಳ್ಳುತ್ತಿದ್ದು, ಈ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕರಾಗಲಿದ್ದಾರೆ. ಭುವನೇಶ್ವರ್ ಕುಮಾರ್ ಉಪ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಇದೇ ಮೊದಲಬಾರಿಗೆ ಪಾಂಡ್ಯ ಭಾರತ ತಂಡದ ನಾಯಕರಾಗಿ ಆಯ್ಕೆಯಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕತ್ವ ವಹಿಸಿಕೊಂಡು, ಯಾಶಸ್ವಿ ನಾಯಕರೆನಿಸಿಕೊಂಡಿದ್ದರು. ಸದ್ಯ ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯುತ್ತಿರುವ ಪಂದ್ಯಗಳಲ್ಲಿ ಆಡುತ್ತಿರುವ ಟೀಮ್ ಇಂಡಿಯಾದ ಸದಸ್ಯರಾಗಿದ್ದಾರೆ. ಮಂಗಳವಾರ ನಡೆದ ಟಿ 20ಪಂದ್ಯದಲ್ಲಿ ಅವರು ಔಟಾಗದೆ 31 ರನ್ ಬಾರಿಸಿದ್ದರು. ಈ ಪಂದ್ಯದಲ್ಲಿ ಭಾರತ ಗೆದ್ದಿತ್ತು.
ಬುಧವಾರ ನಡೆದ ಬಿಸಿಸಿಐನ ಆಯ್ಕೆ ಸಮಿತಿಯ ಸಭೆಯಲ್ಲಿ ಟೀಮ್ ಇಂಡಿಯಾದ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಜೂನ್ 26ರಿಂದ ಟಿ20 ಸರಣಿಯ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ. ಟೀಮ್ ಇಂಡಿಯಾದ ಹೊಸ ತಂಡದಲ್ಲಿ ರಾಹುಲ್ ತ್ರಿಪಾಠಿ ಕೂಡ ಸ್ಥಾನ ಪಡೆದಿದ್ದಾರೆ.
ತಂಡ ಹೀಗಿರಲಿದೆ; ಹಾರ್ದಿಕ್ ಪಾಂಡ್ಯ (ನಾಯಕ) ಭುವನೇಶ್ವರ್ ಕುಮಾರ್ (ಉಪನಾಯಕ), ಇಷಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್‌ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಐಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೇಟ್ ಕೀಪರ್), ಯಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ನೋಯಿ ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.
ಇದನ್ನೂ ಓದಿ| Test Series Eng v/s Nz | ವೇಗಿ ಬೌಲರ್ ಟ್ರೆಂಟ್ ಬೌಲ್ಟ್ ಬ್ಯಾಟಿಂಗ್‌ನಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ