ಮುಂಬಯಿ: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ (ಡಬ್ಲ್ಯುಟಿಸಿ) ಫೈನಲ್ನಲ್ಲಿ ಟೀಮ್ ಇಂಡಿಯಾಗೆ (Team India) ಕಹಿ ಅನುಭವ ಉಂಟಾಗಿತ್ತು. ಇದೀಗ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಜುಲೈ ಮತ್ತು ಆಗಸ್ಟ್ನಲ್ಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಹೋಗಲಿದೆ. ಡಬ್ಲ್ಯುಟಿಸಿಯಲ್ಲಿ ಎರಡು ಬಾರಿ ರನ್ನರ್ ಅಪ್ ಸ್ಥಾನ ಪಡೆದುಕೊಂಡಿರುವ ಭಾರತ ತಂಡ ಮುಂದಿನ ಋತುವಿನ ಡಬ್ಲ್ಯುಸಿಯ ಮೊದಲ ಸರಣಿಯನ್ನು ಇಲ್ಲಿ ಆಡಲಿದೆ. ವಿಂಡೀಸ್ ವಿರುದ್ಧ ಎರಡು ಪಂದ್ಯಗಳ ಸರಣಿ ನಡೆಯಲಿದೆ. ಇದರ ಜತೆಗೆ ಮೂರು ಏಕದಿನ ಪಂದ್ಯಗಳು ಹಾಗೂ ಐದು ಟಿ20 ಪಂದ್ಯಗಳು ಆಯೋಜನೆಗೊಂಡಿವೆ. ಸೋಮವಾರ ಬಿಸಿಸಿಐ ಈ ಪ್ರವಾಸದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
🚨 NEWS 🚨
— BCCI (@BCCI) June 12, 2023
2️⃣ Tests
3️⃣ ODIs
5️⃣ T20Is
Here's the schedule of India's Tour of West Indies 🔽#TeamIndia | #WIvIND pic.twitter.com/U7qwSBzg84
2023-2025ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಭಾಗವಾಗಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಡೊಮಿನಿಕಾದ ವಿಂಡ್ಸರ್ ಪಾರ್ಕ್ನಲ್ಲಿ (ಜುಲೈ 12ರಿಂದ16) ನಡೆಯಲಿದೆ. ಎರಡನೇ ಟೆಸ್ಟ್ ಜುಲೈ 20ರಿಂದ ಜುಲೈ 24 ರವರೆಗೆ ಟ್ರಿನಿಡಾಡ್ನ ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ನಡೆಯಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 100ನೇ ಟೆಸ್ಟ್ ಪಂದ್ಯ ಇದಾಗಿದೆ.
ಭಾರತದ ಬಹು ನಿರೀಕ್ಷಿತ ಭೇಟಿಯ ವೇಳಾಪಟ್ಟಿ ಮತ್ತು ಸ್ಥಳಗಳನ್ನು ದೃಢೀಕರಿಸಲು ನಮಗೆ ಸಂತೋಷವಾಗುತ್ತಿದೆ.. ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ನಡೆಯಲಿರುವ 100 ನೇ ಟೆಸ್ಟ್ ಈ ಪ್ರವಾಸದ ಹೈಲೈಟ್. ಎರಡು ಹೆಮ್ಮೆಯ ಕ್ರಿಕೆಟ್ ರಾಷ್ಟ್ರಗಳ ನಡುವಿನ ಈ ಐತಿಹಾಸಿಕ ಪಂದ್ಯವನ್ನು ಸಂಭ್ರಮಿಸಲಾಗುತ್ತದೆ.” ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್ (ಸಿಡಬ್ಲ್ಯುಐ) ಸಿಇಒ ಜಾನಿ ಗ್ರೇವ್ ಹೇಳಿದ್ದಾರೆ.
ಇದನ್ನೂ ಓದಿ: ICC World Cup 2023: ಏಕದಿನ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ
ಟೆಸ್ಟ್ ಸರಣಿಯ ನಂತರ ಮೂರು ಏಕದಿನ ಪಂದ್ಯಗಳು ನಡೆಯಲಿವೆ. ಮೊದಲ 50 ಓವರ್ಗಳ ಪಂದ್ಯವು ಜುಲೈ 27 ರಂದು ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆಯಲಿದೆ. ಎರಡನೇ ಏಕದಿನ ಪಂದ್ಯವು ಜುಲೈ 29ರಂದು ಬಾರ್ಬಡೋಸ್ನಲ್ಲಿ ಆಯೋಜನೆಗೊಂಡಿದೆ. ಆಗಸ್ಟ್ 1ರಂದು ಟ್ರಿನಿಡಾಡ್ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯ ಸ್ಟೇಡಿಯಮ್ ಸರಣಿ ನಿರ್ಣಾಯಕ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಆಗಸ್ಟ್ 3ರಿಂದ ಆಗಸ್ಟ್ 13 ರವರೆಗೆ ಭಾರತ ಐದು ಪಂದ್ಯಗಳ ಟಿ 20 ಐ ಸರಣಿಯನ್ನು ಆಡಲಿದೆ. ಗಯಾನಾ ನ್ಯಾಷನಲ್ ಸ್ಟೇಡಿಯಂ ಮತ್ತು ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಐದು ಪಂದ್ಯಗಳ ಟಿ20ಐಗಳಿಗೆ ಆತಿಥ್ಯ ವಹಿಸಲಿದೆ.
ಸೀಮಿತ ಓವರ್ಗಳ ಕ್ರಿಕೆಟ್ ಪಂದ್ಯಗಳಲ್ಲಿ ಭಾರತ ತಂಡಕ್ಕೆ ಆತಿಥ್ಯ ವಹಿಸಲು ಹೆಮ್ಮೆ ಎನಿಸುತ್ತಿದೆ. ಕ್ರಿಕೆಟ್ ಪ್ರೇಮಿಗಳಿಗೆ 18 ದಿನಗಳ ಭರಪೂರ ಮನರಂಜನೆ ಸಿಗಲಿದೆ ಎಂದು ಗ್ರೇವ್ ಹೇಳಿದ್ದಾರೆ.