ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (virat kohli) ಮತ್ತು ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ(anushka sharma) ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಪೂರಕವೆಂಬಂತೆ ಅನುಷ್ಕಾ ಅವರ ಬೇಬಿ ಬಂಪ್ ವಿಡಿಯೊವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅನುಷ್ಕಾ ಶರ್ಮಾ ವಿರಾಟ್ (Anushka Sharma’s Baby Bump Spotted) ಕೊಹ್ಲಿಯೊಂದಿಗಿನ ಹೊಸ ವಿಡಿಯೊದಲ್ಲಿ ಬೇಬಿ ಬಂಪ್ ಮರೆಮಾಚುವಂತೆ ಕಾಣಿಸಿಕೊಂಡರು.
ವಿಡಿಯೊದಲ್ಲಿ ವಿರಾಟ್ ಅವರು ಅನುಷ್ಕಾ ಅವರ ಕೈ ಹಿಡಿದಿರುವುದು ಕಂಡುಬಂದಿದೆ. ಅನುಷ್ಕಾ ಬಹಳ ಲೂಸ್ ಆಗಿರುವ ಬಿಳಿ ಡ್ರೆಸ್ ಧರಿಸಿ ಕಾಣಿಸಿಕೊಂಡಿದ್ದರು.ಕೆಲವು ವಾರಗಳಿಂದ ಅನುಷ್ಕಾ ಗರ್ಭಿಣಿ ಎಂಬ ವದಂತಿ ಹಬ್ಬಿತ್ತು.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರ ಡಿ11ರಂದು ವಿವಾಹವಾಗಿದ್ದರು. 2021ರ ಜನವರಿಯಲ್ಲಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಮಗುವಿಗೆ ವಾಮಿಕಾ ಎಂದು ಹೆಸರಿಡಲಾಗಿದೆ. ಇದೀಗ ಅನುಷ್ಕಾ ಗರ್ಭಿಣಿಯಾಗಿದ್ದು ದ್ವಿತೀಯ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಅನುಷ್ಕಾ ಮುಂಬೈಯ ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಫೋಟೋಗಳನ್ನು ಎಲ್ಲಿಯೂ ಪ್ರಕಟಿಸದಂತೆ ಪಾಪರಾಜಿಗಳಿಗೆ ವಿನಂತಿಸಿದ್ದಾರೆ ಎನ್ನಲಾಗಿದೆ. ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ತಕ್ಷಣ ವಿರಾಟ್ ಅವರ ಅಭಿಮಾನಿಗಳು ಪ್ರಿನ್ಸ್ ಕಿಂಗ್ ಕೊಹ್ಲಿ ನೋಡಲು ಕಾತರವಾಗಿದ್ದೇವೆ ಎಂದು ಕಮೆಂಟ್ ಮಾಡಲಾರಂಭಿಸಿದ್ದಾರೆ.
ಇದನ್ನೂ ಓದಿ: Virat kohli : ಸೋತ ಪಾಕ್ ತಂಡದ ನಾಯಕನಿಗೆ ವಿಶೇಷ ರೀತಿಯಲ್ಲಿ ಸಮಾಧಾನ ಮಾಡಿದ ಕೊಹ್ಲಿ
ವೈರಲ್ ವಿಡಿಯೊ
Virat Kohli and Anushka Sharma at Team Hotel, Ahmedabad❤️#viratkohli #anushkasharma pic.twitter.com/Xaqc7sXuIc
— 𝙒𝙧𝙤𝙜𝙣🥂 (@wrogn_edits) October 14, 2023
ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.