Site icon Vistara News

BCCI Prize Money Comparison: 2007, 2011, 2013ರಲ್ಲಿ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ನೀಡಿದ ಬಹುಮಾನ ಮೊತ್ತವೆಷ್ಟು?

BCCI Prize Money Comparison

BCCI Prize Money Comparison: Amount Dhoni's Teams Earned In 2007, 2011 And 2013

ಮುಂಬಯಿ: 17 ವರ್ಷಗಳ ಬಳಿಕ 2ನೇ ಬಾರಿಗೆ ಟಿ20 ವಿಶ್ವಕಪ್(T20 World cup 2024)​ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದ ಟೀಮ್​ ಇಂಡಿಯಾಕ್ಕೆ ಬಿಸಿಸಿಐ 125 ಕೋಟಿ ಬಹುಮಾನ ನೀಡಿತ್ತು. ಇದೀಗ ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತಂಡ ಹಿಂದಿನ ಐಸಿಸಿ ಪ್ರಶಸ್ತಿ ಗೆದ್ದಾಗ ನೀಡಿದ ಬಹುಮಾನ(BCCI Prize Money Comparison) ಮೊತ್ತಕ್ಕೆ ಹೋಲಿಸಲಾಗುತ್ತಿದೆ.

2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ 12 ಕೋಟಿ ರೂಪಾಯಿಗಳ ಸಂಚಿತ ಮೊತ್ತವನ್ನು ಘೋಷಿಸಿತ್ತು. ಇದಾದ ಬಳಿಕ 2011ರ ಏಕದಿನ ವಿಶ್ವಕಪ್‌ಗಿಂತ ಮೊದಲೇ ಬಿಸಿಸಿಐ ಆಡಳಿತ ಮಂಡಳಿ ಪ್ರಶಸ್ತಿ ಗೆಲ್ಲುವ ತಂಡದ ಆಟಗಾರರಿಗೆ ತಲಾ 1 ಕೋಟಿ ರೂಪಾಯಿ ಬಹುಮಾನವನ್ನು ಘೋಷಿಸಿತ್ತು. ಆದರೆ ಪ್ರಶಸ್ತಿ ಗೆದ್ದ ಬಳಿಕ ಇದನ್ನು ತಲಾ 2 ಕೋಟಿ ರೂಪಾಯಿಗಳಿಗೆ ಪರಿಷ್ಕರಿಸಲಾಗಿತ್ತು. ಇದೇ ವೇಳೆ ಸಹಾಯಕ ಸಿಬ್ಬಂದಿಗೆ 50 ಲಕ್ಷ ರೂಪಾಯಿ, ಆಯ್ಕೆಗಾರರಿಗೆ ತಲಾ 25 ಲಕ್ಷ ರೂಪಾಯಿ ಬಹುಮಾನ ನೀಡಲಾಗಿತ್ತು.

ಇದನ್ನೂ ಓದಿ Team India : ಭಾರತ ತಂಡಕ್ಕೆ ಸಿಕ್ಕಿದ 125 ಕೋಟಿ ರೂ. ಬಹುಮಾನದಲ್ಲಿ ಯಾರಿಗೆ ಎಷ್ಟು? ಮಾಹಿತಿ ಬಹಿರಂಗ

2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಾಗ, ಭಾರತ ತಂಡಕ್ಕೆ ಬಿಸಿಸಿಐ ಪ್ರತಿ ಆಟಗಾರನಿಗೆ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು. ಅಲ್ಲದೆ, ಆ ಸಂದರ್ಭದಲ್ಲಿ ಸಹಾಯಕ ಸಿಬ್ಬಂದಿಗೆ ತಲಾ 30 ಲಕ್ಷ ರೂಪಾಯಿ ನೀಡಿತ್ತು.

ಈ ಬಾರಿ ಟಿ20 ವಿಶ್ವಕಪ್​ ಗೆದ್ದ ತಂಡದ ಭಾಗವಾಗಿದ್ದ 15 ಮಂದಿ ಆಟಗಾರರಿಗೆ ತಲಾ 5 ಕೋಟಿ ರೂ ಹಂಚಲಾಗುತ್ತದೆ. ಇಡೀ ಕೂಟದಲ್ಲಿ ಒಂದೇ ಒಂದು ಪಂದ್ಯವಾಡದ ಆಟಗಾರರಿಗೂ ಇಷ್ಟೇ ಮೊತ್ತದ ಹಣ ಸಿಗಲಿದೆ. ಅಲ್ಲದೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೂ 2.5 ಕೋಟಿ ರೂ. ನೀಡಲಾಗುತ್ತದೆ ಎಂದು ವರದಿ ಹೇಳಿದೆ. ಸಹಾಯಕ ಕೋಚ್ ಗಳಾದ ವಿಕ್ರಮ್ ರಾಥೋರ್, ಟಿ ದಿಲೀಪ್, ಪರಾಸ್ ಮಾಂಬ್ರೆ ಅವರಿಗೆ ತಲಾ 2.5 ಕೋಟಿ ರೂ ನೀಡಲಾಗುತ್ತದೆ. ತಲಾ 1 ಕೋಟಿ ರೂ ಅಜಿತ್ ಅಗರ್ಕರ್ ಸೇರಿ ಆಯ್ಕೆ ಸಮಿತಿ ಸದಸ್ಯರಿಗೆ ನೀಡಲಾಗುತ್ತದೆ. ತಂಡದೊಂದಿಗೆ ಪ್ರಯಾಣ ಬೆಳೆಸಿದ್ದ ನಾಲ್ವರು ಮೀಸಲು ಆಟಗಾರರಿಗೂ ತಲಾ 1 ಕೋಟಿ ಬಹುಮಾನ ಮೊತ್ತ ಸಿಗಲಿದೆ. ಶುಬ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹಮದ್, ಆವೇಶ್ ಖಾನ್ ಮೀಸಲು ಆಟಗಾರರಾಗಿದ್ದರು.

ಸಹಾಯಕ ಸಿಬ್ಬಂದಿಗಳಲ್ಲಿ ಮೂವರು ಫಿಸಿಯೋಥೆರಪಿಸ್ಟ್‌ ಗಳು, ಮೂವರು ಥ್ರೋಡೌನ್ ಸ್ಪೆಷಲಿಸ್ಟ್ ಗಳು, ಇಬ್ಬರು ಮಸಾಜರ್ ಗಳು ಮತ್ತು ಸ್ಟ್ರೆಂತ್ ಆಯಂಡ್ ಕಂಡೀಷನಿಂಗ್ ಕೋಚ್ ತಲಾ 2 ಕೋಟಿ ರೂ. ಪಡೆಯಲಿದ್ದಾರೆ.

Exit mobile version