Site icon Vistara News

Danish Kaneria: ರಕ್ಷಾ ಬಂಧನ ಆಚರಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Danish Kaneria

Danish Kaneria: Former Pakistan cricketer celebrated Raksha Bandhan

ಲಂಡನ್​: ಭಾರತದಲ್ಲಿ ಹೆಚ್ಚು ಮಹತ್ವವಿರುವ, ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಹಬ್ಬವೆಂದರೆ ರಕ್ಷಾ ಬಂಧನವನ್ನು(Raksha Bandhan) ಸೋಮವಾರವಷ್ಟೇ ಎಲ್ಲಡೆ ಅದ್ಧೂರಿಯಾಗಿ ಆಚರಿಸಲಾಗಿತ್ತು. ಸಹೋದರ-ಸಹೋದರಿಯರು ಪರಸ್ಪರ ರಾಖಿ ಕಟ್ಟುವ ಮೂಲಕ ಈ ಸಂಭ್ರಮಾಚರಣೆ ಮಾಡಿದ್ದರು. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ (Danish Kaneria) ಕೂಡ ತಮ್ಮ ಪರಿವಾರದೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಈ ಫೋಟೊವನ್ನು ಕನೇರಿಯಾ ತಮ್ಮ ಅಧಿಕೃತ ಟ್ವಿಟರ್ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.​ ಜತೆಗೆ ರಕ್ಷಾ ಬಂಧನ ಆಚರಣೆಯ ಕೆಲವು ಝಲಕ್‌ಗಳನ್ನು ಹಂಚಿಕೊಳ್ಳುತ್ತಿದ್ದೇವೆ! ಎಂದು ಬರೆದುಕೊಂಡಿದ್ದಾರೆ.

ಯಾರು ಈ ದಾನಿಶ್ ಕನೇರಿಯಾ?


ಕರಾಚಿ ಮೂಲದ ದಾನಿಶ್ ಕನೇರಿಯಾ 2000ರಿಂದ 2010ರವರೆಗೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಸ್ಪಿನ್ ಬೌಲರ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ವೃತ್ತಿಜೀವನದುದ್ದಕ್ಕೂ ಕನೇರಿಯಾ ಇಸ್ಲಾಂ ದೇಶದಲ್ಲಿ ತಾರತಮ್ಯ ಎದುರಿಸಿದ್ದರು. ಈ ವಿಚಾರವನ್ನು ಸ್ವತಃ ಅವರೇ ಹೇಳಿದ್ದರು. ಹಿಂದೊಮ್ಮೆ ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಇಸ್ಲಾಂಗೆ ಮತಾಂತರಗೊಳ್ಳಲು ಕೆಲವು ಸಹ ಆಟಗಾರರಿಂದ ಒತ್ತಾಯ ಬಂದಿತ್ತು ಎಂದು ದೂರಿದ್ದರು. ಕ್ರಿಕೆಟ್​ನಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಎಂಬ ಹೆಗ್ಗಳಿಕೆಗೆ ಕನೇರಿಯಾ ಅವರದ್ದು . ಟೆಸ್ಟ್ ಕ್ರಿಕೆಟ್​ನಲ್ಲಿ 250 ಕ್ಕೂ ಹೆಚ್ಚು ವಿಕೆಟ್​ಗಳ ಪ್ರಭಾವಶಾಲಿ ಪ್ರದರ್ಶನ ನೀಡಿದ್ದರು.

ಗೂಗ್ಲಿ ಬೌಲಿಂಗ್ ಮಾಡಬಲ್ಲ ಬಲಗೈ ಲೆಗ್ ಸ್ಪಿನ್ನರ್ ಆಗಿದ್ದ ಕನೇರಿಯಾ ಪಾಕಿಸ್ತಾನ ಪರ 61 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 34.79 ಸರಾಸರಿಯಲ್ಲಿ 261 ವಿಕೆಟ್‌ ಪಡೆದುಕೊಂಡಿದ್ದಾರೆ. ಜತೆಗೆ 18 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅವರು ತಮ್ಮ ಸೋದರ ಸಂಬಂಧಿ ಅನಿಲ್ ದಳಪತ್ ನಂತರ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಮತ್ತು ಒಟ್ಟಾರೆಯಾಗಿ ಏಳನೇ ಮುಸ್ಲಿಮೇತರ ಆಟಗಾರರಾಗಿದ್ದರು.

ಇದನ್ನೂ ಓದಿ Sanju Samson | ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡದಕ್ಕೆ ಬೇಸರ ವ್ಯಕ್ತಪಡಿಸಿದ ಪಾಕ್​ ಕ್ರಿಕೆಟಿಗ ಕನೇರಿಯಾ

ರಾಮಮಂದಿರ ಉದ್ಘಾಟನೆಯ ವೇಳೆಯೂ ಕನೇರಿಯಾ ತಮ್ಮ ಅಧಿಕೃತ ಟ್ವೀಟರ್​ ಎಕ್ಸ್​​ ಖಾತೆಯಲ್ಲಿ ರಾಮಮಂದಿರದ ಫೋಟೊ ಹಂಚಿಕೊಂಡು ಜೈಶ್ರೀರಾಮ್. ಎಲ್ಲ ಹಿಂದೂಗಳಿಗೂ ಅಭಿನಂದನೆಗಳು ಎಂದು ಬರೆದುಕೊಂಡಿದ್ದರು.

2012ರ ಇಂಗ್ಲಿಷ್‌ ಕೌಂಟಿ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ಸ್ಪಾಟ್‌ ಫಿಕ್ಸಿಂಗ್‌ ನಡೆಸಿದ್ದು ಸಾಬೀತಾದ ಕಾರಣ ದಾನಿಶ್‌ ಕನೇರಿಯಾ ಅವರಿಗೆ ಪಿಸಿಬಿ ಆಜೀವ ಕ್ರಿಕೆಟ್‌ ನಿಷೇಧ ವಿಧಿಸಿತ್ತು. ಪಾಕಿಸ್ತಾನದಲ್ಲಿ ಐತಿಹಾಸಿಕ ಹಿಂದೂ ದೇಗುಲಗಳನ್ನು ನೆಲಸಮ ಮಾಡುತ್ತಿರುವ ಬಗ್ಗೆಯೂ ಕನೇರಿಯಾ ಧ್ವನಿ ಎತ್ತಿದ್ದರು.

ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ಪ್ರತಿದಿನ ಲೆಕ್ಕವಿಲ್ಲದಷ್ಟು ಮತಾಂತರ, ಅಪಹರಣ, ಅತ್ಯಾಚಾರ, ಹತ್ಯೆ ಸೇರಿದಂತೆ ಅನೇಕ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಈ ಅನ್ಯಾಯದ ವಿರುದ್ಧ ವಿಶ್ವಾದ್ಯಂತ ಇರುವ ಹಿಂದೂಗಳು ಒಂದಾಗಿ ಹೋರಾಟ ನಡೆಸಬೇಕು ಎಂದು ಅವರು ಟ್ವೀಟ್‌ ಮೂಲಕ ಹಿಂದೊಮ್ಮೆ ಮನವಿ ಮಾಡಿದ್ದರು.

Exit mobile version