ಸ್ಯಾನ್ ಸಾಲ್ವಡಾರ್: ಅಮೆರಿಕದ ಎಲ್ ಸಾಲ್ವಡಾರ್ನ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಕನಿಷ್ಠ 12 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಈ ಪೈಕಿ ಹಲವ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಗೊಂಡಿರುವ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಇಲ್ಲಿನ ಸ್ಥಳೀಯ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಅಲಿಯಾಂಜಾ ಮತ್ತು ಎಫ್ ಎಎಸ್ ತಂಡಗಳ ನಡುವಿನ ಪಂದ್ಯದ ಎಲ್ಲ ಟಿಕೆಟ್ಗಳು ಮಾರಾಟವಾಗಿ ಸ್ಟೇಡಿಯಂನ ಸೀಟ್ಗಳು ಭರ್ತಿಯಾಗಿತ್ತು. ಆದರೆ ಸ್ಥಳೀಯ ಅಭಿಮಾನಿಗಳು ಸ್ಟೇಡಿಯಂನ ಗೇಟ್ ಹಾರಿ ಮೈದಾನಕ್ಕೆ ಪ್ರವೇಶಿಸಿಲು ಪ್ರಯತ್ನ ಪಟ್ಟಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಘಟನೆಯ ಆರಂಭದಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಆದರೆ ಇದೀಗ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ Football | 133 ಮಂದಿಯನ್ನು ಬಲಿ ಪಡೆದ ಇಂಡೋನೇಷ್ಯಾದ ಫುಟ್ಬಾಲ್ ಸ್ಟೇಡಿಯಮ್ ನೆಲಸಮ
ಇಲ್ಲಿನ ಸ್ಥಳೀಯ ಮಾಧ್ಯಮಗಳು ಹಂಚಿಕೊಂಡ ತುಣುಕಿನಲ್ಲಿ, ಅಭಿಮಾನಿಗಳು ಕ್ರೀಡಾಂಗಣದ ಪ್ರವೇಶದ್ವಾರದ ಮೇಲೆ ಬ್ಯಾರಿಕೇಡ್‌ಗಳನ್ನು ಎಳೆಯಲು ಪ್ರಯತ್ನಿಸುತ್ತಿರುವುದನ್ನು ಕಂಡುಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಲ್ ಸಾಲ್ವಡೋರ್ನ ಆರೋಗ್ಯ ಸಚಿವ ಫ್ರಾನ್ಸಿಸ್ಕೊ ಅಲಾಬಿ ತಿಳಿಸಿದ್ದಾರೆ.