ರಾಂಚಿ: ಭಾರತ ಮತ್ತು ನ್ಯೂಜಿಲ್ಯಾಂಡ್(IND VS NZ) ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು (ಶುಕ್ರವಾರ, ಜನವರಿ 27) ರಾಂಚಿಯಲ್ಲಿ ನಡೆಯಲಿದೆ. ಉಭಯ ತಂಡಗಳು ಈಗಾಗಲೇ ಮೈದಾನದಲ್ಲಿ ಅಭ್ಯಾಸ ಆರಂಭಿಸಿವೆ. ಆದರೆ ಈ ಪಂದ್ಯದಲ್ಲಿ ಪೃಥ್ವಿ ಶಾ(Prithvi Shaw) ಆಡುವುದಿಲ್ಲ ಎಂದು ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, ಶುಭಮನ್ ಗಿಲ್(shubman gill) ಈಗಾಗಲೇ ಟಿ20 ತಂಡದ ಭಾಗವಾಗಿರುವುದರಿಂದ ಪೃಥ್ವಿ ಶಾ ಅವರು ಅವಕಾಶಕ್ಕಾಗಿ ಕಾಯಬೇಕಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ INDvsNZ T20 : ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ಗೆ ಗಾಯ, ಟೂರ್ನಿಯಿಂದ ಔಟ್
ಶುಭಮನ್ ಗಿಲ್ ಏಕ ದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವುದರಿಂದ ರಾಂಚಿಯಲ್ಲಿ ಕಿವೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಅವರೊಂದಿಗೆ ಇನಿಂಗ್ಸ್ ಆರಂಭಿಸಲಿದ್ದಾರೆ. ಗಿಲ್ ಈಗಾಗಲೇ ಭಾರತ ತಂಡದಲ್ಲಿ ಸಾಕಷ್ಟು ಸಮಯದಿಂದ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಬಲಗೈ ಬ್ಯಾಟರ್ ತನ್ನ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ನಿರೀಕ್ಷೆಗೆ ತಕ್ಕಂತೆ ಆಡುತ್ತಿದ್ದಾರೆ. ಹೀಗಾಗಿ ಅವರು ಈ ಪಂದ್ಯದಲ್ಲಿಯೂ ಕಣಕ್ಕಿಳಿಯಲಿದ್ದಾರೆ ಎಂದು ಪಾಂಡ್ಯ ಖಚಿತಪಡಿಸಿದ್ದಾರೆ.