ನವದೆಹಲಿ: ಆಸ್ಟ್ರೇಲಿಯಾದ (Australia) ವಿರುದ್ಧ ಫೈನಲ್ ಪಂದ್ಯ (Final Match) ಸೋತ ಭಾರತೀಯ ಕ್ರಿಕೆಟ್ (Team India) ಆಟಗಾರರು ದುಃಖದಲ್ಲಿದ್ದರು. ಇದಕ್ಕೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಕೂಡ ಹೊರತಾಗಿರಲಿಲ್ಲ. ದುಃಖದಲ್ಲಿದ್ದ ವಿರಾಟ್ ಕೊಹ್ಲಿಯನ್ನು ಅವರ ಪತ್ನಿ ಅನುಷ್ಕಾ ಶರ್ಮಾ(Anushka Sharma) ಸಮಾಧಾನ ಮಾಡುತ್ತಿರುವ ಚಿತ್ರವು ಇದೀಗ ವೈರಲ್ ಆಗಿದೆ. ಅನುಷ್ಕಾ ಶರ್ಮಾ ತನ್ನ ಪತಿ ವಿರಾಟ್‌ನನ್ನು ಅಪ್ಪಿಕೊಂಡು ಸಾಂತ್ವನ ಮಾಡುತ್ತಿರುವುದನ್ನು ಚಿತ್ರದಲ್ಲಿ ಕಾಣಬಹುದು. ಮತ್ತೊಂದೆಡೆ, ಆಸ್ಟ್ರೇಲಿಯಾ ವಿರುದ್ದ ಸೋಲಿನ ಹೊರತಾಗಿಯೂ ಭಾರತವು ಇಡೀ ಟೂರ್ನಿಯಲ್ಲಿ ಆಡಿದ ಆಟವನ್ನು ಇಡೀ ದೇಶವೇ ಶ್ಲಾಘಿಸುತ್ತಿದೆ(ICC World Cup 2023).
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023ರ ಫೈನಲ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 6 ವಿಕೆಟ್‌ಗಳ ಸೋಲು ಅನುಭವಿಸಿದ ಬಳಿಕ, ಭಾರತೀಯ ಕ್ರಿಕೆಟ್ ತಂಡದ ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ನಿರಾಶೆಗೊಂಡಿದ್ದರು. ಪಂದ್ಯದ ಮುಕ್ತಾಯದ ನಂತರ ವಿರಾಟ್ ಅವರನ್ನು ಅನುಷ್ಕಾ ಅವರು ತಬ್ಬಿಕೊಂಡು ಸಾಂತ್ವನ ಮಾಡಿದ್ದಾರೆ. ಈ ಚಿತ್ರವು ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.
ಫೈನಲ್ ಪಂದ್ಯದಲ್ಲಿ ಸೋಲಿನಿಂದಾಗಿ ನಿರಾಸೆಗೊಂಡಿದ್ದ ವಿರಾಟ್ ಕೊಹ್ಲಿ ಅವರು ತಮ್ಮ ಹೆಂಡತಿ ಇರುವ ಸ್ಟ್ಯಾಂಡ್‌ನತ್ತ ಹೋಗುತ್ತಾರೆ. ಆಗ ಅನುಷ್ಕಾ ಶರ್ಮಾ ಅವರು ವಿರಾಟ್ ಅವರನ್ನು ತಬ್ಬಿಕೊಳ್ಳುತ್ತಾರೆ. ಭಾರತೀಯ ಕ್ರಿಕೆಟ್ ತಂಡವು ಐಸಿಸಿ ವರ್ಲ್ಡ್ ಕಪ್‌ನ ಫೈನಲ್ ಪಂದ್ಯದಲ್ಲಿ ತೀವ್ರ ನಿರಾಸಾದಾಯಕ ಪ್ರದರ್ಶನ ತೋರಿತು. ಅನುಷ್ಕಾ ಶರ್ಮಾ ಅವರು ಭಾರತೀಯ ತಂಡವನ್ನು ಬೆಂಬಲಿಸುವುದಕ್ಕಾಗಿ ಅಹಮದಾಬಾದ್‌ಗೆ ಆಗಮಿಸಿದ್ದರು.
Anushka Sharma hugging Virat Kohli after the loss in the final. [Sportstar]
— Johns. (@CricCrazyJohns) November 19, 2023
– This is painful. pic.twitter.com/dUYo7oAZAF
ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ವಿರಾಟ್ ಕೊಹ್ಲಿ
ವಿಶ್ವಕಪ್ ಆವೃತ್ತಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕಿಂಗ್ ಖ್ಯಾತಿಯ ವಿರಾಟ್ ಕೊಹ್ಲಿ (Virat Kohli) ಅವರು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಟೂರ್ನಿಯಲ್ಲಿ ಅವರು 11 ಪಂದ್ಯಗಳನ್ನು ಆಡಿ ಒಟ್ಟು 765 ರನ್ ಬಾರಿಸಿ ಅತ್ಯಧಿಕ ರನ್ಗಳಿಸಿದ ಆಟಗಾರ ಎನಿಸಿಕೊಂಡರು. ಅವರ ಈ ಸಾಧನೆಗೆ ಈ ಪ್ರಶಸ್ತಿ ಒಲಿದಿದೆ.
ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಬ್ಯಾಟಿಂಗ್ ವಿರಾಟ ದರ್ಶನ ತೋರಿದ ಕೊಹ್ಲಿ ಟೂರ್ನಿಯ ಟಾಪ್ ಸ್ಕೋರರ್ ಆಗಿ ಹೊರಮೊಮ್ಮಿದ್ದಾರೆ. ಅಲ್ಲದೆ ತಮ್ಮ ಹೆಸರಿಗೆ ನಾನಾ ದಾಖಲೆಗಳನ್ನೂ ಬರೆಸಿಕೊಂಡಿದ್ದಾರೆ. ಆಸೀಸ್ ವಿರುದ್ಧದ ಮೊದಲ ಲೀಗ್ ಪಂದ್ಯದಲ್ಲಿ ಕುಸಿದಿದ್ದ ಭಾರತ ತಂಡಕ್ಕೆ ಆಸರೆಯಾದ ಕೊಹ್ಲಿ 85 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದರು. ಅಫಘಾನಿಸ್ತಾನ ವಿರುದ್ಧ ನಡೆದ 2ನೇ ಪಂದ್ಯದಲ್ಲಿ ಕೊಹ್ಲಿ 55 ರನ್ ಬಾರಿಸಿದ್ದರು. ಬಾಂಗ್ಲಾ ವಿರುದ್ಧ ಅಮೋಘ ಪ್ರದರ್ಶನ ನೀಡಿದ ಕೊಹ್ಲಿ 97 ಎಸೆತಗಳಲ್ಲಿ 103 ರನ್ ಗಳಿಸಿದರು.
ನ್ಯೂಜಿಲ್ಯಾಂಡ್ ವಿರುದ್ಧ 95 ರನ್ ಗಳಿಸಿ ಐದು ರನ್‌ನಿಂದ ಶತಕ ವಂಚಿತರಾದರು. ಶ್ರೀಲಂಕಾ ವಿರುದ್ಧ 88, ದಕ್ಷಿಣ ಆಫ್ರಿಕಾ ವಿರುದ್ಧ 101 ರನ್ ಗಳಿಸಿ ಸಚಿನ್ ಅವರ 49ನೇ ಶತಕವನ್ನು ಸರಿಗಟ್ಟಿದ್ದರು. ನೆದರ್ಲೆಂಡ್ಸ್ ವಿರುದ್ಧ 51 ರನ್ ಗಳಿಸಿದರು. ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್‌ನಲ್ಲಿ 117 ರನ್ ಗಳಿಸಿದ ಕೊಹ್ಲಿ, ಸಚಿನ್ ಅವರ ದಾಖಲೆ ಮುರಿದು 50ನೇ ಸೆಂಚುರಿ ಬಾರಿಸಿ ದಾಖಲೆ ನಿರ್ಮಿಸಿದರು. ಫೈನಲ್ ಪಂದ್ಯದಲ್ಲಿ 54 ರನ್ ಬಾರಿಸಿದರು. ಈ ಬಾರಿ ಆಡಿದ 11 ಪಂದ್ಯಗಳಲ್ಲಿ 765 ರನ್ ಬಾರಿಸಿದರು.
ಆಸೀಸ್ ವಿರುದ್ಧ ಇಂದು ನಡೆದ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು 63 ಎಸೆತ ಎದುರಿಸಿ ಕೇವಲ 4 ಬೌಂಡರಿ ಬಾರಿಸಿ 54 ರನ್ ಗಳಿಸಿದರು. ಒಂದೊಮ್ಮೆ ಇವರು ಈ ಪ್ರದರ್ಶನ ತೋರದೇ ಹೋಗಿದ್ದರೆ ಭಾರತತ ಸ್ಥಿತಿ ಇನ್ನಷ್ಟು ಚಿಂತಾಜನಕವಾಗಿರುತ್ತಿತ್ತು. 200 ರನ್ ಗಟಿ ದಾಟುವುದು ಅಸಾಧ್ಯವಾಗಿರುತ್ತಿತ್ತು.
ಈ ಸುದ್ದಿಯನ್ನೂ ಓದಿ: ICC World Cup 2023 : ವಿಶ್ವ ಕಪ್ ಫೈನಲ್ ಪಂದ್ಯಗಳಲ್ಲಿ ದಾಖಲಾದ ಗರಿಷ್ಠ ರನ್ ಎಷ್ಟು?