IND vs ENG 5th Test: ಅಂತಿಮ ಟೆಸ್ಟ್​ನಲ್ಲಿ ಹಲವು ದಾಖಲೆ ಮೇಲೆ ಕಣ್ಣಿಟ್ಟ ಯಶಸ್ವಿ ಜೈಸ್ವಾಲ್ - Vistara News

ಕ್ರಿಕೆಟ್

IND vs ENG 5th Test: ಅಂತಿಮ ಟೆಸ್ಟ್​ನಲ್ಲಿ ಹಲವು ದಾಖಲೆ ಮೇಲೆ ಕಣ್ಣಿಟ್ಟ ಯಶಸ್ವಿ ಜೈಸ್ವಾಲ್

ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್​ ವಿರುದ್ಧ ಈಗಾಗಲೇ ಆಡಿದ 4 ಪಂದ್ಯಗಳಲ್ಲಿ 2 ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಅಂತಿಮ ಟೆಸ್ಟ್‌ ಪಂದ್ಯದಲ್ಲಿ 120 ರನ್ ಬಾರಿಸಿದರೆ ಗವಾಸ್ಕರ್ ಅವರ ಸಾರ್ವಕಾಲಿಕ ದಾಖಲೆಯೊಂದು ಪತನಗೊಳ್ಳಲಿದೆ.

VISTARANEWS.COM


on

Yashasvi Jaiswal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧರ್ಮಶಾಲಾ: ಇಲ್ಲಿ ನಡೆಯುವ ಇಂಗ್ಲೆಂಡ್(IND vs ENG 5th Test)​ ವಿರುದ್ಧದ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡದ ಯುವ ಆರಂಭಿಕ ಬ್ಯಾಟರ್​ ಯಶಸ್ವಿ ಜೈಸ್ವಾಲ್(Yashasvi Jaiswal)​ ​ಅವರು ಹಲವು ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. ಇದರಲ್ಲಿ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ಮತ್ತು ದಿಗ್ಗಜ ಆಟಗಾರ ಸುನೀಲ್​ ಗವಾಸ್ಕರ್(Sunil Gavaskar)​ ದಾಖಲೆಯೂ ಕೂಡ ಒಳಗೊಂಡಿದೆ. ಮಾರ್ಚ್​ 7ರಿಂದ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ಭಾರತದ ಭವಿಷ್ಯದ ಕ್ರಿಕೆಟ್​ ತಾರೆ ಎಂದು ಗುರುತಿಸಲ್ಪಟ್ಟಿರುವ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್​ ವಿರುದ್ಧ ಈಗಾಗಲೇ ಆಡಿದ 4 ಪಂದ್ಯಗಳಲ್ಲಿ 2 ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಅಂತಿಮ ಟೆಸ್ಟ್‌ ಪಂದ್ಯದಲ್ಲಿ 120 ರನ್ ಬಾರಿಸಿದರೆ ಗವಾಸ್ಕರ್ ಅವರ ಸಾರ್ವಕಾಲಿಕ ದಾಖಲೆಯೊಂದು ಪತನಗೊಳ್ಳಲಿದೆ. ಟೆಸ್ಟ್​ ಸರಣಿಯೊಂದರಲ್ಲಿ ಅತ್ಯಧಿಕ ರನ್​ ಗಳಿಸಿದ ಭಾರತೀಯ ದಾಖಲೆ ಸುನೀಲ್​ ಗವಾಸ್ಕರ್​ ಹೆಸರಿನಲ್ಲಿದೆ. ಗವಾಸ್ಕರ್ ಅವರು 1970ರಲ್ಲಿ ವೆಸ್ಟ್​ ಇಂಡೀಸ್​ ವಿರುದ್ಧದ ಸರಣಿಯಲ್ಲಿ 774 ರನ್​ ಬಾರಿಸಿದ್ದರು. ಇದು ಸದ್ಯ ದಾಖಲೆಯಾಗಿಯೇ ಉಳಿದಿದೆ. ಈ ದಾಖಲೆಯನ್ನು ಮುರಿಯಲು ಜೈಸ್ವಾಲ್​ಗೆ ಸುವರ್ಣಾವಕಾಶವಿದೆ.​

ಗವಾಸ್ಕರ್​ ಮಾತ್ರವಲ್ಲದೆ ವಿರಾಟ್​ ಕೊಹ್ಲಿಯ ದಾಖಲೆಯೂ ಕೂಡ ಪತನಗೊಳ್ಳಲಿದೆ. ವಿರಾಟ್​ ಕೊಹ್ಲಿ 2014ರಲ್ಲಿ ಇಂಗ್ಲೆಂಡ್​ ವಿರುದ್ಧದ ಸರಣಿಯಲ್ಲಿ 692 ರನ್​ ಬಾರಿಸಿದ್ದರು. ಟೆಸ್ಟ್​ ಸರಣಿಯೊಂದರಲ್ಲಿ ಅತ್ಯಧಿಕ ರನ್​ ಗಳಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಅವರಿಗೆ 2ನೇ ಸ್ಥಾನ. ಜೈಸ್ವಾಲ್​ 38 ರನ್​ ಬಾರಿಸಿದರೆ ಕೊಹ್ಲಿಯ ದಾಖಲೆ ಪತನಗೊಳ್ಳಲಿದೆ. ಸದ್ಯ ಜೈಸ್ವಾಲ್​ ನಾಲ್ಕು ಟೆಸ್ಟ್​ ಪಂದ್ಯ ಆಡಿ 655*ರನ್​ ಬಾರಿಸಿದ್ದಾರೆ.

ಇದನ್ನೂ ಓದಿ IND vs ENG 5th Test: ಕೊಹ್ಲಿ ಟೆಸ್ಟ್​ ಆಡದಿರುವುದು ನಾಚಿಕೆಗೇಡಿನ ಸಂಗತಿ; ಆ್ಯಂಡರ್ಸನ್

ಐಸಿಸಿ ಕಳೆದ ವಾರ ಪ್ರಕಟಿಸಿದ ನೂತನ ಟೆಸ್ಟ್​ ಬ್ಯಾಟಿಂಗ್​(ICC Test Rankings) ಶ್ರೇಯಾಂಕದಲ್ಲಿ ಜೈಸ್ವಾಲ್​ ಮತ್ತೆ ಮೂರು ಸ್ಥಾನಗಳ ಜಿಗಿತ ಕಂಡು 12ನೇ ಸ್ಥಾನ ಪಡೆದಿದ್ದಾರೆ. ಇದಕ್ಕೂ ಮುನ್ನ ಅವರು 14 ಸ್ಥಾನಗಳ ಪ್ರಗತಿ ಸಾಧಿಸಿ 15ನೇ ಸ್ಥಾನ ಅಲಂಕರಿಸಿದ್ದರು. ಸದ್ಯ ಅವರು 727 ರೇಟಿಂಗ್​ ಅಂಕದೊಂದಿಗೆ 12ನೇ ಸ್ಥಾನ ಪಡೆದಿದ್ದಾರೆ. ಅಂತಿಮ ಟೆಸ್ಟ್​ನಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದರೆ ಅಗ್ರ 10ರೊಳಗೆ ಸ್ಥಾನ ಪಡೆಯುವ ಅವಕಾಶವಿದೆ.

ಧರ್ಮಾಶಾಲಾ ತಲುಪಿದ ಇತ್ತಂಡಗಳು


ಅಂತಿಮ ಟೆಸ್ಟ್​ ಪಂದ್ಯಕ್ಕಾಗಿ ಉಭಯ ತಂಡಗಳು ಕೂಡ ಭಾನುವಾರ ಧರ್ಮಶಾಲಾ ತಲುಪಿದೆ. ಇಲ್ಲಿ ನಡೆಯುತ್ತಿರುವ 2 ಟೆಸ್ಟ್‌ ಪಂದ್ಯ ಇದಾಗಿದೆ. ಇಲ್ಲಿ ಮೊದಲ ಟೆಸ್ಟ್​ ನಡೆದದ್ದು 2017ರಲ್ಲಿ. ಭಾರತ-ಆಸ್ಟೇಲಿಯಾ ನಡುವೆ. ಹಿಮಾಲಯ ಶ್ರೇಣಿಯಲ್ಲಿ ತಲೆಯೆತ್ತಿ ನಿಂತಿರುವ ಈ ಸ್ಟೇಡಿಯಂ ಪ್ರಕೃತಿಗೆ ತೆರೆದುಕೊಂಡಿರುವುದರಿಂದ ಇಲ್ಲಿ ಸದಾ ಗಾಳಿ ಬೀಸುತ್ತಲೇ ಇರುತ್ತದೆ. ಈ ಕಾರಣಕ್ಕಾಗಿಯೇ ಇದು ಪೇಸ್‌ ಬೌಲಿಂಗ್‌ ಸ್ವರ್ಗವೆನಿಸಿದೆ.

ಉಭಯ ತಂಡಗಳ ಆಟಗಾರರು ಧರ್ಮಶಾಲಾ ತಲುಪಿದರೂ ಕೂಡ ಒಂದು ದಿನದ ವಿಶ್ರಾಂತಿ ಪಡೆದು ಸೋಮವಾರದಿಂದ ಅಭ್ಯಾಸದಲ್ಲಿ ತೊಡಗಿಕೊಳ್ಳಲಿದ್ದಾರೆ. ಭಾರತ ತಂಡದ ಸ್ಪಿನ್ನರ್​ ಆರ್​. ಅಶ್ವಿನ್​ ಅವರಿಗೆ ಈ ಪಂದ್ಯ 100ನೇ ಟೆಸ್ಟ್​ ಪಂದ್ಯವಾದ್ದರಿಂದ ಅವರ ಪಾಲಿಗೆ ಸ್ಮರಣೀಯ ಪಂದ್ಯವಾಗಲಿದೆ. ಈಗಾಗಲೇ ಅವರು 500 ವಿಕೆಟ್​ಗಳ ಕ್ಲಬ್​ಗೆ ಸೇರ್ಪಡೆಗೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Yuzvendra Chahal: ಐಪಿಎಲ್​ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸರ್​ ಹೊಡಿಸಿಕೊಂಡ ಬೌಲರ್​ಗಳ ಪಟ್ಟಿಯಲ್ಲಿ ಚಹಲ್​ಗೆ(30)ಗೆ ಜಂಟಿ 2ನೇ ಸ್ಥಾನ. ಮತೋರ್ವ ಆಟಗಾರ ವನಿಂದು ಹಸರಂಗ(30). ಮೊಹಮ್ಮದ್​ ಸಿರಾಜ್​(31) ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

VISTARANEWS.COM


on

Yuzvendra Chahal
Koo

ಚೆನ್ನೈ: ಟೀಮ್​ ಇಂಡಿಯಾದ ಅನುಭವಿ ಸ್ಪಿನ್ನರ್​ ಯಜುವೇಂದ್ರ ಚಹಲ್(Yuzvendra Chahal)​ ಅವರು ಐಪಿಎಲ್​(IPL 2024)ನಲ್ಲಿ ಕೆಟ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸರ್​ ಹೊಡೆಸಿಕೊಂಡ ಮೊದಲ ಬೌಲರ್​ ಎನಿಸಿಕೊಂಡಿದ್ದಾರೆ.

ಸನ್​ರೈಸರ್ಸ್​ ಹೈದರಾಬಾದ್​​ ವಿರುದ್ಧದ ಕ್ವಾಲಿಫೈಯರ್​-2 ಪಂದ್ಯದಲ್ಲಿ 4 ಓವರ್​ ಎಸೆತ ಚಹಲ್​ 34 ರನ್​ ಬಿಟ್ಟುಕೊಟ್ಟು ವಿಕೆಟ್​ ಲೆಸ್​ ಎನಿಸಿಕೊಂಡರು. ಹೈದರಾಬಾದ್​ ಬ್ಯಾಟರ್​ಗಳಿಂದ ಸಿಕ್ಸರ್​ ಚಚ್ಚಿಸಿಕೊಂಡ ಚಹಲ್​(224 ಸಿಕ್ಸರ್​) ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸರ್​ ಚಚ್ಚಿಸಿಕೊಂಡ ಬೌಲರ್​ ಎನ್ನುವ ಕೆಟ್ಟ ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಪಿಯೂಷ್ ಚಾವ್ಲಾ(222) ಹೆಸರಿನಲ್ಲಿತ್ತು.

ಐಪಿಎಲ್​ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸರ್​ ಹೊಡಿಸಿಕೊಂಡ ಬೌಲರ್​ಗಳ ಪಟ್ಟಿಯಲ್ಲಿ ಚಹಲ್​ಗೆ(30)ಗೆ ಜಂಟಿ 2ನೇ ಸ್ಥಾನ. ಮತೋರ್ವ ಆಟಗಾರ ವನಿಂದು ಹಸರಂಗ(30). ಮೊಹಮ್ಮದ್​ ಸಿರಾಜ್​(31) ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಹೈದರಾಬಾದ್​​ ವಿರುದ್ಧ ವಿಕೆಟ್​ ಕೀಳಲಿದ್ದರೂ ಕೂಡ ಚಹಲ್​ 3 ಅಮೋಘ ಕ್ಯಾಚ್​ ಹಿಡಿದು ಮಿಂಚಿದರು.

ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸರ್​ ಹೊಡೆಸಿಕೊಂಡ ಬೌಲರ್​


ಮೊಹಮ್ಮದ್​ ಸಿರಾಜ್​ 31 (2022ರಲ್ಲಿ
)

ಯಜುವೇಂದ್ರ ಚಹಲ್​-30 (2024ರಲ್ಲಿ)

ವನಿಂದು ಹಸರಂಗ-30 (2022ರಲ್ಲಿ)

ಡ್ವೇನ್​ ಬ್ರಾವೊ-29 (2018ರಲ್ಲಿ)

ತುಷಾರ್​ ದೇಶ್​ಪಾಂಡೆ-28(2023ರಲ್ಲಿ)

ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸರ್​ ಚಚ್ಚಿಸಿಕೊಂಡ ಬೌಲರ್​


ಯಜುವೇಂದ್ರ ಚಹಲ್​-224 ಸಿಕ್ಸರ್​

ಪಿಯೂಷ್ ಚಾವ್ಲಾ 222 ಸಿಕ್ಸರ್​

ರವೀಂದ್ರ ಜಡೇಜಾ-206 ಸಿಕ್ಸರ್​

ಆರ್​ ಅಶ್ವಿನ್​- 202 ಸಿಕ್ಸರ್​

ಚಹಲ್​ ಅವರು ಐಪಿಎಲ್​ನಲ್ಲಿ ಒಟ್ಟು 205 ವಿಕೆಟ್​ ಕಿತ್ತ ಸಾಧನೆ ಮಾಡಿ ಅತ್ಯಧಿಕ ವಿಕೆಟ್​ ಸರದಾರ ಎನಿಸಿಕೊಂಡಿದ್ದಾರೆ. ಜೂನ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಕೂಡ ಪಡೆದಿದ್ದಾರೆ. ಚಹಲ್​ ಪತ್ನಿ ಧನಶ್ರೀ ವರ್ಮಾ(Dhanashree Verma) ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ಪತಿಗೆ ಶುಭ ಕೋರಿದ್ದರು.‘ಕಮ್​ ಆನ್ ಯುಜಿ​… ಹಿ ಈಸ್ ಬ್ಯಾಕ್ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

ಯಜುವೇಂದ್ರ ಚಹಲ್​ ಮತ್ತು ಧನಶ್ರೀ ವರ್ಮಾ ಮಧ್ಯೆ ಎಲ್ಲವೂ ಸರಿಯಿಲ್ಲ. ಶೀಘ್ರದಲ್ಲೇ ಈ ಜೋಡಿ ದೂರವಾಗಲಿದ್ದಾರೆ ಎಂದು ಹಲವು ಬಾರಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿತ್ತು. ಆದರೆ ಈ ಜೋಡಿ ಮಾತ್ರ ಈ ಮಾತಿಗೆ ಕ್ಯಾರೆ ಎನ್ನದೆ ನಮ್ಮ ಸಂಸಾರದ ಮಧ್ಯೆ ಯಾವುದೇ ಬಿರುಕು ಮೂಡಿಲ್ಲ ಎಂದು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಇಬ್ಬರೂ ಕೂಡ ಹಲವು ಬಾರಿ ವಿದೇಶ ಪ್ರವಾಸದಲ್ಲಿ ಜಾಲಿ ಮೂಡ್​ನಲ್ಲಿರುವ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇತ್ತೀಚೆಗೆ 150ನೇ ಐಪಿಎಲ್​ ಪಂದ್ಯವನ್ನಾಡಿದ ಚಹಲ್​ಗೆ ಪತ್ನಿ ಭಾವುಕ ವಿಡಿಯೊ ಸಂದೇಶದ ಮೂಲಕ ಹಾರೈಸಿದ್ದರು. “ಹೇ ಯುಜಿ, ನಿಮ್ಮ 150ನೇ ಐಪಿಎಲ್ ಪಂದ್ಯಕ್ಕೆ ಅಭಿನಂದನೆಗಳು. ನಿವು ಈ ಹಿಂದೆ ಆಡಿದ ತಂಡಕ್ಕೆ ಮತ್ತು ಈಗ ಆಡುತ್ತಿರುವ ರಾಜಸ್ಥಾನ್ ರಾಯಲ್ಸ್‌ಗೆ ನೀವು ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಬಗ್ಗೆ ನನಗೆ ಯಾವತ್ತೂ ಹೆಮ್ಮೆ ಇದೆ. ನೀವು ನಿಮ್ಮ ಆಟವನ್ನು ಹೇಗೆ ಆಡುತ್ತೀರಿ ಮತ್ತು ಪ್ರತಿ ಬಾರಿ ನೀವು ಕಮ್​ಬ್ಯಾಕ್​ ಮಾಡುವ ರೀತಿ ನಿಜಕ್ಕೂ ಮೆಚ್ಚಲೇ ಬೇಕು. ಯಾವುದೇ ಪಂದ್ಯ ಒತ್ತಡದಲ್ಲಿದ್ದಾಗಲೆಲ್ಲಾ ವಿಕೆಟ್​ ತೆಗೆಯಬಲ್ಲ ಬೌಲರ್​ ನೀವಾಗಿದ್ದೀರಿ. ನಾನು ನಿಮ್ಮ ದೊಡ್ಡ ಚೀರ್‌ಲೀಡರ್ ಮತ್ತು ನಾನು ಯಾವಾಗಲೂ 100 ಪ್ರತಿಶತದಷ್ಟು ನಿಮ್ಮನ್ನು ಬೆಂಬಲಿಸುತ್ತೇನೆ. ನಿಮ್ಮ 150 ನೇ ಐಪಿಎಲ್ ಪಂದ್ಯವನ್ನು ಆನಂದಿಸಿ” ಎಂದು ಶುಭ ಹಾರೈಸಿದ್ದರು. ವಿಡಿಯೊವನ್ನು ರಾಜಸ್ಥಾನ್​ ರಾಯಲ್ಸ್(Rajasthan Royals)​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿತ್ತು.

Continue Reading

ಕ್ರಿಕೆಟ್

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Sara Tendulkar: ಸಚಿನ್ ತೆಂಡೂಲ್ಕರ್(Sachin Tendulkar) ಅವರ ಮಗಳು ಸಾರಾ ತೆಂಡೂಲ್ಕರ್(Sara Tendulkar) ಲಂಡನ್ ಯೂನಿವರ್ಸಿಟಿ(UCL, London) ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ(Sara Tendulkar completed post-graduation).

VISTARANEWS.COM


on

Sara Tendulkar
Koo

ಲಂಡನ್​: ಭಾರತದ ಕ್ರಿಕೆಟ್​ ತಂಡದ ಮಾಜಿ ಆಟಗಾರ, ದಿಗ್ಗಜ ಸಚಿನ್ ತೆಂಡೂಲ್ಕರ್(Sachin Tendulkar) ಅವರ ಮಗಳು ಸಾರಾ ತೆಂಡೂಲ್ಕರ್(Sara Tendulkar) ಲಂಡನ್ ಯೂನಿವರ್ಸಿಟಿ(UCL, London) ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ(Sara Tendulkar completed post-graduation). ಮಗಳು ಎಲ್ಲಾ ಕಠಿಣ ಪರಿಶ್ರಮವನ್ನು ಹಾಕಿ ದೊಡ್ಡ ಮೈಲಿಗಲ್ಲನ್ನು ಪೂರ್ಣಗೊಳಿಸಿದ್ದಕ್ಕಾಗಿ ಸಚಿನ್ ಭಾವುಕ ಸಂದೇಶದ ಮೂಲಕ ಶ್ಲಾಘಿಸಿದ್ದಾರೆ.

ಟ್ವಿಟರ್​ ಎಕ್ಸ್​ನಲ್ಲಿ ಮಗಳ ಸಾಧನೆ ಬಗ್ಗೆ ಬರೆದುಕೊಂಡಿರುವ ಸಚಿನ್​, “ಇದೊಂದು ಸುಂದರ ದಿನ. ನಮ್ಮ ಮಗಳು ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್‌ನಲ್ಲಿ ಯುಸಿಎಲ್‌ನ ಮೆಡಿಸಿನ್ ವಿಭಾಗದಿಂದ ಡಿಸ್ಟಿಂಕ್ಷನ್‌ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ದಿನ. ಪೋಷಕರಾಗಿ, ನೀನು ವರ್ಷಗಳಿಂದ ಮಾಡಿದ ಎಲ್ಲಾ ಕೆಲಸಗಳನ್ನು ನೋಡಿದ್ದಕ್ಕಾಗಿ ನಾವು ತುಂಬಾ ಹೆಮ್ಮೆಪಡುತ್ತೇವೆ. ಇಲ್ಲಿಗೆ ಬರುವುದು ಸುಲಭವಲ್ಲ” ಎಂದು ಬರೆದುಕೊಂಡಿದ್ದಾರೆ. ಸಾರಾ ಲಂಡನ್ ಯೂನಿವರ್ಸಿಟಿಯ ಘಟಿಕೋತ್ಸದಲ್ಲಿ ಪದವಿ ಸ್ವೀಕರಿಸಿದ ಫೋಟೊ, ವಿಡಿಯೊ ಮತ್ತು ತಾಯಿಯೊಂದಿಗೆ ಇರುವ ಫೋಟೊವನ್ನು ಸಚಿನ್​ ಹಂಚಿಕೊಂಡಿದ್ದಾರೆ.

ಸಾರಾ ಕೂಡ ತಾನು ಪದವಿ ಪಡೆದ ದಿನದ ತುಣುಕುಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್​ ಸೇರಿ ಸಚಿನ್​ ಅವರ ಆಪ್ತರು ಸಾರಾಗೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ Sara Tendulkar: ತಮ್ಮ ಹೆಸರಿನ ಪರೋಡಿ ಖಾತೆ ಮುಚ್ಚಲು ಎಕ್ಸ್‌ಗೆ ಸಾರಾ ತೆಂಡುಲ್ಕರ್ ಆಗ್ರಹ!

ಗಿಲ್​ ಜತೆ ಡೇಟಿಂಗ್​?


ಸಾರಾ ತೆಂಡೂಲ್ಕರ್(Sara Tendulkar) ಅವರು ಟೀಮ್​ ಇಂಡಿಯಾದ ಯುವ ಬ್ಯಾಟರ್​ ಶುಭಮನ್​ ಗಿಲ್(Shubman Gill) ಜತೆ​ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಆಗಾಗ ಮುನ್ನಲೆಗೆ ಬರುತ್ತಲೇ ಇರುತ್ತದೆ. ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ವೇಳೆ ಗಿಲ್​ ಪಂದ್ಯ ವೀಕ್ಷಿಸಲೆಂದೇ ಸಾರಾ ಕೂಡ ಸ್ಟೇಡಿಯಂಗೆ ಬರುತ್ತಿದ್ದರು. ಅಲ್ಲದೆ ಗಿಲ್​ ಸಾಧನೆಗೆ ಗ್ಯಾಲರಿಯಲ್ಲಿ ಎದ್ದು ನಿಂತು ಚಪ್ಪಾಳೆ ತಟ್ಟಿ ಪ್ರಶಂಸಿಸಿದ್ದ ವಿಡಿಯೊ ಮತ್ತು ಫೋಟೊಗಳು ವೈರಲ್​ ಆಗಿತ್ತು. ಸಾರಾ ಮತ್ತು ಗಿಲ್​ ತಂಗಿ ಜತೆಯಾಗಿ ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದ ವಿಡಿಯೊ ಕೂಡ ವೈರಲ್(​Viral Video) ಆಗಿತ್ತು. ಆದರೂ, ಈ ಜೋಡಿ ಡೇಟಿಂಗ್​ ಬಗ್ಗೆ ಎಲ್ಲಿಯೂ ಅಧಿಕೃತವಾಗಿ ತುಟಿ ಬಿಚ್ಚಿಲ್ಲ!

ಸಾರಾ ತೆಂಡೂಲ್ಕರ್ ಮತ್ತು ಗಿಲ್ ಡೇಟಿಂಗ್ ಸುದ್ದಿ ಕಳೆದ ಒಂದು ವರ್ಷದಿಂದ ಜಗತ್ತು ಸುತ್ತುತ್ತಿದೆ. ಆದಾಗ್ಯೂ, ಇಬ್ಬರೂ ವದಂತಿಯನ್ನು ನಿರಾಕರಿಸಿಲ್ಲ ಅಥವಾ ದೃಢಪಡಿಸಿಲ್ಲ. ಪಾಪರಾಜಿಗಳು ಇಬ್ಬರು ಸೆಲೆಬ್ರಿಟಿಗಳನ್ನು ಸಾರ್ವಜನಿಕವಾಗಿ ಸಾಕಷ್ಟು ಬಾರಿ ಪ್ರಶ್ನಿಸಿದ್ದಾರೆ. ಕಾಫಿ ವಿತ್ ಕರಣ್ ಸಂಚಿಕೆಯಲ್ಲಿ, ಸಾರಾ ಅಲಿ ಖಾನ್, ಗಿಲ್ ನನ್ನೊಂದಿಗೆ ಡೇಟಿಂಗ್ ಮಾಡುತ್ತಿಲ್ಲ. ಅವರು ಬೇರೆ ಸಾರಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳುವ ಅಭಿಮಾನಿಗಳ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದರು. ಕ್ರಿಕೆಟ್​ ಅಭಿಮಾನಿಗಳೇ ನೀವು ತಪ್ಪು ಹೇಳುತ್ತಿದ್ದೀರಿ. ಸಾರಾ ಕಾ ಸಾರಾ ದುನಿಯಾ ಗಲಾತ್ ಸಾರಾ ಕೆ ಪೀಚೆ ಪಡಾ ಹೈ (ಇಡೀ ಜಗತ್ತು ತಪ್ಪಾದ ಸಾರಾಳ ಹಿಂದೆ ಬಿದ್ದಿದೆ) ಎಂದು ಸಾರಾ ಅಲಿ ಖಾನ್ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು. ಈ ಮೂಲಕ ಗಿಲ್ ಅವರ ಕ್ರಸ್​ ಸಾರಾ ತೆಂಡೂಲ್ಕರ್​ ಎನ್ನುವ ಸುಳಿವು ನೀಡಿದ್ದರು.

Continue Reading

ಕ್ರೀಡೆ

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

CSK vs RCB: ರಾಯುಡು ಶುಕ್ರವಾರ ಟ್ವೀಟ್​ ಮಾಡಿ ಆರ್‌ಸಿಬಿ ತಂಡ ಇಷ್ಟು ವರ್ಷ ಟ್ರೋಫಿ ಗೆಲ್ಲದೇ ಇರುವುದಕ್ಕೆ ವಿರಾಟ್‌ ಕೊಹ್ಲಿ ಮತ್ತು ತಂಡದ ಮಾಲೀಕರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

CSK vs RC
Koo

ಹೈದರಾಬಾದ್: ಬುಧವಾರ ನಡೆದಿದ್ದ ರಾಜಸ್ತಾನ ವಿರುದ್ಧದ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದ ಅವಮಾನಕ್ಕೆ ಸಿಲುಕಿತ್ತು. ಆರ್​ಸಿಬಿ ಸೋಲು ಕಾಣುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು(Ambati Rayudu) ಆರ್​ಸಿಬಿ(CSK vs RCB) ತಂಡವನ್ನು ಟ್ರೋಲ್​ ಮಾಡಿದ್ದರು. ಇದೀಗ ಮತ್ತೆ ನಾಲಿಗೆ ಹರಿಬಿಟ್ಟಿದ್ದು, ವಿರಾಟ್ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

ಪ್ಲೇ ಆಫ್ಸ್‌ ರೇಸ್‌ನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಹೊರದಬ್ಬಿದ ದಿನದಿಂದಲೂ ಸಿಎಸ್‌ಕೆ ಮಾಜಿ ಬ್ಯಾಟರ್‌ ಅಂಬಾಟಿ ರಾಯುಡು ನಾನಾ ರೀತಿಯಲ್ಲಿ ಆರ್‌ಸಿಬಿ ತಂಡವನ್ನು ಟೀಕಿಸುತ್ತಾಲೇ ಬಂದಿದಿದ್ದರು. ಇವರಿಗೆ ಚೆನ್ನೈ ತಂಡದ ಅಭಿಮಾನಿಗಳು, ಹಾಲಿ ಆಟಗಾರರು ಕೂಡ ಉತ್ತಮ ಸಾಥ್​ ನೀಡಿದ್ದರು. ಇದೀಗ ರಾಯುಡು ಶುಕ್ರವಾರ ಟ್ವೀಟ್​ ಮಾಡಿ ಆರ್‌ಸಿಬಿ ತಂಡ ಇಷ್ಟು ವರ್ಷ ಟ್ರೋಫಿ ಗೆಲ್ಲದೇ ಇರುವುದಕ್ಕೆ ವಿರಾಟ್‌ ಕೊಹ್ಲಿ ಮತ್ತು ತಂಡದ ಮಾಲೀಕರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಆರ್‌ಸಿಬಿ ಬೆಂಬಲಿಗರನ್ನು ಕಂಡು ನನ್ನ ಹೃದಯ ಉಕ್ಕುತ್ತಿದೆ. ಹಲವು ವರ್ಷಗಳಿಂದ ಒಂದೇ ಉತ್ಸಾಹ ಮತ್ತು ಪ್ರೀತಿಯಿಂದ ಅವರು ತಮ್ಮ ತಂಡವನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ವ್ಯಕ್ತಿ ಪೂಜೆ ಮತ್ತು ವೈಯಕ್ತಿಕ ಮೈಲುಗಲ್ಲುಗಳಿಗಿಂತಲೂ ತಂಡಕ್ಕೆ ಟ್ರೋಫಿ ಗೆದ್ದುಕೊಡಬೇಕು ಎಂಬುದು ತಂಡದ ಉದ್ದೇಶ ಆಗಿದ್ದರೆ, ಈಗಾಗಲೇ ತಂಡ ಟ್ರೋಫಿ ಗೆಲ್ಲುತ್ತಿತ್ತು. ಆರ್‌ಸಿಬಿ ಕಳೆದ 17 ಆವೃತ್ತಿಯಲ್ಲಿ ಎಂತಹ ಅದ್ಭುತ ಆಟಗಾರರನ್ನು ಕೈಬಿಟ್ಟಿದೆ ಎಂಬುದನ್ನು ನೆನಪಿಸಿಕೊಳ್ಳಿ. ತಂಡಕ್ಕೆ ಮೊದಲ ಆದ್ಯತೆ ನೀಡುವ ಆಟಗಾರರನ್ನು ತರುವಂತೆ ಮ್ಯಾನೇಜ್ಮೆಂಟ್‌ ಮೇಲೆ ಒತ್ತಡ ಹಾಕಿ. ಮೆಗಾ ಆಕ್ಷನ್‌ ಮೂಲಕ ತಂಡ ಹೊಸ ಅಧ್ಯಾಯ ಬರೆಯಲಿ” ಎಂದು ರಾಯುಡು ಗೇಲಿ ಮಾಡಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಎಲಿಮಿನೇಟರ್‌ ಪಂದ್ಯದಲ್ಲಿ ಸೋತ ವೇಳೆ ರಾಯುಡು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೊ ಒಂದನ್ನು ಹಂಚಿಕೊಂಡು ‘5 ಬಾರಿ ಚಾಂಪಿಯನ್ಸ್‌ ಯಾರು ಎಂಬುದನ್ನು ಕೆಲವೊಮ್ಮೆ ನೆನಪಿಸಿಕೊಳ್ಳಬೇಕಾಗಿದೆ’ ಎಂದು ಬರೆದುಕೊಂಡಿದ್ದರು. ಈ ಪೋಸ್ಟ್ ಗೆ ಸಿಎಸ್‌ಕೆ ಆಟಗಾರರಾದ ದೀಪಕ್ ಚಹರ್‌, ಮತೀಶ ಪತಿರಣ ಮತ್ತು ತುಶಾರ್‌ ದೇಶಪಾಂಡೆ ಕಾಮೆಂಟ್‌ ಮಾಡುವ ಮೂಲಕ ಆರ್‌ಸಿಬಿ ತಂಡವನ್ನು ಗೇಲಿ ಮಾಡಿದ್ದರು.

ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ


“ಜೀವನದಲ್ಲಿ ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಾಗ ನಿಮ್ಮ ಬಾಯಿ ಮುಚ್ಚಿಕೊಂಡು ಮುಂದುವರಿಯಿರಿ. ನೀವು ಮಾಡುತ್ತಿರುವ ಯಾವುದೇ ಕೆಲಸದ ವೇಳೆ ಗದ್ದಲ ಮಾಡಿದಾಗ ಆ ಕೆಲಸವನ್ನು ಉತ್ತಮವಾಗಿ ಮಾಡಲು ಸಾಧ್ಯವಿಲ್ಲ. ಆರ್​​ಸಿಬಿ ಅಭಿಮಾನಿಗಳು ಅನಗತ್ಯ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದರು. ಅತಿಯಾಗಿ ತೋರಿಸುತ್ತಿದ್ದರು. ಅದಕ್ಕಾಗಿಯೇ ಅಶ್ವಿನ್ ಮುಂದಿನ ಪಂದ್ಯದಲ್ಲಿ ಆರ್​ಸಿಬಿಯ ಅಹಂ ಇಳಿಸಿದರು. ಅದಕ್ಕಾಗಿಯೇ ಕ್ರಿಕೆಟ್​​ನಲ್ಲಿ ನಿಮ್ಮ ಬಾಯಿ ಮುಚ್ಚಿ ಆಡಬೇಕು ಎಂದು ಹೇಳುವುದು ಎಂದು ಶ್ರೀಕಾಂತ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ ಟೂರ್ನಿಗೆ ಕಾಮೆಂಟರಿ ಬಳಗ ಘೋಷಿಸಿದ ಐಸಿಸಿ; ದಿನೇಶ್​ ಕಾರ್ತಿಕ್​ಗೂ ಸ್ಥಾನ

T20 World Cup 2024: ಬುಧವಾರವಷ್ಟೇ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದ ಆರ್​ಸಿಬಿ ತಂಡದ ದಿನೇಶ್​ ಕಾರ್ತಿಕ್​(Dinesh Karthik) ಅವರು ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ

VISTARANEWS.COM


on

T20 World Cup 2024
Koo

ದುಬೈ: 2 ದಿನಗಳ ಹಿಂದಷ್ಟೇ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದ ಆರ್​ಸಿಬಿ ತಂಡದ ದಿನೇಶ್​ ಕಾರ್ತಿಕ್​(Dinesh Karthik) ಅವರು ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಕರ್ತವ್ಯ ನಿರ್ವಹಿಸಲು ಸಜ್ಜಾಗಿದ್ದಾರೆ. ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯುವ ಮಿನಿ ವಿಶ್ವಕಪ್​ ಸಮರದಲ್ಲಿ ಕಾರ್ತಿಕ್​ ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಶುಕ್ರವಾರ ಐಸಿಸಿ ವೀಕ್ಷಕ ವಿವರಣೆಗಾರರ ಪಟ್ಟಿಯನ್ನು ಪ್ರಕಟಿಸಿತು. ಈ ಪಟ್ಟಿಯಲ್ಲಿ ದಿನೇಶ್​ ಕಾರ್ತಿಕ್​ ಸೇರಿ ಹಲವು ದೇಶಗಳ ತಾರಾ ಕಾಮೆಂಟೇಟರ್ ಕಾಣಿಸಿಕೊಂಡಿದ್ದಾರೆ.

ರವಿಶಾಸ್ತ್ರಿ, ನಾಸರ್ ಹುಸೇನ್, ಇಯಾನ್ ಸ್ಮಿತ್, ಮೆಲ್ ಜೋನ್ಸ್, ಹರ್ಷಾ ಭೋಗ್ಲೆ ಮತ್ತು ಇಯಾನ್ ಬಿಷಪ್ ಪ್ರಮುಖ ಆಕರ್ಷಣೆಯಾಗಿದ್ದಾರೆ. ಇವರ ಜತೆ ದಿನೇಶ್ ಕಾರ್ತಿಕ್, ಎಬೊನಿ ರೈನ್‌ಫೋರ್ಡ್-ಬ್ರೆನ್, ಸ್ಯಾಮುಯೆಲ್ ಬದ್ರಿ, ಕಾರ್ಲೊಸ್ ಬ್ರಾತ್ ವೇಟ್, ಸ್ಟೀವನ್​ ಸ್ಮಿತ್, ಫಿಂಚ್, ಲಿಸಾ ಸ್ತಾಲೆಕರ್ ಈ ಬಾರಿಯ ಕಾಮೆಂಟರಿ ಪ್ಯಾನೆಲ್​ನಲ್ಲಿ ಇರಲಿದ್ದಾರೆ.

ರಿಕಿ ಪಾಂಟಿಂಗ್, ಸುನಿಲ್ ಗವಾಸ್ಕರ್, ಮ್ಯಾಥ್ಯೂ ಹೇಡನ್, ರಮಿಜ್ ರಾಜಾ, ಇಯಾನ್ ಮಾರ್ಗನ್, ಟಾಮ್ ಮೂಡಿ ಮತ್ತು ವಾಸಿಮ್ ಅಕ್ರಮ್ ಪಂದ್ಯಕ್ಕೂ ಮುನ್ನ ನಡೆಯುವ ವಿಶ್ಲೇಷಣೆಯಲ್ಲಿ ತಂಡಗಳ ಮತ್ತು ಆಟಗಾರರ ಸಾಮರ್ಥದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಉಳಿದಂತೆ ಡೇಲ್ ಸ್ಟೇನ್​, ಗ್ರೇಮ್ ಸ್ಮಿತ್, ಮೈಕೆಲ್ ಅಥರ್ಟನ್, ವಕಾರ್ ಯೂನಿಸ್, ಸೈಮನ್ ಡೌಲ್, ಶಾನ್ ಪೊಲಾಕ್, ಕೇಟಿ ಮಾರ್ಟಿನ್, ಎಂಪುಮೆಲೆಲೊ ಎಂಬಾಂಗ್ವಾ, ನಟಾಲಿ ಜರ್ಮನೋಸ್, ಡ್ಯಾನಿ ಮಾರಿಸನ್, ಅಲಿಸನ್ ಮಿಚೆಲ್, ಅಲನ್ ವಿಲ್ಕಿನ್ಸ್, ಬ್ರಿಯಾನ್ ಮುರ್ಗಟ್ರಾಯ್ಡ್, ಮೈಕ್ ಹೇಸ್‌ಮನ್, ಇಯಾನ್ ವಾರ್ಡ್, ಅಥರ್ ಅಲಿ ಖಾನ್, ರಸೆಲ್ ಅರ್ನಾಲ್ಡ್, ನಿಯಾಲ್ ಒ’ಬ್ರಿಯಾನ್, ಕಾಸ್ ನೈಡೋ ಮತ್ತು ಡ್ಯಾರೆನ್ ಗಂಗಾ ಕೂಡ ಟಿ20 ವಿಶ್ವಕಪ್ ನಲ್ಲಿ ಕಾಮೆಂಟರಿ ಮಾಡಲಿದ್ದಾರೆ.

ಇದನ್ನೂ ಓದಿ T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

ರಾಜಸ್ಥಾನದದ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯವೇ ದಿನೇಶ್ ಕಾರ್ತಿಕ್(Dinesh Karthik)ಗೆ ವಿದಾಯ(dinesh karthik retirement) ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು. 17 ವರ್ಷಗಳ ಐಪಿಎಲ್​ ಜರ್ನಿಯಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ.

2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪದಾರ್ಪಣೆ ಮಾಡಿದ ಕಾರ್ತಿಕ್​ ಭಾರತ ಪರ 26 ಟೆಸ್ಟ್‌ಗಳನ್ನು ಆಡಿ 1025 ರನ್ ಗಳಿಸಿದ್ದಾರೆ. 57 ಕ್ಯಾಚ್‌ಗಳು ಮತ್ತು 6 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಅವರು ತಮ್ಮ ಕೊನೆಯ ಟೆಸ್ಟ್ ಆಡಿದ್ದು 2018 ರಲ್ಲಿ. ಏಕದಿನದಲ್ಲಿ 94 ಪಂದ್ಯಗಳನ್ನು ಆಡಿ 1752 ರನ್ ಗಳಿಸಿದ್ದಾರೆ. 64 ಕ್ಯಾಚ್‌ಗಳು ಮತ್ತು 7 ಸ್ಟಂಪಿಂಗ್‌ಗಳನ್ನು ನಿರ್ವಹಿಸಿದ್ದಾರೆ. 60 ಟಿ20 ಪಂದ್ಯಗಳಿಂದ 686 ರನ್ ಗಳಿಸಿ, 30 ಕ್ಯಾಚ್‌ಗಳು ಮತ್ತು 8 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ.

Continue Reading
Advertisement
Yuzvendra Chahal
ಕ್ರಿಕೆಟ್12 mins ago

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Lok Sabha Election
ದೇಶ20 mins ago

Lok Sabha Election: ನಾಳೆ 6ನೇ ಹಂತದಲ್ಲಿ 58 ಕ್ಷೇತ್ರಗಳಿಗೆ ಮತದಾನ; ಖಟ್ಟರ್‌, ಕನ್ಹಯ್ಯ ಸೇರಿ ಹಲವರ ಭವಿಷ್ಯ ನಿರ್ಧಾರ

Martin Movie
ಕರ್ನಾಟಕ34 mins ago

Martin Movie: ಬಹುನೀರಿಕ್ಷಿತ ʼಮಾರ್ಟಿನ್ʼ ರಿಲೀಸ್ ಡೇಟ್ ಫಿಕ್ಸ್‌; 3 ವರ್ಷಗಳ ನಂತರ ತೆರೆಗೆ ಆ್ಯಕ್ಷನ್ ಪ್ರಿನ್ಸ್ ಎಂಟ್ರಿ

Congress is rejected expired goods in the country says union minister Pralhad Joshi
ಕೊಪ್ಪಳ36 mins ago

MLC Election: ಕಾಂಗ್ರೆಸ್ ಎಂಬುದು ದೇಶದಲ್ಲಿ ರಿಜೆಕ್ಟೆಡ್, ಎಕ್ಸ್‌ಪೈರಿ ಗೂಡ್ಸ್: ಪ್ರಲ್ಹಾದ್ ಜೋಶಿ ಲೇವಡಿ

Yallapur Tehsildar Tanuja T savadatti instructed to create awareness about infectious diseases
ಉತ್ತರ ಕನ್ನಡ37 mins ago

Uttara Kannada News: ಸಾಂಕ್ರಾಮಿಕ ರೋಗಗಳ ಜಾಗೃತಿ ಮೂಡಿಸಲು ಯಲ್ಲಾಪುರ ತಹಸೀಲ್ದಾರ್ ಸೂಚನೆ

Phalodi Satta Bazar
ದೇಶ1 hour ago

Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Sara Tendulkar
ಕ್ರಿಕೆಟ್1 hour ago

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Liquor ban
ಕರ್ನಾಟಕ2 hours ago

Liquor ban: ಜೂ. 1ರಿಂದ ಐದು ದಿನ ಮದ್ಯ ಮಾರಾಟ ನಿಷೇಧ; ಖರೀದಿಗೆ ಮುಗಿಬಿದ್ದ ಎಣ್ಣೆ ಪ್ರಿಯರು!

Narendra Modi
ದೇಶ2 hours ago

Narendra Modi: 2047ರವರೆಗೆ ದೇಶಕ್ಕಾಗಿ ನನ್ನ ಸೇವೆ; ಇದು ದೇವರ ಆದೇಶ ಎಂದ ಮೋದಿ

HD Kumaraswamy slams CM Siddaramaiah about devegowda statement
ರಾಜಕೀಯ2 hours ago

HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌