IND vs ENG: ಧೋನಿಯ ಶೈಲಿಯಲ್ಲೇ ವಿಕೆಟ್​ ಕೀಪಿಂಗ್​ ನಡೆಸಿದ ಜುರೆಲ್; ವಿಡಿಯೊ ವೈರಲ್​ - Vistara News

ಕ್ರಿಕೆಟ್

IND vs ENG: ಧೋನಿಯ ಶೈಲಿಯಲ್ಲೇ ವಿಕೆಟ್​ ಕೀಪಿಂಗ್​ ನಡೆಸಿದ ಜುರೆಲ್; ವಿಡಿಯೊ ವೈರಲ್​

ಟೀಮ್​ ಇಂಡಿಯಾದ ಯುವ ವಿಕೆಟ್​ ಕೀಪರ್​ ಧ್ರುವ್​ ಜುರೆಲ್ ಅವರು ಬೆನ್​ ಡಕೆಟ್ ಅವರನ್ನು ಮಿಂಚಿನ ವೇಗದಲ್ಲಿ ರನೌಟ್​ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

VISTARANEWS.COM


on

Dhruv Jurel Stunning Run Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್​ಕೋಟ್​: ಮಹೇಂದ್ರ ಸಿಂಗ್​ ಧೋನಿಯ(MS Dhoni) ಅಪ್ಪಟ ಅಭಿಮಾನಿಯಾಗಿರುವ ಟೀಮ್​ ಇಂಡಿಯಾದ ಯುವ ವಿಕೆಟ್​ ಕೀಪರ್​ ಧ್ರುವ್​ ಜುರೆಲ್​(India Wicket-Keeper Dhruv Jurel) ಅವರು ಧೋನಿಯಂತೆ ಕೀಪಿಂಗ್​ನಲ್ಲಿ ಮಿಂಚಿದ್ದಾರೆ. ಇಂಗ್ಲೆಂಡ್(IND vs ENG)​ ವಿರುದ್ಧದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಮಿಂಚಿನ ವೇಗದಲ್ಲಿ ರನೌಟ್​ ಮಾಡಿ ಗಮನಸೆಳೆದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಮೊದಲ ಇನಿಂಗ್ಸ್​ನಲ್ಲಿ ಶತಕ ಬಾರಿಸಿ ಮಿಂಚಿದ್ದ ಬೆನ್​ ಡಕೆಟ್​ ಅವರು ದ್ವಿತೀಯ ಇನಿಂಗ್ಸ್​ನಲ್ಲಿ ರನೌಟ್​ಗೆ ಬಲಿಯಾದರು. ಜಸ್​ಪ್ರೀತ್​ ಬುಮ್ರಾ ಓವರ್​ನಲ್ಲಿ ಡೆಕೆಟ್​ ಕ್ವಿಕ್​ ಸಿಂಗಲ್​ ರನ್​ ಕಸಿಯಲು ಯತ್ನಿಸಿದರು. 30-ಯಾರ್ಡ್ ಸರ್ಕಲ್​ನಲ್ಲಿ​ ಫೀಲ್ಡಿಂಗ್​ ಮಾಡುತ್ತಿದ್ದ ಮೊಹಮ್ಮದ್​ ಸಿರಾಜ್​ ಓಡಿ ಬಂದು ಚೆಂಡನ್ನು ಹಿಡಿದು ವಿಕೆಟ್​ ಕೀಪರ್​ ಕಡೆಗೆ ಎಸೆದರು. ಎಸೆತ ವಿಕೆಟ್​ ನಿಂದ ದೂರ ಇದ್ದರೂ ಕೂಡ ಇದನ್ನು ಜುರೆಲ್​ ಜಾರಿ ಬಿದ್ದು ಹಿಡಿದು ಬೇಲ್ಸ್​ ಹಾರಿಸಿ ರನೌಟ್​ ಮಾಡಿದರು. ಈ ರನೌಟ್​ ಕಂಡ ಅನೇಕ ಮಾಜಿ ಆಟಗಾರರು ಜುರೆಲ್​ ಭವಿಷ್ಯದ ಭಾರತ ತಂಡದ ವಿಕೆಟ್​ ಕೀಪರ್​ ಎಂದು ಭವಿಷ್ಯ ನುಡಿದಿದ್ದಾರೆ.

ಮಹೇಂದ್ರ ಸಿಂಗ್​ ಧೋನಿ ಅವರ ಅಪ್ಪಟ ಅಭಿಮಾನಿಯಾಗಿರುವ ಜುರುಲ್​ ಐಪಿಎಲ್​ ಆಡುವ ವೇಳೆ ಧೋನಿ ಅವರೊಂದಿಗೆ ಫೋಟೊ ಕೂಡ ತೆಗಿಸಿಕೊಂಡಿದ್ದರು. ಇದೇ ವೇಳೆ ಅವರು ತಾನು ಕೂಡ ಧೋನಿಯಂತೆ ವಿಕೆಟ್​ ಕೀಪರ್​ ಆಗಲು ಶ್ರಮಿಸುತ್ತೇನೆ ಎಂದಿದ್ದರು. ಇದೀಗ ಧೋನಿಯ ಶೈಲಿಯಲ್ಲೇ ವಿಕೆಟ್​ ಕೀಪಿಂಗ್​ ಮಾಡಿದ್ದಾರೆ. ಕಳೆದ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ (RR) ತಂಡದ ಪರ ಗಮನಾರ್ಹ ಪ್ರದರ್ಶನ ತೋರುವ ಮೂಲಕ ವಿಶ್ವ ಕ್ರಿಕೆಟ್‌ಗೆ ಪರಿಚಿತರಾದರು. ಇಂಪ್ಯಾಕ್ಟ್ ಪ್ಲೇಯರ್ ಆಗಿ ಹೆಚ್ಚಾಗಿ ಆಡುತ್ತಿದ್ದ ಅವರು​ 13 ಪಂದ್ಯಗಳನ್ನು ಆಡಿ 152 ರನ್​ ಬಾರಿಸಿದ್ದಾರೆ.

ಇದನ್ನೂ ಓದಿ ICC WTC Points Table: ಆಸ್ಟ್ರೇಲಿಯಾ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ ತಂಡ

ಬಿಸಿಸಿಐ ನಡೆಸಿದ ವಿಶೇಚ ಸಂದರ್ಶನದಲ್ಲಿಯೂ ಧ್ರುವ್ ಜುರೆಲ್ ಅವರು ನನಗೆ ತಂದೆಯೇ ಹೀರೊ ಎಂದು ಹೇಳಿದ್ದರು. ನನ್ನ ಕ್ರಿಕೆಟ್​ ಪದಾರ್ಪಣೆಯನ್ನು ಅವರಿಗೆ ಅರ್ಪಿಸುವುದಾಗಿ ಹೇಳಿದ್ದರು. ಚೊಚ್ಚಲ ಪಂದ್ಯವನ್ನಾಡಿದ ಜುರೆಲ್​ ಮೊದಲ ಇನಿಂಗ್ಸ್​ನಲ್ಲಿ 46 ರನ್​ ಬಾರಿಸಿದ್ದರು. ಸುಧಾರಿತ ಮಟ್ಟದ ಕೀಪಿಂಗ್​ ಕೂಡ ನಡೆಸುತ್ತಿರುವ ಅವರು ಇದೇ ಪ್ರದರ್ಶನವನ್ನು ಮುಂದುವರಿಸಿದರೆ ಭಾರತ ಟೆಸ್ಟ್​ ತಂಡದ ಖಾಯಂ ವಿಕೆಟ್​ ಕೀಪರ್​ ಆಗುವ ಎಲ್ಲ ಸುವರ್ಣಾವಕಾಶ ಜುರೆಲ್​ ಮುಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Sara Tendulkar: ಸಚಿನ್ ತೆಂಡೂಲ್ಕರ್(Sachin Tendulkar) ಅವರ ಮಗಳು ಸಾರಾ ತೆಂಡೂಲ್ಕರ್(Sara Tendulkar) ಲಂಡನ್ ಯೂನಿವರ್ಸಿಟಿ(UCL, London) ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ(Sara Tendulkar completed post-graduation).

VISTARANEWS.COM


on

Sara Tendulkar
Koo

ಲಂಡನ್​: ಭಾರತದ ಕ್ರಿಕೆಟ್​ ತಂಡದ ಮಾಜಿ ಆಟಗಾರ, ದಿಗ್ಗಜ ಸಚಿನ್ ತೆಂಡೂಲ್ಕರ್(Sachin Tendulkar) ಅವರ ಮಗಳು ಸಾರಾ ತೆಂಡೂಲ್ಕರ್(Sara Tendulkar) ಲಂಡನ್ ಯೂನಿವರ್ಸಿಟಿ(UCL, London) ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ(Sara Tendulkar completed post-graduation). ಮಗಳು ಎಲ್ಲಾ ಕಠಿಣ ಪರಿಶ್ರಮವನ್ನು ಹಾಕಿ ದೊಡ್ಡ ಮೈಲಿಗಲ್ಲನ್ನು ಪೂರ್ಣಗೊಳಿಸಿದ್ದಕ್ಕಾಗಿ ಸಚಿನ್ ಭಾವುಕ ಸಂದೇಶದ ಮೂಲಕ ಶ್ಲಾಘಿಸಿದ್ದಾರೆ.

ಟ್ವಿಟರ್​ ಎಕ್ಸ್​ನಲ್ಲಿ ಮಗಳ ಸಾಧನೆ ಬಗ್ಗೆ ಬರೆದುಕೊಂಡಿರುವ ಸಚಿನ್​, “ಇದೊಂದು ಸುಂದರ ದಿನ. ನಮ್ಮ ಮಗಳು ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್‌ನಲ್ಲಿ ಯುಸಿಎಲ್‌ನ ಮೆಡಿಸಿನ್ ವಿಭಾಗದಿಂದ ಡಿಸ್ಟಿಂಕ್ಷನ್‌ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ದಿನ. ಪೋಷಕರಾಗಿ, ನೀನು ವರ್ಷಗಳಿಂದ ಮಾಡಿದ ಎಲ್ಲಾ ಕೆಲಸಗಳನ್ನು ನೋಡಿದ್ದಕ್ಕಾಗಿ ನಾವು ತುಂಬಾ ಹೆಮ್ಮೆಪಡುತ್ತೇವೆ. ಇಲ್ಲಿಗೆ ಬರುವುದು ಸುಲಭವಲ್ಲ” ಎಂದು ಬರೆದುಕೊಂಡಿದ್ದಾರೆ. ಸಾರಾ ಲಂಡನ್ ಯೂನಿವರ್ಸಿಟಿಯ ಘಟಿಕೋತ್ಸದಲ್ಲಿ ಪದವಿ ಸ್ವೀಕರಿಸಿದ ಫೋಟೊ, ವಿಡಿಯೊ ಮತ್ತು ತಾಯಿಯೊಂದಿಗೆ ಇರುವ ಫೋಟೊವನ್ನು ಸಚಿನ್​ ಹಂಚಿಕೊಂಡಿದ್ದಾರೆ.

ಸಾರಾ ಕೂಡ ತಾನು ಪದವಿ ಪಡೆದ ದಿನದ ತುಣುಕುಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್​ ಸೇರಿ ಸಚಿನ್​ ಅವರ ಆಪ್ತರು ಸಾರಾಗೆ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ Sara Tendulkar: ತಮ್ಮ ಹೆಸರಿನ ಪರೋಡಿ ಖಾತೆ ಮುಚ್ಚಲು ಎಕ್ಸ್‌ಗೆ ಸಾರಾ ತೆಂಡುಲ್ಕರ್ ಆಗ್ರಹ!

ಗಿಲ್​ ಜತೆ ಡೇಟಿಂಗ್​?


ಸಾರಾ ತೆಂಡೂಲ್ಕರ್(Sara Tendulkar) ಅವರು ಟೀಮ್​ ಇಂಡಿಯಾದ ಯುವ ಬ್ಯಾಟರ್​ ಶುಭಮನ್​ ಗಿಲ್(Shubman Gill) ಜತೆ​ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಆಗಾಗ ಮುನ್ನಲೆಗೆ ಬರುತ್ತಲೇ ಇರುತ್ತದೆ. ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ವೇಳೆ ಗಿಲ್​ ಪಂದ್ಯ ವೀಕ್ಷಿಸಲೆಂದೇ ಸಾರಾ ಕೂಡ ಸ್ಟೇಡಿಯಂಗೆ ಬರುತ್ತಿದ್ದರು. ಅಲ್ಲದೆ ಗಿಲ್​ ಸಾಧನೆಗೆ ಗ್ಯಾಲರಿಯಲ್ಲಿ ಎದ್ದು ನಿಂತು ಚಪ್ಪಾಳೆ ತಟ್ಟಿ ಪ್ರಶಂಸಿಸಿದ್ದ ವಿಡಿಯೊ ಮತ್ತು ಫೋಟೊಗಳು ವೈರಲ್​ ಆಗಿತ್ತು. ಸಾರಾ ಮತ್ತು ಗಿಲ್​ ತಂಗಿ ಜತೆಯಾಗಿ ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದ ವಿಡಿಯೊ ಕೂಡ ವೈರಲ್(​Viral Video) ಆಗಿತ್ತು. ಆದರೂ, ಈ ಜೋಡಿ ಡೇಟಿಂಗ್​ ಬಗ್ಗೆ ಎಲ್ಲಿಯೂ ಅಧಿಕೃತವಾಗಿ ತುಟಿ ಬಿಚ್ಚಿಲ್ಲ!

ಸಾರಾ ತೆಂಡೂಲ್ಕರ್ ಮತ್ತು ಗಿಲ್ ಡೇಟಿಂಗ್ ಸುದ್ದಿ ಕಳೆದ ಒಂದು ವರ್ಷದಿಂದ ಜಗತ್ತು ಸುತ್ತುತ್ತಿದೆ. ಆದಾಗ್ಯೂ, ಇಬ್ಬರೂ ವದಂತಿಯನ್ನು ನಿರಾಕರಿಸಿಲ್ಲ ಅಥವಾ ದೃಢಪಡಿಸಿಲ್ಲ. ಪಾಪರಾಜಿಗಳು ಇಬ್ಬರು ಸೆಲೆಬ್ರಿಟಿಗಳನ್ನು ಸಾರ್ವಜನಿಕವಾಗಿ ಸಾಕಷ್ಟು ಬಾರಿ ಪ್ರಶ್ನಿಸಿದ್ದಾರೆ. ಕಾಫಿ ವಿತ್ ಕರಣ್ ಸಂಚಿಕೆಯಲ್ಲಿ, ಸಾರಾ ಅಲಿ ಖಾನ್, ಗಿಲ್ ನನ್ನೊಂದಿಗೆ ಡೇಟಿಂಗ್ ಮಾಡುತ್ತಿಲ್ಲ. ಅವರು ಬೇರೆ ಸಾರಾ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳುವ ಅಭಿಮಾನಿಗಳ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದರು. ಕ್ರಿಕೆಟ್​ ಅಭಿಮಾನಿಗಳೇ ನೀವು ತಪ್ಪು ಹೇಳುತ್ತಿದ್ದೀರಿ. ಸಾರಾ ಕಾ ಸಾರಾ ದುನಿಯಾ ಗಲಾತ್ ಸಾರಾ ಕೆ ಪೀಚೆ ಪಡಾ ಹೈ (ಇಡೀ ಜಗತ್ತು ತಪ್ಪಾದ ಸಾರಾಳ ಹಿಂದೆ ಬಿದ್ದಿದೆ) ಎಂದು ಸಾರಾ ಅಲಿ ಖಾನ್ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು. ಈ ಮೂಲಕ ಗಿಲ್ ಅವರ ಕ್ರಸ್​ ಸಾರಾ ತೆಂಡೂಲ್ಕರ್​ ಎನ್ನುವ ಸುಳಿವು ನೀಡಿದ್ದರು.

Continue Reading

ಕ್ರೀಡೆ

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

CSK vs RCB: ರಾಯುಡು ಶುಕ್ರವಾರ ಟ್ವೀಟ್​ ಮಾಡಿ ಆರ್‌ಸಿಬಿ ತಂಡ ಇಷ್ಟು ವರ್ಷ ಟ್ರೋಫಿ ಗೆಲ್ಲದೇ ಇರುವುದಕ್ಕೆ ವಿರಾಟ್‌ ಕೊಹ್ಲಿ ಮತ್ತು ತಂಡದ ಮಾಲೀಕರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

VISTARANEWS.COM


on

CSK vs RC
Koo

ಹೈದರಾಬಾದ್: ಬುಧವಾರ ನಡೆದಿದ್ದ ರಾಜಸ್ತಾನ ವಿರುದ್ಧದ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದ ಅವಮಾನಕ್ಕೆ ಸಿಲುಕಿತ್ತು. ಆರ್​ಸಿಬಿ ಸೋಲು ಕಾಣುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು(Ambati Rayudu) ಆರ್​ಸಿಬಿ(CSK vs RCB) ತಂಡವನ್ನು ಟ್ರೋಲ್​ ಮಾಡಿದ್ದರು. ಇದೀಗ ಮತ್ತೆ ನಾಲಿಗೆ ಹರಿಬಿಟ್ಟಿದ್ದು, ವಿರಾಟ್ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

ಪ್ಲೇ ಆಫ್ಸ್‌ ರೇಸ್‌ನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಹೊರದಬ್ಬಿದ ದಿನದಿಂದಲೂ ಸಿಎಸ್‌ಕೆ ಮಾಜಿ ಬ್ಯಾಟರ್‌ ಅಂಬಾಟಿ ರಾಯುಡು ನಾನಾ ರೀತಿಯಲ್ಲಿ ಆರ್‌ಸಿಬಿ ತಂಡವನ್ನು ಟೀಕಿಸುತ್ತಾಲೇ ಬಂದಿದಿದ್ದರು. ಇವರಿಗೆ ಚೆನ್ನೈ ತಂಡದ ಅಭಿಮಾನಿಗಳು, ಹಾಲಿ ಆಟಗಾರರು ಕೂಡ ಉತ್ತಮ ಸಾಥ್​ ನೀಡಿದ್ದರು. ಇದೀಗ ರಾಯುಡು ಶುಕ್ರವಾರ ಟ್ವೀಟ್​ ಮಾಡಿ ಆರ್‌ಸಿಬಿ ತಂಡ ಇಷ್ಟು ವರ್ಷ ಟ್ರೋಫಿ ಗೆಲ್ಲದೇ ಇರುವುದಕ್ಕೆ ವಿರಾಟ್‌ ಕೊಹ್ಲಿ ಮತ್ತು ತಂಡದ ಮಾಲೀಕರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

“ಆರ್‌ಸಿಬಿ ಬೆಂಬಲಿಗರನ್ನು ಕಂಡು ನನ್ನ ಹೃದಯ ಉಕ್ಕುತ್ತಿದೆ. ಹಲವು ವರ್ಷಗಳಿಂದ ಒಂದೇ ಉತ್ಸಾಹ ಮತ್ತು ಪ್ರೀತಿಯಿಂದ ಅವರು ತಮ್ಮ ತಂಡವನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ವ್ಯಕ್ತಿ ಪೂಜೆ ಮತ್ತು ವೈಯಕ್ತಿಕ ಮೈಲುಗಲ್ಲುಗಳಿಗಿಂತಲೂ ತಂಡಕ್ಕೆ ಟ್ರೋಫಿ ಗೆದ್ದುಕೊಡಬೇಕು ಎಂಬುದು ತಂಡದ ಉದ್ದೇಶ ಆಗಿದ್ದರೆ, ಈಗಾಗಲೇ ತಂಡ ಟ್ರೋಫಿ ಗೆಲ್ಲುತ್ತಿತ್ತು. ಆರ್‌ಸಿಬಿ ಕಳೆದ 17 ಆವೃತ್ತಿಯಲ್ಲಿ ಎಂತಹ ಅದ್ಭುತ ಆಟಗಾರರನ್ನು ಕೈಬಿಟ್ಟಿದೆ ಎಂಬುದನ್ನು ನೆನಪಿಸಿಕೊಳ್ಳಿ. ತಂಡಕ್ಕೆ ಮೊದಲ ಆದ್ಯತೆ ನೀಡುವ ಆಟಗಾರರನ್ನು ತರುವಂತೆ ಮ್ಯಾನೇಜ್ಮೆಂಟ್‌ ಮೇಲೆ ಒತ್ತಡ ಹಾಕಿ. ಮೆಗಾ ಆಕ್ಷನ್‌ ಮೂಲಕ ತಂಡ ಹೊಸ ಅಧ್ಯಾಯ ಬರೆಯಲಿ” ಎಂದು ರಾಯುಡು ಗೇಲಿ ಮಾಡಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಎಲಿಮಿನೇಟರ್‌ ಪಂದ್ಯದಲ್ಲಿ ಸೋತ ವೇಳೆ ರಾಯುಡು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೊ ಒಂದನ್ನು ಹಂಚಿಕೊಂಡು ‘5 ಬಾರಿ ಚಾಂಪಿಯನ್ಸ್‌ ಯಾರು ಎಂಬುದನ್ನು ಕೆಲವೊಮ್ಮೆ ನೆನಪಿಸಿಕೊಳ್ಳಬೇಕಾಗಿದೆ’ ಎಂದು ಬರೆದುಕೊಂಡಿದ್ದರು. ಈ ಪೋಸ್ಟ್ ಗೆ ಸಿಎಸ್‌ಕೆ ಆಟಗಾರರಾದ ದೀಪಕ್ ಚಹರ್‌, ಮತೀಶ ಪತಿರಣ ಮತ್ತು ತುಶಾರ್‌ ದೇಶಪಾಂಡೆ ಕಾಮೆಂಟ್‌ ಮಾಡುವ ಮೂಲಕ ಆರ್‌ಸಿಬಿ ತಂಡವನ್ನು ಗೇಲಿ ಮಾಡಿದ್ದರು.

ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ


“ಜೀವನದಲ್ಲಿ ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಾಗ ನಿಮ್ಮ ಬಾಯಿ ಮುಚ್ಚಿಕೊಂಡು ಮುಂದುವರಿಯಿರಿ. ನೀವು ಮಾಡುತ್ತಿರುವ ಯಾವುದೇ ಕೆಲಸದ ವೇಳೆ ಗದ್ದಲ ಮಾಡಿದಾಗ ಆ ಕೆಲಸವನ್ನು ಉತ್ತಮವಾಗಿ ಮಾಡಲು ಸಾಧ್ಯವಿಲ್ಲ. ಆರ್​​ಸಿಬಿ ಅಭಿಮಾನಿಗಳು ಅನಗತ್ಯ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದರು. ಅತಿಯಾಗಿ ತೋರಿಸುತ್ತಿದ್ದರು. ಅದಕ್ಕಾಗಿಯೇ ಅಶ್ವಿನ್ ಮುಂದಿನ ಪಂದ್ಯದಲ್ಲಿ ಆರ್​ಸಿಬಿಯ ಅಹಂ ಇಳಿಸಿದರು. ಅದಕ್ಕಾಗಿಯೇ ಕ್ರಿಕೆಟ್​​ನಲ್ಲಿ ನಿಮ್ಮ ಬಾಯಿ ಮುಚ್ಚಿ ಆಡಬೇಕು ಎಂದು ಹೇಳುವುದು ಎಂದು ಶ್ರೀಕಾಂತ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ ಟೂರ್ನಿಗೆ ಕಾಮೆಂಟರಿ ಬಳಗ ಘೋಷಿಸಿದ ಐಸಿಸಿ; ದಿನೇಶ್​ ಕಾರ್ತಿಕ್​ಗೂ ಸ್ಥಾನ

T20 World Cup 2024: ಬುಧವಾರವಷ್ಟೇ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದ ಆರ್​ಸಿಬಿ ತಂಡದ ದಿನೇಶ್​ ಕಾರ್ತಿಕ್​(Dinesh Karthik) ಅವರು ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ

VISTARANEWS.COM


on

T20 World Cup 2024
Koo

ದುಬೈ: 2 ದಿನಗಳ ಹಿಂದಷ್ಟೇ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದ ಆರ್​ಸಿಬಿ ತಂಡದ ದಿನೇಶ್​ ಕಾರ್ತಿಕ್​(Dinesh Karthik) ಅವರು ಇದೀಗ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಕರ್ತವ್ಯ ನಿರ್ವಹಿಸಲು ಸಜ್ಜಾಗಿದ್ದಾರೆ. ಇದೇ ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯುವ ಮಿನಿ ವಿಶ್ವಕಪ್​ ಸಮರದಲ್ಲಿ ಕಾರ್ತಿಕ್​ ವೀಕ್ಷಕ ವಿವರಣೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಶುಕ್ರವಾರ ಐಸಿಸಿ ವೀಕ್ಷಕ ವಿವರಣೆಗಾರರ ಪಟ್ಟಿಯನ್ನು ಪ್ರಕಟಿಸಿತು. ಈ ಪಟ್ಟಿಯಲ್ಲಿ ದಿನೇಶ್​ ಕಾರ್ತಿಕ್​ ಸೇರಿ ಹಲವು ದೇಶಗಳ ತಾರಾ ಕಾಮೆಂಟೇಟರ್ ಕಾಣಿಸಿಕೊಂಡಿದ್ದಾರೆ.

ರವಿಶಾಸ್ತ್ರಿ, ನಾಸರ್ ಹುಸೇನ್, ಇಯಾನ್ ಸ್ಮಿತ್, ಮೆಲ್ ಜೋನ್ಸ್, ಹರ್ಷಾ ಭೋಗ್ಲೆ ಮತ್ತು ಇಯಾನ್ ಬಿಷಪ್ ಪ್ರಮುಖ ಆಕರ್ಷಣೆಯಾಗಿದ್ದಾರೆ. ಇವರ ಜತೆ ದಿನೇಶ್ ಕಾರ್ತಿಕ್, ಎಬೊನಿ ರೈನ್‌ಫೋರ್ಡ್-ಬ್ರೆನ್, ಸ್ಯಾಮುಯೆಲ್ ಬದ್ರಿ, ಕಾರ್ಲೊಸ್ ಬ್ರಾತ್ ವೇಟ್, ಸ್ಟೀವನ್​ ಸ್ಮಿತ್, ಫಿಂಚ್, ಲಿಸಾ ಸ್ತಾಲೆಕರ್ ಈ ಬಾರಿಯ ಕಾಮೆಂಟರಿ ಪ್ಯಾನೆಲ್​ನಲ್ಲಿ ಇರಲಿದ್ದಾರೆ.

ರಿಕಿ ಪಾಂಟಿಂಗ್, ಸುನಿಲ್ ಗವಾಸ್ಕರ್, ಮ್ಯಾಥ್ಯೂ ಹೇಡನ್, ರಮಿಜ್ ರಾಜಾ, ಇಯಾನ್ ಮಾರ್ಗನ್, ಟಾಮ್ ಮೂಡಿ ಮತ್ತು ವಾಸಿಮ್ ಅಕ್ರಮ್ ಪಂದ್ಯಕ್ಕೂ ಮುನ್ನ ನಡೆಯುವ ವಿಶ್ಲೇಷಣೆಯಲ್ಲಿ ತಂಡಗಳ ಮತ್ತು ಆಟಗಾರರ ಸಾಮರ್ಥದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಉಳಿದಂತೆ ಡೇಲ್ ಸ್ಟೇನ್​, ಗ್ರೇಮ್ ಸ್ಮಿತ್, ಮೈಕೆಲ್ ಅಥರ್ಟನ್, ವಕಾರ್ ಯೂನಿಸ್, ಸೈಮನ್ ಡೌಲ್, ಶಾನ್ ಪೊಲಾಕ್, ಕೇಟಿ ಮಾರ್ಟಿನ್, ಎಂಪುಮೆಲೆಲೊ ಎಂಬಾಂಗ್ವಾ, ನಟಾಲಿ ಜರ್ಮನೋಸ್, ಡ್ಯಾನಿ ಮಾರಿಸನ್, ಅಲಿಸನ್ ಮಿಚೆಲ್, ಅಲನ್ ವಿಲ್ಕಿನ್ಸ್, ಬ್ರಿಯಾನ್ ಮುರ್ಗಟ್ರಾಯ್ಡ್, ಮೈಕ್ ಹೇಸ್‌ಮನ್, ಇಯಾನ್ ವಾರ್ಡ್, ಅಥರ್ ಅಲಿ ಖಾನ್, ರಸೆಲ್ ಅರ್ನಾಲ್ಡ್, ನಿಯಾಲ್ ಒ’ಬ್ರಿಯಾನ್, ಕಾಸ್ ನೈಡೋ ಮತ್ತು ಡ್ಯಾರೆನ್ ಗಂಗಾ ಕೂಡ ಟಿ20 ವಿಶ್ವಕಪ್ ನಲ್ಲಿ ಕಾಮೆಂಟರಿ ಮಾಡಲಿದ್ದಾರೆ.

ಇದನ್ನೂ ಓದಿ T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

ರಾಜಸ್ಥಾನದದ ರಾಯಲ್ಸ್​ ವಿರುದ್ಧದ ಎಲಿಮಿನೇಟರ್​ ಪಂದ್ಯವೇ ದಿನೇಶ್ ಕಾರ್ತಿಕ್(Dinesh Karthik)ಗೆ ವಿದಾಯ(dinesh karthik retirement) ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಆರ್​ಸಿಬಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು. 17 ವರ್ಷಗಳ ಐಪಿಎಲ್​ ಜರ್ನಿಯಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ.

2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪದಾರ್ಪಣೆ ಮಾಡಿದ ಕಾರ್ತಿಕ್​ ಭಾರತ ಪರ 26 ಟೆಸ್ಟ್‌ಗಳನ್ನು ಆಡಿ 1025 ರನ್ ಗಳಿಸಿದ್ದಾರೆ. 57 ಕ್ಯಾಚ್‌ಗಳು ಮತ್ತು 6 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಅವರು ತಮ್ಮ ಕೊನೆಯ ಟೆಸ್ಟ್ ಆಡಿದ್ದು 2018 ರಲ್ಲಿ. ಏಕದಿನದಲ್ಲಿ 94 ಪಂದ್ಯಗಳನ್ನು ಆಡಿ 1752 ರನ್ ಗಳಿಸಿದ್ದಾರೆ. 64 ಕ್ಯಾಚ್‌ಗಳು ಮತ್ತು 7 ಸ್ಟಂಪಿಂಗ್‌ಗಳನ್ನು ನಿರ್ವಹಿಸಿದ್ದಾರೆ. 60 ಟಿ20 ಪಂದ್ಯಗಳಿಂದ 686 ರನ್ ಗಳಿಸಿ, 30 ಕ್ಯಾಚ್‌ಗಳು ಮತ್ತು 8 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ.

Continue Reading

ಕ್ರೀಡೆ

India Head Coach: ಕೋಚ್​ ಆಗುವ ಮುನ್ನ ಏನೆಲ್ಲಾ ಕಷ್ಟ ಇದೆ ಎಂದು ರಾಹುಲ್​ ನೀಡಿದ ಸಲಹೆಯನ್ನು ಬಹಿರಂಗಪಡಿಸಿದ ಲ್ಯಾಂಗರ್

India Head Coach: ಆಸ್ಟ್ರೇಲಿಯಾದ ಮಾಜಿ ಆಟಗಾರರು ಭಾರತ ತಂಡದ ಕೋಚ್​ ಹುದ್ದೆಯ ಬಗ್ಗೆ ನಿರಾಸಕ್ತಿಕ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಈ ಎಲ್ಲ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರರ ಹುದ್ದೆಗೆ ನಾವು ಯಾವುದೇ ಆಸ್ಟ್ರೇಲಿಯಾದವರನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

India Head Coach
Koo

ಸಿಡ್ನಿ: ಟೀಮ್​ ಇಂಡಿಯಾದ ಮುಖ್ಯ ಕೋಚ್(India Head Coach)​ ಆಗಿ ಯಾರು ಆಯ್ಕೆ ಆಗುತ್ತಾರೆ ಎನ್ನುವ ಕುತೂಹಲ ಒಂದೆಡೆಯಾದರೆ, ಹಲವು ಮಾಜಿ ವಿದೇಶಿ ಆಟಗಾರರು ಭಾರತ ತಂಡದ ಕೋಚಿಂಗ್​ ಬಗ್ಗೆ ಆಸಕ್ತಿ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯದ ಮಾಜಿ ಕೋಚ್​ ಜಸ್ಟಿನ್ ಲ್ಯಾಂಗರ್(Justin Langer) ನೀಡಿದ ಹೇಳಿಕೆಯೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕೆಲವು ದಿನಗಳ ಹಿಂದೆ ಭಾರತ ತಂಡದ ಕೋಚ್​ ಆಗುವ ಬಗ್ಗೆ ಬಹಳ ಆಸಕ್ತಿ ಹೊಂದಿದ್ದೇನೆ ಎಂದಿದ್ದ, ಲ್ಯಾಂಗರ್​, ಇದೀಗ ಕೋಚಿಂಗ್​ ಬಗ್ಗೆ ಕೆ.ಎಲ್​ ರಾಹುಲ್​ ಜತೆ ನಡೆಸಿದ ಚರ್ಚೆಯನ್ನು ಬಹಿರಂಗಪಡಿಸಿದ್ದಾರೆ. “ನಾನು ರಾಹುಲ್​ ಜತೆ ಭಾರತ ತಂಡದ ಕೋಚಿಂಗ್​ ಬಗ್ಗೆ ಚರ್ಚಿಸುವ ವೇಳೆ ಅವರು ನನಗೆ ಉಪಯುಕ್ತ ಮಾಹಿತಿ ನೀಡಿದರು. ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಎದುರಿಸುವ ‘ರಾಜಕೀಯ ಮತ್ತು ಒತ್ತಡ’ ಯಾವುದೇ ಐಪಿಎಲ್ ಕೋಚ್‌ಗಿಂತ ಸುಮಾರು ಸಾವಿರ ಪಟ್ಟು ಹೆಚ್ಚಾಗಿದೆ” ಎಂದು ಹೇಳಿರುವುದಾಗಿ ಲ್ಯಾಂಗರ್​ ತಿಳಿಸಿದ್ದಾರೆ.

“ಆಸ್ಟ್ರೇಲಿಯಾ ತಂಡದೊಂದಿಗೆ ನಾಲ್ಕು ವರ್ಷಗಳ ಕಾಲ ನಾನು ಎಲ್ಲ ಒತ್ತಡಗಳನ್ನು ನಿಭಾಯಿಸಿದ್ದೇನೆ. ಇದರಿಂದ ನಾನು ದಣಿದಿದ್ದೇನೆ. ರಾಹುಲ್​ ನೀಡಿದ್ದು ಉತ್ತಮ ಸಲಹೆಯಾಗಿದೆ ಎಂದು ನಾನು ಊಹಿಸುತ್ತೇನೆ” ಎಂದು ಹೇಳುವ ಮೂಲಕ ಕೋಚಿಂಗ್​ ಹುದ್ದೆಗೆ ಅರ್ಜಿಸಲ್ಲಿಸುವ ಕಾರ್ಯದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಂತಿದೆ. ಗುರುವಾರವಷ್ಟೇ ರಿಕಿ ಪಾಂಟಿಂಗ್, ಇಂದು(ಶುಕ್ರವಾರ) ಆರ್​ಸಿಬಿ ಕೋಚ್​ ಜಸ್ಟೀನ್​ ಲ್ಯಾಂಗರ್​ ಕೂಡ ಟೀಮ್​ ಇಂಡಿಯಾದ ಕೋಚ್ ಆಫರ್ ತಿರಸ್ಕರಿಸಿದ್ದಾರೆ.

ಇದನ್ನೂ ಓದಿ India Head Coach: ಭಾರತ ತಂಡದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ ಎಂದ ಆರ್​ಸಿಬಿ ಕೋಚ್​

ತಿರುಗೇಟು ಕೊಟ್ಟ ಜಯ್​ ಶಾ

ಆಸ್ಟ್ರೇಲಿಯಾದ ಮಾಜಿ ಆಟಗಾರರು ಭಾರತ ತಂಡದ ಕೋಚ್​ ಹುದ್ದೆಯ ಬಗ್ಗೆ ನಿರಾಸಕ್ತಿಕ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಈ ಎಲ್ಲ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರರ ಹುದ್ದೆಗೆ ನಾವು ಯಾವುದೇ ಆಸ್ಟ್ರೇಲಿಯಾದವರನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೋಚಿಂಗ್​ ಹುದ್ದೆಯ ಬಗ್ಗೆ ನೀಡುತ್ತಿರುವ ವದಂತಿಗಳನ್ನು ನಂಬಬಾರದು ಎಂದು ತಿಳಿಸಿದ್ದಾರೆ.

“ನಾನು ಅಥವಾ ಬಿಸಿಸಿಐ ಯಾವುದೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರನ್ನು ಕೋಚಿಂಗ್‌ ಆಫರ್‌ನೊಂದಿಗೆ ಸಂಪರ್ಕಿಸಿಲ್ಲ. ಕೆಲವು ಮಾಧ್ಯಮ ವಿಭಾಗಗಳಲ್ಲಿ ಪ್ರಸಾರವಾಗುವ ವರದಿಗಳು ಸಂಪೂರ್ಣವಾಗಿ ತಪ್ಪಾಗಿದೆ. ನಮ್ಮ ರಾಷ್ಟ್ರೀಯ ತಂಡಕ್ಕೆ ಸರಿಯಾದ ತರಬೇತುದಾರನನ್ನು ಹುಡುಕುವುದು ಒಂದು ನಿಖರವಾದ ಮತ್ತು ಸಂಪೂರ್ಣ ಪ್ರಕ್ರಿಯೆಯಾಗಿದೆ” ಎಂದು ತಿಳಿಸಿದ್ದಾರೆ.

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

Continue Reading
Advertisement
Phalodi Satta Bazar
ದೇಶ8 mins ago

Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Sara Tendulkar
ಕ್ರಿಕೆಟ್15 mins ago

Sara Tendulkar: ಲಂಡನ್​ ಯೂನಿವರ್ಸಿಟಿಯಿಂದ ಪದವಿ ಪಡೆದ ಸಾರಾ ತೆಂಡೂಲ್ಕರ್​; ಮಗಳ ಸಾಧನೆ ಕೊಂಡಾಡಿದ ಸಚಿನ್​

Liquor ban
ಕರ್ನಾಟಕ40 mins ago

Liquor ban: ಜೂ. 1ರಿಂದ ಐದು ದಿನ ಮದ್ಯ ಮಾರಾಟ ನಿಷೇಧ; ಖರೀದಿಗೆ ಮುಗಿಬಿದ್ದ ಎಣ್ಣೆ ಪ್ರಿಯರು!

Narendra Modi
ದೇಶ42 mins ago

Narendra Modi: 2047ರವರೆಗೆ ದೇಶಕ್ಕಾಗಿ ನನ್ನ ಸೇವೆ; ಇದು ದೇವರ ಆದೇಶ ಎಂದ ಮೋದಿ

HD Kumaraswamy slams CM Siddaramaiah about devegowda statement
ರಾಜಕೀಯ48 mins ago

HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

Former DGP Arrested
ಕ್ರೈಂ1 hour ago

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಕ್ರೈಂ1 hour ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಗೆ ಲಷ್ಕರ್–ಎ–ತಯ್ಬಾ ಜತೆ ಲಿಂಕ್‌!

CSK vs RC
ಕ್ರೀಡೆ1 hour ago

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

BSNL network problem in Hosanagara The lawyer decided to climb the tower and protest
ಕರ್ನಾಟಕ1 hour ago

Hosanagara News: ಹೊಸನಗರದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ; ಟವರ್‌ ಏರಿ ಪ್ರತಿಭಟನೆಗೆ ಮುಂದಾದ ವಕೀಲ!

union minister pralhad joshi spoke in North East Graduate Constituency Electoral Convention at ballari
ಕರ್ನಾಟಕ1 hour ago

MLC Election: ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ; ಸಚಿವ ಪ್ರಲ್ಹಾದ್‌ ಜೋಶಿ ವ್ಯಾಖ್ಯಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌