Site icon Vistara News

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

IND vs PAK

IND vs PAK: Police snipers will be at T20 World Cup games in New York

ನ್ಯೂಯಾರ್ಕ್​: ಕ್ರಿಕೆಟ್​ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿರುವ, ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್(T20 world cup 2024) ಪಂದ್ಯ​ ಜೂನ್​ 9ರಂದು ನಡೆಯಲಿದೆ. ಈ ಪಂದ್ಯಕ್ಕೆ ಉಗ್ರರ ದಾಳಿಯ ಭೀತಿ(india vs pak terror threat) ಎದುರಾಗಿರುವ ಕಾರಣ ಪಂದ್ಯ ನಡೆಯುವ ಸ್ಟೇಡಿಯಂಗೆ ಈಗಿಂದಲೇ ಭಾರೀ ಭದ್ರತೆ ಏರ್ಪಡಿಸಲಾಗಿದೆ. ನ್ಯೂಯಾರ್ಕ್​ನ(New York stadium) ವಿಶೇಷ ಮಿಲಿಟರಿ ಪಡೆ ಸ್ನೈಪರ್ ಗನ್ ಹಿಡಿದು ಕಣ್ಗಾವಲಿಟ್ಟಿದೆ. ಇದರ ಫೋಟೊಗಳು ವೈರಲ್​ ಆಗಿದೆ.


ಕಳೆದ ವಾರ ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ಗೆ ನ್ಯೂಯಾರ್ಕ್​ ಪೊಲೀಸರಿಂದ ಮತ್ತು ಮಿಲಿಟರಿ ಪಡೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇದನ್ನು ಓದಿ IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

ಪಂದ್ಯದ ವೇಳೆ ಡ್ರೋನ್ ದಾಳಿ ನಡೆಸುವ ಸಾಧ್ಯತೆ ಕೂಡ ಕಂಡುಬಂದಿದೆ. ಹೀಗಾಗಿ ಪಂದ್ಯ ನಡೆಯುವ ಕ್ರೀಡಾಂಗಣದ ಸುತ್ತ ‘ನೊ-ಫ್ಲೈ ಝೋನ್’ ಎಂದು ಘೋಷಿಸುವಂತೆ ನ್ಯೂಯಾರ್ಕ್ ಪೊಲೀಸ್ ಯುಎಸ್​ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್‌ಗೆ ವಿನಂತಿಸಿದೆ. ಸದ್ಯ ಭಾರತ ಮತ್ತು ಪಾಕ್​ ತಂಡ ಆಟಗಾರರು ಮಿಲಿಟರಿ ರಕ್ಷಣೆಯಲ್ಲೇ ಓಡಾಡುತ್ತಿದ್ದಾರೆ. ಇದರ ವಿಡಿಯೊ ಕೂಡ ವೈರಲ್​ ಆಗಿದೆ.

“ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾರ್ವಜನಿಕರ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಪಂದ್ಯಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾನೂನು ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇನೆ” ಎಂದು ನ್ಯೂಯಾರ್ಕ್‌ನ ಗವರ್ನರ್‌ ಕ್ಯಾಥಿ ಹೊಚುಲ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರಂಭದಲ್ಲಿ ಪ್ರೊ-ಇಸ್ಲಾಮಿಕ್ ಸ್ಟೇಟ್ (ಐಎಸ್)ನಿಂದ ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಪಂದ್ಯಗಳಿಗೆ ದಾಳಿಯ ಬೆದರಿಕೆಯೊಂದು ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ  ವೆಸ್ಟ್​ ಇಂಡೀಸ್​ ಕ್ರಿಕೆಟ್​ ಮಂಡಳಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿತ್ತು.  ಕೆನ್ಸಿಂಗ್ಟನ್ ಓವಲ್(Kensington Oval Cricket Ground) ಕ್ರಿಕೆಟ್ ಮೈದಾನ, ಬಾರ್ಬಡೋಸ್​ನಲ್ಲಿ(Barbados) ಭದ್ರತಾ ಸಿಬ್ಬಂದಿಗಳು ಅಣುಕು ಪ್ರದರ್ಶನ ಮಾಡುತ್ತಿರುವ ಫೋಟೊ ಕೂಡ ವೈರಲ್​ ಆಗಿತ್ತು.

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Exit mobile version