Site icon Vistara News

IND vs SL: ನಾಳೆ ಭಾರತ ತಂಡ ಶ್ರೀಲಂಕಾಕ್ಕೆ ಪ್ರಯಾಣ

IND vs SL

IND vs SL: Team India travels to Sri Lanka tomorrow

ಮುಂಬಯಿ: ಶ್ರೀಲಂಕಾ(IND vs SL) ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನಾಡಲು(India tour of Sri Lanka) ಭಾರತ ತಂಡ ನಾಳೆ(ಜುಲೈ 22 ಸೋಮವಾರ) ಲಂಕಾಗೆ ಪ್ರಯಾಣಿಸಲಿದೆ. ತಂಡ ಲಂಕಾಕ್ಕೆ ಹೊರಡುವುದಕ್ಕೂ ಮುನ್ನ ಸೋಮವಾರ, ಮುಂಬೈಯಲ್ಲಿ ನೂತನ ಕೋಚ್​ ಗೌತಮ್​ ಗಂಭೀರ್‌ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಕೋಚ್ ಗೌತಮ್ ಗಂಭೀರ್ ಅವರ ಉಸ್ತುವಾರಿಯಲ್ಲಿ ಭಾರತ ತಂಡ ಆಡುವ ಮೊದಲ ಸರಣಿ ಇದಾಗಲಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿಯೇ ಇರಲಿದೆ. 2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ.

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೂ ಮೊದಲು ಭಾರತ ತಂಡ ಕೆಲವೇ ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದೆ. ಹೆಚ್ಚಾಗಿ ಟಿ20 ಸರಣಿ ಮಾತ್ರ ಆಡಲಿದೆ. ಕಡಿಮೆ ಏಕದಿನ ಪಂದ್ಯ ಇರುವ ಕಾರಣ ಅನುಭವಿ ಆಟಗಾರರು ಈ ಪ್ರವಾಸದಲ್ಲಿ ಪಾಲ್ಗೊಳ್ಳಬೇಕು ಎಂದು ನೂತನ ಕೋಚ್​ ಗೌತಮ್ ಗಂಭೀರ್‌ ಖಡಕ್​ ಎಚ್ಚರಿಕೆ ನೀಡಿದ ಕಾರಣ ವಿಶ್ರಾಂತಿಯಲ್ಲಿದ್ದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಮತ್ತು ರವೀಂದ್ರ ಜಡೇಜಾ ತಮ್ಮ ವಿಶ್ರಾಂತಿ ಮೊಟಕುಗೊಳಿಸಿ ತಂಡಕ್ಕೆ ಮರಳಿದ್ದಾರೆ.

ಇದನ್ನೂ ಓದಿ SL vs IND : ಲಂಕಾ ಪ್ರವಾಸಕ್ಕೆಅಭಿಷೇಕ್​ ನಾಯರ್​​ ಬ್ಯಾಟಿಂಗ್ ಕೋಚ್​​

ಕಳೆದ ಒಂದು ವರ್ಷಗಳಿಂದ ರೋಹಿತ್​ ಬಳಿಕ ಹಾರ್ದಿಕ್‌ ಪಾಂಡ್ಯರನ್ನೇ(Hardik Pandya) ಭವಿಷ್ಯದ ನಾಯಕ ಎಂದು ಬಿಂಬಿಸಲಾಗಿತ್ತು. ಆದರೆ, ಲಂಕಾ ಸರಣಿಗೆ ಸೂರ್ಯಕುಮಾರ್​ಗೆ ನಾಯಕತ್ವ ನೀಡಲಾಗಿದೆ. ಹೌದು, ಪಾಂಡ್ಯ ಅವರಿಗೆ ನಾಯಕತ್ವ ನೀಡದಿರಲು ಪ್ರಮುಖ ಕಾರಣ ಅವರ ಫಿಟ್ನೆಸ್‌ ಸಮಸ್ಯೆ. ಪಾಂಡ್ಯ ತಮ್ಮ 8 ವರ್ಷಗಳ ಕ್ರಿಕೆಟ್​ ವೃತ್ತಿಬದುಕಿನಲ್ಲಿ ಹಲವು ಬಾರಿ ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಗುಳಿದಿದ್ದರು. ಪದೇಪದೆ ಗಾಯಕ್ಕೆ ತುತ್ತಾಗುವ ಕಾರಣ ಪಾಂಡ್ಯ ನೇಮಕಕ್ಕೆ ಬಿಸಿಸಿಐನ ಕೆಲ ಪ್ರಮುಖ ಅಧಿಕಾರಿಗಳು ಹಾಗೂ ಆಯ್ಕೆ ಸಮಿತಿಯ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಏಕದಿನ ತಂಡ


ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Exit mobile version