Site icon Vistara News

IPL 2024: ವಿಶ್ರಾಂತಿ ಬಯಸಿದ ಗ್ಲೆನ್ ಮ್ಯಾಕ್ಸ್​ವೆಲ್​; ಮುಂದಿನ ಪಂದ್ಯಗಳಿಗೆ ಅಲಭ್ಯ

IPL 2024

ಬೆಂಗಳೂರು: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಅತ್ಯಂತ ಕಳಪೆ ಪ್ರದರ್ಶನ ತೋರಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB) ತಂಡದ ಆಲ್​ರೌಂಡರ್​ ಗ್ಲೆನ್​ ಮ್ಯಾಕ್ಸ್​ವೆಲ್(Glenn Maxwell)​ ಅವರು ಐಪಿಎಲ್​ನಿಂದ ಹೊರಗುಳಿಯುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಮಾನಸಿಕ ಆರೋಗ್ಯ ಸಮಸ್ಯೆಯಿಂದಾಗಿ ಐಪಿಎಲ್‌ನಿಂದ ಅನಿರ್ದಿಷ್ಟ ವಿರಾಮ ತೆಗೆದುಕೊಳುವುದಾಗಿ ಮ್ಯಾಕ್ಸ್​ವೆಲ್​ ತಂಡದ ನಾಯಕ ಡು ಪ್ಲೆಸಿಸ್ ಮತ್ತು ತರಬೇತುದಾರರಲ್ಲಿ ಕೇಳಿಕೊಂಡಿದ್ದಾರೆ ಎಂದು ಕೆಲ ಆಂಗ್ಲ ಮಾಧ್ಯಮಗಳು ವರದಿ ಮಾಡಿದೆ.

ಈ ಬಾರಿಯ ಟೂರ್ನಿಯಲ್ಲಿ ಮ್ಯಾಕ್ಸ್​ವೆಲ್​ ಆಡಿದ 6 ಪಂದ್ಯಗಳಿಂದ ಗಳಿಸಿದ್ದು ಕೇವಲ 32 ರನ್​ ಮಾತ್ರ. ಇದರಲ್ಲಿ 2 ಶೂನ್ಯವೂ ಸೇರಿದೆ. ನಿನ್ನೆ(ಸೋಮವಾರ) ನಡೆದ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಅವರು ಆಡಿರಲಿಲ್ಲ. ಅವರ ಸ್ಥಾನದಲ್ಲಿ ನ್ಯೂಜಿಲ್ಯಾಂಡ್​ನ ಆಲ್​ರೌಂಡರ್​ ಲ್ಯಾಕಿ ಫರ್ಗುಸನ್​ ಆಡಿದ್ದರು.

ಹೈದರಾಬಾದ್​ ವಿರುದ್ಧದ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮ್ಯಾಕ್ಸ್‌ವೆಲ್, ಮಾನಸಿಕ ಮತ್ತು ದೈಹಿಕ ಆರೋಗ್ಯ ಅಷ್ಟಾ್ಇ ಸರಿಯಿಲ್ಲ. ಹೀಗಾಗಿ ಐಪಿಎಲ್​ ಪಂದ್ಯಗಳಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದೇನೆ ಎಂದು ಹೇಳಿದರು. ಆದರೆ, ಎಷ್ಟು ಪಂದ್ಯಕ್ಕೆ ವಿರಾಮ ತೆಗೆದುಕೊಳ್ಳಲಿದ್ದಾರೆ ಎನ್ನುವುದನ್ನು ಸ್ಪಷ್ಟಪಡಿಸಿಲ್ಲ.

ಇದನ್ನೂ ಓದಿ IPL 2024: 6 ಸೋಲು ಕಂಡರೂ ಆರ್​ಸಿಬಿಯ ಪ್ಲೇ ಆಫ್ ಆಸೆ ಇನ್ನೂ ಜೀವಂತ

ಗ್ಲೆನ್​​ ಮ್ಯಾಕ್ಸ್​ವೆಲ್​(Glenn Maxwell) ಅವರ ಕಳಪೆ ಪ್ರದರ್ಶನಕ್ಕೆ ಕುಡಿತದ ಚಟವೇ ಪ್ರಮುಖ ಕಾರಣ ಎಂಬ ಗಂಭೀರ ಆರೋಪವೂ ಕೇಳಿ ಬಂದಿದೆ. ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಅಫಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಸಾಮಾನ್ಯ ಬ್ಯಾಟಿಂಗ್​ ಪ್ರದರ್ಶನದ ಮೂಲಕ ಏಕಾಂಗಿಯಾಗಿ 200 ರನ್​ ಚಚ್ಚಿ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟಿದ್ದರು. ಅಲ್ಲದೆ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದ್ದರು. ಹೀಗಾಗಿ ಅವರ ಮೇಲೆ ಈ ಬಾರಿ ಆರ್​ಸಿಬಿ ಹೆಚ್ಚಿನ ನಿರೀಕ್ಷೆ ಇರಿಸಿತ್ತು. ಆದರೆ ಅವರು ಸಂಪೂರ್ಣ ವಿಫಲರಾಗಿದ್ದಾರೆ. ಇದಕ್ಕೆ ಕುಡಿತದ ಚಟವೇ ಕಾರಣ ಎನ್ನಲಾಗಿದೆ.

ಆರ್​ಸಿಬಿಯ ಪ್ಲೇ ಆಫ್ ಆಸೆ ಇನ್ನೂ ಜೀವಂತ


ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಆರ್‌ಸಿಬಿ ಪ್ಲೇಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ. ಆರ್​ಸಿಬಿ ಮುಂದಿನ ಪಂದ್ಯವನ್ನು ಕೆಕೆಆರ್​ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಸೋತರೆ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ.

Exit mobile version