Site icon Vistara News

IPL 2024 Points Table: ಹಾಲಿ ಚಾಂಪಿಯನ್​ ಚೆನ್ನೈಗೆ ಸೋಲುಣಿಸಿ ಅಂಕಪಟ್ಟಿಯಲ್ಲಿ ಮೇಲೇರಿದ ಹೈದರಾಬಾದ್​

IPL 2024 Points Table

ಹೈದರಾಬಾದ್​: ತವರಿನಲ್ಲಿ ತಾನೆಷ್ಟು ಬಲಿಷ್ಠ ಎಂಬುದನ್ನು ಸನ್​ರೈಸರ್ಸ್​ ಹೈದರಾಬಾದ್​(Sunrisers Hyderabad) ತಂಡ ಮತ್ತೊಮ್ಮೆ ತೋರಿಸಿಕೊಟ್ಟಿದೆ. ಶುಕ್ರವಾರ ನಡೆದ ಐಪಿಎಲ್(IPL 2024)​ ಪಂದ್ಯದಲ್ಲಿ ಬಲಿಷ್ಠ ಹಾಗೂ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ತಂಡವನ್ನು ಮಗುಚಿ ಹಾಕಿದೆ. ಜತೆಗೆ ಅಂಕಪಟ್ಟಿಲ್ಲಿಯೂ(IPL 2024 Points Table) ಪ್ರಗತಿ ಸಾಧಿಸಿದೆ.

ಹೈದರಾಬಾದ್​ ತಂಡ ಗೆಲುವಿನೊಂದಿಗೆ 2 ಸ್ಥಾನಗಳ ಏರಿಕೆ ಕಂಡು 5ನೇ ಸ್ಥಾನಕ್ಕೇರಿದೆ. ಈ ಪಂದ್ಯಕ್ಕೂ ಮುನ್ನ 7ನೇ ಸ್ಥಾನಿಯಾಗಿತ್ತು. ಚೆನ್ನೈ ಸೋಲು ಕಂಡರೂ ಕೂಡ 3ನೇ ಸ್ಥಾನದಲ್ಲೇ ಮುಂದುವರಿದಿದೆ. ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಅಗ್ರಸ್ಥಾನದಲ್ಲಿದೆ. ಇಂದು ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಆರ್​ಸಿಬಿ ವಿರುದ್ಧ ಗೆದ್ದರೆ ಅಗ್ರಸ್ಥಾನ ವಶಪಡಿಸಿಕೊಳ್ಳಲಿದೆ.

ನೂತನ ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೋಲ್ಕೊತಾ ನೈಟ್‌ ರೈಡರ್ಸ್​3306 (+2.518)
ರಾಜಸ್ಥಾನ್​ ರಾಯಲ್ಸ್​3306 (+1.249)
​ಚೆನ್ನೈ ಸೂಪರ್​ ಕಿಂಗ್ಸ್​3214 (+0.976)
ಲಕ್ನೋ ಸೂಪರ್​ ಜೈಂಟ್ಸ್​3214(+0.483)
ಹೈದರಾಬಾದ್​​4224 (+0.409)
ಪಂಜಾಬ್​4224 (-0.220)
ಗುಜರಾತ್​​​4224 (-0.580)
ಆರ್​ಸಿಬಿ4132 (-0.876)
ಡೆಲ್ಲಿ ಕ್ಯಾಪಿಟಲ್ಸ್​4132 (-1.347)
ಮುಂಬೈ ಇಂಡಿಯನ್ಸ್​3030 (-1.423)

ಚೆನ್ನೈಗೆ 6 ವಿಕೆಟ್​ ಸೋಲು

ಏಡೆನ್​ ಮಾರ್ಕ್ರಮ್​ (36 ಎಸೆತಕ್ಕೆ 50 ರನ್​) ಅವರ ಅರ್ಧ ಶತಕ ಹಾಗೂ ಅಭಿಷೇಕ್ ಶರ್ಮಾ (12 ಎಸೆತಕ್ಕೆ 37 ರನ್​) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮಿಂಚಿದ ಸನ್​ ರೈಸರ್ಸ್​ ಹೈದರಾಬಾದ್ ತಂಡ ಐಪಿಎಲ್​ನ 2024ನೇ (IPL 2024) ಆವೃತ್ತಿಯ 18ನೇ ಪಂದ್ಯದಲ್ಲಿ ಬಲಿಷ್ಠ ಸಿಎಸ್​ಕೆ ತಂಡವನ್ನು ಸೋಲಿಸಿದೆ. ಇದರೊಂದಿಗೆ ಹೈದರಾಬಾದ್ ಮೂಲದ ತಂಡ ಹಾಲಿ ಆವೃತ್ತಿಯಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿದೆ. ಹೈದರಾಬಾದ್​ ತಂಡ ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿತು. ಅದೇ ರೀತಿ ತವರಿನ ಪ್ರೇಕ್ಷಕರಿಗೆ ಗೆಲುವಿನ ಸಂಭ್ರಮವನ್ನು ಉಣಬಡಿಸಿದೆ.

ಇದನ್ನೂ ಓದಿ IPL 2024 : ಐಪಿಎಲ್​ ಪಂದ್ಯಕ್ಕೆ ನೀರು ಎಲ್ಲಿಂದ? ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನೋಟಿಸ್​

ಇಲ್ಲಿನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಸನ್​​ ರೈಸರ್ಸ್​ ಹೈದರಾಬಾದ್​ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಋತುರಾಜ್ ಗಾಯಕ್ವಾಡ್​ ನೇತೃತ್ವದ ಬಳಗ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 165 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಹೈದರಾಬಾದ್ ತಂಡ ಇನ್ನೂ 11 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್​ ನಷ್ಟ ಮಾಡಿಕೊಂಡು 166 ರನ್ ಬಾರಿಸಿ ಗೆಲುವು ಸಾಧಿಸಿತು. ಈ ಸೋಲಿನ ಹೊರತಾಗಿಯೂ ಸಿಎಸ್​ಕೆ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಕಾಪಾಡಿಕೊಂಡಿತು. ಚೆನ್ನೈಗೂ ಹಾಲಿ ಆವೃತ್ತಿಯಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡು ಸೋಲು ಹಾಗೂ ಅಷ್ಟೇ ಸಂಖ್ಯೆಗೆ ಗೆಲುವು ಲಭಿಸಿದೆ.

Exit mobile version