ಬೆಂಗಳೂರು: ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ನ 52ನೇ ಪಂದ್ಯದಲ್ಲಿ ತವರು ತಂಡವಾದ ಆರ್ಸಿಬಿ(Royal Challengers Bengaluru) 4 ವಿಕೆಟ್ಗಳಿಂದ ಗುಜರಾತ್ ಟೈಟಾನ್ಸ್ಗೆ(Gujarat Titans) ಸೋಲಿನ ರುಚಿ ತೋರಿಸಿತು. ಜತೆಗೆ ಅಂಕಪಟ್ಟಿಯಲ್ಲಿಯೂ(IPL 2024 Points Table) ಭಾರೀ ಪ್ರಗತಿ ಸಾಧಿಸಿ ಕೊನೆಯ ಸ್ಥಾನದಿಂದ 7ನೇ ಸ್ಥಾನಕ್ಕೇರಿದೆ. 5 ಬಾರಿಯ ಚಾಂಪಿಯನ್ ಮುಂಬೈ ಕೊನೆಯ ಸ್ಥಾನಕ್ಕೆ ಕುಸಿದಿದೆ.
ಇಂದು ನಡೆಯುವ ಡಬಲ್ ಹೆಡರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಹಗಲು ಪಂದ್ಯದಲ್ಲಿ ಮುಖಾಮುಖಿಯಾದರೆ, ರಾತ್ರಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೆಕೆಆರ್ ಸೆಣಸಾಟ ನಡೆಸಲಿವೆ. ಎಲ್ಲ ನಾಲ್ಕು ತಂಡಗಳಿಗೂ ಪ್ಲೇ ಆಫ್ ಪ್ರವೇಶದ ನಿಟ್ಟಿನಲ್ಲಿ ಇದು ಮಹತ್ವದ ಪಂದ್ಯವಾಗಿದೆ. ಹೀಗಾಗಿ ಪಂದ್ಯಗಳು ತೀವ್ರ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಅಧಿಕವಾಗಿದೆ.
ಅಂಕಪಟ್ಟಿ
ತಂಡ | ಪಂದ್ಯ | ಗೆಲುವು | ಸೋಲು | ಅಂಕ |
ರಾಜಸ್ಥಾನ್ ರಾಯಲ್ಸ್ | 9 | 8 | 1 | 16 (+0.694) |
ಕೆಕೆಆರ್ | 10 | 7 | 3 | 14 (+1.098) |
ಲಕ್ನೋ | 10 | 6 | 4 | 12 (+0.094) |
ಹೈದರಾಬಾದ್ | 10 | 6 | 5 | 12 (+0.072) |
ಚೆನ್ನೈ | 10 | 5 | 5 | 10 (+0.627) |
ಡೆಲ್ಲಿ | 11 | 5 | 6 | 10 (-0.442) |
ಆರ್ಸಿಬಿ | 11 | 4 | 7 | 8 (-0.049) |
ಪಂಜಾಬ್ | 10 | 4 | 6 | 8 (-0.062) |
ಗುಜರಾತ್ | 11 | 4 | 7 | 8 (-1.320) |
ಮುಂಬೈ | 11 | 3 | 8 | 6 (-0.356) |
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿದ ಕಾರಣ 19.3 ಓವರ್ಗಳಲ್ಲಿ 147 ರನ್ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆರ್ಸಿಬಿ ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು.
ಇದನ್ನೂ ಓದಿ IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್
ಸಾಧಾರಣ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಆರ್ಸಿಬಿ ಉತ್ತಮ ಆರಂಭವನ್ನೇ ಪಡೆಯಿತು. ಫಾಫ್ ಡು ಪ್ಲೆಸಿಸ್ 23 ಎಸೆತಕ್ಕೆ 63 ರನ್ ಬಾರಿಸಿದರು. ಕೇವಲ 3.1 ಓವರ್ಗಳಲ್ಲಿ 50 ರನ್ ಗಡಿ ದಾಟಿಸಿದ ಕೊಹ್ಲಿ ಮತ್ತು ಫಾಪ್ ಗೆಲುವು ಸುಲಭ ಎಂದು ಅಂದುಕೊಳ್ಳುವಂತೆ ಮಾಡಿದರು. ಈ ಜೋಡಿ ಮೊದಲ ವಿಕೆಟ್ಗೆ 5.5 ಓವರ್ಗಳಲ್ಲಿ 92 ರನ್ ಬಾರಿಸಿತು. ಆದರೆ ಈ ವೇಳೆ ನಾಟಕೀಯ ಕುಸಿತ ಕಂಡು 17 ರನ್ಗಳಿಗೆ 6 ವಿಕೆಟ್ ಕಳೆದುಕೊಂಡ ಆರ್ಸಿಬಿ ಅಭಿಮಾನಿಗಳಿಗೆ ಆತಂಕ ಉಂಟು ಮಾಡಿಯು. ಆದರೆ, ಕೊನೆಯಲ್ಲಿ ಪಿನಿಶರ್ ದಿನೇಶ್ ಕಾರ್ತಿಕ್ 21 ರನ್ ಹಾಗೂ ಸ್ವಪ್ನಿಲ್ ಸಿಂಗ್ 15 ರನ್ ಬಾರಿಸಿ ಗೆಲುವು ತಂದುಕೊಟ್ಟರು.