Site icon Vistara News

IPL 2024: ಇಂದು ಆರ್‌ಸಿಬಿ- ಕೆಕೆಆರ್‌ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ipl 2023

ಬೆಂಗಳೂರು: ಇಂದು (ಮಾರ್ಚ್‌ 29) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಕೋಲ್ಕತಾ ನೈಟ್ ರೈಡರ್ಸ್ (Kolkata Knight Riders) ತಂಡವನ್ನು (KKR) ಎದುರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಸಜ್ಜಾಗಿದೆ. ಇದು ಈ ವರ್ಷದ ಐಪಿಎಲ್‌ ಪಂದ್ಯಾವಳಿಯಲ್ಲಿ (IPL 2024) ಆರ್‌ಸಿಬಿಗೆ (RCB) ಬೆಂಗಳೂರು ಮೈದಾನದಲ್ಲಿ ಸತತ ಎರಡನೇ ಪಂದ್ಯ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ 2024 ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ಮಾರ್ಚ್‌ 29ರ ಶುಕ್ರವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ ಹೀಗಿದೆ:

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು

ಐಪಿಎಲ್ 2024ರ ಆವೃತ್ತಿಯಲ್ಲಿ ಆರ್‌ಸಿಬಿ ಪಡೆ ಮೂರನೇ ಪಂದ್ಯವನ್ನಾಡುತ್ತಿದೆ. ಕೆಕೆಆರ್ ತನ್ನ ಎರಡನೇ ಪಂದ್ಯಕ್ಕಾಗಿ ಉದ್ಯಾನ ನಗರಿಗೆ ಆಗಮಿಸಿದೆ. ಶ್ರೇಯಸ್‌ ಅಯ್ಯರ್‌ ಪಡೆಯು, ತನ್ನ ತವರು ಮೈದಾನದಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಜಯ ಸಾಧಿಸಿತ್ತು. ಅತ್ತ ಆರ್‌ಸಿಬಿ ತಂಡವು ಆಡಿರುವ 2 ಪಂದ್ಯಗಳಲ್ಲಿ, ಪಂಜಾಬ್‌ ವಿರುದ್ಧದ ಕೊನೆಯ ಪಂದ್ಯ ಗೆದ್ದು 2 ಅಂಕ ಸಂಪಾದಿಸಿದೆ. ತಂಡವು ಸದ್ಯ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದರೆ, ಕೋಲ್ಕತಾ 1 ಪಂದ್ಯದಿಂದ 2 ಅಂಕ ಗಳಿಸಿ 4ನೇ ಸ್ಥಾನದಲ್ಲಿದೆ.

ಆರ್‌ಸಿಬಿ ಮತ್ತು ಕೆಕೆಆರ್‌ ತಂಡಗಳು ಈವರೆಗೆ ಐಪಿಎಲ್‌ನಲ್ಲಿ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಬೆಂಗಳೂರು ತಂಡ 14 ಪಂದ್ಯಗಳಲ್ಲಿ ಗೆದ್ದಿದ್ದರೆ, ಕೋಲ್ಕತಾ 18 ಪಂದ್ಯಗಳಲ್ಲಿ ಜಯಭೇರಿ ಬಾರಿಸಿ ಮುನ್ನಡೆ ಕಾಯ್ದುಕೊಂಡಿದೆ. ಕೆಕೆಆರ್ ವಿರುದ್ಧ ಬೆಂಗಳೂರು ತಂಡ ಗರಿಷ್ಠ ಎಂದರೆ 213 ರನ್ ಗಳಿಸಿದೆ. ಅತ್ತ ಬೆಂಗಳೂರು ತಂಡದ ವಿರುದ್ಧ ಗಳಿಸಿದ 222 ರನ್‌ ಕೆಕೆಆರ್ ಗರಿಷ್ಠ ಮೊತ್ತವಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಚಿಕ್ಕ ಬೌಂಡರಿ ವ್ಯಾಪ್ತಿಯನ್ನು ಹೊಂದಿರುವುದರಿಂದ ಇದು ಬ್ಯಾಟರ್‌ಗಳಿಗೆ ಅನುಕೂಲ. ಹೀಗಾಗಿ ಬ್ಯಾಟರ್‌ಗಳ ಸ್ವರ್ಗವಾಗಿರುವ ಮೈದಾನದಲ್ಲಿ ರನ್‌ ಮಳೆ ಹರಿಯುವ ಸಾಧ್ಯತೆ ದಟ್ಟವಾಗಿದೆ. ಈ ಮೈದಾನವು ಸಾಂಪ್ರದಾಯಿಕವಾಗಿ ವೇಗಿಗಳಿಗೆ ಹೆಚ್ಚು ನೆರವಾಗುತ್ತದೆ.

ಇದನ್ನೂ ಓದಿ: IPL 2024 : ರಾಯಲ್ಸ್​ಗೆ 2ನೇ ವಿಜಯ , ಡೆಲ್ಲಿಗೆ ಸತತ ಎರಡನೇ ಸೋಲು

Exit mobile version