Site icon Vistara News

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

IPL 2024

Viral Video: RCB Fan Does Silence Gesture As The Team Defeats SRH By 35 Runs In IPL 2024 Clash

ಹೈದರಾಬಾದ್:‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2024) ಎಂದರೆ, ಅದು ಸ್ಟೇಡಿಯಂನಲ್ಲಿ ಕೇವಲ ಆಟಗಾರರ ನಡುವಿನ ಕಾಳಗ ಅಲ್ಲ. ಮೈದಾನದಲ್ಲಿ ಪಂದ್ಯ ಕುತೂಹಲ ಹಂತ ತಲುಪಿದಾಗ, ಯಾವುದೇ ತಂಡ ಸೋತಾಗ ಎದುರಾಳಿ ತಂಡದ ಅಭಿಮಾನಿಗಳು ಕೂಡ ತಿರುಗೇಟು ನೀಡುತ್ತಾರೆ. ಅದರಲ್ಲೂ, ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮೈದಾನದಲ್ಲೂ ಅಥವಾ ಹೊರಗೂ ಜೋರಾಗಿರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು (RCB Fans) ಎಸ್‌ಆರ್‌ಎಚ್‌ ಅಭಿಮಾನಿಗಳ (SRH Fans) ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡಿದ್ದಾರೆ.

ಹೌದು, ಪ್ರಸಕ್ತ ಆವೃತ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಎಸ್‌ಆರ್‌ಎಚ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋಲನುಭವಿಸಿದ್ದಾಗ ಎಸ್‌ಆರ್‌ಎಚ್‌ ಅಭಿಮಾನಿಗಳು ಸುಮ್ಮನಿರಿ, ಬಾಯಿಮುಚ್ಚಿ ಎಂಬ ರೀತಿಯಲ್ಲಿ ಸನ್ನೆ ಮಾಡಿದ್ದರು. ಇದು ಸಹಜವಾಗಿಯೇ ಆರ್‌ಸಿಬಿ ಅಭಿಮಾನಿಗಳನ್ನು ಕೆರಳಿಸಿತ್ತು. ಆದರೆ, ಗುರುವಾರ (ಏಪ್ರಿಲ್‌ 25) ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. ಇದಾದ ಬಳಿಕ ಆರ್‌ಸಿಬಿ ಅಭಿಮಾನಿಗಳು ಕೂಡ ಗಪ್‌ ಚುಪ್‌ ಎಂಬ ಸನ್ನೆ ಮಾಡುವ ಮೂಲಕ ಎಸ್‌ಆರ್‌ಎಚ್‌ ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಒಟ್ಟು ನಾಲ್ಕು ಅಂಕಗಳು ದೊರಕಿದವು.

ಕೊಹ್ಲಿ, ಪಾಟೀದಾರ್ ಅರ್ಧ ಶತಕ

ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿಯ ಪ್ರದರ್ಶನವೇನೂ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್​ ವಿರಾಟ್ ಕೊಹ್ಲಿ ಮತ್ತೆ ಸ್ಟ್ರೈಕ್​ ರೇಟ್​ ಟೀಕೆಯನ್ನು ಮರೆತು 43 ಎಸೆತಕ್ಕೆ 51 ರನ್ ಬಾರಿಸಿದರು. ಅದಕ್ಕೆ ಅವರು ಟೀಕೆಯನ್ನೂ ಎದುರಿಸಿದರು. ಆದರೆ, ರಜತ್ ಪಾಟೀದಾರ್​ 20 ಎಸೆತಕ್ಕೆ 50 ರನ್ ಬಾರಿಸಿ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾದರು. ಕ್ಯಾಮೆರೂನ್ ಗ್ರೀನ್​ 37 ರನ್ ಬಾರಿಸಿದರೆ ಫಾಫ್​​ ಡು ಪ್ಲೆಸಿಸ್​ 25 ಕೊಡುಗೆ ಕೊಟ್ಟರು. ಹೀಗಾಗಿ ಪೇಚಾಡಿ 200 ರನ್​ಗಳ ಗಡಿ ದಾಟಿತು. ಬೌಲಿಂಗ್‌ನಲ್ಲಿ ಪರಾಕ್ರಮ ತೋರಿದ ಆರ್‌ಸಿಬಿ ಬೌಲರ್‌ಗಳು ತಂಡಕ್ಕೆ 35 ರನ್‌ಗಳ ಗೆಲುವು ತಂದುಕೊಟ್ಟರು.

ಇದನ್ನೂ ಓದಿ: Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Exit mobile version