Site icon Vistara News

Kannadiga quota: ಆರ್​ಸಿಬಿ ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡಿ; ಅಭಿಮಾನಿಗಳಿಂದ ಆಗ್ರಹ

Kannadiga quota

Kannadiga quota: 'Reservation for RCB players too?'; Internet in splits amid controversial Bill in Karnataka

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ(Kannadiga quota) ಶೇ.50 ಹಾಗೂ ಆಡಳಿತಾತ್ಮಕವಲ್ಲದ(Karnataka Jobs Reservation) ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ಆರ್​ಸಿಬಿ(RCB Reservation) ತಂಡದಲ್ಲಿಯೂ ಕೂಡ ಮೀಸಲಾತಿ ನೀಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ಹೌದು, ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲಿ ಪ್ರತಿ ಬಾರಿಯೂ ಕನ್ನಡಿಗ ಆಟಗಾರರಿಗೆ ಅವಕಾಶ ನೀಡುವುದಿಲ್ಲ. ಒಂದೆಡರು ಮಂದಿಯನ್ನು ಹರಾಜಿನಲ್ಲಿ ಖರೀದಿ ಮಾಡಿದರೂ ಕೂಡ ಇವರಿಗೆ ಆಡುವ ಅವಕಾಶ ನೀಡದೆ ಕೇವಲ ಬೆಂಚ್​ ಕೂರಿಸಿಯೇ ಬಿಡುತ್ತಾರೆ. ಪ್ರತಿ ಬಾರಿ ಹರಾಜು ನಡೆದಾಗಲೂ ಆರ್​ಸಿಬಿ ಅಭಿಮಾನಿಗಳು ಕನ್ನಡಿಗ ಆಟಗಾರರ ಕಡೆಗಣನೆಯ ಬಗ್ಗೆ ಫ್ರಾಂಚೈಸಿ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಇರುತ್ತಾರೆ. ಇದೀಗ ಕರ್ನಾಟಕದಲ್ಲಿ ಖಾಸಗಿ ಕೈಗಾರಿಕೆಗಳಲ್ಲಿ ಸರ್ಕಾರ ಮೀಸಲಾತಿ ಜಾರಿಗೆ ತರುವ ಚಿಂತನೆ ನಡೆಸಿದ ಬೆನ್ನಲ್ಲೇ ಐಪಿಎಲ್​ನಲ್ಲಿ ಆರ್​ಸಿಬಿ ತಂಡದಲ್ಲಿಯೂ ಶೇ 50ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ.

ಆರ್​ಸಿಬಿಯ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೀಸಲಾತಿ ಜಾರಿ ಮಾಡುವಂತೆ ಹಲವು ಟ್ವೀಟ್​ ಮಾಡಲಾರಂಭಿಸಿದ್ದಾರೆ. ಐಪಿಎಲ್​ ಆರಂಭವಾಗಿ 17 ಆವೃತ್ತಿ ಕಳೆದರೂ ಕೂಡ ಆರ್​ಸಿಬಿ ಕಪ್​ ಗೆದ್ದಿಲ್ಲ. ನಮ್ಮ ರಾಜ್ಯದ ಅದೆಷ್ಟೋ ಸ್ಟಾರ್​ ಆಟಗಾರರಿದ್ದರೂ ಕೂಡ ಅವರನ್ನು ಆರ್​ಸಿಬಿ ಖರೀದಿ ಮಾಡದೆ ಸರಿಯಾಗಿ ಆಡಲು ಬಾರದ ಆಟಗಾರರಿಗೆ ಅತ್ಯಧಿಕ ಮೊತ್ತದ ಬಿಡ್​ ಮಾಡಿ ತಂಡ ಸೇರಿಸಿಕೊಳ್ಳುತ್ತಿದೆ. ಈ ಬಾರಿಯ ಮೆಗಾ ಹರಾಜಿನಲ್ಲಾದರು ಕನ್ನಡಿಗ ಆಟಗಾರರಿಗೆ ಅವಕಾಶ ನೀಡಲಿದೆಯಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ RCB: ಆರ್​ಸಿಬಿ ಕಪ್​ ಗೆಲ್ಲದಿರಲು ನೈಜ ಕಾರಣ ತಿಳಿಸಿದ ತಂಡದ ಮಾಜಿ ಆಟಗಾರ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಮಸೂದೆಯಲ್ಲೇನಿದೆ?

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

Exit mobile version