Site icon Vistara News

Kedar Jadhav Retirement: ಧೋನಿ ಶೈಲಿಯಲ್ಲೇ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕೇದಾರ್​ ಜಾಧವ್

Kedar Jadhav Retirement

Kedar Jadhav Retirement: Kedar Jadhav takes MS Dhoni's route to announce retirement from all forms of cricket

ಮುಂಬಯಿ: ಟೀಮ್​ ಇಂಡಿಯಾದ ಹಿರಿಯ ಆಟಗಾರ, ಮಾಧ್ಯಮ ಕ್ರಮಾಂಕದ ಬ್ಯಾಟರ್​ ಕೇದಾರ್​ ಜಾಧವ್​(Kedar Jadhav ) ಅವರು ಅಂತಾರಾಷ್ಟ್ರೀಯ ಸೇರಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಸೋಮವಾರ ಅವರು ತಮ್ಮ ನಿವೃತ್ತಿಯನ್ನು(Kedar Jadhav Retirement) ಪ್ರಕಟಿಸಿದರು.

“1500 ಗಂಟೆಗಳಿಂದ ನನ್ನ ವೃತ್ತಿಜೀವನದುದ್ದಕ್ಕೂ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ನನ್ನನ್ನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಎಂದು ಪರಿಗಣಿಸಿ” ಎಂದು ಕೇದಾರ್ ಜಾಧವ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವ ಮೂಲಕ ತಮ್ಮ ನಿವೃತ್ತಿಯನ್ನು ಪ್ರಕಟಿಸಿದರು.

ಜಾಧವ್​ ಅವರು ತಮ್ಮ ನಿವೃತ್ತಿ ಘೋಷಣೆಯನ್ನು ಎಂಎಸ್ ಧೋನಿ(Jadhav takes MS Dhoni’s route) ಅವರಂತೆ ಮಾಡಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ 2019 ರ ವಿಶ್ವಕಪ್‌ನಲ್ಲಿ ಭಾರತಕ್ಕಾಗಿ ತನ್ನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದ ಧೋನಿ, ಒಂದು ವರ್ಷದ ನಂತರ, ಆಗಸ್ಟ್ 15, 2020 ರಂದು ತಮ್ಮ ಇನ್​ಸ್ಟಾಗ್ರಾಮ್​ ಪ್ರೊಫೈಲ್‌ನಲ್ಲಿ ಎರಡು ಸಾಲಿನ ಹೇಳಿಕೆಯೊಂದಿಗೆ ನಿವೃತ್ತಿ ಘೋಷಿಸುವ ಮೂಲಕ ತಮ್ಮ ಅಭಿಮಾನಿಗಳಿಗೆ ಆಘಾತ ನೀಡಿದ್ದರು. “ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು. 1929 ಗಂಟೆಗಳಿಂದ ನನ್ನ ವೃತ್ತಿಜೀವನದುದ್ದಕ್ಕೂ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ” ಎಂದು ಬರೆದುಕೊಳ್ಳುವ ಮೂಲಕ ಧೋನಿ ನಿವೃತ್ತಿ ಪ್ರಕಟಿಸಿದ್ದರು. ಇದೇ ಹಾದಿಯನ್ನು ಜಾಧವ್​ ಕೂಡ ಅನುಸರಿಸಿದ್ದಾರೆ.

ಇದನ್ನೂ ಓದಿ T20 World Cup 2024 : ಉಗ್ರರ ಬೆದರಿಕೆ ನಡುವೆಯೂ ನ್ಯೂಯಾರ್ಕ್​ನಲ್ಲಿ ಭಾರತ ತಂಡದ ಆಟಗಾರರ ಬಿಂದಾಸ್​ ತಿರುಗಾಟ!

39 ವರ್ಷದ ಕೇದಾರ್ ಜಾಧವ್ 2014 ಮತ್ತು 2020 ರ ನಡುವೆ ಭಾರತಕ್ಕಾಗಿ 73 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದಾರೆ. ಜಾಧವ್ 2019 ರ ವಿಶ್ವಕಪ್ ಆಡಿದ್ದರು. ಕೇದಾರ್ ಜಾಧವ್ ಭಾರತ ಪರ ಕೊನೆಯ ಕೊನೆಯ ಬಾರಿಗೆ ಆಡಿದ್ದು 2020ರಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ. ಇದಾದ ಬಳಿಕ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಕೇದಾರ್ ಜಾಧವ್ 73 ಏಕದಿನ ಪಂದ್ಯಗಳಲ್ಲಿ 2 ಶತಕ ಮತ್ತು 6 ಅರ್ಧಶತಕ ಸೇರಿದಂತೆ 1389 ರನ್ ಗಳಿಸಿದ್ದಾರೆ. 9 ಟಿ20 ಪಂದ್ಯಗಳಲ್ಲಿ 122 ರನ್ ಗಳಿಸಿದ್ದಾರೆ.

ಫೆಬ್ರವರಿಯಲ್ಲಿ ಪುಣೆಯಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ವಿದರ್ಭ ವಿರುದ್ಧ ಮಹಾರಾಷ್ಟ್ರದ ಪರವಾಗಿ ಸ್ಪರ್ಧಾತ್ಮಕ ಪಂದ್ಯವನ್ನು ಆಡಿದ್ದರು. ಜಾಧವ್ ಮಹಾರಾಷ್ಟ್ರದ 2023-24 ರ ರಣಜಿ ಟ್ರೋಫಿ ಅಭಿಯಾನದಲ್ಲಿ ಒಂದು ಶತಕ ಮತ್ತು ಅರ್ಧಶತಕ ಸೇರಿದಂತೆ 5 ಪಂದ್ಯಗಳಲ್ಲಿ 379 ರನ್ ಗಳಿಸಿ ಉತ್ತಮ ಫಾರ್ಮ್‌ನಲ್ಲಿದ್ದರು.

ಕೇದಾರ್ ಜಾಧವ್ 93 ಐಪಿಎಲ್ ಪಂದ್ಯಗಳನ್ನು ಆಡಿದ್ದು 1196 ರನ್ ಗಳಿಸಿದ್ದಾರೆ. ಅವರು 2018 ರಲ್ಲಿ ಐಪಿಎಲ್​ ಪ್ರಶಸ್ತಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು. ಜಾಧವ್ 2010 ರಲ್ಲಿ ಡೆಲ್ಲಿ ಡೇರ್‌ ಡೆವಿಲ್ಸ್ (ಈಗ ದೆಹಲಿ ಕ್ಯಾಪಿಟಲ್ಸ್), 2011 ರಲ್ಲಿ ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು 2013 ಮತ್ತು 2015 ರ ನಡುವೆ ಡೆಲ್ಲಿ ಮತ್ತು ಆರ್​ಸಿಬಿ ಪರ ಆಡಿದ್ದಾರೆ.

Exit mobile version