Site icon Vistara News

KL Rahul: ಟಿ20 ವಿಶ್ವಕಪ್​ನಲ್ಲಿ ರಾಹುಲ್​ಗೆ ಅವಕಾಶ ಸಿಗದಿರಲು ಕಾರಣ ತಿಳಿಸಿದ ಮಾಜಿ ಆಟಗಾರ

KL Rahul

ಮುಂಬಯಿ: ಭಾರತದ ಮಾಜಿ ವೇಗದ ಬೌಲರ್ ಇರ್ಫಾನ್ ಪಠಾಣ್(Irfan Pathan) ಭಾರತದ ಟಿ20 ವಿಶ್ವಕಪ್(T20 World Cup) ತಂಡದಿಂದ ಕೆ.ಎಲ್​ ರಾಹುಲ್(KL Rahul) ಅವರನ್ನು ಕೈಬಿಡಲು ಕಾರಣ ಏನೆಂಬುದನ್ನು ವಿವರಿಸಿದ್ದಾರೆ. ಅಹಮದಾಬಾದ್‌ನಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ನಡೆಸಿದ ಸಭೆಯ ಬಳಿಕ 15 ಸದಸ್ಯರ ತಂಡವನ್ನು ಪ್ರಕಟಿಸಲಾಯಿತು. ರಿಷಭ್​ ಪಂತ್​(Rishabh Pant) ಮೊದಲ ಆಯ್ಕೆಯ ಕೀಪರ್​ ಆಗಿದ್ದರೂ ಕೂಡ ರಾಹುಲ್​ ಅವರಿಗೆ ಅವಕಾಶ ಸಿಗಬಹುದೆಂದು ಎಲ್ಲರು ನಿರೀಕ್ಷೆ ಮಾಡಿದ್ದರು. ಆದರೆ ತಂಡ ಪ್ರಕಟಗೊಂಡಾಗ ಅವರ ಬದಲು ಸಂಜು ಸ್ಯಾಮ್ಸನ್​ ಹೆಸರಿತ್ತು. ಇದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು.

“ದುರದೃಷ್ಟವಶಾತ್ ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದ್ದೇ ಅವರಿಗೆ ಮುಳುವಾಯಿತು. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ. ಒಂದೊಮ್ಮೆ ಏಕದಿನ ವಿಶ್ವಕಪ್​ನಂತೆ ಐಪಿಎಲ್​ನಲ್ಲಿಯೂ ಮಧ್ಯಮ ಕ್ರಮಾಂಕದಲ್ಲಿ ರಾಹುಲ್​ ಆಡುತ್ತಿದ್ದರೆ ಅವರಿಗೆ ಸ್ಥಾನ ಸಿಗುತ್ತಿತ್ತು” ಎಂದು ಇರ್ಫಾನ್​ ಪಠಾಣ್​ ಹೇಳಿದ್ದಾರೆ.

ಆರಂಭಿಕ ಸ್ಥಾನಕ್ಕೆ ರೋಹಿತ್​ ಶರ್ಮ ಜತೆ ಶುಭಮನ್​ ಗಿಲ್​ ಮತ್ತು ಜೈಸ್ವಾಲ್​ ರೇಸ್​ನಲ್ಲಿದ್ದರು. ಹೀಗಾಗಿ ರಾಹುಲ್​ಗೆ ಈ ಸ್ಥಾನ ಸಿಗುವು ಅನುಮಾನ ಎನ್ನುವುದು ಮೊದಲೇ ತಿಳಿದಿತ್ತು. ಬಿಸಿಸಿಐ ಮತ್ತು ಆಯ್ಕೆ ಸಮಿತಿ ರಿಷಭ್​ ಪಂತ್​ ಫಿಟ್​ ಆಗದಿದ್ದರೆ ಅವರ ಸ್ಥಾನದಲ್ಲಿ ಕೀಪಿಂಗ್​ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಆಡುವ ಆಟಗಾರ ಹುಡುಕಾಟದಲ್ಲಿತ್ತು. ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದರೆ, ಸಂಜು ವಿಕೆಟ್​ ಕೀಪಿಂಗ್​ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್​ ಬೀಸುತ್ತಿದ್ದಾರೆ. ಇದೇ ಕಾರಣ ಸಂಜುಗೆ(Sanju Samson) ಅವಕಾಶ ಸಿಕ್ಕಿತು ಎಂದು ಇರ್ಫಾನ್​ ವಿವರಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

Exit mobile version