Site icon Vistara News

Mohammad Amir: ನಿವೃತ್ತಿ ಹಿಂಪಡೆದು ಟಿ20 ವಿಶ್ವಕಪ್ ಆಡಲು ಸಿದ್ಧವಾದ ಪಾಕ್ ತಂಡದ ಘಾತಕ ವೇಗಿ ​

Mohammad Amir

ಕರಾಚಿ: ಪಾಕಿಸ್ತಾನದ ವಿವಾದಾತ್ಮಕ ಎಡಗೈ ವೇಗಿ ಮೊಹಮ್ಮದ್ ಅಮೀರ್(Mohammad Amir) ಅಂತಾರಾಷ್ಟ್ರೀಯ ನಿವೃತ್ತಿಯಿಂದ ಹೊರಬದಿದ್ದು ಇದೇ ಜೂನ್‌ನಲ್ಲಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​(T20 World Cup) ಆಡುವ ಬಯಕೆ ವ್ಯಕ್ತಪಡಿಸಿದ್ದಾರೆ.

ಅಮೀರ್​ ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ 2010 ರಿಂದ 2015 ರ ನಡುವೆ ಐದು ವರ್ಷಗಳ ಕಾಲ ಕ್ರಿಕೆಟ್‌ನಿಂದ ನಿಷೇಧಕ್ಕೊಳಗಾದ್ದರು. 2021 ರಲ್ಲಿ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು. ಆದಾಗ್ಯೂ, ಅವರು ಜಗತ್ತಿನಾದ್ಯಂತ T20 ಲೀಗ್‌ಗಳಲ್ಲಿ ಆಡುವುದನ್ನು ಮುಂದುವರೆಸಿದ್ದಾರೆ. ಇದೀಗ ಅವರು ತಮ್ಮ ನಿವೃತ್ತಿಯನ್ನು ಹಿಂಪಡೆದಿದ್ದಾರೆ.

“ನಾನು ಇನ್ನೂ ಪಾಕಿಸ್ತಾನಕ್ಕಾಗಿ ಆಡುವ ಕನಸು ಕಾಣುತ್ತೇನೆ! ಕೆಲವೊಮ್ಮೆ ನಾವು ನಮ್ಮ ನಿರ್ಧಾರಗಳನ್ನು ಮರುಪರಿಶೀಲಿಸಬೇಕಾದ ಹಂತಗಳಿಗೆ. ನನ್ನ ಮತ್ತು ಪಿಸಿಬಿ ನಡುವೆ ಕೆಲವು ಸಕಾರಾತ್ಮಕ ಚರ್ಚೆಗಳು ನಡೆದಿವೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರ ಹೊಸ ಆಡಳಿತ ಮಂಡಳಿ ನನ್ನ ನಿವೃತ್ತಿಯನ್ನು ಹಿಂತೆಗೆದುಕೊಳ್ಳುವ ವಿಶ್ವಾಸವಿದೆ” ಎಂದು ಅಮೀರ್​ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಅಮೀರ್​ 2020 ರ ಆಗಸ್ಟ್‌ನಲ್ಲಿ ಮ್ಯಾಂಚೆಸ್ಟರ್‌ನಲ್ಲಿ ನಡೆದ ಟಿ20ಯಲ್ಲಿ ಪಾಕಿಸ್ತಾನ ಪರ ಕೊನೆಯ ಬಾರಿಗೆ ಆಡಿದ್ದರು.

“ಕುಟುಂಬದೊಂದಿಗೆ ಚರ್ಚಿಸಿದ ನಂತರ ನಾನು ಈ ನಿರ್ಧಾರ ಕೈಗೊಂಡಿದ್ದಾನೆ. ಮುಂಬರುವ ಟಿ20 ವಿಶ್ವಕಪ್​ಗೆ ನಾನು ಲಭ್ಯನಿದ್ದೇನೆ. ನನ್ನ ವೈಯಕ್ತಿಕ ನಿರ್ಧಾರಗಳಿಗೆ ಮುಂಚಿತವಾಗಿ ನನ್ನ ದೇಶಕ್ಕಾಗಿ ಇದನ್ನು ಮಾಡಲು ನಾನು ಬಯಸುತ್ತೇನೆ. ಹಸಿರು ಜರ್ಸಿ ಧರಿಸಿ ಮತ್ತು ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ಯಾವಾಗಲೂ ಮುಂದುವರಿಯುತ್ತದೆ” ಎಂದು ಅಮೀರ್​ ಹೇಳಿದರು. 32 ವರ್ಷದ ಅಮೀರ್ ಇದುವರೆಗೆ 36 ಟೆಸ್ಟ್‌ಗಳು, 61 ಏಕದಿ ಮತ್ತು 50 ಟಿ20 ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ್ದಾರೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ನಂದಿನಿ ಪ್ರಾಯೋಜಕತ್ವ?

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

Exit mobile version