Site icon Vistara News

Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

Mohammed Shami comeback

Mohammed Shami comeback: 'It’s difficult to...': Mohammed Shami opens up on his international comeback

ಬೆಂಗಳೂರು: ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಂಡಿರುವ ಮೊಹಮ್ಮದ್ ಶಮಿ(Mohammed Shami) ಮತ್ತೆ ಟೀಮ್​ ಇಂಡಿಯಾಕ್ಕೆ(Team India) ಕಮ್​ಬ್ಯಾಕ್​(Mohammed Shami Comeback) ಮಾಡುವ ನಿರೀಕ್ಷೆಯಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ)ಯಲ್ಲಿ ಕಠಿಣ ಬೌಲಿಂಗ್ ಮತ್ತು ಜಿಮ್​ ವರ್ಕೌಟ್​​ ಮಾಡುತ್ತಿರುವ ವಿಡಿಯೊವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮುಂದಿನ ತಿಂಗಳು ನಡೆಯುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಎನ್​ಸಿಎಯಲ್ಲಿ(NCA) ಕಠಿಣ ಬ್ಯಾಟಿಂಗ್, ಬೌಲಿಂಗ್​​ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಶಮಿ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಮುಕ್ತಾಯ ಕಂಡಿದ್ದ ಲಂಕಾ ವಿರುದ್ಧದ ಸರಣಿಯಲ್ಲಿ ಶಮಿ ಆಡಲಿದ್ದಾರೆ ಎನ್ನಲಾಗಿತ್ತು. ಆದರೆ, ಶಮಿ ಇನ್ನೂ ಫಿಟ್​ನೆಸ್​ ಕ್ಲೀಯರೆನ್ಸ್​ ಪಡೆಯದ ಕಾರಣ ಅವರು ಲಂಕಾ ಸರಣಿಗೆ ಆಯ್ಕೆಯಾಗಿರಲಿಲ್ಲ. ದುಲೀಪ್​ ಟ್ರೋಫಿ ಟೂರ್ನಿಯಲ್ಲಿಯೂ ಶಮಿಗೆ ಬಿಸಿಸಿಐ ವಿಶ್ರಾಂತಿ ನೀಡಿದೆ.

ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು. ವಿಶ್ವಕಪ್​ ಬಳಿಕ ಶಮಿ ಇದುವರೆಗೂ ಯಾವುದೇ ಕ್ರಿಕೆಟ್​ ಪಂದ್ಯ ಆಡಿಲ್ಲ. ಗಾಯದಿಂದ ಸಂಪೂರ್ಣ ಚೇತರಿಕೆ ಕಂಡಿರುವ ಶಮಿ ಈಗಾಗಲೇ ಬೌಲಿಂಗ್​ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಶೀಘ್ರದಲ್ಲೇ ಅವರು ಭಾರತ ತಂಡ ಸೇರುವಂತಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿಗೆ ಲಂಡನ್​ನಲ್ಲಿ ಪಾದದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ವಿಶ್ವಕಪ್​ ಬಳಿಕ ಶಮಿ ಇದುವರೆಗೂ ಯಾವುದೇ ಕ್ರಿಕೆಟ್​ ಪಂದ್ಯ ಆಡಿಲ್ಲ. ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಇದನ್ನೂ ಓದಿ Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Exit mobile version