Site icon Vistara News

MS Dhoni Birthday: ಸಲ್ಮಾನ್​ ಖಾನ್​ ಜತೆ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಧೋನಿ

MS Dhoni Birthday

MS Dhoni Birthday: At MS Dhoni’s Midnight Birthday Bash, Salman Khan’s ‘Guest Appearance

ನವದೆಹಲಿ: ಎಂ.ಎಸ್.ಧೋನಿ, ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಇಂದು (July 7) 43ನೇ ವಸಂತಕ್ಕೆ (MS Dhoni Birthday) ಕಾಲಿಟ್ಟಿದ್ದಾರೆ. ಭಾರತಕ್ಕೆ ಮೂರು ಐಸಿಸಿ ಟ್ರೋಫಿಗಳನ್ನು ತಂದುಕೊಟ್ಟ, ಕೂಲ್‌ ಆಗಿದ್ದೇ ‘ಹಾಟ್‌’ ಫೇವರಿಟ್‌ ತಂಡವನ್ನು ಕಟ್ಟಿದ, ಕ್ರಿಕೆಟ್‌ನ ಆಚೆಗೂ ವ್ಯಕ್ತಿತ್ವದಿಂದ, ತನ್ನ ವಿಶೇಷ ಹವ್ಯಾಸಗಳಿಂದ, ಕೈಂಡ್‌ನೆಸ್‌ ವರ್ತನೆಯಿಂದ ಮನ ಸೆಳೆದ ಧೋನಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ಬಾರಿ ಧೋನಿ ತಮ್ಮ ಹುಟ್ಟುಹಬ್ಬವನ್ನು ಬಾಲಿವುಡ್​ ಸ್ಟಾರ್​ ಸಲ್ಮಾನ್​ ಖಾನ್​(Salman Khan) ಜತೆ ಕೇಕ್​ ಕತ್ತರಿಸಿ ಸಂಭ್ರಮಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಶನಿವಾರ ಮುಂಬೈನಲ್ಲಿ ಮುಕೇಶ್‌ ಅಂಬಾನಿ(Mukesh Ambani) ಪುತ್ರ ಅನಂತ್‌ ಅಂಬಾನಿ(Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವಿವಾಹಪೂರ್ವವಾಗಿ(Anant Ambani wedding) ನಡೆದ ಸಂಗೀತ ಕಾರ್ಯಕ್ರಮದಲ್ಲಿ(Anant-Radhika sangeet ceremony) ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಸಿಂಗ್​ ಪಾಲ್ಗೊಂಡಿದ್ದರು. ಬಾಲಿವುಡ್​ನ ಹಲವು ಸ್ಟಾರ್​ ನಟ ಮತ್ತು ನಟಿಯರು ಕೂಡ ಈ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. ಇದೇ ವೇಳೆ ಸಲ್ಮಾನ್​ ಖಾನ್​ ಅವರು ಸರ್​ಪ್ರೈಸ್​ ಆಗಿ ಧೋನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಧೋನಿ ಅವರು ಸಲ್ಮಾನ್​ ಜತೆ ಕೇಕ್​ ಕತ್ತರಿಸಿ ತಮ್ಮ ಹುಟ್ಟು ಹಬ್ಬ ಆಚರಿಸಿದ್ದಾರೆ.

ಮಹೇಂದ್ರ ಸಿಂಗ್​ ಧೋನಿ ಅವರು ಟೀಮ್​ ಇಂಡಿಯಾದ ಬ್ಲೂ ಜೆರ್ಸಿಯಲ್ಲಿ ಬ್ಯಾಟ್​ ಹಿಡಿದು ಬರುತ್ತಿರುವ ಬರೋಬ್ಬರಿ 52 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದಾರೆ. ಸದ್ಯ ಧೋನಿಯ ಈ ಕಟೌಟ್​ ಫೋಟೋವನ್ನು ಅಂತರ್ಜಾಲದಲ್ಲಿ ಕೊಟ್ಯಂತರ ಅಭಿಮಾನಿಗಳು ಶೇರ್​ ಮತ್ತು ಲೈಕ್ ಮಾಡಿ ಶುಭಾಶಯ ಕೋರಿದ್ದಾರೆ. ಕಳೆದ ಬಾರಿಯೂ ಕೂಡ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿ ಅಭಿಮಾನಿಗಳು ಧೋನಿಯ 43ನೇ ಜನ್ಮದಿನದ ಗೌರವಾರ್ಥವಾಗಿ 43 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದರು. ಕೇರಳದಲ್ಲಿಯೂ 2018 ರಲ್ಲಿ 35 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದರು.

ಇದನ್ನೂ ಓದಿ MS Dhoni Birthday: 43ನೇ ವಸಂತಕ್ಕೆ ಕಾಲಿಟ್ಟ ಮಹೇಂದ್ರ ಸಿಂಗ್‌ ಧೋನಿ

ಧೋನಿ ಕುರಿತ ಕೆಲವು ಇಂಟರೆಸ್ಟಿಂಗ್‌ ಅಂಶಗಳು


1. ವಿಕೆಟ್‌ ಕೀಪಿಂಗ್‌ನಲ್ಲಿ ಧೋನಿ ವಿಶ್ವದಾಖಲೆ ಹೊಂದಿದ್ದಾರೆ. 2018ರಲ್ಲಿ ಕೇವಲ 0.08 ಸೆಕೆಂಡ್‌ನಲ್ಲಿ ಸ್ಟಂಪ್‌ಔಟ್‌ ಮಾಡುವ ಮೂಲಕ ವೆಸ್ಟ್‌ ಇಂಡೀಸ್‌ನ ಕೀಮೊ ಪೌಲ್‌ರನ್ನು ಪೆವಿಲಿಯನ್‌ಗೆ ಕಳುಹಿಸಿದ್ದರು. ಕುಲದೀಪ್‌ ಯಾದವ್‌ ಆಗ ಬೌಲಿಂಗ್‌ ಮಾಡಿದ್ದರು. ಇದು ವಿಶ್ವದಲ್ಲೇ ವೇಗದ ಸ್ಟಂಪಿಂಗ್‌ ಎನಿಸಿದೆ.

2. ಧೋನಿಗೆ ಪೆಟ್ಸ್‌ ಎಂದರೆ ತುಂಬ ಇಷ್ಟ. ಸ್ಯಾಮ್‌, ಲಿಲ್ಲಿ, ಗಬ್ಬರ್‌ ಹಾಗೂ ಜೋಯಾ ಎಂಬ ನಾಲ್ಕು ಶ್ವಾನಗಳನ್ನು ಸಾಕಿದ್ದಾರೆ. ಅಷ್ಟೇ ಅಲ್ಲ, ರಾಂಚಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ Honey ಎಂಬ ಗಿಳಿ, ಚೇತಕ್‌ ಎಂಬ ಕುದುರೆ ಸಾಕಿದ್ದಾರೆ.

3. ಧೋನಿ ಕ್ರಿಕೆಟ್‌ಗೆ ಕಾಲಿಡುವ ಮೊದಲು ಫುಟ್ಬಾಲ್‌ ಆಡುತ್ತಿದ್ದರು. ಬ್ಯಾಡ್ಮಿಂಟನ್‌ ಕೂಡ ಅವರ ನೆಚ್ಚಿನ ಆಟವಾಗಿತ್ತು. ಆದರೆ, ಅವರು ಕ್ರಿಕೆಟ್‌ನಲ್ಲಿ ವೃತ್ತಿಜೀವನ ಆರಂಭಿಸಿದರು. ಮುಂದೆ ಆಗಿದ್ದೆಲ್ಲ ಈಗ ಇತಿಹಾಸ.

4. ಮಹೇಂದ್ರ ಸಿಂಗ್‌ ಧೋನಿ ಅವರಿಗೆ ಬೈಕ್‌ಗಳೆಂದರೆ ಪಂಚಪ್ರಾಣ. ಅವರ ಬಳಿ ಒಂದು ಶೋರೂಮ್‌ನಲ್ಲಿರುವಷ್ಟು ಅಂದರೆ, 70 ದುಬಾರಿ ಬೈಕ್‌ಗಳಿವೆ. ಹಾರ್ಲೆ ಡೇವಿಡ್‌ಸನ್‌ನಿಂದ ಹಿಡಿದು ಸುಜುಕಿ ಹಯಬುಸವರೆಗೆ ದುಬಾರಿ ಬೈಕ್‌ಗಳು ಅವರ ಬಳಿ ಇವೆ. ಹಲವು ಐಷಾರಾಮಿ ಕಾರುಗಳನ್ನೂ ಧೋನಿ ಹೊಂದಿದ್ದಾರೆ.

5. ಧೋನಿ ಹೆಚ್ಚಾಗಿ ಮೊಬೈಲ್‌ ಬಳಸುವುದಿಲ್ಲ. ಇನ್ನು ಸಾಮಾಜಿಕ ಜಾಲತಾಣಗಳಿಂದ ಅವರು ಅಂತರ ಕಾಯ್ದುಕೊಳ್ಳುತ್ತಾರೆ. ಟ್ವಿಟರ್‌ನಲ್ಲಿ 80 ಲಕ್ಷಕ್ಕೂ ಅಧಿಕ ಫಾಲೋವರ್‌ಗಳನ್ನು ಹೊಂದಿರುವ ಅವರು ಕೊನೆಯ ಬಾರಿ ಟ್ವೀಟ್‌ ಮಾಡಿದ್ದು 2021ರಲ್ಲಿ. ಇನ್‌ಸ್ಟಾಗ್ರಾಂನಲ್ಲಿ 4.38 ಕೋಟಿ ಫಾಲೋವರ್‌ಗಳನ್ನು ಹೊಂದಿರುವ ತಾಲಾ, ಫೆಬ್ರವರಿಯಿಂದ ಯಾವುದೇ ವಿಡಿಯೊ ಪೋಸ್ಟ್‌ ಮಾಡಿಲ್ಲ.

Exit mobile version