Site icon Vistara News

MS Dhoni: ಧೋನಿಯ ಕ್ಲೀನ್​ ಬೌಲ್ಡ್​ ಕಂಡು ಬೇಸರಗೊಂಡ ಅಭಿಮಾನಿಗಳು; ವಿಡಿಯೊ ವೈರಲ್​

MS Dhoni

ಧರ್ಮಶಾಲಾ: ಹಿಮಾಲಯದ ತಪ್ಪಲಿನ ರಮಣೀಯ ತಾಣವಾದ ಧರ್ಮಶಾಲಾದಲ್ಲಿ ಭಾನುವಾರ ನಡೆದ ಪಂಜಾಬ್​ ಕಿಂಗ್ಸ್(Punjab Kings)​ ವಿರುದ್ಧದ ಐಪಿಎಲ್(IPL 2024)​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ 28 ರನ್​ಗಳ ಗೆಲುವು ಸಾಧಿಸಿತು. ಆದರೆ, ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್​ ಧೋನಿ(MS Dhoni) ಮೊದಲ ಎಸೆತದಲ್ಲೇ ಕ್ಲೀನ್​ ಬೌಲ್ಡ್​ ಆಗಿ ಗೋಲ್ಡನ್​ ಡಕ್​(Dhoni golden duck) ಸಂಕಟಕ್ಕೆ ಸಿಲುಕಿದರು. ಇದನ್ನು ಕಂಡು ಅವರ ಅಭಿಮಾನಿಗಳು ಭಾರೀ ನಿರಾಸೆಗೊಂಡರು. ಇದರ ವಿಡಿಯೊ ವೈರಲ್​ ಆಗಿದೆ.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ. ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನೋಡಲು ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಶೂನ್ಯಕ್ಕೆ ಔಟ್​ ಆಗುವ ಮೂಲಕ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಧೋನಿ ಔಟಾಗುತ್ತಿದ್ದಂತೆ ಅವರ ಅಭಿಮಾನಿಗಳು ಬೇಸರದಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತರ. ಈ ವಿಡಿಯೊ ವೈರಲ್​ ಆಗುತ್ತಿದೆ.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ 19ನೇ ಓವರ್​ನಲ್ಲಿ ಧೋನಿ ಅವರು ಹರ್ಷಲ್​ ಪಟೇಲ್​ ಎಸೆದ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಆದರೆ ಕೀಪಿಂಗ್​ನಲ್ಲಿ ಧೋನಿ ಒಂದು ಸೊಗಸಾದ ಕ್ಯಾಚ್​ ಹಿಡಿದು ಮಿಂಚಿದರು. ಜಿತೇಶ್​ ಶರ್ಮ ಅವರ ಕ್ಯಾಚ್​ ಇದಾಗಿತ್ತು.

ಇದನ್ನೂ ಓದಿ IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

ಹರ್ಭಜನ್​ ಟೀಕೆ


ಈ ಪಂದ್ಯದಲ್ಲಿ ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಧೋನಿಯ ನಿರ್ಧಾರಕ್ಕೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಟೀಕೆ ವ್ಯಕ್ತಪಡಿಸಿದ್ದಾರೆ. ಧೋನಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಕ್ಕಿಂತ ಚೆನ್ನೈ ಅವರ ಬದಲಿಗೆ ಮತ್ತೊಬ್ಬ ವೇಗಿಯನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯಲ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌, ಸತತವಾಗಿ ವಿಕೆಟ್‌ ಕಳೆದುಕೊಂಡು ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

Exit mobile version