Site icon Vistara News

MS Dhoni : ಧೋನಿ ನಿರ್ಮಾಣದ ಸಿನಿಮಾ ರೆಡಿ; ಕರ್ನಾಟಕದಲ್ಲಿಯೂ ರಿಲೀಸ್ ಆಗಲಿದೆ LGM-ಲೆಟ್ಸ್ ಗೆಟ್ ಮ್ಯಾರೀಡ್!

MS Dhoni Entertainment

ಬೆಂಗಳೂರು: ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ (MS Dhoni) ಪತ್ನಿ‌ ಸಾಕ್ಷಿ ಜತೆಗೂಡಿ ತಮ್ಮದೇ ಧೋನಿ ಎಂಟರ್‌ಟೇನ್‌ಮೆಂಟ್‌ ಮೂಲಕ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ’ಎಲ್‌ಜಿಎಂ – ಲೆಟ್ಸ್ ಗೆಟ್ ಮ್ಯಾರೀಡ್’ . ಟೀಸರ್ ಮೂಲಕ ನಗುವಿನ ಕಿಕ್ ಕೊಟ್ಟಿರುವ ಈ ಚಿತ್ರವನ್ನು ರಾಜ್ಯದಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಇತ್ತೀಚಿಗೆ ಪರಭಾಷೆ ಸಿನಿಮಾಗಳಿಗೆ ಕರುನಾಡಿನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಕೂಡ ಕರ್ನಾಟಕದಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.

ಫ್ಯಾಮಿಲಿ ಎಂಟರ್​ಟೇನರ್ ಕಥಾಹಂದರ ಹೊಂದಿರುವ ಸಿನಿಮಾವನ್ನು ಅಥರ್ವ- ದಿ ಒರಿಜಿನ್ ಎಂಬ ಹೊಸ ಯುಗದ ಕಾದಂಬರಿ ಬರೆದಿರುವ ರಮೇಶ್‌ ತಮಿಳ್‌ಮಣಿ ಎಂಬುವರು ಈ ಚಲನಚಿತ್ರವನ್ನು ನಿರ್ದೇಶಿಸಲಿದ್ದಾರೆ. ನಾಯಕ ಹರೀಶ್ ಕಲ್ಯಾಣ್, ನಾಯಕಿ ಇವಾನಾ ನಟಿಸಿದ್ದು, ಹಿರಿಯ ನಟಿ ನದಿಯಾ, ಯೋಗಿ ಬಾಬು ಮತ್ತು ಆರ್‌ಜೆ ವಿಜಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: MS Dhoni : ಧೋನಿ ಬ್ಯಾನರ್‌ನಡಿ ತಮಿಳು ಸಿನಿಮಾ: ‘ಎಲ್‌ಜಿಎಂ – ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್‌ ಅನಾವರಣ!

ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ರಮೇಶ್ ತಮಿಳ್ಮಣಿ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುವುದರ ಜತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಟೀಸರ್‌ಗೆ ನೋಡುಗರಿಂದ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಶೀಘ್ರದಲ್ಲೇ ಆಡಿಯೊ ಹಾಗೂ ಟ್ರೈಲರ್‌ ಚಿತ್ರತಂಡ ಬಿಡುಗಡೆ ಮಾಡಲಿದೆ.

Exit mobile version